Breaking News

ರಾಷ್ಟ್ರೀಯ

ರಾಜ್ಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ಇಂದು ಬೆಳಗ್ಗೆ 11 ಗಂಟೆಗ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ.   ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ …

Read More »

ಹಣ ಪಡೆದು ಮತ ಹಾಕುವುದರಲ್ಲೇ ಜನರಿಗೆ ಆಸಕ್ತಿ; ಹೈಕೋರ್ಟ್ ಕಿಡಿ

ಬೆಂಗಳೂರು, ಏಪ್ರಿಲ್ 21; ಸಾರ್ವಜನಿಕ ಪ್ರಕಟಣೆ ನೀಡಿದ ಹೊರತಾಗಿಯೂ ಇಡೀ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಜಾಗಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಜನರು ಮನವಿ ಸಲ್ಲಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೇ, ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ.   ರಾಜ್ಯದಲ್ಲಿ ಸ್ಮಶಾನ ಇಲ್ಲದ ಗ್ರಾಮ ಮತ್ತು …

Read More »

ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗಲಿದೆ. ಆಯಾ ಚುನಾವಣಾಧಿಕಾರಿಗಳು ನಾಳೆ ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರ ಪರಿಶೀಲನೆ ಆರಂಭಿಸುತ್ತಾರೆ. ಈ ಕುರಿತು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಥವಾ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಗಿದೆ. ನಾಮಪತ್ರ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ. ಅಂದು ಬೆಳಿಗ್ಗೆ 11 ಗಂಟೆಯಿಂದ …

Read More »

ಆಟೋದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ವಿಜಯಪುರ: ನಾಗಠಾಣ ಕ್ಷೇತ್ರದ ಅಚ್ಚರಿಯ ಅಭ್ಯರ್ಥಿ, ಪಕ್ಷದ ಸಾಮಾನ್ಯ ಕಾರ್ಯಕರ್ತ ಸಂಜೀವ ಐಹೊಳಿ ಆಟೋದಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿರುವುದು ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ಗುರುವಾರ ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಜೀವ ಐಹೊಳ್ಳಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಲು ವಾಹನಕ್ಕಾಗಿ ತಡಕಾಡಿದರು. ತೀರ ಸಾಮಾನ್ಯ ಕಾರ್ಯಕರ್ತನಾದ ಸಂಜೀವನ ಹೆಸರಿನಲ್ಲಿ ಸ್ವಂತ ಕಾರು, ಬೈಕ್ ಸಹ ಇಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ಬರಲು ಆಟೋಕ್ಕಾಗಿ …

Read More »

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಜಾಲತಾಣದ ಮಾಹಿತಿಗೆ ಇಲ್ಲಿ ನೋಡಿ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ(ಏಪ್ರಿಲ್ 21) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.   ಫಲಿತಾಂಶ ಘೋಷಣೆ ಸಂಬಂಧ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು …

Read More »

ಟಿಕೆಟ್‌ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ

ಸಿಂಧನೂರು (ರಾಯಚೂರು ಜಿಲ್ಲೆ): ‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಿಗೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಸರ್ಕಾರದಲ್ಲಿ ಮಹತ್ವದ ಸ್ಥಾನಗಳು ಸಿಗಲಿವೆ’ ಎಂದು ಕಾಂಗ್ರೆಸ್‌ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ತಿಳಿಸಿದರು.   ಸಿಂಧನೂರು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಮನವೊಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ‘ಬಾದರ್ಲಿ ಅವರಿಗೆ ಇನ್ನೂ 8 ತಿಂಗಳಲ್ಲಿ ಬರುವ ಲೋಕಸಭೆ …

Read More »

ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ ಸಿಂಗ್ ಭವಿಷ್ಯ ನುಡಿದರು.

ಬೆಳಗಾವಿ: ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮುಂದೆ ಗ್ಯಾರೆಂಟಿ ಕಾರ್ಡ ಹಂಚುತ್ತಿರುವ ಕಾಂಗ್ರೆಸ್ ನೆಲಕಚ್ಚಲಿದೆ ಎಂದು ರಾಜ್ಯ ಉಸ್ತುವಾರಿ ಅರುಣ ಸಿಂಗ್ ಭವಿಷ್ಯ ನುಡಿದರು.   ಗುರುವಾರ ಬೆಳಗಾವಿ ವಿಭಾಗದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಾಗೂ ಜಿಲ್ಲೆಯಾದ್ಯಂತ ನಡೆದಿರುವ ರೈಲ್ವೆ ನಿಲ್ದಾಣದ ಆಧುನಿಕರಣ, ಹೆದ್ದಾರಿಗಳ ಕಾಮಗಾರಿ, ಹೆಲಿಕಾಪ್ಟರ್ ತಯಾರಿಕಾ ಘಟಕ, ಐಐಟಿ ಉದ್ಘಾಟನೆಯಾಗಿದ್ದು ರೈತ ವಿದ್ಯಾನಿಧಿ, ಕಿತ್ತೂರು ಕರ್ನಾಟಕ ನಿಗಮ, ಲಿಂಗಾಯತ …

Read More »

ಏ.21ರ ನಾಳೆ ‘ದ್ವಿತೀಯ PUC ಪರೀಕ್ಷೆ’ ಫಲಿತಾಂಶ ಪ್ರಕಟ

ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ.   ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ …

Read More »

ಹೂಲಿ ಇತಿಹಾಸಕ್ಕೆ ಬೆಳಕು ನೀಡಿದ ಹಿತ್ತಾಳೆ ಶಿಲ್ಪ

ಉಗರಗೋಳ: ‘ಸವದತ್ತಿ ತಾಲ್ಲೂಕಿನ ಹೂಲಿ ಗ್ರಾಮದ ಹೊಲದಲ್ಲಿ ಈಚೆಗೆ ದೊರೆತ 12ನೇ ಶತಮಾನದ ಹಿತ್ತಾಳೆ ಲಾಂಛನ ಮತ್ತಷ್ಟು ಕುತೂಹಲ ಹುಟ್ಟಿಸಿದೆ. ಈವರೆಗೆ ಶಿಲ್ಪಕಲಾಕೃತಿಗಳು ಮಾತ್ರ ಸಿಕ್ಕಿದ್ದವು. ಇದೇ ಮೊದಲ ಬಾರಿಗೆ ಹಿತ್ತಾಳೆ ಶಿಲ್ಪ ಸಿಕ್ಕಿದ್ದು ಗಮನಾರ್ಹ’ ಎನ್ನುತ್ತಾರೆ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯವಸ್ತು ಅಧ್ಯಯನ ವಿಭಾಗದ ನಿವೃತ್ತ ನಿರ್ದೇಶಕ ಪ್ರೊ.ಆರ್.ಎಂ. ಷಡಕ್ಷರಯ್ಯ.   ತಜ್ಞರ ತಂಡದೊಂದಿಗೆ ಗ್ರಾಮಕ್ಕೆ ಈಚೆಗೆ ಭೇಟಿ ನೀಡಿ, ಸ್ಥಳ ಹಾಗೂ ವಾಸ್ತುಶಿಲ್ಪ ಪರಿಶೀಲಿಸಿದ ನಂತರ ಅವರು …

Read More »

ರಾಜ್ಯದ 20 ಕಡೆ ಮೋದಿ ರ‍್ಯಾಲಿ: ಸಿಎಂ ಬೊಮ್ಮಾಯಿ

ಕಲಬುರಗಿ: ರಾಜ್ಯದ 20 ಕಡೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಚುನಾವಣಾ ರ‍್ಯಾಲಿ ಹಾಗೂ ಪ್ರಚಾರ ಸಭೆಗಳನ್ನು ಆಯೋಜಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅಫಜಲಪುರದಲ್ಲಿ ಬಿಜೆಪಿ ಅಭ್ಯರ್ಥಿ ಮಾಲೀಕಯ್ಯ ಗುತ್ತೇದಾರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಎಲ್ಲ ವಿಭಾಗಗಳಲ್ಲಿ ಜತೆಗೆ ಪ್ರಮುಖ ಕ್ಷೇತ್ರಗಳಲ್ಲಿ ಮೋದಿ ಅವರು ಚುನಾವಣ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡುವರು ಜತೆಗೆ ರ‍್ಯಾಲಿ ನಡೆಸುವರು.ಕಲ್ಯಾಣ ಕರ್ನಾಟಕದ …

Read More »