ಕಲಬುರಗಿ : ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರಿದ್ದ ಕಾರು ಅಪಘಾತವಾಗಿದ್ದು, ಅಪಘಾತದಲ್ಲಿ ಬಾಬುರಾವ್ ಚಿಂಚನಸೂರು ಗಾಯಗೊಂಡಿರುವ ಘಟನೆ ನಡೆದಿದೆ. ತಡರಾತ್ರಿ 12.30 ರ ಸುಮಾರಿಗೆ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಬಾಬುರಾವ್ ಚಿಂಚನಸೂರು ಕಾಳು, ಮುಖಕ್ಕೆ ಗಾಯವಾಗಿದೆ. ಕೂಡಲೇ ಅವರನ್ನು ಕಲಬುರಗಿಯ ಯನೈಟೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾದಗಿರಿಯಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತವಾಗಿದೆ. ನಿದ್ದೆ ಮಂಪರಿನಲ್ಲಿದ್ದ ಕಾರು …
Read More »ಹೃದಯಾಘಾತದಿಂದ ತಡರಾತ್ರಿ ಕಾಂಗ್ರೆಸ್ ನ ಮಾಜಿ ಶಾಸಕ `ವೆಂಕಟಸ್ವಾಮಿ’ ನಿಧನ|
ಬೆಂಗಳೂರು : ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ (53) ಅವರು ತೀವ್ರ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧರನಾಗಿದ್ದಾರೆ. ವೆಂಕಟಸ್ವಾಮಿಗೆ ಕಳೆದ 1 ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಎರಡು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕಾಂಗ್ರೆಸ್ …
Read More »ಕರ್ನಾಟಕ ವಿಧಾನಸಭೆ ಚುನಾವಣೆ : 50 ಸಾವಿರ ರೂ. ಮೀರಿದ ಹಣ ಜೊತೆ ತೆಗೆದುಕೊಂಡು ಹೋಗುವಂತಿಲ್ಲ!
ಕಲಬುರಗಿ : ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೆ ದಾಖಲೆ, ವಿವರಣೆ ಇಲ್ಲದೆ ಯಾವುದೇ ವ್ಯಕ್ತಿ 50,000 ರೂ. ಕ್ಕಿಂತ ಹೆಚ್ಚಿನ ಹಣವನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗುವಂತಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಯಶವಂತವಿ. ಗುರುಕರ್ ಆದೇಶ ಹೊರಡಿಸಿದ್ದಾರೆ. ಇನ್ನು ದಾಖಲೆ ಇಲ್ಲದ 10,000 ರೂ. ಮೀರಿದ ಯಾವುದೇ ಸರಕುಗಳನ್ನು ಸಂಗ್ರಹಣೆ ಮತ್ತು ಬೃಹತ್ ಪ್ರಮಾಣದಲ್ಲಿ ಸಹ ಸಾಗಿಸುವಂತಿಲ್ಲ. ಈ ಆದೇಶ ಚುನಾವಣೆ ಮುಕ್ತಾಯದ …
Read More »ಅತಿಥಿ ಉಪನ್ಯಾಸಕರೊಬ್ಬರ ಬರ್ಬರವಾಗಿ ಹತ್ಯೆ,35 ಬಾರಿ ಚಾಕುವಿನಿಂದ ಇರಿದ ದುಷ್ಕರ್ಮಿಗಳು
ಕಲಬುರಗಿ : ಕಲಬುರಗಿ ಜಿಲ್ಲೆಯ ಚಿತ್ತಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಅತಿಥಿ ಉಪನ್ಯಾಸಕ ರವಿ ಪಟ್ಟೇದಾರ ಎಂಬುವವರನ್ನು ನಗರದ ಹೊರವಲಯದ ಕುಸನೂರು ಬಳಿ ದುಷ್ಕರ್ಮಿಗಳು 35 ಬಾರಿ ಚಾಕುವಿನಿಂದ ಇರಿದು ಕೊಂದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ರವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬಾಲಿಸಿಕೊಂಡು ಬಂದ ರವಿ ಅಣ್ಣನ ಹೆಂಡತಿ ಕಡೆಯವರು ಡಿಕ್ಕಿ ಹೊಡೆಸಿ ಕೆಳಕ್ಕೆ ಕೆಡವಿ ಚಾಕುವಿನಿಂದ …
Read More »ಬೆಳಗಾವಿ ಬಿಜೆಪಿಯಲ್ಲಿ ಮತ್ತೆರಡು ವಿಕೆಟ್ ಪತನ: ಪಕ್ಷ ಬಿಡಲು ಮುಂದಾದ ಮಹಾದೇವಪ್ಪ ಯಾದವಾಡ ಮತ್ತು ಅನಿಲ್ ಬೆನಕೆ
ಲಕ್ಷ್ಮಣ ಸವದಿ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಮತ್ತೆರಡು ವಿಕೆಟ್ ಪತನಗೊಳ್ಳಲಿದೆ. ಬಿಜೆಪಿಗೆ ಗುಡ್‌ಬೈ ಹೇಳಲು ರಾಮದುರ್ಗ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಮತ್ತು ಅನಿಲ್ ಬೆನಕೆ ಮುಂದಾಗಿದ್ದಾರೆ ಒಂಡಾಯದ ಕಾವು ಹೆಚ್ಚಾಗಿದೆ(Karnataka Assembly Elections 2023) . ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಬಂಡಾಯ ಸಾರಿದ್ದರು. ಆದ್ರೆ ಈಗ ಲಕ್ಷ್ಮಣ ಸವದಿ ಬಳಿಕ ಬೆಳಗಾವಿ ಬಿಜೆಪಿಯಲ್ಲಿ ಮತ್ತೆರಡು ವಿಕೆಟ್ ಪತನಗೊಳ್ಳಲಿದೆ ಎಂಬ ಸುದ್ದಿ …
Read More »ಕರ್ನಾಟಕದಲ್ಲಿ ಕೊರೊನಾ ಹೆಚ್ಚಳ : ಒಂದೇ ದಿನ 498 ಕೇಸ್ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತೆ ಕೊರೋನಾ ಸೋಂಕಿನ ( Coronavirus ) ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಒಂದೇ ದಿನ ಹೊಸದಾಗಿ 498 ಮಂದಿಗೆ ಕೋವಿಡ್ ಪಾಸಿಟಿವ್ ( Covid19 Positive ) ಎಂಬುದಾಗಿ ವರದಿಯಿಂದ ತಿಳಿದು ಬಂದಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ನಿನ್ನೆ 15,036 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 498 ಜನರಿಗೆ ಪಾಸಿಟಿವ್ ಎಂಬುದಾಗಿ ವರದಿಯಲ್ಲಿ …
Read More »ವರುಣದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ : ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಪಕ್ಷಕ್ಕೆ ಗುಡ್ ಬೈ
ಮೈಸೂರು : ವರುಣ ಕ್ಷೇತ್ರದಿಂದ ಸಚಿವ ವಿ.ಸೋಮಣ್ಣಗೆ ಟಿಕಟ್ ನೀಡಿರುವುದಕ್ಕೆ ಅಸಮಾಧನಗೊಂಡಿರುವ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಬಿಜೆಪಿಗೆ ರಾಜೀನಾಮೆ ಘೋಷಿಸಿದ್ದಾರೆ. ವರುಣ ಕ್ಷೇತ್ರದಲ್ಲಿ ಸಚಿವ ವಿ.ಸೋಮಣ್ಣಗೆ ಟಿಕೆಟ್ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ತೋಟದಪ್ಪ ಬಸವರಾಜು ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ವರುಣ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತೋಟದಪ್ಪ ಬಸವರಾಜು ಅವರು ಕಳೆದ ಬಾರಿ ವರುಣದಿಂದ ಸ್ಪರ್ಧಿಸಿದ್ದರು. 2018 ರಲ್ಲಿ ವ್ಯಾಪಕ ವಿರುದ್ಧವಿದ್ದರೂ 37,819 ಮತಗಳನ್ನು …
Read More »ಅಮೂಲ್ ಬಳಿಕ ಕರ್ನಾಟಕಕ್ಕೆ ಗುಜರಾತ್ ಮೂಲದ ‘ಮೆಣಸಿನ ಕಾಯಿ ಪುಷ್ಪಾ’ ಎಂಟ್ರಿ, ರೈತರಲ್ಲಿ ಹೆಚ್ಚಿದ ಆತಂಕ
ಹಾವೇರಿ: ಅಮುಲ್ ಹಾಲಿನ ನಂತರ ಇದೀಗ ಗುಜರಾತ್ ಮೆಣಸಿನಕಾಯಿ ಸರದಿಯಾಗಿದೆ. ಸದ್ಯ ರಾಜ್ಯದ ಮಾರುಕಟ್ಟೆಗೆ ಅಮುಲ್ ಬಳಿಕ ಈ ಮೆಣಸಿನಕಾಯಿ ತಲೆ ನೋವಾಗಿದೆ. ರಾಜ್ಯದ ಮೆಣಸಿನಕಾಯಿ ಮಾರುಜಕಟ್ಟೆಗೆ ಕಾಲಿಟ್ಟಿರುವ ಗುಜರಾತಿ ಮೆಣಸಿನಕಾಯಿಯ ‘ಪುಷ್ಪ’ – ಲಾಲಿ ಎಂದೂ ಕರೆಯುತ್ತಾರೆ – ಏಷ್ಯಾದ ಅತಿದೊಡ್ಡ ಮಾರುಕಟ್ಟೆಗಳಲ್ಲಿ ಒಂದಾದ ಬ್ಯಾಡಗಿಯಲ್ಲಿ ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ. ಮೂಲಗಳ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಬ್ಯಾಡಗಿ ಮಾರುಕಟ್ಟೆಯಲ್ಲಿ ಕನಿಷ್ಠ 20,000 ಕ್ವಿಂಟಲ್ ಗುಜರಾತಿ ಮೆಣಸಿನಕಾಯಿ ಮಾರಾಟವಾಗಿದೆ. …
Read More »ಬೆಳಗಾವಿಸಪ್ತಪದಿ ತುಳಿಯಬೇಕಿದ್ದ ಯೋಧ ಪಂಜಾಬ್‌ನಲ್ಲಿ ಹುತಾತ್ಮ
ಬೆಳಗಾವಿ : ವಿವಾಹಕ್ಕಾಗಿ ಊರಿಗೆ ಬರಬೇಕಿದ್ದ ಯೋಧ ಪಂಜಾಬ್‌ನಲ್ಲಿ ಹುತಾತ್ಮನಾಗಿದ ವಿಷಯ ತಿಳಿದು ಕುಟುಂಬಸ್ಥರಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ ಎಂದು ವರದಿಯಾಗಿದೆ. ಯೋಧ ಪಂಜಾಬ್‌ನಲ್ಲಿ ಹುತಾತ್ಮ ಯೋಧನು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇನಾಡಿ ಗ್ರಾಮದ ಯೋಧ ಸಾಗರ ಅಪ್ಪಾಸಾಹೇಬ್ ಬನ್ನೆ(25) ಮೃತಪಟ್ಟ ಯೋಧ ಎಂದು ಗುರುತಿಸಲಾಗಿದೆ. ಈತ 2018ರಲ್ಲಿ ಭೂಸೇನಾ ರ್ಯಾಲಿಯಲ್ಲಿ ಭಾಗವಹಿಸಿ ಸೇನೆಗೆ ಸೇರಿದ್ದ ಸಾಗರ್, ಪಂಜಾಬ್ ಮಿಲಿಟರಿ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಸಂತೋಷ್ ಮಲ್ಲಪ್ಪ ನಾಗರಾಳ …
Read More »ಬೆಳಗಾವಿಯ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ..!?
ಬೆಳಗಾವಿ : ಬಿಜೆಪಿಯಲ್ಲಿ ಮತ್ತೊಂದು ವಿಕೆಟ್ ಪತನವಾಗುತ್ತಿದ್ದು, ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇದೀಗ ಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಭರ್ಜರಿ ರಣತಂತ್ರ ರೂಪಿಸಲು ಮುಂದಾಗಿದ್ದಾರೆ. ವಿಧಾನ ಸಭೆ ಚುನಾವಣೆ ಹೊತ್ತಲ್ಲೇ ಸಾಲು ಸಾಲು ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ನಾಯಕರು ಗುಡ್‌ಬೈ ಹೇಳುತ್ತಿರುವುದರಿಂದ ಬಿಜೆಪಿ ಮೇಲೆ ಭಾರೀ ಹೊಡೆತ ಬೀಳಲಿದೆ. ಇದೀಗ ರಾಮದುರ್ಗದಲ್ಲಿ ಹಾಲಿ ಶಾಸಕ ಮಹಾದೇವಪ್ಪ …
Read More »
Laxmi News 24×7