ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಏಪ್ರಿಲ್ 10ರವರೆಗೂ ಮಳೆ ಮುಂದುವರೆಯಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಲಿಂಗದಾಳ ಗ್ರಾಮದಲ್ಲಿ ಸಿಡಿಲು ಅಪ್ಪಳಿಸಿದೆ. ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರು ಸಿಡಿಲುಬಡಿದು ಶಳದಲ್ಲೇ ಸಾವನ್ನಪ್ಪಿದ್ದಾರೆ. ಶರಣಪ್ಪ ಪುರದ (20) ಹಾಗೂ ದೇವರಾಜ್ ಬಾಡಗಿ (16) ಮೃತರು. ಘಟನೆಯಲ್ಲಿ ನಾಲ್ಕು ಕುರಿ, ಒಂದು ಆಡು ಸಾವನ್ನಪ್ಪಿವೆ. ಬಾಗಲಕೋಟೆ ಜಿಲ್ಲೆಯಲ್ಲಿಯೂ …
Read More »ಸೂಕ್ತ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 14 ಕೆಜಿ ಬೆಳ್ಳಿ ವಶಕ್ಕೆ.!
ಬೆಳಗಾವಿ : ಹಿರೇಬಾಗೇವಾಡಿ ಚೆಕ್ ಪೋಸ್ಟ್ ಬಳಿ ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಕೆಜಿ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆದರೆ ಬೆಳ್ಳಿ ವಶಕ್ಕೆ ಪಡೆಯುವ ಮುಂಚೆ ಗಲಾಟೆ ನಡೆದಿದೆ ಎನ್ನಲಾಗಿದೆ. ಚಹಾ ತಡವಾಗಿ ಕೊಟ್ಟಿದ್ದಕ್ಕಾಗಿ ಅಂಗಡಿ ಮಾಲೀಕನ ಜೊತೆಗೆ ಮೂವರು ಆರೋಪಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಮೂವರು ಸೇರಿಕೊಂಡು ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ಕಂಡ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ …
Read More »ಅಭಿಮಾನಿಗಳ ಮುಂದೆ ಕಣ್ಣೀರು ಹಾಕಿದ ತಾಯಿ – ಮಗ: ಚುನಾವಣೆಗೆ ಸ್ಪರ್ಧಿಸಲು ಸೌರಭ್ ಚೋಪ್ರಾ ತೀರ್ಮಾನ
ಬೆಳಗಾವಿ: ಸವದತ್ತಿ ಯಲ್ಲಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ಸೌರಭ್ ಚೋಪ್ರಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ. ನಿನ್ನೆ ಸವದತ್ತಿಯಲ್ಲಿ ನಡೆದ ಬೃಹತ್ ಕಾರ್ಯಕರ್ತರ ಸಭೆಯಲ್ಲಿ ಸಾವಿರಾರು ಬೆಂಬಲಿಗರು ಭಾಗಿಯಾಗಿದ್ದರು. ಈ ವೇಳೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೆಂಬಲಿಗರ ಮುಂದೆ ತಾಯಿ ಕಾಂತಾದೇವಿ ಮತ್ತು ಸೌರಭ ಚೋಪ್ರಾ ಕಣ್ಣೀರು ಹಾಕಿದರು. ಸಭೆಯಲ್ಲಿ ಮತದಾರರ ಬಳಿ ಮನವಿ ಮಾಡಿಕೊಂಡ ಸೌರಭ್ ಚೋಪ್ರಾ ತಾಯಿ ಕಾಂತಾದೇವಿ, ನನ್ನ …
Read More »ಕೇಂದ್ರದಿಂದ ಸಾರ್ವಜನಿಕರಿಗೆ ಸಿಹಿ ಸುದ್ದಿ ; ಶೀಘ್ರ ‘ಎಲ್ಪಿಜಿ ಸಿಲಿಂಡರ್’ ಬೆಲೆ ಇಳಿಕೆ
ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಸಾಮಾನ್ಯ ಜನರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಮೋದಿ ಸರ್ಕಾರದ ಇತ್ತೀಚಿನ ನಿರ್ಧಾರದಿಂದ ಅನೇಕ ಜನರು ನಿರಾಳರಾಗಿದ್ದು, ಸಧ್ಯದಲ್ಲೇ ಗ್ಯಾಸ್ ಬೆಲೆ ಇಳಿಕೆಯಾಗಲಿದೆ. ಕೇಂದ್ರ ಸರ್ಕಾರದ ನಿರ್ಧಾರದೊಂದಿಗೆ, ನಗರ ಅನಿಲ ವಿತರಕರು ಸಂಕುಚಿತ ನೈಸರ್ಗಿಕ ಅನಿಲ (CNG) ಮತ್ತು ಪೈಪ್ಡ್ ನೈಸರ್ಗಿಕ ಅನಿಲ (PNG) ಬೆಲೆಗಳನ್ನ ಕಡಿಮೆ ಮಾಡುತ್ತಾರೆ. ವಾಹನಗಳಲ್ಲಿ ಸಿಎನ್‌ಜಿ ಬಳಸುತ್ತಾರೆ. ಇಲ್ಲದಿದ್ದರೆ, PNG ಮನೆಗಳಲ್ಲಿ ಬಳಸಲಾಗುತ್ತದೆ. …
Read More »ರೀಲ್ಸ್ ಮಾಡೋಣ ಎಂದು ಯುವಕನ ಕಣ್ಣಿಗೆ ಬಟ್ಟೆ ಸರ್ಪ್ರೈಸ್ ಎನ್ನುತ್ತಲೇ ಕತ್ತು ಕೊಯ್ದಳು!
ರಾಣೆಬೆನ್ನೂರು: ನಿನಗೊಂದು ಸರ್ಪ್ರೈಸ್ ಇದೆ. ಕೈ ಕಟ್ಟಿ ಕಣ್ಣು ಮುಚ್ಚಿಕೊ ಎಂದು ಅಪ್ರಾಪ್ತ ವಯಸ್ಸಿನ ಹುಡುಗಿ ತನ್ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಯುವಕನನ್ನು ಸಿನಿಮಯ ರೀತಿಯಲ್ಲಿ ಕುತ್ತಿಗೆ ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ನಗರದ ಹೊರವಲಯದ ಸ್ವರ್ಣ ಪಾರ್ಕ್ನಲ್ಲಿ ಶುಕ್ರವಾರ ನಡೆದಿದೆ. ಹರಪನಹಳ್ಳಿ ತಾಲೂಕಿನ ಮೈದೂರ ಗ್ರಾಮದ ದೇವೇಂದ್ರಗೌಡ ಕಾಡನಗೌಡ ಮಂಡಗತ್ತಿ (27) ಹಲ್ಲೆಗೊಳಗಾದ ಯುವಕ. ಈತನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ತಾಲೂಕಿನ ಗುಡಿಹೊನ್ನತ್ತಿ ಗ್ರಾಮದ ಅಪ್ರಾಪ್ತ ವಯಸ್ಸಿನ ಹುಡುಗಿ ಕೊಲೆಗೆ ಯತ್ನಿಸಿದ …
Read More »ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಸಾವನ್ನಪ್ಪಿದಾರೆ
ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಾವನ್ನಪ್ಪಿದ ಸ್ನೇಹಿತೆಯರು – ಧರ್ಮಸ್ಥಳ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು. ಬೆಳ್ತಂಗಡಿ(ದಕ್ಷಿಣ ಕನ್ನಡ): ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸ್ನೇಹಿತೆಯರಿಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಿನ್ನೆ(ಏ.6) ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ನಡೆದಿದೆ. ಮೃತ ಯುವತಿಯರು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತಾ ದಂಪತಿ ಪುತ್ರಿ ರಕ್ಷಿತಾ (22) ಹಾಗೂ ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ …
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು :ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 10 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ ಐದು ದಿನ ರಾಜ್ಯದ ಹಲವು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಐದು ದಿನಗಳ ಪೈಕಿ ಏಪ್ರಿಲ್ 8 ರವರೆಗೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಸಾಧಾರಣವಾಗಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. …
Read More »ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ವಿವಾದ
ಗಡಿ ವಿಷಯದಲ್ಲಿ ಕರ್ನಾಟಕದ ಜತೆ ಸದಾ ತಂಟೆ ತೆಗೆಯುವ ಮಹಾರಾಷ್ಟ್ರ ಸರ್ಕಾರ ಈ ಬಾರಿ ಸ್ವಲ್ಪ ಭಿನ್ನ ಹಾದಿ ಹಿಡಿದಿದೆ. ಕರ್ನಾಟಕ ವ್ಯಾಪ್ತಿಯ ಸುಮಾರು 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವ ಮೂಲಕ ಜಾಣ ಕಾರ್ಯತಂತ್ರ ಬಳಸಲು ಮುಂದಾಗಿದೆ. ಆರೋಗ್ಯ ವಿಷಯವಾಗಿದ್ದರಿಂದ ಯಾರೂ ತಕರಾರು ತೆಗೆಯಲಾಗದು ಎಂಬುದು ಅವರ ಭಾವನೆಯಿರಬೇಕು. ಆದರೆ ಈ ತಂತ್ರದ ಹಿಂದೆ ಬೇರೆಯದೇ ಸಂಚನ್ನು ಗುರುತಿಸಿರುವ ರಾಜ್ಯದ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಏಕದನಿಯಲ್ಲಿ ವಿರೋಧ …
Read More »ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ
ನವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ. ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ …
Read More »2023-24ನೇ ಸಾಲಿನ ಶಾಲಾ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಮೇ.29ರಿಂದ ಶಾಲೆ ಆರಂಭ
ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …
Read More »
Laxmi News 24×7