Breaking News
Home / ರಾಷ್ಟ್ರೀಯ (page 568)

ರಾಷ್ಟ್ರೀಯ

ಕಾಂಗ್ರೆಸ್‌ ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೆ,ನಾನು ಭಗವದ್ಗೀತೆ ವಿರೋಧಿಯಲ್ಲ: ಸಿದ್ದರಾಮಯ್ಯ

ಮಂಗಳೂರು: ನಾನು ಭಗವದ್ಗೀತೆ, ಬೈಬಲ್, ಕುರಾನ್ ಯಾವುದರ ವಿರೋಧಿಯೂ ಅಲ್ಲ. ನಮ್ಮದು ಬಹುಸಂಸ್ಕೃತಿ ಇರುವ ರಾಷ್ಟ್ರ, ನಮ್ಮಲ್ಲಿ ಸಹಬಾಳ್ವೆ ಇರಬೇಕು. ಸಹಿಷ್ಣುತೆ ಮತ್ತು ಸಹಬಾಳ್ವೆಯಲ್ಲಿ ನಂಬಿಕೆ ಇರೋನು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನದ್ದು ಸಾಫ್ಟ್ ಮತ್ತು ಹಾರ್ಡ್ ಹಿಂದುತ್ವ ಅಂತ ಇಲ್ಲ. ನಾವು ಹಿಂದೂ ಧರ್ಮದ ಮೇಲೆ ನಂಬಿಕೆ ಇಟ್ಟವರು. ಎಲ್ಲಾ ಧರ್ಮಗಳಿಗೂ ಸಮಾನ ಗೌರವ ಕೊಡುತ್ತೇವೆ ಎಂದರು.ಶಾಲೆಗಳಲ್ಲಿ ಭಗವದ್ಗೀತೆ ಕಲಿಸೋ ಬಗ್ಗೆ ಚಿಂತನೆ …

Read More »

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಹಾಲಿನ ದರ ಹೆಚ್ಚಳ ಸಾಧ್ಯತೆ

ಬೆಳಗಾವಿ: ಹಾಲಿನ ದರ ಹೆಚ್ಚಳ ಮಾಡುವಂತೆ 14 ಹಾಲು ಒಕ್ಕೂಟಗಳು ಒತ್ತಡ ಹಾಕುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಸಿಎಂ ಕೈಗೊಳ್ಳುವ ನಿರ್ಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.   ಹಾಲಿನ ದರ ಪರಿಷ್ಕರಣೆ ಮಾಡುವುದರಿಂದ ಉಂಟಾಗುವ ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಿ …

Read More »

ಮೋಳವಾಡದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ : ಸಮರ್ಪಕ ಪುನರ್ವಸತಿ ಕಲ್ಪಿಸಲು ಗ್ರಾಮಸ್ಥರ ಮನವಿ

ಬೆಳಗಾವಿ : ಆಡಳಿತವನ್ನು ಜನರ ಮನೆಬಾಗಿಲಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಆಶಯದಂತೆ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಅವರು ಕೃಷ್ಣಾ ಹೊಳೆದಂಡೆಯ ಕಾಗವಾಡ ತಾಲೂಕಿನ ಮೋಳವಾಡ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಿದರು. ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯನ್ನು ಗ್ರಾಮದ ಹಿರಿಯರು ಅಲಂಕೃತ ಎತ್ತಿನ ಬಂಡಿಯಲ್ಲಿ ಬರಮಾಡಿಕೊಂಡರು. ಝಾಂಜ್, ಡೊಳ್ಳು, ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯಲ್ಲಿ ಮಹಾಲಕ್ಷ್ಮಿ ಮಂದಿರದವರೆಗೆ ಜಿಲ್ಲಾಧಿಕಾರಿಯನ್ನು ಕರೆದೊಯ್ದರು. ಗ್ರಾಮದ …

Read More »

ನನ್ನನ್ನು ಮೋದಿ ಚಮಚಾ ಎನ್ನುತ್ತಿದ್ದಾರೆ. ಇದಕ್ಕೆ ನಾನು ಕೇರ್ ಮಾಡುವುದಿಲ್ಲ :ಪ್ರಕಾಶ್ ಬೆಳವಾಡಿ

ಮೈಸೂರು, ಮಾರ್ಚ್ 18: ಪ್ರಧಾನಿ ನರೇಂದ್ರ ಮೋದಿಯವರು ಒಳ್ಳೆಯ ಕೆಲಸ ಮಾಡಿದಾಗ ನಾನು ಅವರನ್ನು ಬೆಂಬಲಿಸಿರುವುದು ನಿಜ. ಹಾಗಾಗಿ, ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ಬಂದ ಬಳಿಕವೂ ನನ್ನನ್ನು ಮೋದಿ ಚಮಚಾ ಎನ್ನುತ್ತಿದ್ದಾರೆ. ಇದಕ್ಕೆ ನಾನು ಕೇರ್ ಮಾಡುವುದಿಲ್ಲ ಎಂದು ನಟ ಕಂ ನಿರ್ದೇಶಕ ಪ್ರಕಾಶ್ ಬೆಳವಾಡಿ ತಿಳಿಸಿದ್ದಾರೆ.   ಮೈಸೂರಿನ ಡಿಆರ್‌ಸಿಯಲ್ಲಿ ವಿವಿಧ ಕ್ಷೇತ್ರದ ಪ್ರಮುಖರ ಜತೆ ಆಯೋಜಿಸಿದ್ದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಣೆ ಬಳಿಕ ಮಾತನಾಡಿದ …

Read More »

ಪತಿಗೆ ಪರಸ್ತ್ರೀಯರೊಂದಿಗೆ ಅಕ್ರಮ ಸಂಬಂಧ ಆರೋಪ: ಡೆತ್​​​​ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪ್ರೀತಿಸಿ ಕೈಹಿಡಿದ ಗಂಡ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಯತ್ರಿ ನಗರದಲ್ಲಿ ನಡೆದಿದೆ. ಇಂದುಶ್ರೀ (28) ಮೃತ ದುರ್ದೈವಿ. ಎರಡು ವರ್ಷದಿಂದ ಈಕೆ ರಾಕೇಶ್​ ಎಂಬುವವರನ್ನು ಪ್ರೀತಿಸುತ್ತಿದ್ದರು. 9 ತಿಂಗಳ ಹಿಂದೆಯಷ್ಟೇ ಮನೆಯವರನ್ನು ಒಪ್ಪಿಸಿ ರಾಕೇಶ್​ ಜೊತೆ ವಿವಾಹವಾಗಿದ್ದರು. ಆದರೆ, ಮದುವೆಯಾದ ಬಳಿಕ ಗಂಡ ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ನೊಂದ ಮಹಿಳೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್​​ನೋಟ್​ ಬರೆದಿಟ್ಟು ನೇಣಿಗೆ …

Read More »

ಭಗವದ್ಗೀತೆ ಪಾಠ ಮಾಡಿದ್ರೆ ಹೊಟ್ಟೆ ತುಂಬಲಿದೆಯೇ!?.H.D.K.

ರಾಮನಗರ : ಸರ್ಕಾರದ ಮುಂದೆ ಟನ್‌ಗಟ್ಟಲೇ ಸಮಸ್ಯೆಗಳ ಸರಮಾಲೆಯೇ ಇದೆ. ಮೊದಲು ಅವುಗಳನ್ನ ಸರಿಪಡಿಸಲಿ. ಭಗವದ್ಗೀತೆ ಪಾಠ ಮಾಡಿದರೆ ಅದರಿಂದ ಹೊಟ್ಟೆ ತುಂಬುತ್ತದೆಯೇ ಎಂದು ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಮುಂದೆ ರಾಜ್ಯದಲ್ಲಿ ಬಗೆಹರಿಸುವ ಸಮಸ್ಯೆಗಳೇ ಸಾವಿರ ಸಂಖ್ಯೆಯಲ್ಲಿ ಇದ್ದಾವೆ. ಮೊದಲಿಗೆ ಆ ಸಮಸ್ಯೆಗಳನ್ನು ಬಗೆಹರಿಸುವ ಕಡೆ ಹೆಚ್ಚು ಗಮನ ಹರಿಸಬೇಕಿದೆ. ಭಗವದ್ಗೀತೆ ಪಾಠ …

Read More »

ಲೋಕಸಭೆ, ರಾಜ್ಯಸಭೆಗೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ : ಒಂದು ಲೋಕಸಭೆ ಹಾಗೂ ನಾಲ್ಕು ರಾಜ್ಯ ಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಚುನಾವಣೆ ಏಪ್ರಿಲ್ 12 ರಂದು ನಡೆಯಲಿದೆ. ಚುನಾವಣಾ ಆಯೋಗವು ಇತ್ತೀಚೆಗೆ ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಉಪಚುನಾವಣೆಯ ದಿನಾಂಕವನ್ನು ಪ್ರಕಟಿಸಿತ್ತು. ಇದೀಗ ಬಿಜೆಪಿಯು ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಹಾರಾಷ್ಟ್ರದ ಮುಂಬರುವ ಲೋಕಸಭೆ ಮತ್ತು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ …

Read More »

ತುಮಕೂರಿನಲ್ಲಿ ಖಾಸಗಿ ಬಸ್ ಪಲ್ಟಿ : ಮೃತಪಟ್ಟ 8 ಜನರಲ್ಲಿ ನಾಲ್ವರು ವಿದ್ಯಾರ್ಥಿಗಳು!

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಮೃತಪಟ್ಟಿದ್ದು, ಇವರಲ್ಲಿ ನಾಲ್ವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಪಳವಳ್ಳಿ ಕಟ್ಟೆ ಬಳಿ ತಿರುವಿನಲ್ಲಿ ಎಸ್ ವಿಟಿ ಟ್ರಾವಲ್ ಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.25 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ವೈ.ಎ.ಹೊಸಕೋಟೆ ಮೂಲದ …

Read More »

ಬಾಳು ಕೊಡ್ತೀನಿ, ನೀನೇ ನನ್ನ ಜೀವ ಎಂದು ಅರ್ಧದಲ್ಲೇ ಕೈ ಕೊಟ್ಟ ಕಿರಾತಕ: ಗಂಡನಿಗಾಗಿ ಧರಣಿ ಕುಳಿತ ಶಿಕ್ಷಕಿ

ರಾಯಚೂರು: ಪ್ರೀತಿ ಕುರುಡು ಅಂತಾರೆ ನಿಜ. ಆದರೆ, ಪ್ರೀತಿಯ ಮಾಯೆಯಲ್ಲಿ ಬಿದ್ದು ಏನನ್ನು ಯೋಚಿಸದೇ ಕಣ್ಣಿದ್ದು ಕುರುಡರಾದರೆ ಏನಾಗಬಹುದು ಎಂಬುದಕ್ಕೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದ ಈ ಒಂದು ಘಟನೆ ತಾಜಾ ಉದಾಹರಣೆಯಾಗಿದೆ.   ಪ್ರೀತಿಸಿ ಮದುವೆಯಾದ ಗಂಡನಿಗಾಗಿ ಪ್ರೌಢಶಾಲಾ ಶಿಕ್ಷಕಿಯೊಬ್ಬಳು ಇದೀಗ ಧರಣಿ ಕುಳಿತಿದ್ದಾಳೆ. ಗಂಡನಿಲ್ಲದೇ ನಾನು ಇಲ್ಲಿಂದ ಹೋಗುವುದಿಲ್ಲ ಎಂದು ಗಂಡನಿಗಾಗಿ ಗಂಡನ ಮನೆಯ ಮುಂದೆಯೇ ಶಿಕ್ಷಕಿ ಪ್ರತಿಭಟನೆಗೆ ಕುಳಿತಿದ್ದಾಳೆ. ಶಿಕ್ಷಕಿಯ ಹೆಸರು ಶಾಂತಾಬಾಯಿ. ಇವರು ಪ್ರತಾಪ್​ …

Read More »

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ: ಶೋಭಾ ಕರಂದ್ಲಾಜೆ

ಉಡುಪಿ: ಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪ್ರಶ್ನಿಸಿರುವುದು ಅವರ ಮಾನಸಿಕತೆಯನ್ನು ತೋರಿಸುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮುಳುಗಿಸಲು ಬೇರೆ ಯಾರ ಅಗತ್ಯವೂ ಇಲ್ಲ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರೇ ಪಕ್ಷವನ್ನು ಉಸಿರುಗಟ್ಟಿಸಿ ಮುಗಿಸಲಿದ್ದಾರೆ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದರು. ದೇಶದ ಸಂವಿಧಾನ ಹಾಗೂ ನೆಲದ ಕಾನೂನುಗಳನ್ನು ಪ್ರತಿಯೊಬ್ಬರೂ ಗೌರವಿಸಬೇಕು. ಆದರೆ, ಕೆಲವರು …

Read More »