Breaking News
Home / ರಾಷ್ಟ್ರೀಯ (page 572)

ರಾಷ್ಟ್ರೀಯ

ಜಮ್ಮು, ಕಾಶ್ಮೀರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಸಂಸತ್ತಿನಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಮಂಡಿಸಲಿದ್ದಾರೆ. 2022-23 ನೇ ಸಾಲಿನ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಅಂದಾಜು ಸ್ವೀಕೃತಿಗಳು ಮತ್ತು ವೆಚ್ಚಗಳನ್ನು ನಿರ್ಮಲಾ ಸೀತಾರಾಮನ್ ಅವರು ಅಧಿಕೃತವಾಗಿ ಪ್ರಸ್ತುತಪಡಿಸಲಿದ್ದಾರೆ. ಅಲ್ಲದೇ ಸದನದಲ್ಲಿ ಪ್ರತಿಪಕ್ಷಗಳು ಹೆಚ್ಚುತ್ತಿರುವ ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿದರದಲ್ಲಿ ಕಡಿತ ಮತ್ತು ಯುದ್ಧ ಪೀಡಿತ …

Read More »

ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ

ಲಕ್ನೋ: ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಜಿಲ್ಲೆಯ ರಸೂಲಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆಗಾಗಿ ತಮ್ಮ ಮನೆಯಲ್ಲಿ ಡಿಜೆ ಹಾಕಿ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಿಜೆಪಿ ಚುನಾವಣಾ ಥೀಮ್ ಸಾಂಗ್‍ಗಳಿಗೆ ಕುಣಿಯುತ್ತಿದ್ದರು. ಸ್ಥಳಕ್ಕೆ …

Read More »

DCC ಬ್ಯಾಂಕ್‌ನಲ್ಲಿ ಕಳ್ಳತನ ಬ್ಯಾಂಕ್ ಸಿಬ್ಬಂದಿ ಸೇರಿ ಮೂವರು ಆರೋಪಿಗಳು ಅರೆಸ್ಟ್:

ಬೆಳಗಾವಿ: ಮುರಗೋಡ ಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿಧ ಪೊಲೀಸರು, ಅವರಿಂದ 4.37 ಕೋಟಿ ನಗದು, 1.63ಕೋಟಿ ಮೌಲ್ಯದ ಚಿನ್ನಾಭರಣವನ್ನು ವಶ ಪಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಬಸವರಾಜ ಹುಣಶಿಕಟ್ಟಿ (30), ಸವದತ್ತಿ ತಾಲೂಕಿನ ಯರಗಟ್ಟಿ ಗ್ರಾಮದ ಸಂತೋಷ ಕಂಬಾರ (31) ಹಾಗೂ ಜೀವಾಪೂರ ಗ್ರಾಮದ ಗಿರೀಶ್ ಬೆಳವಲ (26) ಬಂಧಿತರು. ಮುರಗೋಡ ಪೊಲೀಸರು ಬಂಧಿತ ಆರೋಪಿಗಳಿಂದ 4.37 ಕೋಟಿ ನಗದು ಹಣ, …

Read More »

ಬೊಜ್ಜುʼ ಹೆಚ್ಚಾಗಲು ಕಾರಣ

ಬೊಜ್ಜಿಗೆ ಕಾರಣವಾಗುವ ಹಲವು ಅಂಶಗಳ ಕುರಿತು ಅಧ್ಯಯನ ನಡೆಸಿದ ತಂಡವೊಂದು ಈ ವಿಷಯಗಳ ಬಗ್ಗೆ ಜಾಗೃತಿ ಹೊಂದಿದರೆ ಬೊಜ್ಜಿನ ಸಮಸ್ಯೆಯಿಂದ ದೂರವಿರಬಹುದು ಎಂದು ಹೇಳಿದೆ. ದಿನಕ್ಕೆ 15ರಿಂದ 20 ನಿಮಿಷ ಅವಧಿಯನ್ನು ಬಿಸಿಲಿನಲ್ಲಿ ಕಳೆಯಿರಿ. ವಿಟಮಿನ್ ಡಿ ಮಾತ್ರೆ ಸೇವಿಸುವ ಬದಲು ಮನೆಯಿಂದ ಹೊರಗೆ ಹೋಗಿ. ಸ್ವಲ್ಪ ಮಟ್ಟಿನ ದೈಹಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ. ಇದರಿಂದ ದೇಹ ತೂಕವೂ ಇಳಿಯುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ. ಕಚೇರಿ ಅಥವಾ ಶಾಲೆ-ಕಾಲೇಜಿಗೆ ಹೋಗುವಾಗ ಪ್ಲಾಸ್ಟಿಕ್ ಡಬ್ಬಿಯಲ್ಲಿ …

Read More »

ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನಕೊಲೆ

ಬೆಳಗಾವಿ: ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ಯುವಕನನ್ನು ಕ್ರೂರವಾಗಿ ಕೊಲೆ ಮಾಡಿ ಎಸೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣ ಹೊರವಲಯದ ಆರ್‌ಟಿಓ ಕಛೇರಿ ಮುಂಭಾಗದಲ್ಲಿ ನಡೆದಿದೆ. ಅಥಣಿ ತಾಲೂಕಿನ ದರೂರ ಗ್ರಾಮದ ಸಿದ್ಧಾರೂಢ ಶಿರಗುಪ್ಪಿ(25) ಕೊಲೆಯಾದ ವ್ಯಕ್ತಿ. ಸಿದ್ಧಾರೂಢ ಶಿರಗುಪ್ಪಿ ಕಳೆದ 2 ವರ್ಷಗಳಿಂದ ಮಾಜಿ ಡಿಸಿಎಂ ಸಹೋದರ, ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪಾ ಸವದಿಯ ಕಾರು ಚಾಲನಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಕಳೆದ ರಾತ್ರಿ ಪರಪ್ಪ …

Read More »

ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ 100% ಟ್ಯಾಕ್ಸ್ ವಿನಾಯಿತಿ : ಬೊಮ್ಮಾಯಿ

ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಹಿಂದಿ ಚಿತ್ರಕ್ಕೆ ಕರ್ನಾಟಕದಲ್ಲಿ ಶೇ.100 ಟ್ಯಾಕ್ಸ್ ವಿನಾಯಿತಿ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ. ಅದೆಷ್ಟೂ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಹೀಗಾಗಿಯೇ ಕಾಶ್ಮೀರದಲ್ಲಿ 370ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿದರು. ಇದಕ್ಕಾಗಿ …

Read More »

ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಮೃತದೇಹ ತರಿಸಲು ಮೋದಿ ಸೂಚನೆ

ನವದೆಹಲಿ: ಮಾರ್ಚ್ 1 ರಂದು ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ. 

Read More »

ಜೆಡಿಎಸ್ ನಲ್ಲಿ ಸಿ.ಎಂ.ಇಬ್ರಾಹಿಂಗೆ ಗೌರವಯುತ ಸ್ಥಾನ..?

ಬೆಂಗಳೂರು,ಮಾ.13- ಕಾಂಗ್ರೆಸ್ ತೊರೆದು ಪಕ್ಷ ಸೇರ್ಪಡೆಯಾಗಲಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರಿಗೆ ಗೌರವಯುತ ಸ್ಥಾನ ನೀಡಲು ಜೆಡಿಎಸ್ ಉದ್ದೇಶಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಣೆ ಮಾಡಿದ ಬಳಿಕ ಇಬ್ರಾಹಿಂ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜೆಡಿಎಸ್ ಜೊತೆ ಚರ್ಚೆ ನಡೆಸಿದರು. ಪಕ್ಷಕ್ಕೆ ಸೇರ್ಪಡೆಯಾದ ಮೇಲೆ ನೀಡುವ ಸ್ಥಾನಮಾನ, ಪಕ್ಷ ಸಂಘಟನೆ, ಮುಂಬರುವ ಚುನಾವಣೆ ಹಾಗೂ ತಮ್ಮ ಬೆನ್ನ …

Read More »

ಬಿಜೆಪಿ ಅಭ್ಯರ್ಥಿ ಘೋಷಣೆ; ಕಾಂಗ್ರೆಸ್‌ನಿಂದ ಯಾರು?

ಬಾಗಲಕೋಟೆ: ಪದವೀಧರರು ಮತ್ತು ಶಿಕ್ಷಕರ ವಲಯದಲ್ಲಿ ಪ್ರತಿಷ್ಠೆಯ ಚುನಾವಣೆ ಮುಂಬರುವ ಮೇ ತಿಂಗಳಲ್ಲಿ ನಡೆಯಲಿದೆ. ಈ ಚುನಾವಣೆಗೆ ಆಡಳಿತಾರೂಢ ಬಿಜೆಪಿಯಿಂದ ಎರಡೂ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಯಾರಿಗೆ ಕಣಕ್ಕಿಳಿಸಬೇಕೆಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆಯುತ್ತಿದೆ. ವಾಯವ್ಯ ಪದವೀಧರರ ಮತಕ್ಷೇತ್ರಕ್ಕೆ ಈ ಕ್ಷೇತ್ರದ ಹಾಲಿ ಸದಸ್ಯ ಹನಮಂತ ಆರ್‌. ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಹಾಲಿ ಸದಸ್ಯ ಅರುಣ ಶಹಾಪುರ ಅವರನ್ನೇ ಬಿಜೆಪಿ ಅಭ್ಯರ್ಥಿಗಳನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. …

Read More »

ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ

ವಿಜಯನಗರ; ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ನಡೆದಿದೆ. ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಯುವಕ-ಯುವತಿ ಬಿದ್ದಿರೋ ಶಂಕೆ ಕಂಡು ಬಂದಿದೆ. ರೈಲ್ವೆ ಹಳಿಯಿಂದ 50 ಅಡಿ ದೂರದಲ್ಲಿ ಯುವತಿ ಮತ್ತು ಯುವಕನ ಮೃತದೇಹ ಪತ್ತೆಯಾಗಿದೆ. ಮೃತರ ಹೆಸರು, ವಿಳಾಸದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಇಬ್ಬರ ಮೊಬೈಲ್​​ಗಳು ಆಫ್​ ಆಗಿದ್ದು, ಸ್ಥಳಕ್ಕೆ …

Read More »