Breaking News

ರಾಷ್ಟ್ರೀಯ

4 ವರ್ಷಗಳ ಬಳಿಕ ಬೆಂಗಳೂರಿನಲ್ಲಿ IPL ಪಂದ್ಯಗಳು: ಟಿಕೆಟ್​ ಖರೀದಿ ಜೋರು

ಬೆಂಗಳೂರು: ನಾಲ್ಕು ವರ್ಷಗಳ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್​ ಪಂದ್ಯಗಳ ನಡೆಯಲಿದ್ದು, ಟಿಕೆಟ್​ ಖರೀದಿಗಾಗಿ ರಾಯಲ್​ ಚಾಲೆಂಜರ್ಸ್​ ಅಭಿಮಾನಿಗಳು ಟಿಕೆಟ್​ ಖರೀದಿಗಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.   ಏಪ್ರಿಲ್ 2ರಂದು ಹಾಗೂ ಏಪ್ರಿಲ್​ 10 ರಂದು ನಡೆಯುವ ಎರಡು ಪಂದ್ಯಗಳಿಗಾಗಿ ಟಿಕೆಟ್ ಖರೀದಿಗೆ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತಿದ್ದಾರೆ. ಏಪ್ರಿಲ್ 2 ರಂದು ಆರ್​ಸಿಬಿ‌ ಹಾಗೂ ಮುಂಬೈ ನಡುವೆ ನಡೆಯಲಿದೆ ಮತ್ತು ಏಪ್ರಿಲ್ 10 ರಂದು …

Read More »

ಬೆಳಗಾವಿ: ಸೀಜ್ ಮಾಡಿದ್ದ ಸಾರಾಯಿ ಬಾಕ್ಸ್ ಗಳನ್ನೇ ಕದ್ದ ಅಬಕಾರಿ ಅಧಿಕಾರಿಗಳು

ಬೆಳಗಾವಿ: ಇದು ಬೇಲಿಯೇ ಎದ್ದು ಹೊಲಮೇಯ್ದ ಕಥೆ. ಜಪ್ತಿ ಮಾಡಿದ್ದ ಸಾರಾಯಿ ಬಾಕ್ಸ್ ಗಳ ಪೈಕಿ 301 ಬಾಕ್ಸ್ ಗಳನ್ನೇ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಳ್ಳತನ ಮಾಡಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಖಾನಾಪುರ ತಾಲೂಕಿನ ಮೋದೆಕೊಪ್ಪ ಗ್ರಾಮದ ಬಳಿ ಗೋವಾದಿಂದ ಸಾಗಿಸಲಾಗುತ್ತಿದ್ದ 753 ಸಾರಾಯಿ ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಜಪ್ತಿಮಾಡಿದ್ದ ಮಾರನೇ ದಿನವೇ 301 ಬಾಕ್ಸ್ ಗಳನ್ನು ಅಬಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಳ್ಳತನ ಮಾಡುವ …

Read More »

ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪನೆ: ಶಿವಶರಣರಿಗೆ ದೊಡ್ಡ ಕಾಣಿಕೆ: C,M,

ಶಿವಮೊಗ್ಗ : ಶಿವಶರಣೆ, ವೈಚಾರಿಕ ಕ್ರಾಂತಿ ನಡೆಸಿದ ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪಿಸಿ, ಶಿವಶರಣರಿಗೆ ದೊಡ್ಡ ಕಾಣಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿಕಾರಿಪುರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಬಸವಕಲ್ಯಾಣ, ಉಡುತಡಿಯಲ್ಲಿ ಅವರ ಕೊಡುಗೆ ಇದೆ . ಕರ್ನಾಟಕದ ಜನತೆ ಇದಕ್ಕಾಗಿ ಯಡಿಯೂರಪ್ಪ ಅವರನ್ನು ಸದಾ ಸ್ಮರಿಸುತ್ತಾರೆ ಎಂದರು. ಪರಿಶೀಲನೆ 2018 ಕೆ.ಎಸ್.ಆರ್.ಟಿ. ಸಿ ಗಾರ್ಡ್ ಹಾಗೂ ತಾಂತ್ರಿಕ ಅಧಿಕಾರಿಗಳು ಹುದ್ದೆ ತುಂಬುವ …

Read More »

ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಯೂರಿಯಾ ಚೀಲದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ ಆರೋಪಿಯೋರ್ವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಯೂರಿಯಾ ಚೀಲದಲ್ಲಿ ವಿವಿಧ ರೀತಿಯ ಸಾರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು 43.5 ಲೀಟರ ಅಂದಾಜಿನ ಸುಮಾರು 16848 ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. ಪಿಐ ಘಟಪ್ರಭಾ ರವರು ಹಾಗೂ ಅವರ ಸಿಬ್ಬಂದಿ ಜನರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ರೇಡ್ ಮಾಡಿ ಜಪ್ತಿ ಮಾಡಿಕೊಂಡಿದ್ದು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ …

Read More »

ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದ ಪರ ಕೇಂದ್ರ ಸರ್ಕಾರ ಮತ್ತೊಮ್ಮೆ ಬ್ಯಾಟಿಂಗ್‌ ಮಾಡಿದೆ

ನವದೆಹಲಿ: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದ ಪರ ಕೇಂದ್ರ ಸರ್ಕಾರ ಮತ್ತೊಮ್ಮೆ ಬ್ಯಾಟಿಂಗ್‌ ಮಾಡಿದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕ ಹಣ ಉಳಿತಾಯವಾಗಲಿದೆ. ಸಂವಿಧಾನದಲ್ಲಿ ತಿದ್ದುಪಡಿ ತರುವ ಮೊದಲು, ಎಲ್ಲಾ ರಾಜಕೀಯ ಪಕ್ಷಗಳನ್ನು ಒಳಗೊಂಡಂತೆ ಅದರ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಕೇಂದ್ರ ಶುಕ್ರವಾರ ಹೇಳಿದೆ.   ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು, “ಲೋಕಸಭೆ …

Read More »

ಲಿಂಗಾಯತ ಸಿಎಂ ಬೇಕಾದರೆ ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೆ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು.   ಶುಕ್ರವಾರ ನಾಗನೂರ ಪಟ್ಟಣದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಅರಭಾವಿ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರುವ ಚುನಾವಣೆಯಲ್ಲಿ ಸಮಾಜ ಬಾಂಧವರು …

Read More »

ಮಹಾರಾಷ್ಟ್ರ ಮಹಿಳೆಯರಿಗೆ ಬಸ್‌ ಶುಲ್ಕದಲ್ಲಿ ರಿಯಾಯತಿ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಎಲ್ಲಾ ಬಸ್‌ಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಶುಲ್ಕದಲ್ಲಿ ಶೇ.50 ರಿಯಾಯತಿ ನೀಡುವ ನಿಯಮವನ್ನು ಮಾ.17ರ ಶುಕ್ರವಾರದಿಂದ ಜಾರಿಗೊಳಿಸಲಾಗಿದೆ. ರಿಯಾಯತಿಯು ಮಹಿಳಾ ಸಮ್ಮಾನ್‌ ಯೋಜನೆಯ ವಿಸ್ತರಣೆಯ ಭಾಗವಾಗಿದ್ದು, ಸಾರಿಗೆ ನಿಗಮಗಳಿಗೆ ರಿಯಾಯತಿ ಹಣವನ್ನು ಸರ್ಕಾರ ಪಾವತಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   ಮಾರ್ಚ್‌ 9ರಂದು ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ದೇವೇಂದ್ರ ಫ‌ಡ್ನವೀಸ್‌ ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ, ಮಹಿಳೆಯರಿಗೆ ಶೇ.50 …

Read More »

1,142 ಕುಕ್ಕರ್ ಬಾಕ್ಸ್‌ಗಳನ್ನು ವಶಕ್ಕೆಪಡೆದ ಪೊಲೀಸರು

ಕುಣಿಗಲ್: ತಾಲ್ಲೂಕಿನ ಅಂಚೇಪಾಳ್ಯದ ಚೆಕ್‌ಪೋಸ್ಟ್ ಬಳಿ ಶುಕ್ರವಾರ ಕಂಟೇನರ್ ತಪಾಸಣೆ ವೇಳೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ಅವರ ಭಾವಚಿತ್ರವಿದ್ದ 1,142 ಕುಕ್ಕರ್ ಬಾಕ್ಸ್‌ಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ವಶಕ್ಕೆಪಡೆದಿದ್ದಾರೆ.   ಕನಕಪುರದಿಂದ ಹೆಬ್ಬೂರಿಗೆ ಕಂಟೇನರ್ ಹೋಗುತ್ತಿತ್ತು. ಕುಕ್ಕರ್‌ಗಳ ಬಿಲ್‌ ಬೇರೆ ವ್ಯಕ್ತಿಯ ಹೆಸರಿನಲ್ಲಿದೆ. ಶಾಸಕರ ಬೆಂಬಲಿಗರು ಖರೀದಿ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಕುಕ್ಕರ್‌ ಬೆಲೆ ₹ …

Read More »

ಸಾಂಸ್ಕೃತಿಕ ಭವನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರಕ್ಕೆ ಬರುವ ಅಂಬೇಡ್ಕರ್‌ ಉದ್ಯಾನದಲ್ಲಿ ಸುಸಜ್ಜಿತ ಗ್ರಂಥಾಲಯ, ಸಾಂಸ್ಕೃತಿಕ ಭವನ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಐಎಎಸ್‌, ಕೆಎಎಸ್, ಐಪಿಎಸ್ ಕೋಚಿಂಗ್‌ ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಾಸಕ ಅನಿಲ ಬೆನಕೆ ಶುಕ್ರವಾರ ಚಾಲನೆ ನೀಡಿದರು.   ₹ 1.30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಮಾಜದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ನೀಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ಸುಸಜ್ಜಿತ ಡಿಜಿಟಲ್ ಗ್ರಂಥಾಲಯ, ಸಾಂಸ್ಕೃತಿಕ ಭವನ, …

Read More »

BJP ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ನಾಯಿಕ ವಿರುದ್ಧ ಶುಕ್ರವಾರ F,I,R, ದಾಖಲ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಗ್ರಾಮದಲ್ಲಿ ಮಾರ್ಚ್‌ 15ರಂದು ಮಾಂಸಾಹಾರ ಊಟದ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ಬಾಳಪ್ಪ ನಾಯಿಕ ಅವರ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.   ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ ಅಂದು ರಾತ್ರಿ 9ಕ್ಕೆ ಸುಮಾರು 3,000 ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ …

Read More »