Breaking News
Home / ರಾಷ್ಟ್ರೀಯ (page 587)

ರಾಷ್ಟ್ರೀಯ

ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.

ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ. ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ. ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ …

Read More »

ಅ ವೆವಸ್ತೆಯ ಆಗರ ವಾದ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿ ಯಲ್ಲಿಯ 31-ನೇ ವಾರ್ಡ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿಯ 31-ನೇ ವಾರ್ಡಿನ ಕಥೆ ಇದು.   ಈ ವಾರ್ಡಿನಲ್ಲಿ ವಾಸಿಸುತ್ತಿದ್ದ ಜನರ ಗೋಳು ಕೇಳುತ್ತಿಲ್ಲ ಜಮಖಂಡಿ ನಗರ ಸಭೆಯವರು ಇದೇ ವಾರ್ಡಿನಲ್ಲಿದ್ದ ಮೆಂಬರ ಕೂಡಾ.   ಸೊಳ್ಳೆಗಳು ಹಾಗೂ ಹಂದಿಗಳ ರೋಗಕ್ಕೆ ತುತ್ತಾಗಿ ಭಯ ಭೀತರಾದ ವಾರ್ಡಿನ ಜನ.   ಇಲ್ಲಿ ಚರಂಡಿ, ಲೈಟು,ರಸ್ತೆ,ಅದಾವುದು ಸರಿಯಾಗಿ ಇಲ್ಲದೆ ಇರುವ ವಾರ್ಡ ಇದು.ಇಲ್ಲಿಯ ಜನ ಇ ವಾರ್ಡಿನಲ್ಲಿದ್ದ ಮೆಂಬರರನ್ನು ಕೇಳಿದಾಗ …

Read More »

ಲಾಲೂ ಪ್ರಸಾದ್ ಯಾದವ್​ಗೆ ಕರೆ ಮಾಡಿದ ಸೋನಿಯಾ ಗಾಂಧಿ; ಕುತೂಹಲಕ್ಕೆ ಕಾರಣವಾದ ಕಾಂಗ್ರೆಸ್​ ಅಧಿನಾಯಕಿ ವರ್ತನೆ

ದೆಹಲಿ: ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಜೈಲು, ಆಸ್ಪತ್ರೆ ವಾಸದಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ತವರು ರಾಜ್ಯ ಬಿಹಾರಕ್ಕೆ ಆಗಮಿಸಿದ್ದಾರೆ. ಬಿಹಾರದಲ್ಲಿ ಇದೇ ವಾರ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ಆದರೇ, ಉಪಚುನಾವಣೆಯಲ್ಲಿ ಕಾಂಗ್ರೆಸ್- ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಡುವೆ ಮೈತ್ರಿಯಾಗಿಲ್ಲ. ಲಾಲೂ ಪ್ರಸಾದ್ ಯಾದವ್ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಭಕ್ತ ಚರಣ್ ದಾಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಮಧ್ಯೆಯೇ …

Read More »

‘ಕಂಬಳಿ ಫೈಟ್’​ಗೆ ಎಂಟಿಬಿ ಎಂಟ್ರಿ -ಸಿದ್ದರಾಮಯ್ಯರ ವಿರುದ್ಧ ಗುಡುಗಿದ ನಾಗರಾಜ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬಳಿ ಹಾಕಿಕೊಂಡು ಚುನಾವಣೆ ಪ್ರಚಾರ ಮಾಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಮೊನ್ನೆಯಷ್ಟೇ ಕಿಡಿಕಾರಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಂಬಳಿ ಹಾಕಿಕೊಂಡ ತಕ್ಷಣ ಆ ಗೌರವ ಬರುತ್ತಾ..? ಎಂದು ಕಿಡಿಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸಿಎಂ ಬೊಮ್ಮಾಯಿ.. ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ತಿರುಗೇಟು …

Read More »

ಜಮೀರ್ ಅವಾಚ್ಯ ಪದ ಬಳಕೆಯಿಂದ ಕಾಂಗ್ರೆಸ್​​ಗೆ ಆಪತ್ತು.. ಶಿಷ್ಯನಿಗೆ ಸಿದ್ದರಾಮಯ್ಯ ಕಿವಿ ಮಾತು

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಪ್ರಚಾರ ತಾರಕ್ಕಕೇರಿದ್ದು, ನಾಯಕರ ನಡುವಿನ ವಾಕ್​ ಸಮರ ವೈಯುಕ್ತಿಕ ಹಂತದವರೆಗೂ ನಡೆದಿದೆ. ಈ ನಡುವೆ ಚಾಮರಾಜಪೇಟೆ ಶಾಸಕ, ಸಿದ್ದರಾಮಯ್ಯ ಅವರ ಆಪ್ತ ಜಮೀರ್ ಅಹ್ಮದ್ ಅವರು ದಳಪತಿಗಳ ವಿರುದ್ಧ ವೈಯುಕ್ತಿಕ ನಿಂದನೆಯನ್ನು ಮಾಡಿದ್ದಾರೆ. ಆದರೆ ಜಮೀರ್ ಅವರ ನಡೆ ಸ್ವಪಕ್ಷೀಯ ನಾಯಕರಿಗೂ ಕೂಡ ಮುಜುಗರ ಮೂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಕೇಳಿ ಬಂದಿದೆ. …

Read More »

1-5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು (ಅ.25) ಆರಂಭ ಮಾರ್ಗಸೂಚಿಗಳೇನು?

ಬೆಂಗಳೂರು: ಕೋವಿಡ್‌ದಿಂದಾಗಿ ಒಂದೂವರೆ ವರ್ಷದಿಂದ ಬಾಕಿಯಾಗಿದ್ದ 1-5ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಸೋಮವಾರ (ಅ.25) ಆರಂಭವಾಗುತ್ತಿವೆ. ಮಕ್ಕಳು ಕೋವಿಡ್‌ ಸುರಕ್ಷಾಕ್ರಮಗಳನ್ನು ಪಾಲಿಸುವಂತೆ ನೋಡಿಕೊಳ್ಳಲು ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮಕ್ಕಳಲ್ಲಿ ಕೋವಿಡ್‌ ಕುರಿತು ಜಾಗೃತಿ ಮೂಡಿಸಲು ಕೋವಿಡ್‌ ಸೋಂಕಿನ ಕುರಿತು ತರಗತಿ ಅವಧಿಯಲ್ಲಿ ಮಾಹಿತಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಮಾರ್ಗಸೂಚಿಗಳೇನು? ಭೌತಿಕ ಹಾಜರಾತಿ ಕಡ್ಡಾಯವಲ್ಲ. ಆದರೆ, ಹಾಜರಾಗುವವರು ಪಾಲಕರಿಂದ …

Read More »

#INDvPAK ಟೀಂ ಇಂಡಿಯಾ ವಿರುದ್ಧ ವಿಕೆಟ್​ ನಷ್ಟವಿಲ್ಲದೇ ಹಾಫ್ ಸೆಂಚುರಿ ಗಳಿಸಿದ ಪಾಕ್

ದುಬೈನಲ್ಲಿ ನಡೆಯುತ್ತಿರುವ ಟಿ20 ವರ್ಲ್ಡ್​ಕಪ್​ನಲ್ಲಿ ಟೀಂ ಇಂಡಿಯಾ ಹಾಗೂ ಪಾಕ್ ಟೀಂ ಮುಖಾಮುಖಿಯಾಗಿದ್ದು ಹೈವೋಲ್ಟೇಜ್ ಮ್ಯಾಚ್ ಚಾಲ್ತಿಯಲ್ಲಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಪಾಕ್ ಟೀಂ ಇಂಡಿಯಾವನ್ನ ಬ್ಯಾಟಿಂಗ್​ಗೆ ಆಹ್ವಾನಿಸಿತು. ಆರಂಭಿಕ ಆಘಾತ ಅನುಭವಿಸಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿತು. 152 ರನ್​ಗಳ ಗುರಿ ಬೆನ್ನು ಹತ್ತಿದ ಪಾಕ್ ಟೀಂ ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿದೆ. ಆರಂಭಿಕ ಬ್ಯಾಟ್ಸ್​ಮನ್​ಗಳಾಗಿ ಫೀಲ್ಡಿಗಿಳಿದ …

Read More »

ಕಲ್ಲಿದ್ದಲು ಆಮದು ನಿಲ್ಲಿಸಲು ತೀರ್ಮಾನ: ಸಚಿವ ಪ್ರಲ್ಹಾದ ಜೋಶಿ

ಬೆಳಗಾವಿ: ‘ದೇಶದಲ್ಲಿ ಕಲ್ಲಿದ್ದಲು ಕೊರತೆ ಆಗಿದ್ದು ನಿಜ. ಇದನ್ನು ನಾವು ಅವಕಾಶವಾಗಿ ಬಳಸಿಕೊಂಡಿದ್ದೇವೆ. ದೇಶದಲ್ಲಿ ಲಭ್ಯವಿರುವ ಕಲ್ಲಿದ್ದಲನ್ನೇ ಅಪಾರ ಪ್ರಮಾಣದಲ್ಲಿ ಪೂರೈಸಲಾಗುತ್ತಿದೆ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು. ಕಿತ್ತೂರಿನಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ತೀವ್ರ ಮಳೆ ಹಾಗೂ ಕಲ್ಲಿದ್ದಲಿನ ಆಮದು ದರ ಹೆಚ್ಚಾಗಿದ್ದಕ್ಕೆ ದೇಶದಲ್ಲಿ ಕಲ್ಲಿದ್ದಲು ಕೊರತೆ ಆಗಿತ್ತು. ಸ್ವದೇಶಿ ಕಲ್ಲಿದ್ದಲನ್ನೆ ಅಪಾರ ಪ್ರಮಾಣದಲ್ಲಿ ಒದಗಿಸಲಾಗುತ್ತಿದೆ. ಇದರಿಂದಾಗಿ ಕಲ್ಲಿದ್ದಲು ಆಮದನ್ನು …

Read More »

ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಸೇರಿದಂತೆ ತಮ್ಮ ದಿನ ನಿತ್ಯದ ಚಟುವಟಿಕೆಯಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಾಜ್‍ ಕುಂದ್ರಾ ಕಾಣಿಸದೇ ಇರುವುದರ ಕುರಿತಾಗಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಶಿಲ್ಪಾ ಶೆಟ್ಟಿ ತೆರಳುವಾಗ ನಗುಮೊಗದಿಂದಲೇ …

Read More »

ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …

Read More »