Breaking News
Home / ರಾಷ್ಟ್ರೀಯ (page 589)

ರಾಷ್ಟ್ರೀಯ

ಕಳ್ಳ ಸಹೋದರರ ಸೆರೆ: ಐದು ಬೈಕ್‌ ಜಪ್ತಿ

ಕಲಬುರಗಿ: ನಗರದಲ್ಲಿ ಹಾಡು ಹಗಲೇ ಬೈಕ್‌ಗಳ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದ ಇಬ್ಬರು ಸಹೋದರರನ್ನು ಉತ್ತರ ಉಪವಿಭಾಗದ ಚೌಕ್‌ ಠಾಣೆ ಪೊಲೀಸರು ಬಂಧಿಸಿ, 3.5 ಲಕ್ಷ ರೂ. ಮೌಲ್ಯದ ಐದು ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ. ಕಾಳಗಿ ತಾಲೂಕಿನ ಕೊರವಾರ ಗ್ರಾಮದ ವಿಕಾಸ ಹೊಸಮನಿ, ರಾಮಚಂದ್ರ ಹೊಸಮನಿ ಬಂಧಿತ ಸಹೋದರರು. ಬುಧವಾರ ಬೆಳಗ್ಗೆ ತಾಜ್‌ ಸುಲ್ತಾಪುರ ರಸ್ತೆಯಲ್ಲಿ ನಂಬರ್‌ ಪ್ಲೇಟ್‌ ಇಲ್ಲದ ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಸ್ತಿನಲ್ಲಿದ್ದ ಪೊಲೀಸರು ತಡೆದು ವಿಚಾರಣೆ ನಡೆಸಿದಾಗ ಈ ಕಳ್ಳರು …

Read More »

ಬೆಳಗಾವಿ: ಕಣಕುಂಬಿಯಲ್ಲಿ ಮರಕ್ಕೆ ಅಪ್ಪಿಳಿಸದ ಕಾರು: ಸ್ಥಳದಲ್ಲೇ ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ: ಚಾಲಕನ ನಿಯಂತ್ರಣ ಕೈ ತಪ್ಪಿ ಕಾರೊಂದು ಮರಕ್ಕೆ ಅಪ್ಪಳಿಸಿದ ಪರಿಣಾಮ ಮಹಿಳೋರ್ವಳು ಸ್ಥಳದಲ್ಲೇ ಅಸುನೀಗಿರುವ ಘಟನೆ ಖಾನಾಪುರ ತಾಲೂಕಿನ ಕಣಕುಂಬಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.   ಗುಲಾಬಿ ಪಾಂಡುರಂಗ ಗವಸ್( 38) ಮೃತ ಮಹಿಳೆ. ಸಂಬಂಧಿಕರ ಮನೆಯಲ್ಲಿಕಾರ್ಯಕ್ರಮ ಮುಗಿಸಿಕೊಂಡು ಬೆಳಗಾವಿ ಆಗಮಿಸುವ ವೇಳೆಯಲ್ಲಿ ಕಣಕುಂಬಿ ಪ್ರವಾಸಿ ಮಂದಿರದ ಬಳಿಯ ಈ ಅವಘಡ ಸಂಭವಿಸಿದೆ. ಕಾರನ ಮುಂಭಾಗ ಜಖಂಗೊಂಡಿದೆ ಎನ್ನಲಾಗಿದೆ.   ವೇಗವಾಗಿ ಚಲಿಸುತ್ತಿದ್ದ ಕಾರು ಬೃಹತ್‌ ತಿರುವಿನಲ್ಲಿ ಚಾಲಕನ …

Read More »

ಕೊವ್ಯಾಕ್ಸಿನ್​, ಕೊವಿಶೀಲ್ಡ್ ಲಸಿಕೆಗಳ ನಿಯಮಿತ ಮಾರುಕಟ್ಟೆ ಅನುಮೋದನೆಗಾಗಿ ಸಿಡಿಎಸ್​ಸಿಒ ವಿಷಯ ತಜ್ಞರ ಸಮಿತಿಯಿಂದ ಶಿಫಾರಸ್ಸು

ತುರ್ತು ಪರಿಸ್ಥಿತಿಯಲ್ಲಿ  ಷರತ್ತುಬದ್ಧ ಅನುಮತಿ ಪಡೆದಿರುವ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್​ ಲಸಿಕೆಗಳಿಗೆ ಸಂಪೂರ್ಣವಾಗಿ ನಿಯಮಿತ ಮಾರುಕಟ್ಟೆ ಬಳಕೆಗೆ ಅನುಮೋದನೆ ನೀಡುವಂತೆ ಭಾರತದ ಔಷಧ ನಿಯಂತ್ರಕರ ವಿಷಯ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. ಲಸಿಕೆಗಳಿಗೆ ಮಾರುಕಟ್ಟೆ ದೃಢೀಕರಣ ಸಿಕ್ಕರೆ, ಅವು ಔಷಧ ಮಾರುಕಟ್ಟೆಯಲ್ಲಿ ಸಿಗಲಿವೆ. ಸೀರಂ ಇನ್​ಸ್ಟಿಟ್ಯೂಟ್​​ನ ಕೊವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​  ಲಸಿಕೆಗಳ ಸ್ಥಿತಿಯನ್ನು ಅಪ್​ಗ್ರೇಡ್ ಮಾಡಬೇಕು ಅಂದರೆ, ಸದ್ಯ ಅವುಗಳನ್ನು ತುರ್ತುಸಂದರ್ಭದಲ್ಲಿ ವಯಸ್ಕರಿಗೆ ಷರತ್ತುಬದ್ಧವಾಗಿ, ನಿಯಂತ್ರಿತವಾಗಿ ನೀಡಲಾಗುತ್ತಿದೆ.  …

Read More »

ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ.. ಅಪಾರ ವನಸಂಪತ್ತು ನಾಶ

ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ವನಸಂಪತ್ತು ನಾಶವಾಗಿದೆ. ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದು ಸುಮಾರು 2 ಕಿ.ಮೀ ವಾಪ್ತಿವರೆಗೂ ಬೆಂಕಿ ಆವರಿಸಿದೆ. ಇನ್ನು, ನವಿಲು, ಚಿರತೆ, ಜಿಂಕೆಗಳು ಸೇರಿದಂತೆ ಅನೇಕ ಪ್ರಾಣಿಗಳು ಅಗ್ನಿಗೆ ಆಹುತಿಯಾಗಿವೆ ಅಂತಾ ಹೇಳಲಾಗ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ತೆರಳಲು ಸಾಧ್ಯವಾಗದ ಸ್ಥಳದಲ್ಲಿ ಬೆಂಕಿ ಆವರಿಸಿಕೊಂಡಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.  

Read More »

ರಾಜ್ಯದ ಇಂದಿನ ಕೊರೋನಾ ವರದಿ

ಬೆಂಗಳೂರು- ಕರ್ನಾಟಕದಲ್ಲಿ ಇಂದು 40,499 ಹೊಸ ಪ್ರಕರಣಗಳು ಕಂಡು ಬಂದಿವೆ.   ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು: 24,135 ರಾಜ್ಯದಲ್ಲಿ ಧನಾತ್ಮಕ ದರ: 18.80% ಬಿಡುಗಡೆಗಳು: 23,209 ಸಕ್ರಿಯ ಪ್ರಕರಣಗಳು ರಾಜ್ಯ: 2,67,650 (ಬೆಂಗಳೂರಿನಲ್ಲಿ- 184000) ಸಾವುಗಳು: 21 (ಬೆಂಗಳೂರು- 05) ಪರೀಕ್ಷೆಗಳು: 2,15,312 ಕೋವಿಡ್ ನಿರ್ಬಂಧ ಸಡಿಲಿಕೆ: ತಜ್ಞರ ಸಭೆ ನಂತರ ತೀರ್ಮಾನ.  

Read More »

ವಿದ್ಯಾರ್ಥಿಗಳಿಂದ ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ.

ಹುಬ್ಬಳ್ಳಿ: ‘ಬಡ, ನಿರ್ಗತಿಕ ಹಾಗೂ ದಾಸೋಹ ಕೈಂಕರ್ಯ ನಡೆಸುತ್ತಿರುವ ಮಠಗಳಿಗೆ ವಿತರಿಸುವುದಕ್ಕಾಗಿ, ನಗರದ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್‌) ವಿದ್ಯಾರ್ಥಿಗಳು ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ ಆರಂಭಿಸಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಡಿ.ವಿ. ಹೊನಗಣ್ಣವರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸುಮಾರು 50 ವಿದ್ಯಾರ್ಥಿಗಳು ಜ. 1ರಿಂದ 20ರವರೆಗೆ ಹಮ್ಮಿಕೊಂಡಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಇದುವರೆಗೆ 25 ಕೆ.ಜಿ.ಯ 200ಕ್ಕೂ ಹೆಚ್ಚು ಅಕ್ಕಿ ಚೀಲಗಳು ಸಂಗ್ರಹವಾಗಿವೆ. …

Read More »

ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆ

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆ ವೈಷಮ್ಯಕ್ಕೆ ಯುವಕನ ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.   ಜಮೀನಿಗೆ ಆಕಳು ಮೇಯಿಸಲು ಬಿಟ್ಟಿದ್ದಿಯಾ ಎಂದು ಜಗಳ ತೆಗೆದು ಶ್ರೀಕಾಂತ ಕಟಾಬಳಿ ಎನ್ನುವ ಯುವಕನ ಮೇಲೆ ಲಕ್ಷ್ಮಣ್ ದಡ್ಡಿ, ಲಕ್ಷ್ಮಣ್ ಪುತ್ರ ಸಚಿನ್ ಹಾಗೂ ರಂಜಿತ್‌ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಶ್ರೀಕಾಂತ ಕಟಾಬಳಿ ತಲೆಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.   ದಡ್ಡಿ …

Read More »

ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ

ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ಚುನಾವಣೆ ಮುಗಿದು, ನೂತನ ಸದಸ್ಯರು ಚುನಾಯಿತರಾಗಿ ಬರೋಬ್ಬರಿ ಐದು ತಿಂಗಳುಗಳೇ ಕಳದಿದ್ದರೂ ಅವರಿಗೆ ಅಧಿಕಾರದ ಭಾಗ್ಯ ಸಿಕ್ಕಿಲ್ಲ. ಜನಪ್ರತಿನಿಧಿಗಳಿದ್ದರೂ ಅಧಿಕಾರಿಗಳ ದರ್ಬಾರೇ ಮುಂದುವರಿದಿದೆ.   ಮಹಾನಗರಪಾಲಿಕೆ ಚುನಾವಣೆ ಮತದಾನ ಸೆ.3ರಂದು ನಡೆದಿತ್ತು. .6ರಂದು ಫಲಿತಾಂಶ ಪ್ರಕಟವಾಗಿತ್ತು. ಆಗಿನಿಂದಲೂ ಸದಸ್ಯರು ಪ್ರಮಾಣವಚನ ಸ್ವೀಕರಿಸುವ ಪ್ರಕ್ರಿಯೆಯೇ ನಡೆಯದಿರುವುದು ಅವರು ಅಧಿಕೃತವಾಗಿ ಅಧಿಕಾರ ಚಲಾಯಿಸುವುದಕ್ಕೆ ಅಡ್ಡಿಯಾಗಿ ಪರಿಣಮಿಸಿದೆ. ವಾರ್ಡ್‌ಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಚುರುಕುಗೊಳಿಸುವುದಕ್ಕೆ ಅವರಿಂದ ಸಾಧ್ಯವಾಗಿಲ್ಲ. ಈಚೆಗೆ ವಾಲ್ವ್‌ಮನ್‌ಗಳ ಮುಷ್ಕರದಿಂದ …

Read More »

ಬೆಳಗಾವಿಯಲ್ಲಿ ಚುಚ್ಚುಮದ್ದು ಪಡೆದ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ.

ಬೆಳಗಾವಿ: ಚುಚ್ಚುಮದ್ದು ಪಡೆದು ಜಿಲ್ಲೆಯ ರಾಮದುರ್ಗ ತಾಲೂಕಿನ ಮೂವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾಹಿತಿ ನೀಡಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ತನಿಖಾ ವರದಿಯನ್ನು ಸಿಎಂಗೆ ಕಳುಹಿಸಿ ಕೊಟ್ಟಿದ್ದೇವೆ. ಜಿಲ್ಲಾ ಲಸಿಕಾಕರಣ ಅನುಷ್ಠಾನ ಅಧಿಕಾರಿ ಡಾ.ಈಶ್ವರ್ ಗಡಾದ್ ಪರಿಶೀಲನೆ ನಡೆಸಿ, ವರದಿ ಕೊಟ್ಟಿದ್ದಾರೆ. ಟೆಕ್ನಿಕಲ್ ವರದಿ ಇರುವ ಕಾರಣ ಅದರಲ್ಲಿರುವ …

Read More »

ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ

ತೆಲಸಂಗ: ಅರಟಾಳ ಗ್ರಾಮ ಪಂಚಾಯ್ತಿಯಿಂದ ಮಂಗಳವಾರ ನಡೆದ ಗ್ರಾಮಸಭೆಯಲ್ಲಿ ಜನರು ಗ್ರಾಮ ಲೆಕ್ಕಾಧಿಕಾರಿ ವಿರುದ್ದ ಆರೋಪಗಳ ಸುರಿಮಳೆಗೈದರು.   ಶಿವಾನಂದ ಭಂಡಾರಿ, ಅಶೋಕ ಆನಗೊಂಡಿ, ಭೀಮಪ್ಪ ಭಂಡಾರಿ ಮಾತನಾಡಿ, ‘ಗ್ರಾಮ ಲೆಕ್ಕಾಧಿಕಾರಿ ಇರ್ಫಾನ್‌ ಆಲಗೂರ ಪ್ರತಿಯೊಂದಕ್ಕೂ ಹಣ ಕೇಳುತ್ತಾರೆ. ಆಸ್ತಿಗೆ ಸಂಬಂಧಿಸಿದ ಕೆಲಸಕ್ಕೆ ₹ 10ಸಾವಿರದಿಂದ ₹ 15ಸಾವಿರ ಲಂಚ ಕೇಳುತ್ತಾರೆ. ಅವರನ್ನು ವರ್ಗಾಯಿಸಿ ದಕ್ಷ ಅಧಿಕಾರಿ ಹಾಕಬೇಕು’ ಎಂದು ಒತ್ತಾಯಿಸಿದರು.   ‘ಗ್ರಾಮ ಲೆಕ್ಕಾಧಿಕಾರಿಯಿಂದ ಯಾವುದೇ ದಾಖಲಾತಿ ಪಡೆಯಲು …

Read More »