ಬೆಂಗಳೂರು, : ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವರ್ಸಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಅಂತಿಮ ಹಂತದ ಕದನ ದಿಲ್ಲಿಗೆ ಶಿಫ್ಟ್ ಆಗಿದೆ. ಈಗಾಗಲೇ ಬೆಂಗಳೂರಿನಿಂದ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮತ್ತು ಎನ್.ಆರ್ ಸಂತೋಷ್ ದೆಹಲಿಗೆ ತೆರಳಿದ್ದು, ಇನ್ನು ನಾಳೆ(ಫೆಬ್ರವರಿ 04) ಬಸನಗೌಡ ಪಾಟೀಲ್ ಯತ್ನಾಳ್, ಬಿ.ಪಿ ಹರೀಶ್ ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ್ ದೆಹಲಿಗೆ ತೆರಳಲಿದ್ದಾರೆ. ಇದಲ್ಲದೇ ಯತ್ನಾಳ್ ಟೀಮ್ …
Read More »ಸರ್ಕಾರಿ ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವು
ಚಾಮರಾಜನಗರ, : ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ (death) ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ …
Read More »ಬೆಂಗಳೂರಲ್ಲಿ ಆರ್ಟಿಓ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ತೆರಿಗೆ ಪಾವತಿಸದ 30 ಐಷಾರಾಮಿ ಕಾರುಗಳು ಸೀಜ್
ಬೆಂಗಳೂರು, : ತೆರಿಗೆ (tax) ಪಾವತಿ ಮಾಡದೆ ಅನಧಿಕೃತವಾಗಿ ನಗರದಲ್ಲಿ ಸಂಚಾರ ಮಾಡುತ್ತಿದ್ದ ಫೆರಾರಿ, ಪೋರ್ಷೆ ಮತ್ತು ರೇಂಜ್ ರೋವರ್ ಸೇರಿದಂತೆ 30 ಐಷಾರಾಮಿ ಸ್ಪೋರ್ಟ್ಸ್ ಕಾರುಗಳನ್ನು ಆರ್‌ಟಿಒ ಅಧಿಕಾರಿಗಳು ಸೋಮವಾರ ಸೀಜ್ ಮಾಡಿದ್ದಾರೆ. ಜಪ್ತಿಯಾದ ಕಾರುಗಳಿಂದ 3 ಕೋಟಿ ರೂ. ತೆರಿಗೆ ವಸೂಲಿ ಆಗಬೇಕಿದೆ. ನಿನ್ನೆ ನಗರದಲ್ಲಿ ಕಾರ್ಯಚರಣೆ ಮಾಡಿದ ಆರ್‌ಟಿಒ ಅಧಿಕಾರಿಗಳು ಮಾಸೆರಾಟಿ, ಫೆರಾರಿ, ಪೋರ್ಷೆ, ರೇಂಜ್ ರೋವರ್, ಬಿಎಂಡಬ್ಲ್ಯು ಸೇರಿ 30 ಲಕ್ಸುರಿ ಕಾರುಗಳನ್ನು ಜಪ್ತಿ ಮಾಡಲಾಗಿದೆ. ದೆಹಲಿ, …
Read More »ದೆಹಲಿಯಲ್ಲಿ ಯತ್ನಾಳ್ ಬಣದಿಂದ ಅಂತಿಮ ಹಂತದ ಕದನ
ನವದೆಹಲಿ, (ಫೆಬ್ರವರಿ 03): ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕಿತ್ತಾಟದಿಂದ ಆರಂಭವಾದ ಬಿಜೆಪಿ ಬಣ ಬಡಿದಾಟ ಜಿಲ್ಲಾಧ್ಯಕ್ಷರ ನೇಮಕದವರೆಗೂ ಬಂದು ನಿಂತಿದೆ. ವಿಜಯೇಂದ್ರ ವಿರುದ್ಧ ಸಮರ ಸಾರಿರೋ ಯತ್ನಾಳ್ ಬಣ ದಿನಕ್ಕೊಂದು ಬಾಣ ಪ್ರಯೋಗಿಸ್ತಿದೆ. ಇಷ್ಟು ದಿನ ರಾಜ್ಯದಲ್ಲಿ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಅಸ್ತ್ರ ಪ್ರಯೋಗಿಸುತ್ತಿದ್ದ ಯತ್ನಾಳ್ ಆ್ಯಂಡ್ ಟೀಂ ದೆಹಲಿಗೆ ಶಿಫ್ಟ್ ಆಗಿದ್ದು, ವಿಜಯೇಂದ್ರ ವಿರುದ್ಧ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ಹಂತದ ಪ್ರಹಾರಕ್ಕೆ ಮುಂದಾಗಿದೆ. ಈಗಾಗಲೇ ಯತ್ನಾಳ್ …
Read More »ಸಚಿವ ಹೆಚ್ಕೆ ಪಾಟೀಲರಿಗೆ ಸಿಎಂ ಆಗುವ ಯೋಗ?ಇಮ್ಮಡಿ ಸಿದ್ದರಾಮೇಶ್ವರಶ್ರೀ
ಗದಗ, ಫೆಬ್ರವರಿ 02: ಸಚಿವ ಹೆಚ್.ಕೆ.ಪಾಟೀಲರಿಗೆ (H. K. Patil) ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ದರಾಮೇಶ್ವರಶ್ರೀ ಹೇಳಿದ್ದಾರೆ. ನಗರದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಚಿವ ಹೆಚ್.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಇತ್ತು. ಸಚಿವ ಹೆಚ್.ಕೆ.ಪಾಟೀಲರು 2-3 ಬಾರಿ ಸಿಎಂ ಆಗಿರುತ್ತಿದ್ದರು. ಎಸ್ಎಂ ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಅವರ ಹೆಸರು ಕೇಳಿಬಂದಿತ್ತು. ತಡವಾಗಿಯಾದರೂ ಹೆಚ್.ಕೆ.ಪಾಟೀಲರಿಗೆ ಸಿಎಂ ಆಗುವ ಯೋಗ ಕೂಡಿಬರಲಿ …
Read More »ಆಸ್ಪತ್ರೆ ಸೇರಿದ ಸೋನು ನಿಗಮ್
ಪ್ರಸಿದ್ಧ ಗಾಯಕ ಸೋನು ನಿಗಮ್ ಅವರಿಗೆ ಲೈವ್ ಪರ್ಫಾರ್ಮೆನ್ಸ್ ಸಮಯದಲ್ಲಿ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ನೋವಿನ ಹೊರತಾಗಿಯೂ ಅವರು ಪ್ರದರ್ಶನ ಮುಂದುವರಿಸಿ, ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ತಮ್ಮ ಅನುಭವವನ್ನು ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಅವರ ಬೇಗನೆ ಚೇತರಿಸಿಕೊಳ್ಳುವಂತೆ ಆಶಿಸಿದ್ದಾರೆ. ಭಾರತದ ಖ್ಯಾತ ಗಾಯಕರಲ್ಲಿ ಸೋನು ನಿಗಮ್ ಕೂಡ ಹೌದು. ಅವರು ಕನ್ನಡದ ಮಗ ಎನಿಸಿಕೊಂಡಿದ್ದಾರೆ. ‘ಕಳೆದ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ ಎಂಬ ಭಾವನೆ ನನ್ನದು’ ಎಂದು ಕೂಡ …
Read More »ಈಜಲು ತೆರಳಿದ್ದ ಇಬ್ಬರು ಸ್ನೇಹಿತರು ನೀರುಪಾಲಾದ ಘಟನೆ ದಾವಣಗೆರೆ ಜಿಲ್ಲೆಯ ಕುರ್ಕಿ ಗ್ರಾಮದ ಬಳಿಯ ಭದ್ರಾ ನಾಲೆಯಲ್ಲಿ ಸಂಭವಿಸಿದೆ.
ದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ ಭದ್ರಾ ನಾಲೆಯಲ್ಲಿ ಘಟನೆ ನಡೆದಿದೆ. ಕುರ್ಕಿ ಗ್ರಾಮದ ಪಾಂಡು ಹಾಗೂ ಯತೀಂದ್ರ ಮೃತಪಟ್ಟ ಮಕ್ಕಳೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಶಾಲೆಗೆ ರಜೆ ಹಿನ್ನೆಲೆ ಈಜಲು ಬಂದಿದ್ದ ಮಕ್ಕಳು: ಮೃತ ಮಕ್ಕಳಿಬ್ಬರು ದೂರದ ತುರ್ಚಘಟ್ಟ ಗ್ರಾಮದ ಗುರುಕುಲ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರೂ ಸ್ನೇಹಿತರಾಗಿದ್ದು ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಕುರ್ಕಿ …
Read More »ಮೊಸಳೆಯನ್ನೆ ಹೆಗಲ ಮೇಲೆ ಹೊತ್ತ ಭೂಪರು…!!!
ಮೊಸಳೆಯನ್ನೆ ಹೆಗಲ ಮೇಲೆ ಹೊತ್ತ ಭೂಪರು…!!! ಕಳೆದ ಆರು ತಿಂಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಮೊಸಳೆಯನ್ನ ಸೆರೆಹಿಡಿದು ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ಅಥಣಿ: ಕಳೆದ ಆರು ತಿಂಗಳಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಮೊಸಳೆಯನ್ನ ಸೆರೆಹಿಡಿದು ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಗ್ರಣಿ ನದಿಯಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ ಆರು ಅಡಿ ಧೈತ್ಯ ಗಾತ್ರದ ಮೊಸಳೆಯನ್ನ ಗ್ರಾಮದ ಯುವಕರು ರಾತ್ರಿ ಹೊತ್ತು ಸುರಕ್ಷಿತ ವಾಗಿ ಸೆರೆ ಹಿಡಿದಿದ್ದಾರೆ. ನಿನ್ನೆ …
Read More »ಫೆ. 5 ರಿಂದ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ ನೀರು
ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವರ 2024-25ನೇ ಸಾಲಿನ ಜಾತ್ರೆ ಮತ್ತು ಕಾರ್ಣಿಕೋತ್ಸವ ಇದೇ ತಿಂಗಳಲ್ಲಿ ಜರುಗಲಿದೆ. ಈ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಫೆಬ್ರವರಿ 5 ರಿಂದ 11ರ ವರೆಗೆ 5,800 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಲಾಗಿದೆ. ಪ್ರಾದೇಶಿಕ ಆಯುಕ್ತರ ಆದೇಶದನ್ವಯ ಫೆಬ್ರವರಿ 5ರ ರಾತ್ರಿ 100 ಕ್ಯೂಸೆಕ್ ಮತ್ತು ಫೆಬ್ರವರಿ 6 ರಿಂದ ಫೆಬ್ರವರಿ 11ರ ವರೆಗೆ ಪ್ರತಿದಿನ 800 …
Read More »ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಅತೀ ಹೆಚ್ಚು ಪ್ರೋತ್ಸಾಹ : ಚನ್ನರಾಜ ಹಟ್ಟಿಹೊಳಿ
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದ ಶ್ರೀ ಬ್ರಹ್ಮಲಿಂಗ ಮಂದಿರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಬಡ್ಡಿ ಸ್ಪರ್ಧೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿ, ಚಾಲನೆ ನೀಡಿದರು. ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಲಾಗುತ್ತಿದೆ. ಸರಕಾರದಿಂದಷ್ಟೇ ಅಲ್ಲ, ವಯಕ್ತಿಕವಾಗಿ ಹಾಗೂ ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಸಹ ಸಾಕಷ್ಟು ಸಹಾಯ ಮಾಡಲಾಗುತ್ತಿದೆ. ಯುವಕರು ಹಾಗೂ ಮಕ್ಕಳು ಸರ್ವಾಂಗೀಣ ಅಭಿವೃದ್ಧಿಯಾಗಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ …
Read More »