Breaking News

ರಾಷ್ಟ್ರೀಯ

ವಿಧಾನಸಭೆ ಚುನಾವಣೆ | 40 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ: ಕುರುಬ ಸಮುದಾಯ ಆಗ್ರಹ

ಬೆಂಗಳೂರು:‌ ರಾಜ್ಯದಲ್ಲಿನ ಕನಿಷ್ಠ 40 ವಿಧಾನಸಭಾ ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ರಾಜಕೀಯ ಪಕ್ಷಗಳಿಗೆ ಒತ್ತಾಯಿಸಿದೆ. ‘ರಾಜ್ಯದಲ್ಲಿ ಅತಿ ದೊಡ್ಡ ಸಮುದಾಯವಾಗಿದ್ದರೂ ಕುರುಬರಿಗೆ ರಾಜಕೀಯ ಪ್ರಾತಿನಿಧ್ಯ ದೊರೆತಿಲ್ಲ. 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸಮುದಾಯದ ಮತದಾರರು ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ನಿರ್ಣಾಯಕರಾಗಿದ್ದಾರೆ. 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಅಭ್ಯರ್ಥಿಗಳು ಗೆಲ್ಲುವ ಸಾಮರ್ಥ್ಯ ಇದ್ದರೂ ಹಲವು ದಶಕಗಳಿಂದ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಪ್ರಾತಿನಿಧ್ಯ …

Read More »

ಯಶಸ್ವಿನಿ ಯೋಜನೆ ನೋಂದಣಿ: ಮಾರ್ಚ್‌ 31ರವರೆಗೆ ಅವಧಿ ವಿಸ್ತರಣೆ

ಬೆಂಗಳೂರು: ಯಶಸ್ವಿನಿ ಯೋಜನೆಯ ನೋಂದಣಿಗೆ ನಿಗದಿಪಡಿಸಿದ್ದ ಕೊನೆಯ ದಿನಾಂಕವನ್ನು ಮಾರ್ಚ್‌ 31ರವರೆಗೆ ವಿಸ್ತರಿಸಲಾಗಿದೆ. 2022-23ನೇ ಸಾಲಿನಿಂದ ಈ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ಮೂರನೇ ಬಾರಿ ನೋಂದಣಿಯ ಅವಧಿಯನ್ನು ವಿಸ್ತರಿಸಲಾಗಿದೆ.   ಹೊಸ ಸದಸ್ಯರ ನೋಂದಣಿಗೆ 2023ರ ಫೆ.28 ಕೊನೆಯ ದಿನವಾಗಿತ್ತು. ಈ ಯೋಜನೆ ಅಡಿಯಲ್ಲಿ 30 ಲಕ್ಷ ಸದಸ್ಯರನ್ನು ನೋಂದಾಯಿಸಲು ಗುರಿ ನಿಗದಿಪಡಿಸಲಾಗಿತ್ತು. ಇಲ್ಲಿಯವರೆಗೆ 34.52 ಲಕ್ಷ ಸದಸ್ಯರನ್ನು ನೋಂದಾಯಿಸಿಕೊಳ್ಳಲಾಗಿದೆ. 2023ರ ಜನವರಿ 1ರಿಂದ ನೆಟ್‌ವರ್ಕ್‌ ಆಸ್ಪತ್ರೆಗಳಲ್ಲಿ ಫಲಾನುಭವಿಗಳಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, …

Read More »

ಹೊಲದಲ್ಲಿ ಹಾರಿ ಬಂತು ಸಂದೇಹಾಸ್ಪದ ಬೆಲೂನ್; ಸುದ್ದಿ ಕೇಳಿ ಬೆಚ್ಚಿಬಿತ್ತು ಬೈಲಹೊಂಗಲ ಜನತೆ !

ಬೈಲಹೊಂಗಲ: ತಾಲೂಕಿನ ಗದ್ದಿಕರವಿನಕೊಪ್ಪ ಗ್ರಾಮದ ಹೊಲವೊಂದರಲ್ಲಿ ಪತ್ತೆಯಾಗಿರುವ ಬೆಲೂನ್ ಒಂದು ಜನತೆ ಬೆಚ್ಚಿಬೀಳುವಂತೆ ಮಾಡಿದೆ. ಇತ್ತೀಚೆಗಷ್ಟೇ ಚೀನಾ ಹಾರಿ ಬಿಟ್ಟಿದ್ದು ಎನ್ನಲಾದ ಗೂಢಚಾರ ಬೆಲೂನ್ ಗಳು ಅಮೆರಿಕ ಮತ್ತಿತರೆಡೆ ಪತ್ತೆಯಾಗಿರುವ ಹಾಗೂ ಅವುಗಳನ್ನು ವೈಮಾನಿಕ ದಾಳಿಯಿಂದ ನಾಶಪಡಿಸಿದ ಘಟನೆಗಳು ಸ್ಮೃತಿಪಟಲದಿಂದ ಮಾಸಿ ಹೋಗುವ ಮುನ್ನ ವಿಚಿತ್ರ ಬೆಲೂನ್ ಹೊಲದಲ್ಲಿ ಹಾರಿಬಂದಿರುವುದು ನಾನಾ ರೀತಿಯ ಸಂದೇಹಗಳು, ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿತು.     ಬಿಳಿಯ ಬಣ್ಣದ ಈ ಬೆಲೂನ್ ನಲ್ಲಿ ಬ್ಯಾಟರಿ ಹಾಗೂ …

Read More »

ನಾಳೆಯಿಂದ 29ರವರೆಗೆ ದ್ವಿತೀಯ ಪಿಯು ಪರೀಕ್ಷೆ; ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾದ್ದವರ ಮೇಲೆ ನಿಗಾ

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ನಾಳೆ (ಮಾ.9) ಆರಂಭವಾಗಲಿದ್ದು ರಾಜ್ಯಾದ್ಯಂತ 1,109 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಮಾ. 29ರ ವರೆಗೂ ನಡೆಯಲಿರುವ ಈ ಪರೀಕ್ಷೆಗೆ ಸಂಬಂಧಿಸಿದಂತೆ ಸಿಸಿಟಿವಿ ಕ್ಯಾಮರಾ ಹಾಗೂ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.   3,63,698 ಬಾಲಕರು ಮತ್ತು 3,62.497 ಬಾಲಕಿಯರು ಸೇರಿ ಒಟ್ಟಾರೆ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ ಮತ್ತು 70,589 …

Read More »

ನಟ-ನಿರ್ದೇಶಕ ಸತೀಶ್ ಕೌಶಿಕ್ ನಿಧನ

ಮುಂಬೈ: ನಟ-ನಿರ್ದೇಶಕ ಸತೀಶ್ ಕೌಶಿಕ್ ನಿಧನರಾದರು. ಅವರಿಗೆ 66 ವರ್ಷವಾಗಿತ್ತು. ನಟ ಅನುಪಮ್ ಖೇರ್ ಅವರು ಸತೀಶ ಕೌಶಿಕ್ ಅವರ ನಿಧನ ಕುರಿತು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. “45 ವರ್ಷಗಳ ಸ್ನೇಹಕ್ಕೆ ಅಂತಹ ಹಠಾತ್ ಪೂರ್ಣ ವಿರಾಮ! ನೀವು ಇಲ್ಲದೆ ಜೀವನವು ಎಂದಿಗೂ ಒಂದೇ ಆಗುವುದಿಲ್ಲ!”ಎಂದು ಅನುಪಮ್ ಖೇರ್ ಹೇಳಿದ್ದಾರೆ.     ನಟಿ ಕಂಗನಾ ರಣಾವತ್ ಕೂಡ ನಟನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಈ ಭಯಾನಕ ಸುದ್ದಿಯಿಂದ ಎಚ್ಚರವಾಯಿತು. ಅವರು ನನ್ನ …

Read More »

ಮೈಸೂರು -ಬೆಂಗಳೂರು- ಮಾರ್ಗ ಬದಲಾವಣೆ

ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಸಜ್ಜಾಗಿದ್ದು, ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ದಶಪಥ ರಸ್ತೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಂಡ್ಯಕ್ಕೆ ಆಗಮಿಸಲಿದ್ದು, ಅಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ದಶಪಥ ರಸ್ತೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ಅಲ್ಲಿಯೇ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಬೆಳಿಗ್ಗೆ …

Read More »

ಲಂಚ ಪ್ರಕರಣ: ಪ್ರಶಾಂತ್‌ ಮಾಡಾಳ್‌ ವಿರುದ್ಧ ಮತ್ತೆರಡು ಎಫ್‌ಐಆರ್‌

ಬೆಂಗಳೂರು: ಖಾಸಗಿ ಕಚೇರಿಯಲ್ಲಿ ₹ 1.62 ಕೋಟಿ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್‌ ಮಾಡಾಳ್‌ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಬುಧವಾರ ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ.   ಕೆಎಸ್‌ಡಿಎಲ್‌ ಕಚ್ಚಾವಸ್ತು ಖರೀದಿ ಟೆಂಡರ್‌ ಅಂತಿಮಗೊಳಿಸುವ ಸಂಬಂಧ ₹ 40 ಲಕ್ಷ ಲಂಚ ಪಡೆಯುತ್ತಿದ್ದಾಗ ಮಾರ್ಚ್‌ 2ರಂದು ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸಲಾಗಿತ್ತು. ಕೆಎಸ್‌ಡಿಎಲ್‌ ಅಧ್ಯಕ್ಷರೂ …

Read More »

ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ

ಶಿರಸಿ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಕೋರಿಕೆಯ ಮೇರೆಗೆ ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ ನೀಡಿದೆ. ಅಂಕೋಲಾ ನಿಲ್ದಾಣದಲ್ಲಿ ನಾಳೆ(ಮಾ.9)ಯಿಂದ ಕೊಚುವೆಲಿ- ಮುಂಬೈ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಭಟ್ಕಳ ನಿಲ್ದಾಣದಲ್ಲಿ ತಿರುವಂತನಪುರ-ಪನವೇಲ್ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಈ ಮೂಲಕ ಅಂಕೋಲಾ‌ ಹಾಗೂ ಭಟ್ಕಳ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದಂತಾಗಿದೆ. …

Read More »

ಡಿಸಿ ಕಚೇರಿಯಲ್ಲಿ ಮೂವರು ಹೆಣ್ಣುಮಕ್ಕಳಿಗೆ ಪಿನಾಯಿಲ್ ಕುಡಿಸಿ, ತಾನೂ ಕುಡಿದ ಮಹಿಳೆ

ಬೆಳಗಾವಿ: ಜೀವನ ನಿರ್ವಹಣೆ ಕಷ್ಟವಾದ ಕಾರಣಕ್ಕೆ ಮಹಿಳೆಯೊಬ್ಬರು ಬುಧವಾರ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲೇ ಮೂವರು ಹೆಣ್ಣುಮಕ್ಕಳಿಗೆ ಪಿನೈಲ್‌ ಕುಡಿಸಿ ತಾವೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಕಾರ್ಯ‍ಪ್ರವೃತ್ತರಾದ ಸಿಬ್ಬಂದಿ ನಾಲ್ವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿದರು.   ನಗರದ ಅನಗೋಳದ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದವರು. ಮಕ್ಕಳಾದ ಸೃಷ್ಟಿ (14), ಸಾಕ್ಷಿ (8) ಹಾಗೂ ಸಾನ್ವಿ (3) ಅವರಿಗೂ ಪಿನೈಲ್‌ ಕುಡಿಸಿದ್ದರಿಂದ ನಾಲ್ವರೂ ಅಸ್ವಸ್ಥಗೊಂಡಿದ್ದಾರೆ. ಬೈಲಹೊಂಗಲ ಜನತಾ ಪ್ಲಾಟ್‌ನಲ್ಲಿ …

Read More »

ಜ್ಞಾನ ಸಂಪಾದನೆಗೆ ಗುರು ಅನಿವಾರ್ಯ’

ರಾಯಬಾಗ: ‘ಇಂದಿನ ದಿನಗಳಲ್ಲಿ ಗುರು- ಶಿಷ್ಯರ ಸಂಬಂಧಗಳು ಕದಡುತ್ತಿವೆ. ಶಿಕ್ಷಕರಿಲ್ಲದೇ ತಂತ್ರಜ್ಞಾನದ ಮುಖಾಂತರ ಜ್ಞಾನ ಸಂಪಾದನೆ ಸಾಧ್ಯ ಎನ್ನುವ ಭಾವನೆಯೇ ಇದಕ್ಕೆ ಕಾರಣ. ಆದರೆ, ವಿದ್ಯಾರ್ಥಿಗಳಲ್ಲಿ ತಾಳ್ಮೆ, ವಿನಯ, ಭಕ್ತಿಭಾವ ಮೂಡಲು ಸಾಧ್ಯವಿಲ್ಲ. ಅದಕ್ಕೆ ಗುರುವೇ ಬೇಕು’ ಎಂದು ವಿಜಯಪುರ ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ವಿಷ್ಣು ಶಿಂಧೆ ಹೇಳಿದರು. ಪ್ರೊ.ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತ ಪ್ರಯುಕ್ತ ಪಟ್ಟಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿಚಾರ ಸಮರ್ಪಣೆ, ಗುರುವಿಗೆ ವಂದನೆ, ವಿದ್ಯಾರ್ಥಿಗಳಿಗೆ …

Read More »