Breaking News

ರಾಷ್ಟ್ರೀಯ

ಉತ್ತರ ಕನ್ನಡದಲ್ಲೂ ಜೋರಾದ ಮೈಕ್ರೋ ಫೈನಾನ್ಸ್ ಹಾವಳಿ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿಯೂ ಮೈಕ್ರೋ ಫೈನಾನ್ಸ್ ದಂಧೆಕೋರರ ವ್ಯವಹಾರ ಜೋರಾಗಿದೆ. ಜಿಲ್ಲೆಯ ಹಳಿಯಾಳ, ಮುಂಡಗೋಡ ಹಾಗೂ ಯಲ್ಲಾಪುರದ ಕೆಲವೆಡೆ ಈ ಮೀಟರ್ ಬಡ್ಡಿ ದಂಧೆಗೆ ಸಿಲುಕಿರುವವರು ಶೇ.30ರಷ್ಟು ಬಡ್ಡಿಕಟ್ಟಿದರೂ ಅಸಲು ಚುಕ್ತಾ ಮಾಡಲು ಸಾಧ್ಯವಾಗದೇ ಕೆಲವರು ಊರನ್ನೇ ತೊರೆಯುವ ಹಂತಕ್ಕೆ ತಲುಪಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್​​​​ ಹಾವಳಿ ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಜಾರಿಗೆ ಮುಂದಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 20, 30 ಸಾವಿರ ಸಾಲ …

Read More »

ಮತ್ತೋರ್ವ ನಕ್ಸಲ್ ಕೋಟೆಹೊಂಡ ರವಿ ಶರಣಾಗಿದ್ದಾರೆ.

ಬೆಂಗಳೂರು: ನಕ್ಸಲ್ ಚಳವಳಿಯಲ್ಲಿ ಸಕ್ರಿಯನಾಗಿದ್ದ ಕೋಟೆಹೊಂಡ ರವಿ ಅಲಿಯಾಸ್ ರವೀಂದ್ರ ನೆಮ್ಮಾರ್ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಿಂದ 4 ಕಿ.ಮೀ ದೂರದಲ್ಲಿನ ಅರಣ್ಯ ಐಬಿಯಲ್ಲಿ ಶರಣಾಗಿದ್ದಾರೆ. ಕೊನೆಯ ಭೂಗತ ನಕ್ಸಲ್ (ಯುಜಿ ನಕ್ಸಲ್) ಎಂದು ಗುರುತಿಸಲ್ಪಟ್ಟಿದ್ದ ಕೋಟೆಹೊಂಡ ರವಿ ಸಮಾಜದ ಮುಖ್ಯವಾಹಿನಿ ಬರಲು ಶರಣಾಗಿದ್ದು, ಶರಣಾಗತಿ ಪ್ರಕ್ರಿಯೆಗಾಗಿ ಚಿಕ್ಕಮಗಳೂರಿಗೆ ಕರೆದೊಯ್ಯಲಾಗಿದೆ. ಅಲ್ಲದೇ ವರ್ಷಗಳಿಂದ ಭೂಗತರಾಗಿರುವ ನಕ್ಸಲ್ ತೊಂಬಟ್ಟು ಲಕ್ಷ್ಮಿ ಸಹ ಶರಣಾಗಲು ನಿರ್ಧರಿಸಿದ್ದು, ನಾಳೆ ಚಿಕ್ಕಮಗಳೂರು/ಉಡುಪಿಯಲ್ಲಿ ಶರಣಾಗಲಿದ್ದಾರೆ ಎಂಬ‌ ಮಾಹಿತಿಯನ್ನ ರಾಜ್ಯ …

Read More »

ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ: ಒಂದು ದರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ …

Read More »

ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು.

ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ …

Read More »

ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಯಾರು ಸ್ಪರ್ಧಿಸಬೇಕೆಂದು ದೆಹಲಿಯಲ್ಲಿ ನಿರ್ಣಯಿಸುತ್ತೇವೆ: ಬಸನಗೌಡ ಯತ್ನಾಳ್

ಬೆಂಗಳೂರು: ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಿದ ಬಳಿಕ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಮಾತಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಸ್ಪರ್ಧಿಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ನೇರವಾದ ಉತ್ತರ ನೀಡಲಿಲ್ಲ. ಸಂಸತ್ತಿನ ಅಧಿವೇಶನ ಜಾರಿಯಲ್ಲಿರುವಾಗಲೇ ತಾವೆಲ್ಲ ದೆಹಲಿಗೆ ಹೋಗಿ ರಾಜ್ಯದ ಬಿಜೆಪಿ ಸಂಸದರನ್ನು ಭೇಟಿಯಾಗಿ ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುವ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕೆಂಬ ಒಂದು ನಿರ್ಣಯವನ್ನು ತೆಗೆದುಕೊಂಡು ಅದನ್ನು ವರಿಷ್ಠರ ಹಮನಕ್ಕೆ ತರುತ್ತೇವೆ ಅಂತ ಹೇಳಿದ ಯತ್ನಾಳ್, …

Read More »

ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ

ಬೆಂಗಳೂರು/ರಾಯಚೂರು/ಬೆಳಗಾವಿ: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಹಾಗೂ ಬೆಳಗಾವಿಯ ಎರಡು ಸ್ಥಳಗಳು, ಚಿತ್ರದುರ್ಗ, ಬಾಗಲಕೋಟೆ, ರಾಯಚೂರು ಜಿಲ್ಲೆಯ ತಲಾ ಒಂದೊಂದು ಕಡೆಗಳಲ್ಲಿ ಬೆಳಗ್ಗೆಯಿಂದಲೇ ಅಧಿಕಾರಿಗಳು ಶೋಧ ಕಾರ್ಯದಲ್ಲಿದ್ದಾರೆ. ಬೆಂಗಳೂರಿನ ಹೆಬ್ಬಾಳದಲ್ಲಿರುವ ಬಿಬಿಎಂಪಿ ವಲಯದ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ ಅವರ ವಿದ್ಯಾರಣ್ಯಪುರದ ನಿವಾಸ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಡೆಪ್ಯುಟಿ ಸೆಕ್ರೆಟರಿ …

Read More »

ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತ

ದಾವಣಗೆರೆ: ದ್ವಿಚಕ್ರ ವಾಹನದಲ್ಲಿ ಮದುವೆ ಮನೆಗೆ ತೆರಳುತ್ತಿದ್ದ ಇಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ದಾವಣಗೆರೆ ತಾಲೂಕಿನ ಆರನೇ ಮೈಲಿಗ್ಗಲು (ತರಳಬಾಳು ನಗರ) ಗ್ರಾಮದಲ್ಲಿ ತಡರಾತ್ರಿ ನಡೆಯಿತು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಖಾಸಗಿ ಬಸ್ ಹರಿದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಹದಡಿ ಗ್ರಾಮದ ರಾಜು (38) ಮತ್ತು ರಾಮಪ್ಪ (40) ಮೃತರೆಂದು ಗುರುತಿಸಲಾಗಿದೆ. ಮೃತದೇಹಗಳನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಹದಡಿ ಗ್ರಾಮದಿಂದ ಬರುತ್ತಿದ್ದ ದ್ವಿಚಕ್ರ …

Read More »

ಬೆಳಗಾವಿಗೆ ಆ್ಯಂಬುಲೆನ್ಸ್ ತಾಯಿ ಮಗಳ ಮೃತದೇಹ ಆಗಮನ.

ಬೆಳಗಾವಿಗೆ ಆ್ಯಂಬುಲೆನ್ಸ್ ತಾಯಿ ಮಗಳ ಮೃತದೇಹ ಆಗಮನ. ಗೋವಾದಿಂದ ಬೆಳಗಾವಿಗೆ ಶವ ತಂದ ಜಿಲ್ಲಾಡಳಿತದ ಅಧಿಕಾರಿಗಳು. ಎರಡು ಮೃತದೇಹಗಳನ್ನ ರಿಸೀವ್ ಮಾಡಿಕೊಂಡು ಗೌರವ ಸಲ್ಲಿಸಿದ ಡಿಸಿ ಮೊಹಮ್ಮದ್‌ ರೋಷನ್. ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಜ್ಯೋತಿ ಹತ್ತರವಾಠ, ಪುತ್ರಿ ಮೇಘಾ ಮೃತದೇಹ ಶಿಪ್ಟ್. ನಾಳೆ ಬೆಳಗ್ಗೆ ಮೃತದೇಹ ತೆಗೆದುಕೊಂಡು ಹೋಗಲು ಕುಟುಂಬಸ್ಥರ ತೀರ್ಮಾನ. ಶುಕ್ರವಾರ ಬೆಳಗ್ಗೆ ಏಳು ಗಂಟೆಗೆ ಮರಣೋತ್ತರ ಪರೀಕ್ಷೆ ಮಾಡಲಿರುವ ವೈದ್ಯರು. ಈ ಹಿನ್ನೆಲೆ ರಾತ್ರಿ ಮರಣೋತ್ತರ …

Read More »

ಅವಾಚ್ಯ ಪದ ಬಳಕೆ ಆರೋಪ ಪ್ರಕರಣ : ಲಕ್ಷ್ಮೀ ಹೆಬ್ಬಾಳ್ಕರ್​ಗೆ ಹೈಕೋರ್ಟ್ ಹ್ಯಾಂಡ್​ ಸಮನ್ಸ್​

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ವಿರುದ್ಧ ಅವಾಚ್ಯ ಪದ ಬಳಕೆ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣ ರದ್ದು ಕೋರಿರುವ ಬಿಜೆಪಿ ಎಂಎಲ್​ಸಿ ಸಿ.ಟಿ. ರವಿ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ​ ಹ್ಯಾಂಡ್​ ಸಮನ್ಸ್​ ಜಾರಿ ಮಾಡಿ ಆದೇಶಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್​ಐಆರ್​ ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ …

Read More »

ಮೃತರ ಕುಟುಂಬಸ್ಥರ ಜೊತೆ ನಾವಿದ್ದೇವೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅಭಯ

ಬೆಳಗಾವಿ : ಪ್ರಯಾಗರಾಜ್​ನಲ್ಲಿ ಅಷ್ಟು ದೊಡ್ಡ‌ ಮಟ್ಟದಲ್ಲಿ ಜನ ಸೇರಿದ್ದರು. ಇಂಥ ಸಂದರ್ಭದಲ್ಲಿ ಆ ಘಟನೆ ಆಗಬಾರದಿತ್ತು.‌ ಆದರೆ, ಅನಾಹುತ ಸಂಭವಿಸಿದೆ. ಮೃತರ ಕುಟುಂಬಸ್ಥರಿಗೆ ದೇವರು ನೋವು ಭರಿಸುವ ಶಕ್ತಿ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮೃತ ಭಕ್ತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಈಗ ಇಬ್ಬರ ಮೃತದೇಹಗಳು ಬೆಳಗಾವಿ ಸಾಂಬ್ರಾ …

Read More »