ದೇವದುರ್ಗ (ರಾಯಚೂರು ಜಿಲ್ಲೆ): ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ದೇವದುರ್ಗ ತಾಲ್ಲೂಕಿನ ಜಕ್ಲೇರದೊಡ್ಡಿ ಗ್ರಾಮದ ನಿಂಗಪ್ಪ ಎಂಬಾತ ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಶನಿವಾರ ಕೃತ್ಯ ನಡೆದಿದ್ದು, ಭಾನುವಾರ ಗೊತ್ತಾಗಿದೆ. ಶಿವರಾಜ ನಿಂಗಪ್ಪ (5), ರಾಘವೇಂದ್ರ ನಿಂಗಪ್ಪ (3) ಕೊಲೆಯಾದ ಮಕ್ಕಳು. ಶನಿವಾರ ಮಧ್ಯರಾತ್ರಿಯೇ ದೇವದುರ್ಗ ಪೊಲೀಸ್ ಠಾಣೆಗೆ ತೆರಳಿ ಪತಿ ನಿಂಗಪ್ಪನ ವಿರುದ್ಧ ಪತ್ನಿ ಪ್ರಭಾವತಿ ದೂರು ಸಲ್ಲಿಸಿದ್ದಾರೆ. ಆರೋಪಿಯನ್ನು ಪೊಲೀಸರು …
Read More »2.60 ಕೋಟಿ ರೂ. ಮೌಲ್ಯದ ವಜ್ರ ವಶಕ್ಕೆ ಪಡೆದ ಅಧಿಕಾರಿಗಳು
ಮಂಗಳೂರು: ಭಾರತ ದಿಂದ ದುಬಾೖಗೆ ಅಕ್ರಮವಾಗಿ ವಿಮಾನದಲ್ಲಿ 2.60 ಕೋಟಿ ರೂ. ಮೌಲ್ಯದ ವಜ್ರ ಸಾಗಿಸುತ್ತಿದ್ದ ಇಬ್ಬರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದುಬಾೖಗೆ ತೆರಳುತ್ತಿದ್ದ ಭಟ್ಕಳದ ಅನಾಸ್ ಮತ್ತು ಅಮ್ಮರ್ ತಮ್ಮ ಶೂ ಮತ್ತು ಬ್ಯಾಗ್ ಅಡಿಯಲ್ಲಿ ಅನುಮಾನ ಬಾರದಂತೆ ವಜ್ರವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದರು. ಮುಂಬಯಿಯಿಂದ ತಂದಿದ್ದರು ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದಲ್ಲಿ ತಪಾಸಣೆ ವೇಳೆ ಇದು …
Read More »JDS ಶಾಸಕರು ಕಾಂಗ್ರೆಸ್ ಸೇರುವುದು ಖಚಿತ
ರಾಯಚೂರು: ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ನೂರಕ್ಕೆ ನೂರರಷ್ಟು ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರು 100 ಪರ್ಸೆಂಟ್ ಕಾಂಗ್ರೆಸ್ ಗೆ ಬರ್ತಾರೆ. ಯಾಕೆ ಅನುಮಾನಾನಾ? ಎಂದು ಪ್ರಶ್ನಿಸಿದ್ದಾರೆ. ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಯಾವತ್ತು ಬೇಕಾದರೂ ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ತಿಳಿಸಿದ್ದಾರೆ. ಅರಸಿಕೆರೆ ಜೆಡಿಎಸ್ ಶಾಸಕರಾಗಿರುವ ಶಿವಲಿಂಗೇಗೌಡರಿಗೆ …
Read More »ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟ
ಬೆಂಗಳೂರು: ಚಿನ್ನ ಗಿರವಿ ಇಡಲು ಅಂಗಡಿಗೆ ಬಂದ ಗ್ರಾಹಕ ಚಿನ್ನದ ಶಾಪ್ ಗೆ ಬೆಂಕಿ ಇಟ್ಟಿರುವ ಘಟನೆ ಬೆಂಗಳೂರಿನ ಮುನೇಶ್ವರ ಬ್ಲಾಕ್ ನಲ್ಲಿ ನಡೆದಿದೆ. ಚಿನ್ನ ಗಿರವಿ ಇಟ್ಟಿದ್ದಕ್ಕೆ ಕೇವಲ 50 ಸಾವಿರ ರೂಪಾಯಿ ಕೊಡುವುದಾಗಿ ಹೇಳಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿ ಗಿರವಿ ಅಂಗಡಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಿರವಿ ಅಂಗಡಿ ಮಾಲೀಕ ಭರತ್ ಲಾಲ್ (54) ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿ
ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್. ಶೀಘ್ರವೇ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ ಸೃಷ್ಟಿಸಿದ ನೋಂದಣಿಗಳನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲಾಗುವುದು ಇದರಿಂದ …
Read More »ಕಾಣೆಯಾಗಿದ ಗೋಕಾಕ ಪ್ರತಿಷ್ಠಿತ ಉದ್ಯಮಿ ಶವವಾಗಿ ಪತ್ತೆ
ಗೋಕಾಕ : ಗೋಕಾಕ್ ನಗರದ ಶುಕ್ರವಾರ ಸಂಜೆ ಅಪಹರಣಕ್ಕೆ ಒಳಗಾದ ಉದ್ಯಮಿಯ ಶವ ಕೊಲೆಯಲ್ಲಿ ಪರ್ಯವಸನಗೊಂಡಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ರಾಜು/ಮುನ್ನಾ ಝಂವರ ಎಂಬ ಗೋಕಾಕ ನಗರದ ಉದ್ಯಮಿ ಶುಕ್ರವಾರ ಸಂಜೆ 6:00 ರ ಸುಮಾರಿಗೆ ನಗರದ ಸಿಟಿ ಹೆಲ್ತ್ ಕೇರ್ ವೈದ್ಯ ಸಚಿನ್ ಶಿರಗಾಂವಿ ಜೊತೆ ಸೇರಿ ಮಾತುಕತೆ ನಡೆಸಿದ ನಂತರ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಸಹಾ ಅಷ್ಟೇ ಹೊತ್ತಿಗೆ ಬಂದ್ ಆಗಿತ್ತು. ಈ ಬಗ್ಗೆ ರಾಜು …
Read More »ಇಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ನಾಳೆ ಬೆಂಗಳೂರಿನಲ್ಲಿ `ಏರೋ ಇಂಡಿಯಾ-2023′ ಉದ್ಘಾಟನೆ
ಬೆಂಗಳೂರು : ಫೆಬ್ರವರಿ 13 ರ ನಾಳೆಯಿಂದ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್ಶೋ ವೈಮಾನಿಕ ಪ್ರದರ್ಶನ ನಡೆಯಲಿದೆ. ಹೀಗಾಗಿ ನಗರದ ಹಲವು ರಸ್ತೆಗಳಲ್ಲಿ ಕೆಲವೊಂದು ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರದ ಯಲಹಂಕ ವಾಯುಸೇನಾ ನೆಲೆಯಲ್ಲ ದಿ:13-02-2023 ರಿಂದ 17-02-2023 ರವರೆಗೆ ಪ್ರತಿಷ್ಠಿತ ಏರೋ ಇಂಡಿಯಾ-2023 ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ದಿ:13- 02-2023 ರ ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿಗಳು, ರಾಷ್ಟ್ರೀಯ ಮತ್ತು …
Read More »ಹಿಂದೂ-ಮುಸ್ಲಿಂ ಬೇಧ ಮಾಡುವವರನ್ನು ಮನೆಯಲ್ಲಿ ಕುಳ್ಳಿರಿಸಿ: ಜನಾರ್ದನ ರೆಡ್ಡಿ
ಗಂಗಾವತಿ: ಗಂಗಾವತಿ ನಗರ ಮತ್ತು ಕ್ಷೇತ್ರದಾದ್ಯಂತ ಕೆಲವರು ಹಿಂದೂ-ಮುಸ್ಲಿಂ ಬೇಧಭಾವ ಮಾಡುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಂಡು ಗೆಲುವು ಪಡೆದು ಸ್ವಾರ್ಥ ಸಾಧಿಸುತ್ತಿದ್ದು ಕ್ಷೇತ್ರದ ಮತದಾರರು ಅಂತವರನ್ನು ಮನೆಯಲ್ಲಿ ಕುಳ್ಳಿರಿಸುವ ಮೂಲಕ ಎಲ್ಲರಿಗೂ ಆದ್ಯತೆ ನೀಡುವವರನ್ನು ಗೆಲ್ಲಿಸಿ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡುವಂತೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮನವಿ ಮಾಡಿದರು. ಅವರು ನಗರದ ಸಂತೆಬಯಲು-ಮಹೆಬೂಬನಗರದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ …
Read More »ಪ್ರಧಾನಿ ಮೋದಿಯವರಿಗೆ ದುರಹಂಕಾರವಿದೆ:ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ.ಖರ್ಗೆ
ನವದೆಹಲಿ : ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ ಎಂದು ಶನಿವಾರ ಆರೋಪಿಸಿದ್ದಾರೆ. ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ”ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಯಾರಾದರೂ ಸತ್ಯವನ್ನು ಮಾತನಾಡಿದರೆ, ಅದರ ಬಗ್ಗೆ ಬರೆದರೆ, ತೋರಿಸಿದವರನ್ನು ಬಿಜೆಪಿಯವರು ಕಂಬಿ ಹಿಂದೆ …
Read More »“ಕಾಂಗ್ರೆಸ್‌ಗೆ ಪ್ರಜಾಧ್ವನಿ ಬಸ್‌ನಲ್ಲಿರುವಷ್ಟೇ ಸ್ಥಾನ’: ಅಶ್ವತ್ಥ ನಾರಾಯಣ
ಕಾಂಗ್ರೆಸ್‌ನ ಪ್ರಜಾಧ್ವನಿ ಯಾತ್ರೆಯ ಬಸ್‌ನಲ್ಲಿ ಎಷ್ಟು ಜನ ಪ್ರಯಾಣಿಸುತ್ತಾರೋ ಅಷ್ಟೇ ಸೀಟು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗಲಿದೆ ಎಂದು ಸಚಿವ ಡಾ| ಅಶ್ವತ್ಥ ನಾರಾಯಣ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾ ಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಗೆದ್ದು ಅಧಿಕಾರಕ್ಕೆ ಬರಲಿದೆ. ಇಡೀ ದೇಶದಲ್ಲೇ ಕಾಂಗ್ರೆಸ್ ಮುಕ್ತವಾಗಿದೆ. ಎಲ್ಲ ರಾಜ್ಯಗಳೂ ಕಾಂಗ್ರೆಸ್ ಮುಕ್ತವಾಗುತ್ತಿದೆ. ನಮ್ಮ ರಾಜ್ಯವೂ ಈ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ ಎಂದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ …
Read More »
Laxmi News 24×7