Breaking News

ರಾಷ್ಟ್ರೀಯ

ವೇದಿಕೆಯಲ್ಲಿ ಮಾಜಿ ಸಿಎಂ ಸಿದ್ದು ವಾರೆ ನೋಟ: ಕೈ ಕಾರ್ಯಕರ್ತೆ ಲಾವಣ್ಯ ಬಲ್ಲಾಳ್​ ಕೊಟ್ಟ ಪ್ರತಿಕ್ರಿಯೆ ಹೀಗಿದೆ..

ಬೆಂಗಳೂರು: ನಿನ್ನೆಯಿಂದ ಸಾಮಾಜಿಕ ಜಾಲತಾಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​ ಆಗಿದೆ. ಫೇಸ್​ಬುಕ್​ ಸ್ಟೋರಿ, ವಾಟ್ಸ್​ಆಯಪ್​ ಸ್ಟೇಟಸ್ ಹಾಗೂ ಇನ್​ಸ್ಟಾಗ್ರಾಂ ಸ್ಟೋರಿ ಎಲ್ಲಿ ನೋಡಿದರು ಸಿದ್ದರಾಮಯ್ಯ ಅವರ ವಿಡಿಯೋ ವೈರಲ್​ ಆಗಿದೆ. ಅಲ್ಲದರೆ, ಸಿಕ್ಕಾಪಟ್ಟೆ ಟ್ರೋಲ್​ ಸಹ ಆಗಿದೆ. ಹಾಗಾದರೆ ಆ ವಿಡಿಯೋ ಯಾವುದು ಅಂತಿರಾ… ನಿನ್ನೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್​ ಮಹಿಳಾ ಸಮಾವೇಶದಲ್ಲಿ ವೇದಿಕೆ ಮೇಲಿಂದ ಕೆಳಗೆ ಇಳಿಯುವಾಗ ಸಿದ್ದರಾಮಯ್ಯ ಅವರು ಕಾರ್ಯಕ್ರಮ ನಿರೂಪಕಿಯನ್ನು ವಾರೆಗಣ್ಣಿಂದ …

Read More »

‘ರಾಜ್ಯ ಸರ್ಕಾರ’ದಿಂದ ‘ಮಹಾವೀರ ಜಯಂತಿ’ ರಜೆ ಬದಲಾವಣೆ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಈಗಾಗಲೇ 2023ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ( Public Holiday List ) ಪ್ರಕಟಿಸಲಾಗಿತ್ತು. ಈ ವೇಳೆಯಲ್ಲಿ ಏ.3ರಂದು ಮಹಾವೀರ ಜಯಂತಿ ಪ್ರಯುಕ್ತ ರಜೆಯನ್ನು ಘೋಷಿಸಿತ್ತು. ಇದೀಗ ಈ ರಜೆಯನ್ನು ಬದಲಾವಣೆ ಮಾಡಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ತಿದ್ದುಪಡಿ ಆದೇಶ ಹೊರಡಿಸಿದ್ದು, 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ …

Read More »

ಶಿಸ್ತು ಸಮಿತಿಯಿಂದ ನೋಟಿಸ್‌ ಬಂದಿಲ್ಲ, ಭಯ ಹುಟ್ಟಿಸುವ ತಂತ್ರ: ಯತ್ನಾಳ

ವಿಜಯಪುರ: ‘ನನಗೆ ಬಿಜೆಪಿ ಹೈಕಮಾಂಡ್‌ನಿಂದ ಅಥವಾ ಪಕ್ಷದ ಶಿಸ್ತು ಸಮಿತಿಯಿಂದ ಇದುವರೆಗೆ ಯಾವುದೇ ನೋಟಿಸ್‌ ಬಂದಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ಪಕ್ಷದ ನಾಯಕರ ವಿರುದ್ಧ ಮಾತನಾಡಿದ ಕಾರಣಕ್ಕೆ ನೋಟಿಸ್‌ ನೀಡಲಾಗಿದೆ ಎಂಬ ಸುದ್ದಿ ಹರಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನನಗೆ ಪಕ್ಷದ ಶಿಸ್ತು ಸಮಿತಿ ನೋಟಿಸ್‌ ನೀಡಿದೆ ಎಂಬುದು ಕೇವಲ ವಿರೋಧಿಗಳ ಭಯ ಹುಟ್ಟಿಸುವ ತಂತ್ರ ಅಷ್ಟೇ, ನನಗೆ ನೋಟಿಸ್‌ ಬಂದಿಲ್ಲ, …

Read More »

ಹೋಂಗಾರ್ಡ್ ವರ್ಗಾವಣೆಗೆ ಲಂಚ: ಕೊಪ್ಪಳ ಜಿಲ್ಲಾ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ

ಕೊಪ್ಪಳ: ಹೋಂಗಾರ್ಡ್ ಒಬ್ಬರ ವರ್ಗಾವಣೆಗೆ 10 ಸಾವಿರ ರೂ. ಲಂಚದ ಬೇಡಿಕೆಯನ್ನಿಟ್ಟಿದ್ದ ಜಿಲ್ಲಾ ಕಮಾಂಡೆಂಟ್ ಗವಿಸಿದ್ದಪ್ಪ ಹಾಗೂ ತಾಲೂಕು ಕಮಾಂಡೆಂಟ್ ರುದ್ರಪ್ಪ ಪತ್ತಾರ್ ಅವರು ನಗರದ ಮಾನಸಿಕ ಆರೋಗ್ಯ ತಪಾಸಣಾ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.   ತಾಲೂಕಿನ ಮುನಿರಾಬಾದ್‌ ನ ಹೋಂಗಾರ್ಡ್ ಮಹೆಬೂಬ ಖಾನ್ ಅವರು ಮುನಿರಾಬಾದ್‌ನಿಂದ ಗಂಗಾವತಿಗೆ ವರ್ಗಾವಣೆ ಕೇಳಿಕೊಂಡಿದ್ದರು. ಇದಕ್ಕೆ ರುದ್ರಪ್ಪ ಪತ್ತಾರ ಹಾಗೂ ಗವಿಸಿದ್ದಪ್ಪ ಅವರು 10 ಸಾವಿರ ರೂ. ಹಣದ ಬೇಡಿಕೆ ಇಟ್ಟಿದ್ದರು. …

Read More »

ಯುವಕನ ಮೇಲೆ ನಾಲ್ವರು ಹುಡುಗಿಯರಿಂದ ಅತ್ಯಾಚಾರ?

: ಪಂಜಾಬ್‌ನ ಜಲಂಧರ್‍ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 20ರ ಹರೆಯದ ನಾಲ್ವರು ಹುಡುಗಿಯರು ತನ್ನನ್ನು ಅಪಹರಿಸಿ ನಂತರ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ವ್ಯಕ್ತಿಯೊಬ್ಬ ಆರೋಪಿಸಿದ್ದಾನೆ. ಇದು ಕೇಳಲು ವಿಚಿತ್ರ ಎನಿಸಿದರೂ ನಿಜವಾಗಿಯೂ ನಡೆದಿರುವ ಘಟನೆ.   ನಾಲ್ವರು ಯುವತಿಯರು ನನ್ನ ಕಣ್ಣಿಗೆರಾಸಾಯನಿಕಸಿಂಪಡಿಸಿ, ನಂತರ ಕಿಡ್ನಾಪ್ ಮಾಡಿ ಕಾರಿನಲ್ಲಿ ಅಜ್ಞಾನ ಸ್ಥಳಕ್ಕೆ ಕರೆದೊಯ್ದಿದ್ದರು. ಅರಣ್ಯ ಪ್ರದೇಶದಲ್ಲಿ ನನಗೆ ಮಾದಕ ದ್ರವ್ಯ ನೀಡಿ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಸಂತ್ರಸ್ತ ವ್ಯಕ್ತಿ ಆರೋಪಿಸಿದ್ದಾನೆ. …

Read More »

ಬ್ರ್ಯಾಂಚ್ ಕೆನಾಲ್‌ಗೆ ನೀರು; ರೈತರಲ್ಲಿ ಸಂತಸ

ಚಿಕ್ಕೋಡಿ: ಕಸ ಕಡ್ಡಿಯಿಂದ ಹೂಳು ತುಂಬಿಕೊಂಡು ನೀರು ಸೋರಿಕೆಯಾಗುತ್ತಿದ್ದ ಚಿಕ್ಕೋಡಿ ಸಿಬಿಸಿ ಕಾಲುವೆ ಸದ್ಯ ಸಂಪೂರ್ಣ ದುರಸ್ತಿಗೊಂಡಿದೆ. ಇದರಿಂದ ಕೊನೆ ಹಳ್ಳಿಯ ತನಕ ನೀರು ತಲುಪುತ್ತದೆ ಎನ್ನುವ ಆಶಾಭಾವನೆ ರೈತರಲ್ಲಿ ಮೂಡಿದೆ. ಚಿಕ್ಕೋಡಿ ಸಿಬಿಸಿ ಕಾಲುವೆಯಲ್ಲಿ ಕಸ, ಕಡ್ಡಿ ಹಾಗೂ ಕಾಲುವೆಗೆ ಬರುವ ನೀರು ಸೋರಿಕೆಯಿಂದ ರೈತರಿಗೆ ಸಮರ್ಪಕ ನೀರು ತಲುಪುತ್ತಿರಲಿಲ್ಲ. ನೀರಾವರಿ ಇಲಾಖೆಗೆ ಹಲವು ಬಾರಿ ಮನವಿ ಮಾಡಿ ರೈತರು ಕೂಡ ಬೇಸತ್ತು ಹೋಗಿದ್ದರು. ಈಗ ಪರಿಷತ್‌ ಸದಸ್ಯ ಪ್ರಕಾಶ …

Read More »

ಬೆಳಗಾವಿ: ಕನ್ನಡಕ್ಕಾಗಿ ಬದುಕು ತೇಯ್ದ ಡಾ| ಕರ್ಕಿ

ಬೆಳಗಾವಿ: ನಾಡಿನ ಖ್ಯಾತ ಸಾಹಿತಿ ಡಾ. ಡಿ. ಎಸ್‌. ಕರ್ಕಿಯವರಿಗೆ ಇದುವರೆಗೆ ಯಾವ ಪ್ರಶಸ್ತಿಯನ್ನೂ ನೀಡಿಲ್ಲ, ಈಗ ಮರಣೋತ್ತರವಾದರೂ ಅವರಿಗೆ ಪಂಪ ಪ್ರಶಸ್ತಿ ನೀಡಬೇಕು ಎಂದು ಜಾನಪದ ವಿದ್ವಾಂಸರಾದ ಡಾ| ಬಸವರಾಜ ಜಗಜಂಪಿ ಆಗ್ರಹಿಸಿದರು. ಎಸ್‌. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಗೃಹದಲ್ಲಿ ರವಿವಾರ ಡಾ. ಡಿ. ಎಸ್‌. ಕರ್ಕಿ ಪ್ರತಿ,ಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಡಿ. ಎಸ್‌. ಕರ್ಕಿಯವರ 115ನೇ ಜನ್ಮ ದಿನೋತ್ಸವ ಹಾಗೂ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ …

Read More »

ಸೇವ್ ಮಹದಾಯಿ..; ಗೋವಾ ವಿಧಾನಸಭೆಯಲ್ಲಿ ಪ್ರತಿಪಕ್ಷಗಳಿಂದ ಕೋಲಾಹಲ

ಪಣಜಿ: ಗೋವಾ ವಿಧಾನಸಭೆಯಲ್ಲಿ ಸೋಮವಾರ ಬೆಳಗ್ಗೆ ರಾಜ್ಯಪಾಲರ ಭಾಷಣದ ವೇಳೆ ಪ್ರತಿಪಕ್ಷಗಳಿಂದ ಗದ್ದಲ ಉಂಟಾಯಿತು. ಇದರ ನಂತರ, ಮಾರ್ಷಲ್‍ಗಳು ಧರಣಿ ನಿರತ ವಿರೋಧ ಪಕ್ಷದ ಶಾಸಕರನ್ನು ಸಭಾಂಗಣದಿಂದ ಹೊರಕ್ಕೆ ಕರೆದೊಯ್ದರು. ಪ್ರತಿಪಕ್ಷದ ಶಾಸಕರು ”ಸೇವ್ ಮಹದಾಯಿ ಸೇವ್ ಗೋವಾ” ಬ್ಯಾನರ್ ಗಳೊಂದಿಗೆ ಸದನದ ಬಾವಿಗಿಳಿದು ಬಂದು ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.   ಮಹದಾಯಿ ಸಮಸ್ಯೆ ಮತ್ತು ಇತರ ವಿಷಯಗಳ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ಸುತ್ತುವರಿಯಲು ಸಿದ್ಧವಾಗಿವೆ ಮತ್ತು ಸೋಮವಾರದಿಂದ ಪ್ರಾರಂಭಗೊಂಡಿರುವ ನಾಲ್ಕು …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.!

ಬೆಂಗಳೂರು: ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿ, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ವತಿಯಿಂದ ಆಯೋಜಿಸಿರುವ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಪ್ರತಿ ಮನೆಯ ಗೃಹಿಣಿಗೆ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಿಡುಗಡೆ ಮಾಡಿದ್ದಾರೆ.   ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ರಾಜ್ಯ ಕಾಂಗ್ರೆಸ್ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ …

Read More »

ಯತ್ನಾಳ್​ಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್

ಬೆಂಗಳೂರು: ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರ ನಡುವೆ ಸಾಕಷ್ಟು ಟೀಕೆ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು. ಇದೀಗ ಮುರುಗೇಶ್ ನಿರಾಣಿ ಸೇರಿದಂತೆ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಮುಜುಗರ ತರುವಂತಹ ಟೀಕೆ ಮಾಡುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಕೇಂದ್ರ ಶಿಸ್ತು …

Read More »