ಸಂಕೇಶ್ವರ: ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ, ಮೀಸಲಾತಿ ಕಿತ್ತುಕೋಳ್ಳುವ ಹುನ್ನಾರ ಮನುವಾದಿಗಳು ಮಾಡುತಿದ್ದು, ಇದರ ಬಗ್ಗೆ ದಲಿತರು ಎಚ್ಚರದ ಹೆಜ್ಜೆ ಇಡುವ ಮೂಲಕ ಜಾಗೃತಿ ವಹಿಸಬೇಕಾಗಿದೆ ಎಂದು ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾದ ಅಧ್ಯಕ್ಷ, ಡಾ| ಬಿ.ಆರ್.ಅಂಬೇಡ್ಕರ್ ಮರಿಮೊಮ್ಮಗ ಡಾ| ರಾಜರತ್ನ ಅಂಬೇಡ್ಕರ್ ಹೇಳಿದರು. ಸಂಕೇಶ್ವರದಲ್ಲಿ ಭೀಮಾ-ಕೊರೆಗಾಂವ ವಿಜಯೋತ್ಸವದ 205ನೇ ವರ್ಷಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ನಿಮಿತ್ತ ಡಾ| ಬಿ.ಆರ್.ಅಂಬೇಡ್ಕರ್ ಜನಜಾಗ್ರತಿ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, …
Read More »1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಯುಗಾದಿಗೆ ಲೋಕಾರ್ಪಣೆ-ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ.
ಮೂಡಲಗಿ: ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳ ಸಂಕಲ್ಪದಂತೆ ಅರಭಾವಿ ಮಠದ ಆವರಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ 1.50 ಕೋಟಿ ರೂಗಳ ಸ್ವಂತ ವೆಚ್ಚದಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದ್ದು, ಬರುವ ಯುಗಾದಿ ಹಬ್ಬದಂದು ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಅರಭಾವಿಮಠದ ದುರದುಂಡೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, ಅರಭಾವಿ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳಿಗೆ ಅನುಕೂಲವಾಗಬೇಕೆಂಬ ಸದುದ್ದೇಶದಿಂದ ಮಠದ …
Read More »ಉಗ್ರನಿಂದ ಬಾಂಬ್ ಸ್ಫೋಟದ ಬೆದರಿಕೆ ಬಂದಿದೆ ಎಂದವನ ವಿರುದ್ಧ ಎಫ್‌ಐಆರ್
ಬೆಂಗಳೂರು: ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದ ಬೆನ್ನಲ್ಲೇ ಪಾಕಿಸ್ತಾನದ ಉಗ್ರನೊಬ್ಬ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ (Bomb Threat) ಮಾಡುವುದಾಗಿ ಬೆದರಿಸಿದ್ದಾನೆ ಎಂದು ಪೊಲೀಸ್ ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. 8137885416 ನಂಬರ್‌ನಿಂದ ಸುನೀಲ್ ಕುಮಾರ್ ಎಂಬಾತ ಪೊಲೀಸ್ ಕಂಟ್ರೋಲ್ ರೂಮ್‌ಗೆ (ಪೊಲೀಸ್ ಸಹಾಯವಾಣಿ-೧೧೨) ಫೋನ್ ಮಾಡಿದ್ದ. ನಂತರ ಆತನನ್ನು ಸಂಪರ್ಕಿಸಲು ಪೊಲೀಸರು ಯತ್ನಿಸಿದಾಗ ಆತ ಮೊಬೈಲ್ ಸ್ವಿಚ್ ಆಫ್ …
Read More »ಮತ್ತೆ ಸ್ಯಾಟಲೈಟ್ ಫೋನ್ ಸದ್ದು: ಕರ್ನಾಟಕ-ಕೇರಳ ಗಡಿಯಲ್ಲಿ ಸಿಗ್ನಲ್ ಪತ್ತೆ
ಮಂಗಳೂರು (ಜ.07): ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಸ್ ಉಗ್ರಗಾಮಿ ಸಂಘಟನೆ ಜತೆ ನಂಟು ಹೊಂದಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದ ಬೆನ್ನಲ್ಲೇ ರಾಜ್ಯದ ಗಡಿ ಭಾಗದಲ್ಲಿ ಗುರುವಾರ ಸ್ಯಾಟಲೈಟ್ ಫೋನ್ ಸಿಗ್ನಲ್ ಪತ್ತೆಯಾಗಿದೆ. ನೆರೆಯ ಕೇರಳ ರಾಜ್ಯದ ಕಾಸರಗೋಡು, ಪಾಣಾಜೆ ಗಡಿ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಆಗಿರುವುದು ಪತ್ತೆಯಾಗಿದೆ. ಕೇಂದ್ರ ಗುಪ್ತಚರ ಇಲಾಖೆಯು ಸ್ಯಾಟಲೈಟ್ …
Read More »ಕ್ಲೀನ್ ಚಿಟ್ ಸಿಕ್ಕ ನಂತರ ಸಾಕ್ಷ್ಯ ಒದಗಿಸಿದ್ದರ ಹಿಂದೆ ಷಡ್ಯಂತ್ರ ಅಡಗಿದೆ: ಕೆಎಸ್ ಈಶ್ವರಪ್ಪ ಅನುಮಾನ
ಶಿವಮೊಗ್ಗ: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನಗೆ ಕ್ಲೀನ್ ಚಿಟ್ ಸಿಕ್ಕ ನಂತರ ಈಗ ಸಾಕ್ಷ್ಯ ಒದಗಿಸುತ್ತಾರೆ ಎಂದರೆ ಇದರ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾರೂ ಏನೂ ಕೊಡ್ತಾರೆ, 25 ಸಾವಿರಕ್ಕೂ 50 ಸಾವಿರ ಕೊಡುತ್ತಾರೆ ಅಂದರೆ ಅದಕ್ಕೆಲ್ಲಾ ನಾನು ಪ್ರತಿಕ್ರಿಯಿಸುವುದಿಲ್ಲ ಎನ್ನುತ್ತಲೆ ಸಂತೋಷ್ ಪಾಟೀಲ್ ಕುಟುಂಬದವರು ಈಗ ಸಾಕ್ಷ್ಯ ನೀಡುತ್ತಿರುವುದಕ್ಕೆ ಅಸಮಾಧಾನ ಹೊರ ಹಾಕಿದರು. …
Read More »ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ಬಿಎಸ್‌ವೈ
ಹಾವೇರಿ : ನಗರ ಪ್ರದೇಶಗಳಲ್ಲಿ ಕನ್ನಡ ಮಾತನಾಡಲು ಹಿಂಜರಿಯುವ ಸ್ಥಿತಿ ಆತಂಕಕಾರಿ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟುಕೊಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿ ಅವರು ಮಾತನಾಡಿ, ಕನ್ನಡದ ನೆಲ, ಜಲ, ಗಡಿ ವಿಚಾರದಲ್ಲಿ ಸರ್ಕಾರ ಎಂದೂ ಉದಾಸೀನ ಮಾಡುವುದಿಲ್ಲ. ಕನ್ನಡ ಕೇವಲ ಭಾಷೆಯಲ್ಲ. ಅದು …
Read More »ಅಖಿಲ ಭಾರತ ಮಹಿಳಾ ಕಬಡ್ಡಿ ಟೂರ್ನಿ: ಲಕ್ಷ-ಲಕ್ಷ ಬಹುಮಾನ ಗೆದ್ದ ಮಹಿಳಾ ತಂಡಗಳು..
ಬಾಗಲಕೋಟೆ: ಇತ್ತೀಚಿನ ದಿನಗಳಲ್ಲಿ ಕ್ರೀಡೆಗಳು ನಶಿಸಿ ಹೋಗುತ್ತಿದ್ದು, ಇವುಗಳ ಮಧ್ಯೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊರೋನಾ ಹಾವಳಿಯಿಂದ ರಾಷ್ಟ್ರ ಮಟ್ಟದ ಪಂದ್ಯಾವಳಿಗಳೇ ವಿರಳವಾಗಿದ್ದವು, ಆದರೆ ಇದೀಗ ಮಹಿಳಾ ಕಬಡ್ಡಿಗೂ ಉತ್ತೇಜನ ನೀಡಬೇಕೆಂಬ ಉದ್ದೇಶದಿಂದಲೇ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದಲ್ಲಿ ಅಖಿಲ ಭಾರತ ಮಹಿಳಾ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಒಂದೆಡೆ ಗಂಡು ಮಕ್ಕಳಿಗೆ ತಾವೇನು ಕಮ್ಮಿ ಇಲ್ಲವೆಂಬಂತೆ ಭರ್ಜರಿ ಕಬಡ್ಡಿ ಆಡಿದ ಯುವತಿಯರು, ಮತ್ತೊಂದೆಡೆ ಯುವತಿಯರ ಕಬಡ್ಡಿ ಆಟ ಕಂಡು ಚಪ್ಪಾಳೆ ತಟ್ಟಿ …
Read More »ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್
ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ. ಹಳೇ ಮೈಸೂರಿನ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ …
Read More »ಜನವರಿ 12ರಂದು ಹುಬ್ಬಳ್ಳಿಗೆ ಆಗಮಿಸಲಿರುವ ಮೋದಿ: ನಗರದಲ್ಲಿ ಭರದಿಂದ ಸಾಗಿದ ಸಿದ್ಧತೆ ಕಾರ್ಯ
ಹುಬ್ಬಳ್ಳಿ, : ವಾಣಿಜ್ಯನಗರಿ ಹುಬ್ಬಳ್ಳಿಗೆ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 26ನೇ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ವಚ್ಛತೆ ಹಾಗೂ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಹುಬ್ಬಳ್ಳಿಯ ರೈಲ್ವೆ ಮೈದಾನಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ರೈಲ್ವೆ ಮೈದಾನದಲ್ಲಿ …
Read More »ಬಾಲಕಿಯ ಮೇಲೆ ಅಣ್ಣ – ತಮ್ಮಂದಿರಿಂದ ಅತ್ಯಾಚಾರ: ಆರೋಪಿಗಳ ಮನೆ ಮೇಲೆ ದಾಳಿ, ವಾಹನಗಳು ಧ್ವಂಸ
ವರಂಗಲ್ (ತೆಲಂಗಾಣ): ತೆಲಂಗಾಣದ ವರಂಗಲ್ ಜಿಲ್ಲೆಯಲ್ಲಿ ಮಾನಗೇಡಿ ಕೃತ್ಯಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಇಬ್ಬರು ಸಹೋದರರು ಸೇರಿಕೊಂಡು ಅತ್ಯಾಚಾರ ಎಸಗಿದ್ದು, ಈಗಾಗಲೇ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಈ ದುಷ್ಕೃತ್ಯ ಎಸಗಿದ ಕಾಮುಕರ ಮನೆಗಳ ಮೇಲೆ ಸಂತ್ರಸ್ತೆಯ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರು ದಾಳಿ ಮಾಡಿ, ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ವರಂಗಲ್ ಪಟ್ಟಣದ ಆರೋಪಿಗಳಾದ ಅಜ್ಮದ್ ಅಲಿ (26) ಮತ್ತು ಅಬ್ಬು (22) …
Read More »
Laxmi News 24×7