ಮಂಗಳೂರು: ಬಹುನಿರೀಕ್ಷಿತ ಪ್ರಧಾನಮಂತ್ರಿ ಜನ್-ಧನ್ ಯೋಜನೆ (ಪಿಎಂಜೆಡಿವೈ)ಯಲ್ಲಿ ಕರಾವಳಿಯಲ್ಲಿ ತೆರೆದ ಖಾತೆಗಳ ಪೈಕಿ 2.95 ಲಕ್ಷ ಖಾತೆಗಳು ಸ್ತಬ್ಧವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ 5,18,496 ಖಾತೆ ಗಳಲ್ಲಿ 2,08,602 ಹಾಗೂ ಉಡುಪಿ ಜಿಲ್ಲೆಯ 2,64,704ರಲ್ಲಿ 86,487 ಬಳಕೆ ಯಾಗದೇ ನಿಷ್ಕ್ರಿಯವಾಗಿವೆ. ಈ ಖಾತೆ ಆರಂಭಿಸಿ 18 ತಿಂಗಳ ವರೆಗೆ ಬಳಸದಿದ್ದರೆ ಅದು ನಿಷ್ಕ್ರಿಯವಾಗುತ್ತದೆ. ಬಹುತೇಕರು ಖಾತೆ ತೆರೆದ ಬಳಿಕ ಸಕ್ರಿಯಗೊಳಿಸಿಲ್ಲ. ಅಲ್ಲದೆ ಸರಕಾರದ ವಿವಿಧ ಯೋಜನೆಗಳ ಹಣ ಪಡೆಯಲು ಬಹುತೇಕರು ಪ್ರತ್ಯೇಕ …
Read More »ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ರಾಜಿ ಮಾಡಿಕೊಳ್ಳಲ್ಲ: ಗೋವಾ ಸಿಎಂ
ಪಣಜಿ: ಮಹದಾಯಿ ನಮಗೆ ತಾಯಿಯಷ್ಟೇ ಮುಖ್ಯ. ಗೋವಾದ ಅಸ್ಮಿತೆಯನ್ನು ಕಾಪಾಡಲು ಮತ್ತು ಅದನ್ನು ಎಲ್ಲಾ ರೀತಿಯಲ್ಲೂ ರಕ್ಷಿಸಲು, ದೇಶದ ಪರಿಣಿತ ಕಾನೂನು ತಜ್ಞರು ಮತ್ತು ಪರಿಸರವಾದಿಗಳ ಸಹಾಯದಿಂದ ಸುಪ್ರೀಂ ಕೋರ್ಟ್‍ನಲ್ಲಿ ಗೋವಾದ ಪರವನ್ನು ಬಲವಾಗಿ ಮಂಡಿಸಲಾಗುವುದು. ಇನ್ನೆರಡು ಮೂರು ದಿನಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ ನಿಯೋಗ ಭೇಟಿ ಮಾಡಲಿದೆ. ಮಹದಾಯಿ ವಿಚಾರದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ತಮ್ಮ ನಿಲುವನ್ನು …
Read More »ಡಬಲ್ ಎಂಜಿನ್ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ
ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಎಂಜಿನ್ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು. ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್ ಫಾರ್ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ …
Read More »‘ಕೈ’ ಟಿಕೆಟ್: ಡಿಕೆಶಿ ಇಂದು ದೆಹಲಿಗೆ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸುಮಾರು 150 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಂಕ್ರಾಂತಿ (ಜ.14) ಕಳೆಯುತ್ತಿದ್ದಂತೆ ಘೋಷಿಸಲು ತಯಾರಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲು ಬುಧವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ‘ಬುಧವಾರ ಬೆಳಿಗ್ಗೆ ತುರುವೇಕೆರೆಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ದೆಹಲಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು …
Read More »ನನ್ನಂತೆ ರಾಜಕೀಯಕ್ಕೆ ಕುಟುಂಬದವರನ್ನು ಕರೆತರದಿರಲು ನಿಮ್ಮಿಂದ ಸಾಧ್ಯವೇ?: ಎಚ್ಡಿಕೆಗೆ ಪ್ರಹ್ಲಾದ್ ಜೋಶಿ ಸವಾಲು
ಗದಗ, ಜ.3: ‘ನಾನು ರಾಜಕೀಯಕ್ಕೆ ಬಂದು 25 ವರ್ಷವಾಯಿತು. ನಾನು ನನ್ನ ಕುಟುಂಬದಿಂದ ಯಾರನ್ನೂ ರಾಜಕೀಯಕ್ಕೆ ಕರೆ ತರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳುತ್ತೇನೆ. ಅದರಂತೆಯೇ ಕುಮಾರಸ್ವಾಮಿ ಅವರು ಹೇಳಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಯಾರ ಗುಂಡಿ ಯಾರು ತೋಡಿದ್ದಾರೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಜೆಡಿಎಸ್ ಅಂತ ಬಂದಾಗ ಕುಮಾರಸ್ವಾಮಿ, ದೇವೇಗೌಡ್ರು, ರೇವಣ್ಣ, …
Read More »ಬೆಳಗಾವಿ ಜಿಲ್ಲೆಯ ಭಕ್ತರೊಂದಿಗೆ ಸಿದ್ಧೇಶ್ವರ ಸ್ವಾಮೀಜಿ ದಶಕಗಳ ಆಪ್ತತೆ
ಬೆಳಗಾವಿ: ವಿಶ್ವಸಂತ, ನಡೆದಾಡುವ ದೇವರು ಎಂದೇ ಹೆಸರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರಿಗೂ ಬೆಳಗಾವಿ ಜಿಲ್ಲೆಗೂ ಎರಡು ದಶಕಗಳ ನಂಟಿದೆ. ಅವರ ಅತಿ ಹೆಚ್ಚು ಪ್ರವಚನಗಳು ಬೆಳಗಾವಿ ಜಿಲ್ಲೆಯಲ್ಲೇ ನಡೆದಿವೆ. ಇಂದೋ ನಿನ್ನೆಯೋ ಶ್ರೀಗಳು ಕಣ್ಣ ಮುಂದೆ ತಮ್ಮ ಜ್ಞಾನ ಬಿತ್ತಿದ್ದಾರೆ ಎನ್ನುವಷ್ಟು ಆಪ್ತತೆ ಜಿಲ್ಲೆಯ ಜನರಲ್ಲಿದೆ. ಶ್ರೀಗಳು ಇನ್ನಿಲ್ಲ ಎನ್ನುವ ಸುದ್ದಿ ತಿಳಿದು ಜಿಲ್ಲೆಯ ಭಕ್ತರೂ ದಿಗಿಲುಗೊಂಡಿದ್ದಾರೆ. ಕಳೆದೊಂದು ವಾರದಿಂದ ಅಪಾರ ಸಂಖ್ಯೆಯ ಜನ ಶ್ರೀಗಳನ್ನು ನೋಡಲು …
Read More »ಮಹದಾಯಿ ನೀರನ್ನು ತಿರುಗಿಸಲು ಯಾರಿಂದಲೂ ಸಾಧ್ಯವಿಲ್ಲ: ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಅಭಿಪ್ರಾಯ
ಪಣಜಿ: ಕೇಂದ್ರ ಸರ್ಕಾರವೇ ಏನು… ಮಹದಾಯಿ ನೀರನ್ನು ತಿರುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೋವಾ ರಾಜ್ಯದ ಅಡ್ವೊಕೇಟ್ ಜನರಲ್ ದೇವಿದಾಸ್ ಪಾಂಗಮ್ ಬಲವಾಗಿ ಅಭಿಪ್ರಾಯಪಟ್ಟಿದ್ದಾರೆ. ಕಳಸಾ-ಭಂಡೂರ ನೀರಿನ ಯೋಜನೆಗೆ ಕರ್ನಾಟಕ ಸರ್ಕಾರದ ಪರಿಷ್ಕೃತ ವಿಸ್ತೃತ ಯೋಜನಾ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದ ನಂತರ ರಾಜ್ಯದಲ್ಲಿ ಅಸಮಾಧಾನ ಹರಡಿದೆ. ಈ ಹಿನ್ನೆಲೆಯಲ್ಲಿ ಅಡ್ವಕೇಟ್ ಜನರಲ್ ಪಾಂಗಮ ಅವರ ಹೇಳಿಕೆಗೆ ಹೆಚ್ಚಿನ ಮಹತ್ವ ಬಂದಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇಂದ್ರವು …
Read More »ಒಪಿಎಸ್: ವಿಧಾನಸಭಾ ಕ್ಷೇತ್ರಗಳಲ್ಲಿ ಹೋರಾಟ
ಬೆಂಗಳೂರು: ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಎನ್‌ಪಿಎಸ್ ನೌಕರರು ನಡೆಸುತ್ತಿದ್ದ ಧರಣಿಯನ್ನು ಸೋಮವಾರ ಅಂತ್ಯಗೊಳಿಸಿದ್ದಾರೆ. ‘ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ಆಶ್ರಯದಲ್ಲಿ ಡಿ.19ರಿಂದ ಧರಣಿ ನಡೆಸುತ್ತಿದ್ದರು. ‘ಎನ್‌ಪಿಎಸ್ ನೌಕರರ ಸಭೆ ಕರೆಯುವುದಾಗಿ ಸಿ.ಎಂ ಭರವಸೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ‘ವೋಟ್ ಫಾರ್ ಒಪಿಎಸ್’ ಅಭಿಯಾನ ಹಮ್ಮಿಕೊಳ್ಳಲಾಗುವುದು’ ಎಂದು ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಅವರು …
Read More »*ಶತಮಾನದ ಮಹಾನ್ ಸಂತ ಸಿದ್ಧೇಶ್ವರ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ*
ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. …
Read More »ಸಾಧನೆಗೈದ ಕಾನಸ್ಟೆಬಲ್ ಪುತ್ರಿ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ
ಸಾಧನೆಗೈದ ಕಾನಸ್ಟೆಬಲ್ ಪುತ್ರಿ ಹಾಗೂ ಆಕೆಯ ತಂದೆ – ತಾಯಿಯನ್ನು ಕಚೇರಿಗೆ ಕರೆಸಿ ಸೋಮವಾರ ಸನ್ಮಾನಿಸುವ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ಆದರ್ಶ ಕೆಲಸ ಮಾಡಿದ್ದಾರೆ. ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಲಗಮಣ್ಣಾ ನಾಯಕ್ ಮತ್ತು ಶೀಲಾ ಲಗಮಣ್ಣ ನಾಯಕ ರವರ ಮಗಳು ಸ್ನೇಹಾ ನಾಯಕ್ MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ ಏಮ್ಸ್ (AIIMS New Delhi) ಗೆ ಆಯ್ಕೆಯಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ …
Read More »
Laxmi News 24×7