Breaking News
Home / ರಾಷ್ಟ್ರೀಯ (page 650)

ರಾಷ್ಟ್ರೀಯ

ತಜ್ಞರ ವರದಿಯ ಆದರದ ಮೇಲೆ 9 ರಿಂದ 12 ನೇ ತರಗತಿ ನಡೆಸಲು ತೀರ್ಮಾನ : ಶಿಕ್ಷಣ ಸಚಿವ

ಚಿತ್ರದುರ್ಗ: ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದ ಮೇಲೆ 9 ರಿಂದ 12 ನೇ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದೂವರೆ ವರ್ಷದಿಂದ ಕೊರೊನಾ ನಡುವೆಯೂ ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಿಸಲು ಆನ್ಲೈನ್ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೂ, ಶೇ.30 ರಿಂದ 40 ರಷ್ಟು …

Read More »

BJP ಸರಕಾರ ಬೀಳುತ್ತೆ ಎಂಬ ವಿಚಾರದಲ್ಲಿ ಯಾರ ಕನಸು ನನಸಾಗಲ್ಲ : ಕಾಂಗ್ರೆಸ್ ಗೆ ಕೋಟ ತಿರುಗೇಟು

ಚಿಕ್ಕಮಗಳೂರು : ಬಿಜೆಪಿ ಸರಕಾರ ಸುಭದ್ರ ಹಾಗೂ ಸುಸ್ಥಿರವಾಗಿದೆ, ನಮ್ಮ ಸರಕಾರ ಬೀಳುತ್ತೆ ಎಂಬ ವಿಚಾರದಲ್ಲಿ ಯಾರು ಕನಸು ಕಂಡರೂ ಅದು ನನಸಾಗುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು ಇನ್ನು ಆರು ತಿಂಗಳಲ್ಲಿ ಬಿಜೆಪಿ ಸರಕಾರ ಬಿದ್ದು ಹೋಗುತ್ತದೆ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರೀಯಿಸಿದ ಅವರು ಕನಸು ಕಾಣುವ ಹಕ್ಕು ಪ್ರತಿಯೊಬ್ಬರಿಗೂ ಇದೆ, ಕನಸು ಕಾಣುವುದು ತಪ್ಪಲ್ಲ, …

Read More »

2022ರ ದಸರಾ ಹಬ್ಬದ ಮೊದಲೇ ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಪೂರ್ಣ : ಪ್ರತಾಪ್ ಸಿಂಹ

ಮೈಸೂರು: ಮುಂದಿನ 2022ರ ದಸರಾ ಹಬ್ಬಕ್ಕೆ ಮುಂಚಿತವಾಗಿ ಬೆಂಗಳೂರು-ಮೈಸೂರು ಹತ್ತು ಪಥದ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನ ಮೊದಲ ಹಾಗೂ ಎರಡನೇ ಅಲೆ ಹಿನ್ನೆಲೆ ರಸ್ತೆ ಕಾಮಗಾರಿ ನಡೆಯೋದಿಲ್ಲ ಎಂಬ ಭಾವನೆ ಇತ್ತು. ಆದರೆ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ 2022ರ ಮೈಸೂರು ದಸರಾ ವೇಳೆಗೆ ಸಿದ್ಧಗೊಳ್ಳಲಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರದ ನೆರವು ಇಲ್ಲದೆ, ಸಂಪೂರ್ಣ ಕೇಂದ್ರ …

Read More »

ಮಾಡದ ತಪ್ಪಿಗೆ ಸೌದಿ ಜೈಲಿನಲ್ಲಿದ್ದ ಕನ್ನಡಿಗ ಕೊನೆಗೂ ಬಂಧಮುಕ್ತ…!

ತಾನು ಮಾಡದ ತಪ್ಪಿಗೆ ಸೌದಿಯಲ್ಲಿ ಬಂಧನಕ್ಕೊಳಗಾಗಿದ್ದ ಕನ್ನಡಿಗ ಹರೀಶ್​ ಬಂಗೇರ 2 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ್ದಾರೆ. ಸೌದಿ ದೊರೆ ಮತ್ತು ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಹರೀಶ್​ ಬಂಗೇರರನ್ನು ಬಂಧಿಸಲಾಗಿತ್ತು. ಹರೀಶ್​ ಬಂಗೇರ ಹೆಸರಲ್ಲಿ ನಕಲಿ ಫೇಸ್​ಬುಕ್​ ಖಾತೆ ತೆರೆದಿದ್ದ ಮೂಡಬಿದಿರೆ ಮೂಲಕ ಮುಸ್ಲಿಂ ಸಹೋದರರು ಸೌದಿ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದರು. ಉಡುಪಿ ಸೆಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾದ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ. …

Read More »

ಅಫ್ಘಾನಿಸ್ತಾನದಿಂದ ಬರಲು ಇಚ್ಛಿಸುವ ಹಿಂದೂಗಳಿಗೆ ಆಶ್ರಯ: ಪ್ರಧಾನಿ ಮೋದಿ

ನವದೆಹಲಿ, ಆಗಸ್ಟ್ 18: ಭಾರತಕ್ಕೆ ಬರಲು ಇಚ್ಛಿಸುವ ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಸಿಖ್ ಹಾಗೂ ಹಿಂದೂಗಳಿಗೆ ಆಶ್ರಯ ನೀಡಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ತಾಲಿಬಾನ್ ಅಟ್ಟಹಾಸದಿಂದ ಅಫ್ಘಾನಿಸ್ತಾನ ನಲುಗುತ್ತಿದ್ದು, ಅಲ್ಲಿನ ಭಾರತೀಯರ ಸಹಾಯಕ್ಕೆ ಪ್ರಧಾನಿ ಮೋದಿ ಮುಂದಾಗಿದ್ದಾರೆ. ಆಫ್ಘನ್‌ನಲ್ಲಿ ಇರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು ಎಂದು ವಿದೇಶಾಂಗ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಹಾಯಕ್ಕಾಗಿ ಭಾರತದತ್ತ ನೋಡುತ್ತಿರುವ ನಿರಾಶ್ರಿತರಿಗೆ ಎಲ್ಲ ನೆರವು ನೀಡುವ ಜವಾಬ್ದಾರಿ ನಮ್ಮ …

Read More »

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಮೊದಲ ಆದ್ಯತೆ ನೀಡಿ : ಸಿಎಂ

ಬೆಂಗಳೂರು, ಆ. 17 : ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ …

Read More »

ದಿಢೀರನೇ ದೆಹಲಿಗೆ ಹಾರಿದ ಸಚಿವ ಆನಂದ್ ಸಿಂಗ್..!

ನವದೆಹಲಿ,ಆ.18- ಖಾತೆ ಕ್ಯಾತೆ ತೆಗೆದು ಮುನಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕಳೆದ ರಾತ್ರಿ ದಿಢೀರನೇ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಯಲ್ಲಾಪುರ ಪ್ರವಾಸದಲ್ಲಿದ್ದ ಆನಂದ್ ಸಿಂಗ್ ದಿಢೀರನೇ ಗೋವಾ ಮೂಲಕ ಕಳೆದ ರಾತ್ರಿ ದೆಹಲಿಗೆ ತೆರಳಿದ್ದಾರೆ. ಮೂಲಗಳ ಪ್ರಕಾರ ಅವರು ಇಂದು ದೆಹಲಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ವೈಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರಕ್ಕೆ ಬಂದಿದ್ದ ಆನಂದ್ …

Read More »

ಡಿಸ್ಟರ್ಬ್​ ಮಾಡಬೇಡ ಅಮ್ಮಾ..’ ರೂಮಿಗೆ ತೆರಳಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕಲಬುರಗಿ: ಪೋಷಕರಿಂದ ಆನ್ ಲೈನ್ ಕ್ಲಾಸ್​ಗೆ ತೊಂದರೆ ಆಯ್ತು ಅಂತ ಮನನೊಂದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. 17 ವರ್ಷದ ಗುರುಚರಣ್ ಉಡುಪಾ ಆತ್ಮಹತ್ಯೆ ಮಾಡಿಕೊಂಡ ಯುವಕ. ಗುರುಚರಣ್ ಉಡುಪಿಯ ಪ್ರತಿಷ್ಠಿತ ಕಾಲೇಜ್​ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಡಿ ಪಟ್ಟಣದ ಬಿರ್ಲಾ ಕ್ವಾಟರ್ಸ್​ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಎರಡು ದಿನದ ಹಿಂದೆ ಆನ್​ಲೈನ್​ ಕ್ಲಾಸ್​ನಲ್ಲಿದ್ದಾಗ ಅವ್ರ ತಂದೆ ತಾಯಿ ಡಿಸ್ಟರ್ಬ್​ …

Read More »

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಮಕ್ಕಳ ಆರೋಗ್ಯತಪಾಸಣೆ ಉದ್ದೇಶದಿಂದ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿ, ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ …

Read More »

ಗೋವಾದಲ್ಲಿ ಜಾರಿಗೆ ತಂದ ‘ಹರ್ ಘರ್ ನಲ್’ ಯೋಜನೆ ಸಂಪೂರ್ಣ ವಿಫಲ : ಮಹಾದೇವ್ ನಾಯ್ಕ ವಾಗ್ದಾಳಿ

ಪಣಜಿ: ಮುಂಬರುವ ಐದು ವರ್ಷಗಳಲ್ಲಿ ಗೋವಾ ರಾಜ್ಯದಲ್ಲಿನ ಪ್ರತಿಯೊಂದು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆಯೇ…? ಎಂಬುದನ್ನು ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರಿಂದ ಖಚಿತಪಡಿಸಿಕೊಳ್ಳಲು ಸಾಧ್ಯವೇ..? ಮಳೆಗಾಲದಲ್ಲಂತೂ ಗೋವಾ ರಾಜ್ಯದ ಜನರು ಕೊಳಕು ಕುಡಿಯುವ ನೀರಿನ ಪೂರೈಕೆಯಿಂದ ಜನತೆ ತೊಂದರೆ ಅನುಭವಿಸುತ್ತಿದ್ದಾರೆ. ಮುಖ್ಯಮಂತ್ರಿ ಸಾವಂತ್ ರವರ ಹರ್ ಘರ್ ನಲ್ ಯೋಜನೆ ಸಂಪೂರ್ಣ ವಿಫಲವಾಗಿದ್ದು, ಜನರು ಕುಡಿಯುವ ನೀರಿಗಾಗಿ ಬಾವಿಗಳನ್ನು ಅವಲಂಭಿಸಿರುವಂತಾಗಿದೆ ಎಂದು ಆಮ್ ಆದ್ಮಿ ನಾಯಕ ಮಹಾದೇವ್ ನಾಯ್ಕ ವಾಗ್ದಾಳಿ …

Read More »