Breaking News

ರಾಷ್ಟ್ರೀಯ

ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಜಿ.ಪಂ, ತಾಲೂಕು ಪಂಚಾಯತ್‌ ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದಕ್ಕೆ ಹೈಕೋರ್ಟ್‌ ಸರ್ಕಾರಕ್ಕೆ ದಂಡ ಹಾಕಿ ಚಾಟಿ ಬೀಸಿದೆ. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ.ದಂಡ ವಿಧಿಸಿದೆ.   ಪದೇ ಪದೇ ‌ಕಾಲಾವಕಾಶ ಕೇಳಿದ ಸರ್ಕಾರ ಹಾಗೂ ಸೀಮಾ ನಿರ್ಣಯ ಆಯೋಗದ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಹೈಕೋರ್ಟ್, 24 ವಾರ ಕಾಲಾವಕಾಶ ನೀಡಿದರೂ ಸರ್ಕಾರ …

Read More »

ಬಾಲಿವುಡ್ ನ “ಸ್ಪೆಷಲ್ 26” ಸಿನಿಮಾ ಸ್ಟೈಲ್.ಸಿಬಿಐ ಅಧಿಕಾರಿಗಳು ಎಂದು ನಂಬಿಸಿ ಲಕ್ಷಾಂತರ ರೂ. ಲೂಟಿ!

ನವದೆಹಲಿ: ಬಾಲಿವುಡ್ ನ ಅಕ್ಷಯ್ ಕುಮಾರ್ ನಟನೆಯ “ಸ್ಪೆಷಲ್ 26” ಸಿನಿಮಾದ ರೀತಿಯಲ್ಲೇ ಸಿಬಿಐ ಅಧಿಕಾರಿಗಳೆಂದು ಪೋಸು ನೀಡಿ ಉದ್ಯಮಿಯೊಬ್ಬರ ಮನೆಯೊಳಗೆ ನುಗ್ಗಿ 30 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣವನ್ನು ದೋಚಿಕೊಂಡು ಹೋಗಿರುವ ಘಟನೆ ಕೋಲ್ಕತಾದ ಭವಾನಿಪುರ್ ನಲ್ಲಿ ನಡೆದಿದೆ.   ಇತ್ತೀಚೆಗೆ ಕೋಲ್ಕತಾದ ಉದ್ಯಮಿಯೊಬ್ಬರ ಮನೆಗೆ ಸುಮಾರು 7-8 ಮಂದಿಯ ಗುಂಪೊಂದು ಆಗಮಿಸಿದ್ದು, ತಾವು ಸಿಬಿಐ ಅಧಿಕಾರಿಗಳೆಂದು ಹೇಳಿ ಮನೆಯೊಳಗೆ ನುಗ್ಗಿದ್ದರು ಎಂದು ಉದ್ಯಮಿ ಸುರೇಶ್ ವಾಧ್ವಾ (60ವರ್ಷ) …

Read More »

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ

ಬೆಂಗಳೂರು,ಡಿ.14- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಈ ಸಭೆಯ ರಹಸ್ಯವನ್ನು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಬಿಚ್ಚಿಟ್ಟಿದೆ, ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದೆ.   ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‍ನ ಒಳಜಗಳ ದಿನೇ ದಿನೇ ಹೆಚ್ಚಾಗಿ ಬೀದಿರಂಪವಾಗುತ್ತಿದೆ. ಇವರೆಲ್ಲ ದೇಶೋದ್ಧಾರಕ್ಕಾಗಿ ಗುದ್ದಾಡಿಕೊಳ್ಳುತ್ತಿಲ್ಲ ಎಂದು ವ್ಯಂಗ್ಯವಾಡಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ …

Read More »

ಬಿಜೆಪಿಗೆ ಅಡ್ಡಿಯಾಗುವುದೇ ಅಂತಿಮ ಕ್ಷಣದ ಮಿನಿ ಬಂಡಾಯ..?

ಬೆಂಗಳೂರು: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಎರಡು ರಾಜ್ಯಗಳಲ್ಲಿ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸಾಕಷ್ಟು ಪ್ರಯೋಗಗಳನ್ನು ನಡೆಸಿತ್ತು. ಆ ಬದಲಾವಣೆಯ ಅಸ್ತ್ರ ಗುಜರಾತ್ ನಲ್ಲಿ ಫಲ ನೀಡಿದರೆ, ಹಿಮಾಚಲದಲ್ಲಿ ತಿರುಗು ಬಾಣವಾಗಿದೆ.   ಹೀಗಾಗಿ ಒಂದು ರಾಜ್ಯಕ್ಕೆ ಅನ್ವಯವಾಗುವ ಬಿಜೆಪಿಯ ಚುನಾವಣಾ ʼಮಾಡೆಲ್ʼ ಇನ್ನೊಂದು ರಾಜ್ಯಕ್ಕೆ ವ್ಯತಿರಿಕ್ತವಾಗುತ್ತದೆ ಎಂಬುದಕ್ಕೆ ಈ ಫಲಿತಾಂಶವೇ ಉದಾಹರಣೆಯಾಗಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿರುವ ಹಂತದಲ್ಲೇ ಕರ್ನಾಟಕ ವಿಧಾನಸಭಾ ಚುನಾವಣೆಗೆ …

Read More »

ಬೆಂಗಳೂರು ನಗರದ ಬಾರ್, ರೆಸ್ಟೋರೆಂಟ್, ಪಬ್ ಗಳನ್ನು ಬೆಳಗಿನ ಜಾವ 3.30ರವರೆಗೆ ತೆರೆಯಲು ಅವಕಾಶ

ಬೆಂಗಳೂರು: ನಗರದಲ್ಲಿನ ಬಾರ್, ರೆಸ್ಟೋರೆಂಟ್ ಹಾಗೂ ಪಬ್ ಗಳ ಅವಧಿಯನ್ನು ಬೆಳಗಿನ ಜಾವ 3.30ರವರೆಗೆ ತೆರೆಯಲು ಅವಕಾಶ ನೀಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.   ಡಿಸೆಂಬರ್ 14ರ ನಾಳೆ ಮತ್ತು ಡಿಸೆಂಬರ್ 15ರ ನಾಡಿದ್ದು ಮಾತ್ರವೇ ಫೀಪಾ ವಿಶ್ವಕಪ್ ಸೆಮಿ ಫೈನಲ್ ಪಂದ್ಯಾವಳಿಯ ಹಿನ್ನಲೆಯಲ್ಲಿ ಬಾರ್, ರೆಸ್ಟೋರೆಂಟ್ ಹಾಗೂ ಪಬ್ ಗಳನ್ನು ಬೆಳಗಿನ ಜಾವ 3.30ರವರೆಗೆ ತೆರೆಯಲು ಅನುಮತಿಸಿ ಆದೇಶಿಸಿದ್ದಾರೆ.   ಅಂದಹಾಗೇ ಫೀಪಾ …

Read More »

ಹಿರಿಯ ಐಪಿಎಸ್ ಅಧಿಕಾರಿ ‘ಭಾಸ್ಕರ್ ರಾವ್’ ರಾಜೀನಾಮೆ ಅಂಗೀಕಾರಿಸಿದ ‘ರಾಜ್ಯ ಸರ್ಕಾರ’, ‘ಸೇವೆ’ಯಿಂದ ಬಿಡುಗಡೆ

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವ್ರ ರಾಜೀನಾಮೆಯನ್ನ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಈ ಮೂಲಕ ಅವ್ರನ್ನ ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿದೆ.   ಅಂದ್ಹಾಗೆ, ಈ ಹಿರಿಯ ಅಧಿಕಾರಿ ಸ್ವಯಂ ನಿವೃತ್ತಿ ಬಯಸಿ ರಾಜೀನಾಮೆ ನೀಡಿದ್ದರು. ಆದ್ರೆ, ಅವ್ರ ರಾಜೀನಾಮೆಯನ್ನ ಸರ್ಕಾರ ಅಂಗೀಕರಿಸಿರಲಿಲ್ಲ. ಸಧ್ಯ ರಾಜ್ಯ ಸರ್ಕಾರ ರಾವ್ ಅವ್ರನ್ನ ರಾಜೀನಾಮೆಯನ್ನ ಅಂಗೀಕರಿಸಿದ್ದು, ಸೇವೆಯಿಂದ ಅಧಿಕೃತವಾಗಿ ಬಿಡುಗಡೆಗೊಳಿಸಿದೆ.

Read More »

ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ

ಬೆಳಗಾವಿ: ಜಿಲ್ಲೆಯಲ್ಲಿ ಚರ್ಮಗಂಟು (ಲಂಪಿಸ್ಕಿನ್‌) ರೋಗ ವ್ಯಾಪಕವಾಗಿ ಹರಡುತ್ತಿದ್ದು, ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ. ಆದರೆ, ಬಹುಪಾಲು ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೆಲವರಿಗೆ ಮಾತ್ರ ಅಲ್ಪಮೊತ್ತದ ಹಣ ನೀಡಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.   ‘ಚರ್ಮಗಂಟು ರೋಗ ಶಾಪವಾಗಿ ಪರಿಣಮಿಸಿದೆ. ಈ ಸೋಂಕಿನಿಂದ ಮೃತಪಟ್ಟಿರುವ 1 ವರ್ಷದೊಳಗಿನ ಕರುವಿಗೆ ತಲಾ ₹5 ಸಾವಿರ, ಆಕಳಿಗೆ ₹20 ಸಾವಿರ ಮತ್ತು ಎತ್ತಿಗೆ ₹30 ಸಾವಿರ ಪರಿಹಾರ ನಿಗದಿಪಡಿಸಲಾಗಿದೆ. ಇದು ಏತಕ್ಕೂ …

Read More »

ಸಕ್ಕರೆ ಲಾಬಿಗೆ ಮಣಿದ ಸರ್ಕಾರ: ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಆರೋಪ

ಚನ್ನಮ್ಮನ ಕಿತ್ತೂರು: ‘ಸಕ್ಕರೆ ಲಾಬಿಗೆ ಮಣಿದ ಸರ್ಕಾರ ಕಬ್ಬು ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎರಡೂವರೆ ತಿಂಗಳು ವಿಳಂಬವಾಗಿ ಕಾರ್ಖಾನೆ ಪ್ರಾರಂಭವಾಗಿವೆ’ ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ದೂರಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುಜರಾತ್ ಮಾದರಿಯಲ್ಲಿ ಕರ್ನಾಟಕದ ವಿಧಾನಸಭೆ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಮೋದಿ ಅಲೆ ಎಲ್ಲಿಯೂ ಇಲ್ಲ. ಮುಕ್ತವಾಗಿ ಚುನಾವಣೆ ನಡೆಸದೆ ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ …

Read More »

“ಗೋಲಿ ಮಾರ್ ದೂಂಗಾ..”: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಜೀವ ಬೆದರಿಕೆ

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಪವಾರ್ ಅವರ ಸಿಲ್ವರ್ ಓಕ್ಸ್ ಮನೆಗೆ ಕರೆ ಮಾಡಿದ ವ್ಯಕ್ತಿ, ಮುಂಬೈಗೆ ಬಂದು ಕಂಟ್ರಿಮೇಡ್ ಪಿಸ್ತೂಲ್ ನಿಂದ ಶೂಟ್ ಮಾಡುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾನೆ.   “ಮುಂಬೈ ಆಯುಂಗಾ ಔರ್ ದೇಸಿ ಪಿಸ್ತೂಲ್ ಸೆ ಗೋಲಿ ಮಾರ್ ದೂಂಗಾ” ಎಂದು ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆಯಲ್ಲಿ …

Read More »

ಕಾಲುವೆಗೆ ಹಾರಿ ಎರಡು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡ ತಾಯಿ

ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ‌. ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾಳೆ‌. ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿದ್ದಾಳೆ. ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತರಾದ ದುರ್ದೈಗಳು. ಕಳೆದ ಎರಡು ದಿನಗಳ …

Read More »