Breaking News

ರಾಷ್ಟ್ರೀಯ

ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

ಬೆಂಗಳೂರು: ಹಿಜಬ್ ವಿವಾದದ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿಷಯ ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಕಾರಣವಾಯಿತು. ಬಜೆಟ್ ಚರ್ಚೆ ವೇಳೆ ಕಾಂಗ್ರೆಸ್‍ನ ಸದಸ್ಯ ಸಲೀಂ ಅಹಮದ್, ತೀರ್ಪು ಯಾಕೆ ಈ ರೀತಿ ಬಂದಿತು ಎನ್ನುವ ಕುರಿತು ಚರ್ಚೆ ನಡೆಯಬೇಕು ಎಂದರು. ಈ ವಿಚಾರಕ್ಕೆ ಸದನದಲ್ಲಿ ಗಲಾಟೆ ಪ್ರಾರಂಭ ಆಯಿತು. ಸಲೀಂ ಅಹಮದ್ ಮಾತನಾಡಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಏಕೆ ಬಂತು. ಹಿಜಬ್ ವಿಚಾರದಲ್ಲಿ ಕೋರ್ಟ್ …

Read More »

ಮುಸ್ಲಿಂ ಯುವತಿ, ಹಿಂದೂ ಯುವಕನ ಪ್ರೇಮ್ ಕಹಾನಿ; ತಂಗಿ ಗಂಡನ ಹತ್ಯೆಗೆ ಸುಪಾರಿ ಕೊಟ್ಟ ರೌಡಿಶೀಟರ್!

ದೇಶ ಅಭಿವೃದ್ಧಿ ಪಥದತ್ತ ಸಾಗಿದೆ ಆದ್ರೆ ನಮ್ಮಲ್ಲಿ ಜಾತಿ (Caste), ಧರ್ಮದ (Religion)) ಪಿಡುಗು ಮಾತ್ರ ಕಡಿಮೆಯಾಗಿಲ್ಲ. ಹೌದು ಇಲ್ಲೊಬ್ಬ ಬೇರೆ ಧರ್ಮದ ಹುಡುಗನನ್ನು ಪ್ರೀತಿಸಿ ವಿವಾಹವಾಗಿದ್ದಕ್ಕೆ (Love Marriage) ತಂಗಿ ಗಂಡನ ಹತ್ಯೆಗೆ ಸುಪಾರಿ ಕೊಟ್ಟಿದ್ದಾನೆ. ಜಾತಿ, ಧರ್ಮದ ಪಿಡುಗು ಜನರನ್ನ ಎಷ್ಟರ ಮಟ್ಟಿಗೆ ಆವರಿಸಿದೆ ಅಂದ್ರೆ ಕರುಳ ಸಂಬಂಧ, ರಕ್ತ ಸಂಬಂಧಗಳಿಗೂ ಜನ ಬೆಲೆ ಕೊಡದೆ ಜಾತಿ, ಧರ್ಮ ಹಾಗೂ ಮಾನ-ಮಾರ್ಯಾದೆ ಅಂತ ಮಚ್ಚು-ಕೊಡಲಿ ಹಿಡಿದು ಕೊಲೆ …

Read More »

ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಡಾ.ಪುನೀತ್ ರಾಜ್‍ಕುಮಾರ್ ಸಮಾಧಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಭೇಟಿ ನೀಡಿ ದರ್ಶನ ಪಡೆದರು.ಇಂದು ಪುನೀತ್ ರಾಜ್‍ಕುಮಾರ್ 47ನೇ ಹುಟ್ಟುಹಬ್ಬದ ಹಿನ್ನೆಲೆ ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಭೇಟಿ ನೀಡಿ ಪ್ರದಕ್ಷಿಣೆ ಹಾಕಿ ನಮನ ಸಲ್ಲಿಸಿದರು. ಇದೇ ವೇಳೆ ವರನಟ ಡಾ. ರಾಜ್‍ಕುಮಾರ್ ಹಾಗೂ ಪಾರ್ವತಮ್ಮ ರಾಜ್‍ಕುಮಾರ್ ಅವರ ಸಮಾಧಿಯ ದರ್ಶನವನ್ನು ಸಹ ಪಡೆದರು.  ಅಪ್ಪು ಜನುಮ ದಿನದ ಪ್ರಯುಕ್ತ ಇಂದು …

Read More »

ರಾಜ್ಯದ 400 ಥಿಯೇಟರ್‌ಗಳಲ್ಲಿ ಜೇಮ್ಸ್ ರಿಲೀಸ್

ಬೆಂಗಳೂರು: ಇಂದು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ 47ನೇ ಹುಟ್ಟುಹಬ್ಬವಾಗಿದ್ದು, ಇಂದೇ ಅಪ್ಪು ಅಭಿನಯದ ಕೊನೆ ಚಿತ್ರ ಜೇಮ್ಸ್ ರಾಜ್ಯದ 400 ಥಿಯೇಟರ್‌ಗಳಲ್ಲಿ ರಿಲೀಸ್ ಆಗಿದೆ. ರಾಜ್ಯದಾದ್ಯಂತ ಅಪ್ಪು ಅಭಿಮಾನಿಗಳು ಥಿಯೇಟರಿಗೆ ಆಗಮಿಸಿ ಹಬ್ಬ ಮಾಡುತ್ತಿದ್ದಾರೆ. ಅಪ್ಪು ಇಲ್ಲದೇ ಮೊದಲ ಬಾರಿಗೆ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅಪ್ಪು ಅಗಲಿದ ನೋವಿದ್ದರೂ, ಅವರ ಕೊನೆ ಸಿನಿಮಾ ಜೇಮ್ಸ್‍ನ್ನು ನೋಡುವ ಮೂಲಕ ಅದ್ಧೂರಿಯಾಗಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಚಿತ್ರ …

Read More »

ಏಲಕ್ಕಿ ಕಂಪಿನ ನಗರಿ ಹಾವೇರಿಯಲ್ಲಿ ಹೋಳಿ ಹಬ್ಬದ ತಯಾರಿ.. ರತಿ ಕಾಮಣ್ಣನ ಪ್ರತಿಷ್ಠಾಪನೆ

ಹಾವೇರಿ: ಏಲಕ್ಕಿ ಕಂಪಿನ ನಗರ ಹಾವೇರಿ ರಂಗಪಂಚಮಿಗೆ ಸನ್ನದ್ಧಗೊಳ್ಳುತ್ತಿದೆ. ಎಲ್ಲೆಲ್ಲೂ ಬಣ್ಣಗಳಿಂದ ನಳನಳಿಸುತ್ತಿದೆ. ಮಾರ್ಚ್​ 19ರ ರಂಗಪಂಚಮಿಯ ಹೋಳಿ ಆಚರಣೆಗೆ ನಗರದ 21ಕಡೆ ಕಾಮರತಿಯ ಕಟ್ಟೆಗೆ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಅಕ್ಕಿಪೇಟೆ ಮಾರುಕಟ್ಟೆ, ಗದ್ದಿಗೇರ್ ಓಣಿ, ಯಾಲಕ್ಕಿ ಓಣಿ, ಪುರದ ಓಣಿ ಮತ್ತು ಮೇಲಿನ ಪೇಟೆ ಸೇರಿದಂತೆ ವಿವಿಧೆಡೆ ಈಗಾಗಲೇ ರತಿಮನ್ಮಥರ ಕಟ್ಟಿಗೆ ಮೂರ್ತಿಗಳನ್ನು ಸ್ಥಾಪಿಸಿ ಪೆಂಡಾಲಗಳನ್ನು ಹಾಕಲಾಗಿದೆ. ದಿನಕ್ಕೆ ಎರಡು ಬಾರಿ ಕಾಮರತಿಗೆ ಪೂಜೆ ಸಲ್ಲಿಸಲಾಗುತ್ತಿದ್ದು. ರತಿಮನ್ಮಥರ ಮೂರ್ತಿಗಳು ಒಂದಕ್ಕಿಂತ ಒಂದು ವಿಭಿನ್ನವಾಗಿ ಪ್ರತಿಷ್ಠಾಪಿಸಲ್ಪಟ್ಟಿವೆ. …

Read More »

ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ.

ವಾದ ವಿವಾದದ ನಡುವೆಯೂ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಐದು ದಿನದಲ್ಲಿ ಬರೋಬ್ಬರಿ 60 ಕೋಟಿ ಬಾಚಿದೆ. ಈ ಮಾದರಿಯ ಸಿನಿಮಾಗಳಲ್ಲೇ ಅತೀ ಕಡಿಮೆ ಸಮಯದಲ್ಲಿ ಇಷ್ಟೊಂದು ಗಳಿಕೆ ಮಾಡಿದ ಮೊದಲ ಚಿತ್ರ  ಎಂಬ ಹೆಗ್ಗಳಿಕೆಗೂ ಕಾರಣವಾಗಿದೆ. ಈ ಕುರಿತು ಬಾಲಿವುಡ್ ಖ್ಯಾತ ಟ್ರೇಡ್ ಅನಾಲಿಸಿಸ್ಟ್ ಟ್ವೀಟ್ ಕೂಡ ಮಾಡಿದ್ದು, ಆಯಾ ದಿನದ ಗಳಿಕೆಯ ಲೆಕ್ಕ ಕೊಟ್ಟಿದ್ದಾರೆ. ಮೊದಲ ದಿನ 3.55 ಕೋಟಿ ರೂಪಾಯಿ ಬಾಕ್ಸ್ ಆಫೀಸಿಗೆ ಹರಿದು ಬಂದಿದ್ದರೆ, …

Read More »

ಮಣಿಪುರದಲ್ಲಿ ಬಿರೆನ್ ಸಿಂಗ್, ಗೋವಾದಲ್ಲಿ ಸಾವಂತ್ ಸಿಎಂ ಆಗಿ ಮುಂದುವರಿಕೆ ಸಾಧ್ಯತೆ

ನವದೆಹಲಿ: ಮಣಿಪುರದಲ್ಲಿ ಎನ್‌. ಬಿರೆನ್ ಸಿಂಗ್ ಹಾಗೂ ಗೋವಾದಲ್ಲಿ ಪ್ರಮೋದ್ ಸಾವಂತ್ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಗೆಲುವು ಸಾಧಿಸಿದೆ. ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಗೋವಾದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಹೊಸ ಸರ್ಕಾರ ರಚನೆಯ ಸಂಬಂಧ ಪ್ರಮೋದ್‌ ಸಾವಂತ್ …

Read More »

ಕಾಂಗ್ರೆಸ್ ಲೋಫರ್ ಪಾರ್ಟಿ: ಯತ್ನಾಳ್

ಕಾಂಗ್ರೆಸ್ ಲೋಫರ್ ಪಾರ್ಟಿ ಎಂದು ಕಾಂಗ್ರೆಸ್ ವಿರುದ್ಧ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ವಿಜಯಪುರ ನಗರದ ತೊರವಿ ಎಲ್.ಟಿ ನಂ 4ರಲ್ಲಿ ಮಾದ್ಯಮಗಳಿಗೆ ಯತ್ನಾಳ್ ಈ ರೀತಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಲೋಫರ್ ಪಾರ್ಟಿ ಎಂದು ಇತ್ತಿಚೆಗೆ ಬಿಜೆಪಿಗೆ ಬ್ರೋಕರ್ ಪಾರ್ಟಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಗೆ ಯತ್ನಾಳ್ ಟಾಂಗ್ ನೀಡಿದರು. ಬಿಜೆಪಿಗೆ ಬ್ರೋಕರ್ ಎಂದವರಿಗೆ ಕಾಂಗ್ರೆಸ್ ಲೋಫರ್ ಪಾರ್ಟಿ ಅನ್ನೋದು …

Read More »

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ

ಬೆಳಗಾವಿಯ ಆಟೋನಗರದಲ್ಲಿನ ಸ್ಟಾಕ್ ಯಾರ್ಡ್‍ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಲಕ್ಷಾಂತರ ರೂಪಾಯಿ ಮೌಲ್ಯದ ಕೈಗಾರಿಕಾ ವೇಸ್ಟೇಜ್ ಬೆಂಕಿಗಾಹುತಿಯಾಗದೆ. ಹೌದು ಇತ್ತೀವೆಗೆ ಬೆಳಗಾವಿ ನಗರದಲ್ಲಿ ಬೆಂಕಿ ಅವಘಡಗಳಿ ದಿನದಿಂದ ದಿನಕ್ಕೆ ಹೆಚಚಾಗುತ್ತಿವೆ. ಆಕಸ್ಮಿಕವಾಗಿ ಕಾಣಿಸಿಕೊಳ್ಳುವ ಬೆಂಕಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತಿಗಳು ಬೆಂಕಿಗೆ ಆಹುತಿಯಾಗುತ್ತಿವೆ. ಹಾಗೆಯೇ ಇಂದು ಆಟೋ ನಗರದಲ್ಲಿನ ವಿವಿಧ ಇಂಡಸ್ಟ್ರೀಸ್‍ಗಳ ವೇಸ್ಟೇಜ್ ಸ್ಟಾಕ್ ಮಾಡುವ ಸ್ಟಾಕ್ ಯಾರ್ಡ್‍ನಲ್ಲಿ ಇಂದಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ …

Read More »

ತುಕ್ಕಾನಟ್ಟಿ ಗ್ರಾಮದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನ

ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಗುರುನಾಥ್ ಉಪ್ಪಾರ್ ಅವರ ನೇತೃತ್ವ ಹಾಗೂ ಬೈಲಹೊಂಗಲನ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅಂಗವಾಗಿ ಮಾ.17ರಂದು ಬೆಳಿಗ್ಗೆ ನೇತ್ರದಾನಕ್ಕೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯ ನೇತ್ರ ಭಂಡಾರಕ್ಕೆ 50 ಜನರು ಸ್ವಯಂ ಪ್ರೇರಿತರಾಗಿ ನೇತ್ರದಾನ ಮಾಡಲು ನೋಂದಣಿ ಮಾಡಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಮ್ಮ ಪ್ರತಿμÁ್ಠನದ ಅಧ್ಯಕ್ಷ ಬಾಳಾಸಾಹೇಬ ಉದಗಟ್ಟಿ ಉಪಸ್ಥಿತಿ ಇರಲಿದ್ದಾರೆ …

Read More »