ಇಡೀ ಜಗತ್ತೇ ವಿಭಕ್ತ ಕುಟುಂಬ ಮಾರ್ಗದತ್ತ ಸಾಗುತ್ತಿರುವಾಗ ಮಹಾರಾಷ್ಟ್ರದ ಸೊಲ್ಲಾಪುರದ ಅಪರೂಪದ ಕುಟುಂಬವೊಂದು ಒಂದೇ ಸೂರಿನಡಿ 72 ಸದಸ್ಯರನ್ನು ಹೊಂದಿದ್ದು ಕಣ್ಮನ ಸೆಳೆಯುತ್ತಿದೆ. ಹಿರಿಯರು, ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಹಾರಾಷ್ಟ್ರದ ಕುಟುಂಬದ ನಾಲ್ಕು ತಲೆಮಾರುಗಳು ಒಂದೇ ಸೂರಿನಡಿ ವಾಸಿಸುತ್ತಿವೆ. ಇದು ಸುಂದರವಾದ ಭಾರತೀಯ ಅವಿಭಕ್ತ ಕುಟುಂಬದ ಉದಾಹರಣೆಯಾಗಿದೆ. ವ್ಯಾಪಾರ ವಹಿವಾಟು ನಡೆಸುತ್ತಿರುವ ಡೊಯಿಜೋಡೆ ಕುಟುಂಬದಲ್ಲಿ 72 ಜನರಿಗೆ ಪ್ರತಿದಿನ 10 ಲೀಟರ್ ಹಾಲು ಬೇಕಾಗುತ್ತದೆ. ಪ್ರತಿ ಊಟಕ್ಕೆ …
Read More »ಉತ್ತರ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ವಂದೇ ಭಾರತ್ ರೈಲು
ಹುಬ್ಬಳ್ಳಿ ನವೆಂಬರ್ 16: ಉತ್ತರ ಕರ್ನಾಟಕದ ಮಂದಿಗೆ ಹೀಗೊಂದು ಸಿಹಿ ಸುದ್ದಿ. ಅದೇನೆಂದರೆ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಒದಗಿಸಲು ಯೋಜನೆ ರೂಪಸಲಾಗುತ್ತಿದೆ. ಇದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೆ ಮುಂದೊಂದು ದಿನ ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಅದರಲ್ಲೂ ಉತ್ತರ ಕರ್ನಾಟಕದ ಕಡೆಗೆ ಪ್ರಯಾಣಿಸಲಿದೆ. ಕರ್ನಾಟಕದ ಬೆಂಗಳೂರು-ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ಹೈ-ಸ್ಪೀಡ್ ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ನೈಋತ್ಯ ರೈಲ್ವೆ (SWR) ರೈಲ್ವೇ …
Read More »ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಗ್ರಾಮ ಲೆಕ್ಕಿಗ ದೂರು
ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ವಿರುದ್ಧ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದಡಿ ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಮತಿ ತಾಲೂಕಿನ ಕುಂಕುವ ವೃತ್ತದ ಗ್ರಾಮಲೆಕ್ಕಿಗ ಎಸ್.ಪ್ರಶಾಂತ್‌ಕುಮಾರ್ ಎಂಬುವವರು, ಶಾಸಕ ರೇಣುಕಾಚಾರ್ಯ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವ ಜತೆಗೆ ತಮ್ಮನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕೋರಿ ದೂರು ಸಲ್ಲಿಸಿದ್ದಾರೆ. ರೇಣುಕಾಚಾರ್ಯ ವಿರುದ್ಧ ಐಪಿಸಿ ಕಲಂ 186 ಅಡಿಯಲ್ಲಿ ದೂರು ದಾಖಲಾಗಿದೆ. ಈಚೆಗೆ …
Read More »ಪ್ರೇಮ ವಿವಾಹಕ್ಕೆ ಅಡ್ಡಿಯಾದ ಪೋಷಕರು; ಮುಂದೆ ನಿಂತು ಮದುವೆ ಮಾಡಿಸಿದ ಪೊಲೀಸರು!
ನೆಲಮಂಗಲ: ಪ್ರೇಮಿಗಳ ಮದುವೆಗೆ ಪೋಷಕರು ಅಡ್ಡಿಯಾದ ಹಿನ್ನೆಲೆಯಲ್ಲಿ ಪೊಲೀಸರೇ ಮುಂದೆ ನಿಂತು ಮದುವೆ ಮಾಡಿದ ಘಟನೆ ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೂಲತಃ ಹಾವೇರಿಯ, ಪ್ರಸ್ತುತ ಕೆ.ಆರ್.ಪುರ ನಿವಾಸಿ ಕರಬಸಪ್ಪ (24) ಹಾಗೂ ಕಾರವಾರ ಮೂಲದ, ಪ್ರಸ್ತುತ ನೆಲಮಂಗಲ ನಿವಾಸಿ ಬಿಂದು (19) ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇವರು ಪ್ರೀತಿಯ ವಿಚಾರವನ್ನು ಮನೆಯಲ್ಲಿ ತಿಳಿಸಿದ್ದಾರೆ. ಆದರೆ ಪೋಷಕರು ಮಾತ್ರ ಇವರಿಬ್ಬರ ಪ್ರೀತಿಯನ್ನು ಬೆಂಬಲಿಸಿಲ್ಲ. ಪೋಷಕರ ಬೆಂಬಲ ವ್ಯಕ್ತವಾಗದ ಹಿನ್ನೆಲೆ …
Read More »ಕಾಂಗ್ರೆಸ್ ಟಿಕೆಟ್ ಗೆ ಅರ್ಜಿಗಳ ಮಹಾಪೂರ ಸುಮಾರು 300 ಕ್ಕೂ ಹೆಚ್ಚು ಜನರು ಇದುವರೆಗೆ ಅರ್ಜಿ
ಬೆಂಗಳೂರು : ಕಾಂಗ್ರೆಸ್ ಟಿಕೆಟ್ ಅರ್ಜಿ ಸಲ್ಲಿಕೆಗೆ ಇನ್ನು ಒಂದೇ ದಿನ ಬಾಕಿ ಇದ್ದು ಇಂದು ಆಕಾಂಕ್ಷಿಗಳು ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಮುಗಿಬಿದ್ದರು. ಸುಮಾರು 300 ಕ್ಕೂ ಹೆಚ್ಚು ಜನರು ಇದುವರೆಗೆ ಅರ್ಜಿ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಕೆಲವರು ಜನ-ಧನ ಬಲದ ಶಕ್ತಿ ಪ್ರದರ್ಶನ ನಡೆಸಿದರು. ನೂರಾರು ಬೆಂಬಲಿಗರ ಜೊತೆಗೆ ಬಂದು ಆಕಾಂಕ್ಷಿಗಳು ಟಿಕೆಟ್ ಗೆ ಅರ್ಜಿ ಸಲ್ಲಿಸಿದರು. ಕೆಲವರು ಈ ಸಂದರ್ಭದಲ್ಲಿ ಮುಹೂರ್ತಕ್ಕೂ ಆದ್ಯತೆ ನೀಡಿದ್ದರು. ಮಂಡ್ಯ,ಶಿವಮೊಗ್ಗ, ರಾಯಚೂರು, …
Read More »ಸಿದ್ದರಾಮಯ್ಯ ಅವರನ್ನು ಸ್ವಪಕ್ಷದವರೇ ಸೋಲಿಸುತ್ತಾರೆ: H.D.K.
ಬೆಂಗಳೂರು: ಮುಂಬರುವ ಚುನಾವಣೆಗೆ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ- ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಅವರು. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್‌ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ …
Read More »ದಿಲ್ಲಿ – ಹುಬ್ಬಳ್ಳಿ ನಡುವೆ ನಿತ್ಯ ವಿಮಾನ ಸೇವೆಗೆ ಚಾಲನೆ
ಹುಬ್ಬಳ್ಳಿ: ಬಹು ದಿನಗಳ ಬೇಡಿಕೆಯಾಗಿದ್ದ ದಿಲ್ಲಿ – ಹುಬ್ಬಳ್ಳಿ ವಿಮಾನಯಾನಕ್ಕೆ ಸೋಮವಾರ ಕೇಂದ್ರ ನಾಗರಿಕರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ಹಸುರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಇದೇ ವಿಮಾನದಲ್ಲಿ ಪ್ರಹ್ಲಾದ ಜೋಷಿ ದಿಲ್ಲಿಗೆ ತೆರಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನೂತನ ವಿಮಾನಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಹ್ಲಾದ ಜೋಷಿ, ಹುಬ್ಬಳ್ಳಿ-ದಿಲ್ಲಿ ನಡುವೆ ನೇರ ವಿಮಾನ …
Read More »ಮಕ್ಕಳ ದಿನಾಚರಣೆ: ಮಕ್ಕಳ ಕಲ್ಯಾಣ ಕಾರ್ಯ ನಿರ್ವಹಣೆ ನಮ್ಮೆಲ್ಲರ ಹೊಣೆ: ರಾಜ್ಯಪಾಲರು
ಬೆಂಗಳೂರು: ಮಕ್ಕಳ ಮಾನಸಿಕ, ಬೌದ್ಧಿಕ ಮತ್ತು ದೈಹಿಕ ಬೆಳವಣಿಗೆ ಹಾಗೂ ಶಿಸ್ತಿನ ದೃಷ್ಟಿಯಿಂದ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ರಾಜ್ಯಪಾಲರು ಥಾವರ್ ಚಂದ್ ಗೆಹಲೋತ್ ಹೇಳಿದರು. ಸೋಮವಾರ ಆಯೋಜಿಸಲಾಗಿದ್ದ ಮಕ್ಕಳ ದಿನಾಚರಣೆ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಮಗುವಿಗೆ ತನ್ನ ಮನೆಯೇ ಶಿಕ್ಷಣ, ಸಂಸ್ಕೃತಿ ಹಾಗೂ ಇಡೀ ಜೀವನ ಸಾಮರ್ಥ್ಯದ ಅಡಿಪಾಯ. ಆದ್ದರಿಂದ ಬಾಲ್ಯದಲ್ಲಿ ಹೇಳಿದ ಸ್ಪೂರ್ತಿದಾಯಕ ಕಥೆಗಳು, ಬೋಧನೆಗಳು ಮತ್ತು ಜ್ಞಾನವು ಮಗುವಿನ ಜೀವನದುದ್ದಕ್ಕೂ ಮಾರ್ಗದರ್ಶನ …
Read More »ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮತ್ತೆ ಇಡಿ ಮುಂದೆ ಹಾಜರಾದ ಡಿ.ಕೆ.ಶಿ.
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೋಮವಾರ ಮತ್ತೆ ದೆಹಲಿಯ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಫೆಡರಲ್ ಏಜೆನ್ಸಿ ಅವರ ಹೇಳಿಕೆಯನ್ನು ದಾಖಲಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ”ತನಿಖೆಗೆ ಸಂಬಂಧಿಸಿದಂತೆ ಸಂಸ್ಥೆಯು ಕೇಳಿದ ಎಲ್ಲಾ ದಾಖಲೆಗಳನ್ನು …
Read More »ಬೆಂಗಳೂರಿನ ವಿಮಾನ ನಿಲ್ದಾಣದ ಮೇಲೆ ಅದಾನಿ ಕಣ್ಣು!
ಬೆಂಗಳೂರು, ನ. 14: ಮಂಗಳೂರು, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗ ನಂತರ ಈಗ ಅದಾನಿ ಗ್ರೂಪ್ ಕಣ್ಣು ಬೆಂಗಳೂರು ವಿಮಾನ ನಿಲ್ದಾಣದ ಮೇಲೂ ಬಿದ್ದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಸ್ತುವಾರಿ, ಕಾರ್ಯ ನಿರ್ವಹಣೆ ಮಾಡುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಬಿಐಎಎಲ್) ಪಾಲನ್ನು ತೆಗೆದುಕೊಳ್ಳುವ ಬಗ್ಗೆ ಅದಾನಿ ಗ್ರೂಪ್ ಚಿಂತಿಸುತ್ತಿದೆ ಎಂದು ಈ ಬಗ್ಗೆ ತಿಳಿದಿರುವ ಉನ್ನತ ಮೂಲಗಳು ಮಾಹಿತಿ ನೀಡಿವೆ. ”ಅದಾನಿ …
Read More »
Laxmi News 24×7