ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಸಿಎಂ ಬೊಮ್ಮಾಯಿಯವರು ಉದ್ಘಾಟಿಸಿಮಾತನಾಡಿದರು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ. ಕರಾವಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಸಿ.ಆರ್.ಝೆಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. …
Read More »ಹೈಕೋರ್ಟ್ ಸಿಬ್ಬಂದಿಗೆ ಹನಿಟ್ರ್ಯಾಪ್: ಮಹಿಳೆಯರು ಸೇರಿ 10 ಮಂದಿ ಬಂಧನ
ಬೆಂಗಳೂರು: ಹೈಕೋರ್ಟ್ ಸಿಬ್ಬಂದಿಯೊಬ್ಬರಿಗೆ ಹನಿಟ್ರ್ಯಾಪ್ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಇಬ್ಬರು ಮಹಿಳೆಯರು ಸೇರಿ 10 ಮಂದಿ ಕಾಮಾಕ್ಷಿಪಾಳ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೊಡ್ಡಬಿದರಕಲ್ಲು ಶಿವಗಂಗಾ ಲೇಔಟ್ ನಿವಾಸಿ ಸಿದ್ದೇಶ್ ಅಲಿಯಾಸ್ ಸಿದ್ದು (26), ಗೊಲ್ಲರ ಹಟ್ಟಿಯ ಪೈಪ್‌ಲೈನ್ ರಸ್ತೆ ನಿವಾಸಿ ಅನು ಅಲಿಯಾಸ್ ಅನುರಾಧಾ (25), ಕಾಮಾಕ್ಷಿ ಪಾಳ್ಯದ ಗುಣ (23), ಇಂದಿರಾನಗರದ ಚೇತನ್ ಅಲಿಯಾಸ್ ಚೇತು (19), ಗಂಗೋನಹಳ್ಳಿಯ ರವಿಕುಮಾರ್ ಅಲಿ ಯಾಸ್ ಬಾಂಡ್ (25), ಶ್ರೀರಾಮಪುರದ ಪ್ರಶಾಂತ್ …
Read More »ಡಬಲ್ ಎಂಜಿನ್ ನ ವಂಚನೆಯಿಂದ ಗುಜರಾತ್ ಅನ್ನು ರಕ್ಷಿಸುತ್ತೇವೆ : ರಾಹುಲ್ ಗಾಂಧಿ
ನವದೆಹಲಿ : ಕಾಂಗ್ರೆಸ್ ಪಕ್ಷವು ಗುಜರಾತ್ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ ಡಬಲ್ ಎಂಜಿನ್ ನ ವಂಚನೆಯಿಂದ ಅವರನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಭಾನುವಾರ ಹೇಳಿದ್ದಾರೆ. 500 ರೂ.ಗಳಲ್ಲಿ ಎಲ್‌ಪಿಜಿ ಸಿಲಿಂಡರ್, ಯುವಕರಿಗೆ 10 ಲಕ್ಷ ಉದ್ಯೋಗ, 3 ಲಕ್ಷದವರೆಗಿನ ರೈತರ ಸಾಲ ಮನ್ನಾ, ನಾವು ಗುಜರಾತ್‌ನ ಜನರಿಗೆ ನೀಡಿದ 8 ವಚನ’ವನ್ನು ಈಡೇರಿಸುತ್ತೇವೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. …
Read More »ಸವದತ್ತಿ ಯಲ್ಲಮ್ಮ ದೇವಸ್ಥಾನ:100ಕ್ಕೂ ಅಧಿಕ ಅನಧಿಕೃತ ಅಂಗಡಿ ತೆರವು
ಸವದತ್ತಿ : ತಾಲೂಕಿನ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿರುವ 100 ಮೀ ಸುತ್ತಲಿನ ಅನಧಿಕೃತ ಬೀದಿ ಬದಿಯ ಸುಮಾರು ನೂರಕ್ಕೂ ಅಧಿಕ ಅಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ತೆರವು ಕಾರ್ಯಾಚರಣೆಯಿಂದ ವ್ಯಾಪಾರಿಗಳು ಮುಂದುವರೆಸದಂತೆ ಬುಧವಾರ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿ ಪ್ರಯೋಜನವಾಗದಿದ್ದಾಗ ಕೆಲ ಮುಖಂಡರುಗಳ ಮೊರೆ ಹೋದರೂ ಫಲಕಾರಿಯಾಗಲಿಲ್ಲ. ಗುರುವಾರ ಮುಂಜಾನೆಯಿಂದಲೇ ಕಾರ್ಯಚರಣೆ ಮುಂದುವರೆಸಲೆತ್ನಿಸಿದರು. ಅಧಿಕಾರಿಗಳ ಜೊತೆ ವ್ಯಾಪಾಸ್ಥರು ಕೆಲ ಸುತ್ತಿನ ಮಾತುಕತೆ ನಡೆದರೂ ಪ್ರಯೋಜನವಾಗಲಿಲ್ಲ. ಕಾರ್ಯಾಚರಣೆ ನಿಲ್ಲಿಸಲು ವ್ಯಾಪಾರಿಗಳು ಎಲ್ಲಿಲ್ಲದ ಪ್ರಯತ್ನದೊಂದಿಗೆ …
Read More »ಗಡಿ ಜನರಿಗಾಗಿ ಜೈ ಜೋಡಿಸಿ ನಡೆಯೋಣ: ಸಮನ್ವಯ ಸಭೆ ಫಲಪ್ರದ
ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಗಳಲ್ಲಿ ಸುಧಾರಣಾ ಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದ್ದು, ಇವುಗಳ ಅನುಷ್ಠಾನಕ್ಕೆ ಎರಡೂ ರಾಜ್ಯ ಸರ್ಕಾರಗಳಿಗೆ ರಾಜಭವನದ ಮೂಲಕ ಸೂಚನೆ ನೀಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ. ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಹಾಗೂ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್ ಕೋಶಿಯಾರಿ ಅವರ ನೇತೃತ್ವದಲ್ಲಿ ಕೊಲ್ಹಾಪುರದಲ್ಲಿ ಎರಡೂ ರಾಜ್ಯಗಳ ಅಧಿಕಾರಿಗಳ ಸಮನ್ವಯ ಸಭೆಯಲ್ಲಿ ಹಲವು ಸಂಗತಿಗಳ ವಿನಿಮಯ ನಡೆಯಿತು. ಗಡಿ ಜನರ ಜೀವನ ಸುಧಾರಣೆ ಹಾಗೂ …
Read More »ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು
ಬೆಂಗಳೂರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ನಂತರ ಇಂದು ಮೊದಲು ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರಿಗೆ ಭವ್ಯ ಸ್ವಾಗತ ನೀಡಲು ರಾಜ್ಯ ಕಾಂಗ್ರೆಸ್ ಸಜ್ಜಾಗಿದೆ. ಜೊತೆಗೆ ಸರ್ವೋದಯ ಸಮಾವೇಶ ಹೆಸರಿನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಸರ್ವೋದಯ ಸಮಾವೇಶ’ ಎಂದು ನಾಮಕರಣ ಮಾಡಲಾಗಿದೆ. ಖರ್ಗೆ …
Read More »ಅಲೋಕ್ ಕುಮಾರ್ ಯಾರು?.. ಪೊಲೀಸರ ಜೊತೆಗೆ ಶಾಸಕ ರೇಣುಕಾಚಾರ್ಯ ವಾಗ್ವಾದ … ವಿಡಿಯೋ!
ದಾವಣಗೆರೆ: ಸಹೋದರ ಮಗ ಚಂದ್ರು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂಪಿ ರೇಣುಕಾಚಾರ್ಯ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಇದೇ ವೇಳೆ ರೇಣುಕಾಚಾರ್ಯ ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಐ ಸಿದ್ದನಗೌಡರವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಸೊರಟೂರು ಬಳಿಯ ತುಂಗಾ ಕಾಲುವೆಯಲ್ಲಿ ಮೃತ ಚಂದ್ರು ಶವದೊಂದಿಗೆ ಪತ್ತೆಯಾದ ಕಾರನ್ನು ಈಗಾಗಲೇ ಪೋಲಿಸರ ವಶದಲ್ಲಿದೆ. ಚಂದ್ರು ಶವವಾಗಿ ಪತ್ತೆಯಾದ ಕಾರನ್ನು ಹೊನ್ನಾಳಿ ಪೋಲಿಸ್ ಠಾಣೆ ಬಳಿ ನಿಲ್ಲಿಸಲಾಗಿದ್ದು, …
Read More »ಹುಕ್ಕೇರಿ, ಸವದತ್ತಿ ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಇಲ್ಲ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು ಉಪಚುನಾವಣೆ ಘೋಷಣೆ ಮಾಡಿಲ್ಲ. ವಿಧಾನಸಭಾ ಚುನಾವಣೆಗೆ ಏಳು ತಿಂಗಳುಗಳು ಬಾಕಿ ಇರುವುದರಿಂದ ಉಪಚುನಾವಣೆ ಘೋಷಣೆ ಮಾಡಿಲ್ಲ ಎಂದು ಹೇಳಲಾಗಿದೆ. ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಮತ್ತು ಸವದತ್ತಿ ಯಲ್ಲಮ್ಮ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸದಿರಲು ಕೇಂದ್ರ ಚುನಾವಣೆ ಆಯೋಗ ನಿರ್ಧರಿಸಿದಂತಿದೆ. ಬರುವ ವರ್ಷದ ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆಗೆ ” ಸಾರ್ವತ್ರಿಕ …
Read More »ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡಿ
ಬೆಳಗಾವಿ : ಸರ್ಕಾರಿ ನೌಕರರಿಗೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಸೈಕಲ್ ರ್‍ಯಾಲಿ ನಡೆಸಿದ ಸಾರಿಗೆ ನೌಕರರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕೂಟದ ಅಧ್ಯಕ್ಷ ಆರ್. …
Read More »ಹವಾಮಾನ ಪ್ರತಿಕೂಲ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ನವದೆಹಲಿ: ರಾಷ್ಟ್ರದ ರಾಜಧಾನಿಯ ಹವಾಮಾನ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಲೇ ಸಾಗಿದೆ. ಗಾಳಿಯ ಗುಣಮಟ್ಟ ಅಪಾಯಕಾರಿ ಹಂತ ತಲುಪಿರುವ ಹಿನ್ನೆಲೆಯಲ್ಲಿ 8 ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಸ್ತುತ ದೆಹಲಿಯ ಹವಾಮಾನ ಸಿಗರೇಟ್ ಹೊಗೆಗಿಂತ ಮಾರಕವಾಗಿದೆ ಎಂದು ಏಮ್ಸ್ ಮಾಜಿ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ. ತಂಬಾಕಿನ ಹೊಗೆಯಷ್ಟೇ ಅಪಾಯಕಾರಿಯಾಗಿರುವ ಈ ಹವೆ ಸೇವನೆ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಬೀರುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ. ವಿಶ್ವದ ಅತ್ಯಂತ ಮಾಲಿನ್ಯ …
Read More »
Laxmi News 24×7