Breaking News

ರಾಷ್ಟ್ರೀಯ

ಕೃಷಿ ವಿವಿ ಅಮೃತ ಮಹೋತ್ಸ ಮತ್ತು ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಕುಲುಪತಿಗಳಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ… ಸಿಎಂ ಕುಲಪತಿಗಳ ವಿರುದ್ಧ ದೂರು..

ಕೃಷಿ ವಿವಿ ಅಮೃತ ಮಹೋತ್ಸ ಮತ್ತು ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಕುಲುಪತಿಗಳಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ… ಸಿಎಂ ಕುಲಪತಿಗಳ ವಿರುದ್ಧ ದೂರು..  ಕಳೆದ ಎರಡು ದಿನಗಳ ಹಿಂದೆ ಧಾರವಾಡ ಕೃಷಿ ವಿವಿಯಲ್ಲಿ ನಡೆದಿದ್ದ ಕೃಷಿವಿವಿ ಅಮೃತ ಮಹೋತ್ಸ ಮತ್ತು ಹಳೆ ವಿದ್ಯಾರ್ಥಿಗಳ‌ಸಮ್ಮಿಲನ ಕಾರ್ಯಕ್ರಮದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರಿಗೆ ವೇದಿಕೆಯ ಮೇಲೆ ಮಾತನಾಡಲು ಅವಕಾಶ ನೀಡದೇ ಕುಲಪತಿಗಳ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದ್ದು, …

Read More »

ಕುಂಭಮೇಳಕ್ಕೆ ಹುಬ್ಬಳ್ಳಿಯಿಂದ ವಿಶೇಷ ರೈಲು !!

  : ಹೀಗಿದೆ ವೇಳಾಪಟ್ಟಿ – KUMBH MELA ಕುಂಭಮೇಳಕ್ಕೆ ಪ್ರಯಾಣ ಬೆಳೆಸಲು ಹುಬ್ಬಳ್ಳಿಯಿಂದ ಎರಡು ವಿಶೇಷ ರೈಲುಗಳನ್ನು ಪ್ರಾರಂಭಿಸಲಾಗಿದೆ. ಈ ರೈಲು ಸಂಚಾರದ ಹೆಚ್ಚಿನ ವಿವರಗಳು ಇಲ್ಲಿವೆ. ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ರೈಲು ಸಂಖ್ಯೆ 07379 – ಎಸ್ಎಸ್ಎಸ್ ಹುಬ್ಬಳ್ಳಿ-ತುಂಡ್ಲಾ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 20 ರಂದು (ಸೋಮವಾರ) 00:45 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು, ಜನವರಿ 22 …

Read More »

ಸೈಫ್​ ಅಲಿ ಖಾನ್ ಮೇಲಿನ ದಾಳಿ ಆಘಾತ ತಂದಿದೆ: ನಟಿ ಶಿಲ್ಪಾ ಶೆಟ್ಟಿ

ರಾಯಚೂರು: ಬಾಲಿವುಡ್ ನಟ ಸೈಫ್​ ಅಲಿ ಖಾನ್ ಮೇಲೆ ನಡೆದಿರುವ ದಾಳಿ ಆಘಾತ ಮೂಡಿಸಿದೆ ಎಂದು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಹೇಳಿದ್ದಾರೆ. ರಾಯಚೂರಿನಲ್ಲಿ ಖಾಸಗಿ ಜ್ಯುವೆಲ್ಲರಿ ಶಾಪ್‌ ಉದ್ಘಾಟಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಿಂದ ಶಾಕ್​​​​​​ ಆಗಿದ್ದೇನೆ. ಅವರು ಚೇತರಿಸಿಕೊಂಡು ಬೇಗ ಗುಣಮುಖವಾಗಲಿದ್ದಾರೆ. ಮುಂಬೈ ಪೊಲೀಸರು ಈ ಘಟನೆಗೆ ಕಾರಣನಾದವರನ್ನು ಪತ್ತೆ ಹಚ್ಚಿ ಬಂಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕನ್ನಡದ ಸಿನಿಮಾಗಳಲ್ಲಿ ನಟಿಸಲು ಅತ್ಯಂತ ಉತ್ಸುಕಳಾಗಿದ್ದೇನೆ. …

Read More »

ಬೀದರ್​ ಎಟಿಎಂ ದರೋಡೆಕೋರರು ಹೈದರಾಬಾದ್​ನಲ್ಲಿ ಪತ್ತೆ

ಹೈದರಾಬಾದ್​/ಬೀದರ್​: ಬೀದರ್​​ನಲ್ಲಿ ಗುರುವಾರ ಬೆಳಗ್ಗೆ ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್​ನಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಹಿಡಿಯುವ ವೇಳೆ ಮತ್ತೆ ಗುಂಡು ಹಾರಿಸಿದ್ದಾರೆ. ಮೂವರು ದರೋಡೆಕೋರರಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದಾರೆ. ಬೀದರ್​ನಲ್ಲಿ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಎಟಿಎಂಗೆ ಹಣ ತುಂಬಿಸಲು ಬ್ಯಾಂಕ್​ ಸಿಬ್ಬಂದಿ ತೆರಳಿದ್ದಾಗ, ದರೋಡೆಕೋರರು ಗುಂಡು ಹಾರಿಸಿ ಓರ್ವನನ್ನು ಕೊಂದು ಹಣದ ಸಮೇತ ಪರಾರಿಯಾಗಿದ್ದರು. ಪ್ರಕರಣ …

Read More »

ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಲಾಲಭಾಗನಲ್ಲಿ ಫಲ ಪುಷ್ಪ ಪ್ರದರ್ಶನ

ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ಲಾಲಭಾಗನಲ್ಲಿ ಫಲ ಪುಷ್ಪ ಪ್ರದರ್ಶನ 1 ಗಣರಾಜ್ಯೋತ್ಸವ ಅಂಗವಾಗಿ ಫಲ ಪುಷ್ಪ ಪ್ರದರ್ಶನ. 2 ಸಿ ಎಂ ಸಿದ್ದರಾಮಯ್ಯ ರಿಂದ ಚಾಲನೆ. 3 ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಇಂದಿನಿಂದ ಆರಂಭ 4 …ಜನವರಿ 16 ರಿಂದ 27ರವರೆಗೆ ನಡೆಯುವ ಪ್ರದರ್ಶನ. – ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಇಂದಿನಿಂದ ಅಂದರೆ ಜನವರಿ 16 ರಿಂದ 27 …

Read More »

9ನೇ ಕ್ಲಾಸ್‌ ವಿದ್ಯಾರ್ಥಿನಿ ಆತ್ಮಹತ್ಯೆ,

ಗದಗ, (ಜನವರಿ 16): ಹತ್ತಾರು ಕನಸು ಕಂಡಿದ್ದ 9ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡದ ಬಣಗಾರ ಕಾಲೋನಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕರ ಕಿರುಕುಳಕ್ಕೆ 9ನೇ ತರಗಿತಿ ಖುಷಿ ಪ್ರಾಣ ಕಳೆದುಕೊಂಡಿದ್ದಾಳೆ. ಖುಷಿ.. ಖುಷಿ ಖುಷಿಯಿಂದಾನೆ ದಿನಾಲು ಶಾಲೆಗೆ ಹೋಗುತ್ತಿದ್ದಳು. ಆದ್ರೆ, ಅಪ್ರಾಪ್ತ ಬಾಲಕರು ಖುಷಿಗೆ ಮಾರಕವಾಗಿದ್ದಾರೆ. ಹೌದು… ಅಪ್ರಾಪ್ತ ಬಾಲಕರ ಕಿರುಕುಳಕ್ಕೆ ಬೇಸತ್ತು ಖುಷಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮುದ್ದಿನ ಮಗಳ ಸಾವು ಕಂಡು …

Read More »

ಓಂಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ

ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಬೆಂಜ್ ಕಾರು ರಸ್ತೆ ದಾಟುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಲ್ಲಿ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಅಪಘಾತಕ್ಕೀಡಾದ ಕಾರನ್ನು ಜಪ್ತಿ ಮಾಡಲಾಗಿದೆ. ಶಾಸಕ ಕೆ.ಸಿ.ವೀರೇಂದ್ರ (kc veerendra) ಪಪ್ಪಿ ಕಾರು ಡಿಕ್ಕಿ ಹೊಡೆ ಪರಿಣಾಮ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ …

Read More »

ಜಾತಿಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಂಡ ಸಚಿವ ಸಂಪುಟ

ಬೆಂಗಳೂರು, ಜನವರಿ 16: ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಈ ಸಭೆಯಲ್ಲಿ ಬಹುನಿರೀಕ್ಷಿತ ಜಾತಿ ಗಣತಿ ವರದಿ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಜಾತಿಗಣತಿ ವರದಿ ಮುಚ್ಚಿದ ಲಕೋಟೆಯಲ್ಲಿರುವುದನ್ನು ತೆರೆಯಲು ತೀರ್ಮಾನಸಲಾಗಿದೆ. ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಮುಂದಿಡಲು ನಿರ್ಧರಿಸಲಾಗಿದೆ. ಆ ಮೂಲಕ ಕರ್ನಾಟಕವೇ ಎದುರು ನೋಡುತ್ತಿದ್ದ ಜಾತಿಗಣತಿ ವರದಿ ಬಗ್ಗೆ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ.ಇಂದಿನ ಸಚಿವ ಸಂಪುಟದಲ್ಲೇ ಜಾರಿಗಣತಿ ವರದಿ …

Read More »

ನೋಟಿಸ್​ ಕೊಡುವ ಅಧಿಕಾರ ಅವರಿಗಿದೆ. ಕೊಟ್ಟಿದ್ದರೆ, ನೋಟಿಸ್​ಗೆ ನಾನು ಉತ್ತರ ಕೊಡುತ್ತೇನೆ. ನೋಟಿಸ್ ಕೊಟ್ಟ ಕೂಡಲೇ ದೊಡ್ಡ ಅನಾಹುತ ಏನೂ ಆಗುವುದಿಲ್ಲ.

ಬೆಂಗಳೂರು: ಕೆಪಿಸಿಸಿಯಿಂದ ನೋಟಿಸ್​ ಕೊಟ್ಟಾಕ್ಷಣ ಯಾವುದೇ ದೊಡ್ಡ ಅನಾಹುತ ಆಗುವುದಿಲ್ಲ. ಅದಕ್ಕೆ ಸ್ಪಷ್ಟ ಉತ್ತರವನ್ನು ಅಧ್ಯಕ್ಷರ ಮುಂದೆ ನೀಡಲಾಗುವುದು ಎಂದು ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಮಾತನಾಡಿ ಅವರು, ನೋಟಿಸ್​ ಕೊಡುವ ಅಧಿಕಾರ ಅವರಿಗಿದೆ. ಕೊಟ್ಟಿದ್ದರೆ, ನೋಟಿಸ್​ಗೆ ನಾನು ಉತ್ತರ ಕೊಡುತ್ತೇನೆ. ನೋಟಿಸ್ ಕೊಟ್ಟ ಕೂಡಲೇ ದೊಡ್ಡ ಅನಾಹುತ ಏನೂ ಆಗುವುದಿಲ್ಲ. ಕೆಪಿಸಿಸಿ ಆಕಾಂಕ್ಷಿ ಎಂದು ನಾನು ಎಲ್ಲಿಯೂ ಹೇಳಿಲ್ಲ. ಈ ಕುರಿತು ವಿಡಿಯೋ ಕೂಡ ನಮ್ಮ ಬಳಿ …

Read More »

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್

ಬಳ್ಳಾರಿ, ಜನವರಿ 16: ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಂಜುನಾಥ್ (26) ಮೇಲೆ ಗುರುವಾರ ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ. ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ, ಹೆಡ್ …

Read More »