ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದ್ದು. ಒತ್ತುವಾರಿಯಾಗಿದ್ದ ಗಣೇಶ ಮಂದಿರ ಮುಂಭಾಗದ ತಗಡಿನ ಶೆಡ್ ತೆರವಿಗೆ ದಕ್ಷಿಣ ಶಾಸಕ ಅಭಯ್ ಪಾಟೀಲ್‍ರ ಮನವಲಿಕೆ ಹಿನ್ನೆಲೆ ದೇವಸ್ಥಾನ ಮಂಡಳಿಯವರು ಒಪ್ಪಿಗೆ ಸೂಚಿಸಿದರು. : ಹೌದು ಬೆಳಗಾವಿಯ ಬಸವೇಶ್ವರ ವೃತ್ತದ ಬಳಿಯ ಗಣೇಶ ದೇವಸ್ಥಾನ ಎದುರು ಹಾಕಲಾಗಿದ್ದ ತಗಡಿನ ಶೆಡ್‍ನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ರಾತ್ರಿ ತೆರವು ಮಾಡಿದ್ದಾರೆ. ದೇವಸ್ಥಾನ ಆಡಳಿತ ಮಂಡಳಿಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. …
Read More »KSRTC: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ₹50 ಲಕ್ಷ ಪ್ರೀಮಿಯಂ ರಹಿತ ಅಪಘಾತ ವಿಮೆ
ಬೆಂಗಳೂರು: ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ₹50 ಲಕ್ಷದ ತನಕ ಅಪಘಾತ ವಿಮಾ ಸೌಲಭ್ಯ ದೊರಕಿಸುವ ಯೋಜನೆಯನ್ನು ನಿಗಮ ಜಾರಿಗೆ ತಂದಿದೆ. ಈ ಸಂಬಂಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಜತೆ ಒಡಂಬಡಿಕೆಯನ್ನು ಕೆಎಸ್‌ಆರ್‌ಟಿಸಿ ಬುಧವಾರ ಮಾಡಿಕೊಂಡಿದೆ. ನಿಗಮದ ಅಧ್ಯಕ್ಷ ಚಂದ್ರಪ್ಪ ಸಮ್ಮುಖದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಎಸ್‌ಬಿಐ ಉಪ ಪ್ರಧಾನ ವ್ಯವಸ್ಥಾಪಕ ಪಂಕಜ್ ತಪ್ಲಿಯಾಲ್ ಒಪ್ಪಂದಕ್ಕೆ ಸಹಿ ಹಾಕಿದರು. ಅಪಘಾತದಲ್ಲಿ ಸಿಬ್ಬಂದಿ ಮೃತಪಟ್ಟರೆ ಅವಲಂಬಿತರಿಗೆ ಈವರೆಗೆ ಪರಿಹಾರ ಸಿಗುತ್ತಿರಲಿಲ್ಲ. ಹೊಸ …
Read More »‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!
ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮತ್ತು ರಿಷಬ್ ಶೆಟ್ಟಿ ರಚನೆ-ನಿರ್ದೇಶನದಲ್ಲಿ ಮೂಡಿಬಂದು ಜಗತ್ತಿನಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕಾಂತಾರಕ್ಕೆ ಈಗಾಗಲೇ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ದಿನೇದಿನೆ ಚಿತ್ರದ ಕುರಿತು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದಾಗ್ಯೂ ಇಬ್ಬರು ಸ್ಟಾರ್ ಕಲಾವಿದರು ಮೌನವಹಿಸಿರುವುದು ಸಿನಿಪ್ರಿಯರಲ್ಲಿ ಕುತೂಹಲ ಕೆರಳಿಸಿದೆ. ಕಾಂತಾರ ಚಿತ್ರದ ಕುರಿತು ಸ್ಯಾಂಡಲ್ವುಡ್ ಜತೆಗೆ ದಕ್ಷಿಣ ಭಾರತದ ಇತರ ಚಿತ್ರರಂಗಗಳಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೆ ಬಾಲಿವುಡ್ನಲ್ಲಿ ಇದುವರೆಗೂ ಯಾವುದೇ ಕನ್ನಡ ಸಿನಿಮಾ ಮಾಡದ …
Read More »ರೀವೆಂಜ್ ಗಾಗಿ ಹುಬ್ಬಳ್ಳಿಯಲ್ಲಿ ಬಿತ್ತು ಮತ್ತೊಂದು ಹೆಣ
ಆಸ್ಪತ್ರೆಯ ಶವಾಗಾರದ ಮುಂದೆ ನಿಂತು ಅಗಲಿದ ಗೆಳೆಯನ ಅಂತಿಮ ದರ್ಶನಕ್ಕೆ ಬಂದಿರೋ ಗೆಳೆಯರು,ಈ ಕೊಲೆ ಮಾಡಿದ್ದು ಕೇವಲ ಮೂರು ಜನರು ಮಾತ್ರವಲ್ಲ ಇನ್ನು ಕೆಲವರು ಇದ್ದಾರೆ ಎಂದು ಆರೋಪ ಮಾಡುತ್ತಿರೋ ಸಂಬದಿಕರು,ಶವಾಗಾರದ ಮುಂದೆ ಗೆಳೆಯರ ನಡುವೆ ಗುಸು ಗುಸು ಮಾತುಗಳು, ಈ ಎಲ್ಲ ದ್ರಶ್ಯಗಳಿಗೆ ಸಾಕ್ಷಿಯಾಗಿದ್ದು ಆ ಯುವಕನ ಸಾವು,ಅಷ್ಟಕ್ಕೂ ಇದೇನು ಕೊಲೆಯ ಕಹಾನಿ ಅಂತೀರಾ ಈ ಸ್ಟೋರಿಯನ್ನು ಒಮ್ಮೆ ನೋಡಿ… ಹೀಗೆ ಫೋಟೋ ದಲ್ಲಿ ಕಾಣುತ್ತಿರೋ ಈತನ ಹೆಸರು …
Read More »ಸರಕಾರ, ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಲೋಕಾಯುಕ್ತದಲ್ಲಿ ದಾಖಲಾಗುವ ಎಫ್‌ಐಆರ್‌ಗಳನ್ನು 24 ಗಂಟೆಯೊಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರಕಾರ ಹಾಗೂ ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಪೀಠ ಮಂಗಳವಾರ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ವಾದ ಆಲಿಸಿದ …
Read More »ಹಾಲಿ ಶಾಸಕರಲ್ಲಿ ಗೆಲ್ಲೋರ್‍ಯಾರು? ಸೋಲೋರ್‍ಯಾರು? 40 ಶಾಸಕರ ಮರು ಆಯ್ಕೆ ಸುಲಭವಲ್ಲ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಆಂತರಿಕ ಸಮೀಕ್ಷೆ ಮಾಡಿಸಿದ್ದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಹಾಲಿ ಶಾಸಕರ ಪೈಕಿ ಮತ್ತೆ ಗೆಲ್ಲೋರೆಷ್ಟು-ಸೋಲೋರೆಷ್ಟು ಎಂಬ ಆತಂಕ ಶುರುವಾಗಿದೆ. ಮೂರೂ ಪಕ್ಷಗಳು ಆಂತರಿಕವಾಗಿ ನಡೆಸಿರುವ ಸಮೀಕ್ಷೆಯಲ್ಲಿ ಈಗಿರುವ ಹಾಲಿ ಶಾಸಕರ ಪೈಕಿ ಬಿಜೆಪಿ 20, ಕಾಂಗ್ರೆಸ್ 15 ಹಾಗೂ ಜೆಡಿಎಸ್‌ನ 5 ಶಾಸಕರ ಗೆಲುವು ಕಷ್ಟ ಎಂಬ ಮಾಹಿತಿ ಲಭಿಸಿದೆ. ಹೀಗಾಗಿ, ಆ ಕ್ಷೇತ್ರಗಳಲ್ಲಿ ಗೆಲುವಿಗೆ …
Read More »ಗರ್ಭಕೋಶಕ್ಕೆ ಕತ್ತರಿ ಪ್ರಕರಣ: ಸಂತ್ರಸ್ತ ಮಹಿಳೆಯರಿಂದ ಅಹೋರಾತ್ರಿ ಧರಣಿ
ಹಾವೇರಿ: ಅನಧಿಕೃತವಾಗಿ ಗರ್ಭಕೋಶದ ಚಿಕಿತ್ಸೆಗೊಳಗಾಗಿದ್ದ ಮಹಿಳೆಯರು ‘ವಿಶೇಷ ಆರ್ಥಿಕ ಪ್ಯಾಕೇಜ್’ ಘೋಷಿಸುವಂತೆ ಆಗ್ರಹಿಸಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಅಹೋರಾತ್ರಿ ಧರಣಿ ನಡೆಸಿದರು. ರಾಣೆಬೆನ್ನೂರಿನ ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿಯಾಗಿದ್ದ ಡಾ.ಪಿ. ಶಾಂತ ಅವರು 1522 ಬಡ ಮಹಿಳೆಯರ ಗರ್ಭಕೋಶವನ್ನು ಅನಧಿಕೃತವಾಗಿ ತೆಗೆದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗರ್ಭಕೋಶ ತೆಗೆದಿರುವ ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನೂರಾರು ಮಹಿಳೆಯರು ಆಗ್ರಹಿಸಿದರು. ಕಳೆದ …
Read More »ಪುತ್ತೂರು: ಸರಣಿ ಕಳ್ಳತನ ಪ್ರಕರಣ ಅಂತಾರಾಜ್ಯ ಕಳ್ಳನ ಸೆರೆ
ಪುತ್ತೂರು: ಕಳೆದ ವರ್ಷದ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್ ನಿವಾಸಿ ಆರೋಪಿ ಮಹಮ್ಮದ್ ಕೆ.ಯು. (42)ಬಂಧಿತ ಆರೋಪಿ. ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಸವಣೂರು ಹಾಗೂ …
Read More »ಮಳವಳ್ಳಿಯಲ್ಲಿ ಅತ್ಯಾಚಾರ ಪ್ರಕರಣ: ಡಿಡಿಪಿಐಗೆ ಬಿಇಒ ಸಲ್ಲಿಸಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ
ಮಳವಳ್ಳಿ: ಟ್ಯೂಷನ್ಗೆ ಹೋದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಅನಧಿಕೃತ ಟ್ಯೂಷನ್ಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಅಲ್ಲದೆ, ಬಾಲಕಿಯ ಮೇಲೆ ಕೃತ್ಯ ಎಸಗಿದ ಆರೋಪಿ ಕಾಂತರಾಜು ಶಿಕ್ಷಕನೇ ಅಲ್ಲ ಮತ್ತು ಟ್ಯೂಷನ್ ಸೆಂಟರ್ ಅಧಿಕೃತವು ಅಲ್ಲ ಎಂಬ ಸಂಗತಿಯು ಬಯಲಾಗಿದೆ. ಟ್ಯೂಷನ್ಗೆ ತೆರಳಿದ್ದ 10 ವರ್ಷದ ಬಾಲಕಿ ಮೇಲೆ ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸಂಸ್ಥೆಯ ಮೇಲ್ವಿಚಾರಕನಿಂದಲೇ ಅತ್ಯಾಚಾರ ನಡೆದಿತ್ತು. ಅಲ್ಲದೆ, …
Read More »ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿಸಬೇಕು; ಸಾಂಕೇತಿಕ ಧರಣಿ 21ರಿಂದ
ಮೀಸಲಾತಿಗೆ ಒತ್ತಾಯ; ಸಾಂಕೇತಿಕ ಧರಣಿ 21ರಿಂದ ಮೂಡಲಗಿ: ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಮೂಡಲಗಿ ತಾಲ್ಲೂಕು ವ್ಯಾಪ್ತಿಯ 10 ಸಾವಿರಕ್ಕೂ ಅಧಿಕ ಸಂಖ್ಯೆಯ ಉಪ್ಪಾರ ಸಮಾಜ ಜನರಿಂದ ಅ. 21ರಂದು ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಗುವುದು ಎಂದು ಉಪ್ಪಾರ ಸಮಾಜದ ಮುಖಂಡ ಬಿ.ಬಿ. ಹಂದಿಗುಂದ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಈರಣ್ಣ ದೇವಸ್ಥಾನದಿಂದ ಪಾದಯಾತ್ರೆಯ ನಂತರ …
Read More »
Laxmi News 24×7