ನವದೆಹಲಿ/ಬೆಂಗಳೂರು: ಖಾಸಗಿ ವ್ಯಕ್ತಿಯೊಬ್ಬರು ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಹ ಮೊದಲು ಒಪ್ಪಿಗೆ ಸೂಚಿಸಿತ್ತು. ಆದ್ರೆ ವಿಚಾರಣೆ ಕೈಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದೆ. 2016ರಲ್ಲಿ ಸ್ಥಾಪಿಸಲಾದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಕನಕರಾಜು ಎಂಬುವರು …
Read More »ಬಿಜೆಪಿಯಿಂದ ರಾಜ್ಯ ಪ್ರವಾಸ: ಜನಸಂಕಲ್ಪ ಯಾತ್ರೆಗೆ ನಾಳೆ ರಾಯಚೂರಿನಲ್ಲಿ ಚಾಲನೆ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಗೆ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಕೇಸರಿ ಅಲೆ ಎಬ್ಬಿಸಲು ಬಿಜೆಪಿ ಮುಂದಾಗಿದ್ದು, ಜನಸಂಕಲ್ಪ ಯಾತ್ರೆಯನ್ನು ಆರಂಭಿಸುತ್ತಿದೆ. ನಾಳೆ ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆ ಆರಂಭಗೊಳ್ಳಲಿದೆ. ನಾಳಿನ ಯಾತ್ರೆಯ ಆರಂಭದಲ್ಲಿ 50 ಸಾವಿರ ಜನ ಸೇರಲಿದ್ದು, ರಾಜ್ಯದಲ್ಲಿ ಎಲ್ಲರ ಗಮನ ಸೆಳೆಯುವ ಯಾತ್ರೆ ಇದಾಗಲಿದೆ. …
Read More »3 ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿತ
ಬೆಂಗಳೂರು: ಮೂರು ತಿಂಗಳ ಹಿಂದಷ್ಟೆ ಉದ್ಘಾಟನೆಗೊಂಡಿದ್ದ ಅಂಡರ್ ಪಾಸ್ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಂಡರ್ ಪಾಸ್ ಕಳಪೆ ಕಾಮಗಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಂದಲಹಳ್ಳಿ ಬಳಿಯ ಅಂಡರ್ ಪಾಸ್ ಕುಸಿದಿದ್ದು, ಪ್ರಯಾಣಿಕಾರಾದಿಯಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 40% ಕಮಿಷನ್ ದಂಧೆಯ ಎಫೆಕ್ಟ್ ಎಂದು ಅಂಡರ್ ಪಾಸ್ ಕುಸಿತದ ಬಗ್ಗೆ ಸಾರ್ವಜನಿಕರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More »ಕೋಟೆನಾಡು ಪ್ರವೇಶಿಸಿದ ‘ಭಾರತ್ ಜೋಡೊ ಯಾತ್ರೆ’
ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆ ಸೋಮವಾರ ಕೋಟೆನಾಡು ಪ್ರವೇಶಿಸಿದ್ದು, ಹಿರಿಯೂರು ನಗರದ ಹೊರವಲಯದಲ್ಲಿ ವಿಶ್ರಾಂತಿ ಪಡೆಯುತ್ತಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು, ಕೆಂಕೆರೆ ಮಾರ್ಗದಲ್ಲಿ ಸೋಮವಾರ ಬೆಳಿಗ್ಗೆ ಪಾದಯಾತ್ರೆ ನಡೆಸಿದ ರಾಹುಲ್, ವಾಹನದಲ್ಲಿ ಹಿರಿಯೂರು ತಲುಪಿದರು. ವಿಶೇಷ ವಾಹನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಅವರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿ ಚರ್ಚಿಸಿದರು. ಸಂಜೆ 4ಕ್ಕೆ ಹಿರಿಯೂರಿನ ತಹಾ ಪ್ಯಾಲೇಸ್ ಖಾಸಗಿ ಕಲ್ಯಾಣ ಮಂಪಟದಿಂದ ಪಾದಯಾತ್ರೆ …
Read More »ಪಕ್ಷಕ್ಕೆ ಹೊಸ ಹೆಸರು ಚಿಹ್ನೆ ಸೂಚಿಸಿದ ಶಿವಸೇನೆಯ ಉದ್ಧವ್ ಬಣ
ಹೊಸದಿಲ್ಲಿ: ಮುಂಬೈನ ಅಂಧೇರಿ ಪೂರ್ವದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಶಿವಸೇನೆಯ ಉದ್ಧವ್ ಠಾಕ್ರೆ ಬಣವು ಮೂರು ಹೆಸರು ಮತ್ತು ಚಿಹ್ನೆಗಳ ಪಟ್ಟಿಯನ್ನು ನೀಡಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಮೊದಲ ಆಯ್ಕೆಯ ಹೆಸರು ‘ಶಿವಸೇನಾ ಬಾಳಾಸಾಹೇಬ್ ಠಾಕ್ರೆ’ ಮತ್ತು ‘ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎರಡನೇ ಆಯ್ಕೆಯಾಗಿದೆ ಎಂದು ಅವರು ಹೇಳಿದರು. ಚಿಹ್ನೆಯ ಆಯ್ಕೆ ವಿಚಾರದಲ್ಲಿ ತ್ರಿಶೂಲ ತನ್ನ ಮೊದಲ ಆಯ್ಕೆಯ ಚಿಹ್ನೆ ಮತ್ತು ಸುರ್ಯೋದಯದ ಚಿತ್ರ ಎರಡನೇ …
Read More »ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ ಹೇಳಿದ್ದೇನು?
ಹೈದರಾಬಾದ್ : ಇಬ್ಬರು ಮಕ್ಕಳ ನಡುವಿನ ಅಂತರವನ್ನು ಕಾಯ್ದುಕೊಳ್ಳಲು ಮುಸ್ಲಿಂ ಸಮುದಾಯದವರು ಕುಟುಂಬ ಯೋಜನಾ ಸಾಧನ ಕಾಂಡೋಮ್ ಅನ್ನು ಹೆಚ್ಚು ಬಳಸುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಆರ್‌ಎಸ್‌ಎಸ್ ಸರಸಂಘ ಚಾಲಕ್ ಮೋಹನ್ ಭಾಗವತ್ ಅವರ ಇತ್ತೀಚಿನ ಜನಸಂಖ್ಯೆಯ ಅಸಮತೋಲನದ ಹೇಳಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಭಾಗವತ್ ಅವರು ಇದನ್ನು ಉಲ್ಲೇಖಿಸುವುದಿಲ್ಲ ಮತ್ತು ಜನಸಂಖ್ಯೆಯ ಬೆಳವಣಿಗೆಯನ್ನು ಚರ್ಚಿಸುವ ಮೊದಲು ಅವರು …
Read More »ತಡರಾತ್ರಿ ಆಗಮಿಸಿದ ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ B.L. ಸಂತೋಷ್ ಶಾಲು ಹೊದೆಸಿ ಸ್ವಾಗತಿಸಿದ ಬಾಲಚಂದ್ರ ಜಾರಕಿಹೊಳಿ ಇಂದು ಕನ್ಹೇರಿ ಮಠದ ಸಮಾವೇಶದಲ್ಲಿ ಭಾಗಿ
ಬೆಳಗಾವಿ – ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬೆಳಗಾವಿಗೆ ಆಗಮಿಸಿದ್ದಾರೆ. ಭಾನುವಾರ ರಾತ್ರಿ 11 ಗಂಟೆ ಹೊತ್ತಿಗೆ ಅವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಬೆಳಗಾವಿಗೆ ತಲುಪಿದರು. ಮಾಜಿ ಸಚಿವ, ಕೆಎಂಎಫ್ ಚೇರಮನ್ ಬಾಲಚಂದ್ರ ಜಾರಕಿಹೊಳಿ ಶಾಲು ಹೊದೆಸಿ ಸಂತೋಷ್ ಅವರನ್ನು ಸ್ವಾಗತಿಸಿದರು. ಈ ವೇಳೆ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸುರಾನಾ, ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಮಹಾಂತೇಶ ದೊಡ್ಡಗೌಡರ್, ಬಿಜೆಪಿ ಜಿಲ್ಲಾಧ್ಯಕ್ಷರಾದ …
Read More »ರಾಜ್ಯ ಸರ್ಕಾರದಿಂದ ಗ್ರಾಮಲೆಕ್ಕಿಗರ ಹುದ್ದೆಯ ನೇಮಕಾತಿ ವಿಧಾನ ಬದಲು : ಇನ್ಮುಂದೆ ‘ಸ್ಪರ್ಧಾತ್ಮಕ ಪರೀಕ್ಷೆ’ ಮೂಲಕ ಆಯ್ಕೆ
ಬೆಂಗಳೂರು: ಈವರೆಗೆ ಗ್ರಾಮಲೆಕ್ಕಿಗರ ಹುದ್ದೆಗೆ ( Village Accountant Recruitment ) ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಅವರು ದ್ವಿತೀಯ ಪಿಯುಸಿಯಲ್ಲಿ ( Second PUC ) ಗಳಿಸಿದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದ್ರೇ ಇದೀಗ ಈ ವಿಧಾನಕ್ಕೆ ರಾಜ್ಯ ಸರ್ಕಾರ ( Karnataka Government ) ಬ್ರೇಕ್ ಹಾಕಲಿದೆ. ಇದರ ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಗ್ರಾಮಲೆಕ್ಕಿಗರ ನೇಮಕಕ್ಕೆ ಸಮಿತಿಯನ್ನು ರಚಿಸಿ ಆದೇಶಿಸಿದೆ. ಈ ಕುರಿತಂತೆ …
Read More »ಧಾರವಾಡ ಪ್ರವೇಶಕ್ಕೆ ಅನುಮತಿ ಸಿಗದಿದ್ದರೆ ಹೊರಗಿದ್ದೇ ಚುನಾವಣೆ ಕಣಕ್ಕಿಳಿಯುತ್ತೇನೆ: ಮಾಜಿ ಸಚಿವ ವಿನಯ ಕುಲಕರ್ಣಿ..
ಬೆಳಗಾವಿ: 2023ರ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಧಾರವಾಡ ಪ್ರವೇಶಕ್ಕೆ ಅನುಮತಿ ಸಿಗದಿದ್ದರೂ ಹೊರಗಿದ್ದೇ ಕಣಕ್ಕಿಳಿಯುತ್ತೇನೆ. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಿಸುವುದಿಲ್ಲ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಚುನಾವಣೆ ಬರುವಷ್ಟರಲ್ಲೇ, ನನಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡುವ ವಿಶ್ವಾಸವಿದೆ. ಒಂದು ವೇಳೆ ಪ್ರವೇಶಕ್ಕೆ ಅನುಮತಿ ಇಲ್ಲದಿದ್ದರೂ ಹೊರಗಿದ್ದೆ ಚುನಾವಣೆ ಕಣಕ್ಕಿಳಿಯುವೆ ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾಯಿಸುವುದಿಲ್ಲ ಎಂದರು. ಪಂಚಮಸಾಲಿ ಮೀಸಲು …
Read More »ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್
ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಬಗ್ಗೆ ಆಗಾಗ ಅಸಮಾಧಾನ ಹೊರಹಾಕುವ ನವರಸನಾಯಕ ಜಗ್ಗೇಶ್, ಮತ್ತೊಮ್ಮೆ ಕನ್ನಡ ಕಲಾವಿದರ ವಿರುದ್ಧ ಗರಂ ಆಗಿದ್ದಾರೆ. ಕಳೆದ ವಾರ ಬಿಡುಗಡೆಯಾದ ಜಗ್ಗೇಶ್ ಅವರ ತೋತಾಪುರಿ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಭಾಗಿಯಾಗಿ ಮಾತನಾಡಿದ ಜಗ್ಗೇಶ್, ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದರು. ಯಾವುದೋ ತಮಿಳು ಚಿತ್ರ ಅದ್ಭುತವಾಗಿ ಕಲೆಕ್ಷನ್ ಮಾಡುತ್ತಿದೆ. ರಜನಿಕಾಂತ್ರಂತಹ ಹಿರಿಯ ನಟರು ಅದ್ಭುತವಾಗಿ ಪ್ರಮೋಷನ್ ಮಾಡಿಕೊಟ್ಟಿದ್ದಾರೆ. ಆದರೆ …
Read More »
Laxmi News 24×7