Breaking News
Home / ರಾಷ್ಟ್ರೀಯ (page 679)

ರಾಷ್ಟ್ರೀಯ

ರಾಜ್​ಕುಮಾರ್​ ಸ್ಮಾರಕದ ಎದುರೇ ಹಾರ ಬದಲಿಸಿಕೊಂಡ ಐದು ಜೋಡಿಗಳು

ಡಾ. ರಾಜ್​ಕುಮಾರ್​ ಅವರು ನಿಧನರಾಗಿ ಸಾಕಷ್ಟು ವರ್ಷಗಳೇ ಕಳೆದಿವೆ. ಆದರೆ, ಅವರ ಅಭಿಮಾನಿ ಬಳಗ ಮಾತ್ರ ಕಡಿಮೆ ಆಗಿಲ್ಲ. ಅವರನ್ನು ಆರಾಧಿಸುವ ಲಕ್ಷಾಂತರ ಅಭಿಮಾನಿಗಳು ಇಂದಿಗೂ ಇದ್ದಾರೆ. ಇದು ಈಗ ಮತ್ತೊಮ್ಮೆ ಸಾಬೀತಾಗಿದೆ. ಐದು ಯುವ ಜೋಡಿಗಳು ರಾಜ್​ಕುಮಾರ್​ ಸಮಾಧಿ ಎದುರೇ ಹಾರ ಬದಲಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ಮದುವೆ ವಿಚಾರದಲ್ಲಿ ಎಲ್ಲರೂ ನಾನಾ ರೀತಿಯ ಕನಸು ಕಂಡಿರುತ್ತಾರೆ. ಕೆಲವರಿಗೆ ಅದ್ದೂರಿಯಾಗಿ ಮದುವೆ ಆಗಬೇಕು ಎನ್ನುವ ಆಸೆ ಇರುತ್ತದೆ. ಇನ್ನೂ ಕೆಲವರಿಗೆ …

Read More »

ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಮಂಡ್ಯ : ಎಣ್ಣೆ ಪಾರ್ಟಿಯಲ್ಲಿ ಶುರುವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚೆನ್ನನಹಳ್ಳಿಯಲ್ಲಿ ನಡೆದಿದೆ. 30 ವರ್ಷದ ಕುಮಾರ್ ಮೃತ ಯುವಕನಾಗಿದ್ದು, ಮಹದೇವು ಎಂಬ ಸ್ನೇಹಿತ ಕುಮಾರ್‍ನನ್ನು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ. ಈ ಇಬ್ಬರು ನಿನ್ನೆ ರಾತ್ರಿ ಮಹದೇವು ಮನೆಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಈ ವೇಳೆ ಯಾವುದೋ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಈ ವೇಳೆ ಇಬ್ಬರ ನಡುವಿನ ಜಗಳ …

Read More »

ಹಳ್ಳಕ್ಕೆ ಜಾರಿದ ಬಸ್: ಅಪಾಯದಿಂದ ಪಾರಾದ ಪ್ರಯಾಣಿಕರು

ಚಾಮರಾಜನಗರ): ಜೀಪ್ ಅಡ್ಡಲಾಗಿ ಬಂದು ಬಸ್ ಗೆ ಗುದ್ದಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್ ಟಿಸಿ ಬಸ್ ಹಳ್ಳಕ್ಕೆ ಜಾರಿದ ಘಟನೆ ತಾಲೂಕಿನ ಹಿಮವದ್ ಗೋಪಾಲ ಸ್ವಾಮಿ ಬೆಟ್ಟದ ಮಾರ್ಗ ಮಧ್ಯೆದಲ್ಲಿ ಭಾನುವಾರ ಮಧ್ಯಾಹ್ನ ಜರುಗಿದೆ. ಗೋಪಾಲ ಸ್ವಾಮಿ ಬೆಟ್ಟದಲ್ಲಿ ದೇವರ ದರ್ಶನ ಮುಗಿಸಿದ ನಂತರ ಬಸ್ ಕೆಳಗೆ ಇಳಿಯುತ್ತಿದ್ದ ವೇಳೆ ಬೆಟ್ಟದ ಮೇಲೆ ತೆರಳುತ್ತಿದ್ದ ಜೀಪ್ ವೊಂದು ಚಾಲಕ ನಿಯಂತ್ರಣ ತಪ್ಪಿ ಬಸ್ ನ ಬಲ ಭಾಗಕ್ಕೆ …

Read More »

ಉತ್ತರಕನ್ನಡದಲ್ಲಿ ಭಾರಿ Heavy rain ವರ್ಷಧಾರೆ : ಜನರಲ್ಲಿ ಆತಂಕ

ಕಾರವಾರ : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಕಾರವಾರ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ನಿನ್ನೆ ಮಧ್ಯಾಹ್ನದಿಂದ ಜಿಲ್ಲೆಯಲ್ಲಿ ವರ್ಷಧಾರೆ ಆರಂಭವಾಗಿದ್ದು, ಇಂದು ಕೂಡ ಮುಂದುವರೆದಿದೆ. ಕಾರವಾರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನು ಅರಬ್ಬೀ ಸಮುದ್ರದಲ್ಲಿ …

Read More »

ವ್ಯಕ್ತಿಯೊಬ್ಬರ ತಲೆಗೆ ಡಿಕೆಎಸ್ ಬಾರಿಸಿದ ಬೆನ್ನಲ್ಲೇ ವೈರಲ್​ ಆಯ್ತು ಸಿದ್ದರಾಮಯ್ಯ ಫೋಟೋ

ಬೆಂಗಳೂರು: ಕಳೆದ ಎರಡು ದಿನಗಳಿಂದ ಸೋಶಿಯಲ್ ಮಿಡಿಯಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು ವ್ಯಕ್ತಿಯೊಬ್ಬರ ತಲೆಗೆ ಹೊಡೆಯುವ ದೃಶ್ಯವೊಂದು ವೈರಲ್ ಆಗುತ್ತಿದೆ. ಡಿ.ಕೆ ಶಿವಕುಮಾರ್ ಕೈ ಮಾಡಿರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ ಕಾರ್ಯಕರ್ತನೊಬ್ಬ ಸಿದ್ದರಾಮಯ್ಯಯ ಹೆಗಲ ಮೇಲ ಕೈಹಾಕಿ ಸೆಲ್ಫಿ ತೆಗೆದುಕೊಳ್ಳುತ್ತಿರುವ ಫೋಟೋ ಒಂದು ಸಖತ್ ವೈರಲ್ ಆಗಿದೆ.   ‘ಮುಂದಿನ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​’ ಅನ್ನೋ ಚರ್ಚೆ ಮುನ್ನೆಲೆಯಲ್ಲಿರುವಾಗಲೇ ಈ …

Read More »

ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​​ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. …

Read More »

ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ, ರೋಗ ಬರಲ್ಲ : ದಾವಣಗೆರೆ ಸಂಸದ

ದಾವಣಗೆರೆ: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ. ರೋಗ ಬರಲ್ಲ! ಇದು ದಾವಣಗೆರೆಯ ಬಿಜೆಪಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ರೀತಿ. ದಿನದಿಂದ ದಿನಕ್ಕೆ ಪೆಟ್ರೋಲ್-ಡಿಸೇಲ್ ದರ ಹೆಚ್ಚಾಗುತ್ತಿದ್ದು ಜನರು ಸೈಕಲ್ ಮೇಲೆ ಓಡಾಡುವ ಸ್ಥಿತಿ ಬಂದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಂಸದರು, ಸೈಕಲ್‌ನಲ್ಲಿ ಓಡಾಡಿದರೆ ಏನ್ ಆಗುತ್ತೆ, ಒಳ್ಳೆಯ ವ್ಯಾಯಾಮ ಆಗುತ್ತೆ ಎಂದು ಲಘುವಾಗಿ ಉತ್ತರಿಸಿದರು. ಬಳಿಕ ಮಾತನಾಡಿದ ಅವರು …

Read More »

ಕೈ ನಾಯಕತ್ವದಲ್ಲಿ ಭಾರೀ ಬದಲಾವಣೆ? ಮಲ್ಲಿಕಾರ್ಜುನ ಖರ್ಗೆಗೆ ಪ್ರಮುಖ ಸ್ಥಾನ?

ನವದೆಹಲಿ: ಉತ್ತರಪ್ರದೇಶ ಮತ್ತು ಪಂಜಾಬ್‌ನಂತಹ ಪ್ರಮುಖ ರಾಜ್ಯಗಳ ಚುನಾವಣೆ ಹತ್ತಿರದಲ್ಲಿರುವುದರಿಂದ ಕಾಂಗ್ರೆಸ್‌ ತನ್ನ ಸಂಘಟನಾತ್ಮಕ ಸ್ವರೂಪದಲ್ಲಿ ಭಾರೀ ಬದಲಾವಣೆ ಮಾಡುವ ನಿರೀಕ್ಷೆಯಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಯುವ ನಾಯಕ ಸಚಿನ್‌ ಪೈಲಟ್‌, ಟಿ.ಎಸ್‌.ಸಿಂಗ್‌ ದೇವ್‌ ಅವರು ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಇಷ್ಟಾದರೂ ಗಾಂಧಿ ಕುಟುಂಬದವರೇ ಪಕ್ಷದ ಅಗ್ರನಾಯಕತ್ವ ಉಳಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ರಾಹುಲ್‌ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನ …

Read More »

ಮತ್ತೆ ಏರಿಕೆಯತ್ತ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ದೇಶಾದ್ಯಂತ ಇಂಧನ ಬೆಲೆಗಳು ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಪೆಟ್ರೋಲ್ ಪ್ರತಿ ಲೀಟರ್‌ಗೆ 100.91ರೂ ಮತ್ತು ಡೀಸೆಲ್ 89.88 ರೂಗೆ ಏರಿಕೆಯಾಗಿದೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್‍ಗೆ 109.24 ರೂ. ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಲೀಟರ್‌ ಗೆ 92.97 ರೂ ರಷ್ಟಾಗಿದೆ. ಗುರುವಾರ ಪೆಟ್ರೋಲಿಯಂ ಖಾತೆ ಸಚಿವರಾಗಿ ಅಧಿಕಾರಿ ವಹಿಸಿಕೊಂಡ ಹರ್ದೀಪ್ ಸಿಂಗ್ ಪುರಿ ಮಾತನಾಡಿ, …

Read More »

ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ: ಚಾಕು, ಗಾಂಜಾ ಸೇರಿದಂತೆ ಹಲವು ವಸ್ತು ವಶಕ್ಕೆ

ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿ ಕೈದಿಗಳ ಬಳಿ ಇದ್ದ ಗಾಂಜಾ, ಚಾಕು, ಮೊಬೈಲ್ಸ್, ಸಿಮ್ಸ್‌, ಮೆಮೋರಿ ಕಾರ್ಡ್‌ಗಳನ್ನು ವಶಪಡಿಸಿಕೊಂಡರು. ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕೈದಿಗಳು ಮೊಬೈಲ್ ಬಳಸಿ ಅಕ್ರಮ ಚಟುವಟಿಕೆಗಳ ನಡೆಸುತ್ತಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ. ಶನಿವಾರ ನಸುಕಿನ 5 ಗಂಟೆಗೆ ಶ್ವಾನ ದಳದ ಮೂಲಕ ಸಿಸಿಬಿ ತಂಡ ದಾಳಿ ನಡೆಸಿದೆ ಎಂದು ಸಿಸಿಬಿ …

Read More »