Breaking News

ರಾಷ್ಟ್ರೀಯ

ದೇಶಾದ್ಯಂತ 5 ವರ್ಷ PFI ನಿಷೇಧ, ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಕೇಂದ್ರ ಸರ್ಕಾರ ಪಿಎಫ್‌ಐ ಸಂಘಟನೆಯನ್ನು ಬ್ಯಾನ್ ಮಾಡಿದೆ. ಕೇಂದ್ರ ಸರ್ಕಾರದ ಗೃಹ ಇಲಾಖೆ ಪಿಎಫ್‌ಐ ಸಂಘಟನೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಐದು ವರ್ಷ ಬ್ಯಾನ್ ಮಾಡಿದೆ. ಕಾನೂನು ಬಾಹಿರ ಸಂಘಟನೆ ಎಂದು PFI(ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳು ಅಥವಾ ರಂಗಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಬ್ಯಾನ್ ಮಾಡಲಾಗಿದೆ ಎಂದು ಸರ್ಕಾರ ಘೋಷಿಸಿದೆ.   ಇತ್ತೀಚೆಗಷ್ಟೇ ಕರ್ನಾಟಕ ಸೇರಿದಂತೆ ದೇಶಾದ್ಯಂತ …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ*

  ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ …

Read More »

ಹುಕ್ಕೇರಿ ಬಳಿ ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಯುವಕರ ಸಾವು

ಬೆಳಗಾವಿ ಜಿಲ್ಲೆ): ಹುಕ್ಕೇರಿ ಸಮೀಪದ ಹೊಳೆಮ್ಮನ ಗುಡಿ ಹಳ್ಳದ ಹತ್ತಿರ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಬೈಕ್‌ ಮೇಲೆ ಹೊರಟಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದ ಮಲ್ಲನಗೌಡ ಯಲ್ಲನಗೌಡ ಪಾಟೀಲ (22) ಹಾಗೂ ಸಿದ್ಧಾರೂಢ ವೀರಭದ್ರ ಕರೋಶಿ (24) ಮೃತಪಟ್ಟವರು. ಭಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವ ಆಗಿದ್ದರಿಂದ ಅವರು …

Read More »

ಕಂದಾಯ ಭವನದ ಮೇಲೆ ಉಪಲೋಕಾಯುಕ್ತರ ದಿಢೀರ್ ದಾಳಿ

ಬೆಂಗಳೂರು: ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಕಂದಾಯ ಭವನದ ಮೇಲೆ ಉಪಲೋಕಾಯುಕ್ತರು ದಿಢೀರ್ ದಾಳಿ ನಡೆಸಿರುವ ಘಟನೆ ನಡೆದಿದೆ. ಉಪಲೋಕಾಯುಕ್ತ ನ್ಯಾ.ಫಣೀಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಕಂದಾಯ ಭವನದ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದ ವ್ಯಾಪಕವಾಗಿ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಕಂದಾಯ ಭವನದ ವಿರುದ್ಧ ಹಲವಾರು ದೂರುಗಳು ಬಂದಿದ್ದವು. ಈ ನಿಟ್ಟಿನಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ

Read More »

ಬಿಜೆಪಿಗೆ 2024ರವರೆಗೂ ಜೆ.ಪಿ.ನಡ್ಡಾ ಅಧ್ಯಕ್ಷ?

ನವದೆಹಲಿ: 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಜೆ.ಪಿ.ನಡ್ಡಾ ಅವರು ಇನ್ನೂ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ನಿಗದಿಯಂತೆ 2023ರ ಜ.20ರಂದು ನಡ್ಡಾ ಅವರ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳಲಿದೆ. ಆದರೆ, ಮುಂದಿನ ಲೋಕಸಭೆ ಚುನಾವಣೆಗೆ ಇನ್ನು ಎರಡೇ ವರ್ಷಗಳು ಬಾಕಿ ಇವೆ. ಅಲ್ಲದೇ, ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ನಡೆಯಲಿವೆ. ಹೀಗಾಗಿ, ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲು ಬಿಜೆಪಿ …

Read More »

ಗುಂಪು ಘರ್ಷಣೆ; ಬಾಲಕನಿಗೆ ಚೂರಿ ಇರಿತ

ಬೆಳಗಾವಿ: ಇಲ್ಲಿನ ಅನಂತಶಯನ ಗಲ್ಲಿಯಲ್ಲಿ ಸೋಮವಾರ ರಾತ್ರಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚೂರಿ ಇರಿತದಿಂದ ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕ್ಯಾಂಪ್‌ ಪ್ರದೇಶದ ನಿವಾಸಿ ಫರಾನ್‌ ಧಾರವಾಡಕರ (15) ಚೂರಿ ಇರಿತಕ್ಕೆ ಒಳಗಾದವ. ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಾನೆ. ‌ಗಾಯಗೊಂಡ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಫರಾನ್‌ ಹಾಗೂ ಇಬ್ಬರು ಸ್ನೇಹಿತರು ಬೈಕ್‌ ಮೇಲೆ ಹೊರಟಿದ್ದರು. ನಗರದ ಅಂಬಾ ಭವಾನಿ ಮಂದಿರದ ಹತ್ತಿರ 10 ಯುವಕರ …

Read More »

ಕೇವಲ 10 ಸೆಕೆಂಡ್ ನಲ್ಲಿ ನಿಮ್ಮನ್ನು ಮುಗಿಸ್ತೀವಿ; RSS ಪ್ರಮುಖರಿಗೆ SDPI ಮುಖಂಡನ ಧಮ್ಕಿ

ತಿರುವನಂತಪುರಂ: ಪಿಎಫ್‌ಐ ಹಾಗೂ ಎಸ್ ಡಿ ಪಿ ಐ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಎನ್‌ಐಎ ದಾಳಿ ನಡೆಸಿ ಹಲವರನ್ನು ಬಂಧಿಸಿರುವ ಬೆನ್ನಲ್ಲೇ ಕೇರಳದಲ್ಲಿ ಎಸ್ ಡಿ ಪಿ ಐ ಹಾಗೂ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅಲ್ಲದೇ ಆರ್ ಎಸ್ ಎಸ್ ಮುಖಂಡರಿಗೆ ಬೆದರಿಕೆ ಹಾಕಿದ್ದಾರೆ. ಎನ್ ಐಎ ದಾಳಿ ಖಂಡಿಸಿ ಎರ್ನಾಕುಲಂನಲ್ಲಿ ಪ್ರತಿಭಟನೆ ನಡೆಸಿರುವ ಎಸ್ ಡಿ ಪಿ ಐ ಸಂಘಟನೆ, ಕೇಂದ್ರ ಸರ್ಕಾರ ಹಾಗೂ …

Read More »

ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ

ಜಾನುವಾರುಗಳಿಗೆ ಚರ್ಮಗಂಟು ರೋಗ ಉಲ್ಬಣ: ಎಚ್ಚರಿಕೆ ವಹಿಸಲು ಪಶುಪಾಲನಾ ಇಲಾಖೆ ಸಲಹೆ ಬೆಳಗಾವಿ :ಜಿಲ್ಲೆಯ ಬೆಳಗಾವಿ ತಾಲೂಕಿನ ಜಾನುವಾರುಗಳಲ್ಲಿ ಚರ್ಮಗಂಟು ರೋಗ (ಲಂಪಿ ಸ್ಕನ್ ಡಿಸೀಜ್)ಸಾಂಕ್ರಾಮಿಕ ಕಾಯಿಲೆ ಕಂಡು ಬಂದಿದ್ದು, ಇದು ಕ್ಯಾಪ್ರಿಸಾಕ್ಸ್ ಎಂಬ ವೈರಾಣುವಿನಿಂದ ಬರುತ್ತದೆ. ದನ, ಎಮ್ಮೆಗಳಲ್ಲಿ ಅದರಲ್ಲೂ ಮಿಶ್ರತಳಿ ರಾಸುಗಳಲ್ಲಿ, ಕರುಗಳಲ್ಲಿ ಅತಿ ಹೆಚ್ಚಾಗಿ ಹಾಗೂ ತೀಕ್ಷಣವಾಗಿ ಕಾಣಿಸಿಕೊಳ್ಳುತ್ತದೆ. ಈ ರೋಗವು ಮುಖ್ಯವಾಗಿ ದನಗಳಿಗೆ ಕಚ್ಚುವ ಕೀಟಗಳಿಂದ(ಸೊಳ್ಳೆ,ನೊಣ,ಉಣ್ಣೆ ಇತ್ತಯಾದಿ) ಬಹುಬೇಗ ಹರಡುತ್ತದೆ. ಮಳೆಗಾಲದಲ್ಲಿ ಮತ್ತು ನಂತರದ …

Read More »

ವೈಭವದ ನಾಡಹಬ್ಬಕ್ಕೆ ಇಂದು ರಾಷ್ಟ್ರಪತಿ ಚಾಲನೆ: ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟಿಸಲಿರುವ ದ್ರೌಪದಿ ಮುರ್ಮು

ಮೈಸೂರು: ಸಾಂಸ್ಕೃತಿಕ ಸಿರಿ ಮತ್ತು ಧಾರ್ವಿುಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವೊಂದು ಸುಂದರ ದೃಶ್ಯಕಾವ್ಯ. ವರ್ಷಕ್ಕೊಮ್ಮೆ ಬರುವ ಈ ರಮಣೀಯ ಘಳಿಗೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೋವಿಡ್ ಸಂಕ್ರಮಣದಿಂದ ಕಳೆದ 2 ವರ್ಷ ಸರಳವಾಗಿ ನಡೆದಿದ್ದ ಉತ್ಸವದಲ್ಲಿ ಈ ಬಾರಿ ಸಡಗರ ಮೇಳೈಸಲಿದೆ. ಸೆ. 26ರಂದು ನಾಡಹಬ್ಬದ ಅಂಕದ ಪರದೆ ಗರಿ ಬಿಚ್ಚಲಿದೆ. ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಚಾಲನೆ: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ …

Read More »

ಕಮಲದ ಸುತ್ತಲಿರುವ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ: ಕೇಜ್ರಿವಾಲ್

ಅಹಮದಾಬಾದ್‌ : ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಗುಜರಾತ್‌ನಲ್ಲಿ 80% ಖಾಸಗಿ ಉದ್ಯೋಗಗಳು ಗುಜರಾತ್‌ನ ಜನರಿಗೆ ಮೀಸಲಾಗಿರುತ್ತವೆ ಎಂದು ಆಪ್ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ.   ಟೌನ್‌ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗುಜರಾತ್‌ನ ಯುವ ಸಮುದಾಯದೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಜ್ರಿವಾಲ್, ‘ಕಮಲ’ದ ಸುತ್ತ ಸಾಕಷ್ಟು ‘ಕೆಸರು’ ಬಿದ್ದಿದೆ. ಆ ಕೆಸರನ್ನು “ಕೈ” ಯಿಂದ ಸ್ವಚ್ಛಗೊಳಿಸಲು ಸಾಧ್ಯವಿಲ್ಲ, ಅದನ್ನು “ಪೊರಕೆ ” ಯಿಂದ ಸ್ವಚ್ಛಗೊಳಿಸಬೇಕಾಗುತ್ತದೆ …

Read More »