Breaking News
Home / ರಾಷ್ಟ್ರೀಯ (page 689)

ರಾಷ್ಟ್ರೀಯ

ಭಾರತೀಯ ಕ್ರೈಸ್ತರ ದಿನಾಚರಣೆ ಅಂಗವಾಗಿ ಕೋವಿಡ್ ಪೀಡಿತರಿಗೆ ಹಣ್ಣು, ಹಂಪಲು ವಿತರಣೆ

  ಬೆಳಗಾವಿ : ಬೆಳಗಾವಿ ಫಾಸ್ಟರ್ಸ್ ಅಂಡ್ ಕ್ರಿಸ್ಟಿನ್ ಲೀಡರ್ಸ್ ಅಸೋಸಿಯೇಷನ್, ಶನಿವಾರ – ಭಾರತೀಯ ಕ್ರೈಸ್ತ ದಿನಾಚರಣೆ – ಅಂಗವಾಗಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಕೋವಿಡ್ 19 ನಿಯಮಗಳನ್ನು ಪಾಲಿಸಿ, ಹಣ್ಣು ಹಂಪಲವನ್ನು ವಿತರಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಪಾಸ್ಟರ್ ಜೆ ಥೋಮಸ್ ನೇತೃತ್ವದಲ್ಲಿ ಕೋವಿಡ್ ಹಾಗು ಇತರ ಒಳರೋಗಿಗಳಿಗೆ ಹಣ್ಣು, ಹಾಲು, ಬಿಸ್ಕೆಟ್, ನೀರು ನೀಡಿ ಅವರು ಶೀಘ್ರ ಗುಣವಾಗಲೆಂದು ಅವರಿಗಾಗಿ ಪ್ರಾರ್ಥಿಸಲಾಯಿತು. ಬೆಳಗಾವಿ ಫಾಸ್ಟರ್ಸ್ …

Read More »

ಡಿವೋರ್ಸ್ ಘೋಷಿಸಿದ ನಟ ಅಮೀರ್ ಖಾನ್-ಕಿರಣ್ ರಾವ್ ದಂಪತಿ

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ದಾಂಪತ್ಯ ಜೀವನ ಮುರಿದು ಬಿದ್ದಿದ್ದು, 15 ವರ್ಷಗಳ ವಿವಾಹ ಬಂಧನಕ್ಕೆ ಗುಡ್ ಬೈ ಹೇಳಿದ್ದಾರೆ. ನಟ ಅಮೀರ್ ಖಾನ್ ಹಾಗು ಕಿರಣ್ ರಾವ್ ಪರಸ್ಪರ ಸಮ್ಮತಿ ಮೂಲಕ ಇಂದು ( ಜುಲೈ 03) ವಿಚ್ಛೇಧನ ಘೋಷಿಸಿದ್ದಾರೆ. ತಮ್ಮ ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರುವ ಈ ದಂಪತಿ, ಪರಸ್ಪರ ಒಪ್ಪಿಗೆ ಮೂಲಕವೇ ದೂರವಾಗಲು ನಿರ್ಧರಿಸಿದ್ದೇವೆ ಎಂದಿದ್ದಾರೆ. ಇನ್ನು …

Read More »

ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

    ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು .   ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …

Read More »

ಕಸಾಯಿಖಾನೆಯಿಂದ ಮರಳಿದ ಎತ್ತಿಗೆ ಭರ್ಜರಿ ಬರ್ತ್‌ಡೇ

ಧಾರವಾಡ: ಕಸಾಯಿ ಖಾನೆಯಿಂದ ಮರಳಿ ಮನೆಗೆ ತಂದಿದ್ದ ಎತ್ತಿಗೆ ಭರ್ಜರಿ ಹುಟ್ಟುಹಬ್ಬ ಆಚರಿಸುವ ಮೂಲಕ ದೇವರಹುಬ್ಬಳ್ಳಿಯ ಯುವ ರೈತ ಎಲ್ಲರ ಗಮನ ಸೆಳೆದಿದ್ದಾನೆ. 10 ಕೆಜಿ ತೂಕದ ಕೇಕ್‌ನಲ್ಲಿ ಮೈಲಾರಿ ಎಂದು ಎತ್ತಿನ ಹೆಸರು ಬರೆಯಿಸಿ, ಮನೆ ಮುಂದೆ ಪೆಂಡಾಲ್‌ ಹಾಕಿಸಿ, ಇಡೀ ಗ್ರಾಮದ ಜನರಿಗೆ ಸಿಹಿ ಊಟ ನೀಡಿದ ನಾಗಪ್ಪ ಓಮಗಣ್ಣವರ ಎತ್ತಿನ ಹುಟ್ಟುಹಬ್ಬ ಆಚರಿಸಿದ್ದಾನೆ. ಗ್ರಾಮದ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಎಲ್ಲರೂ ಬಸವನ ಹುಟ್ಟು ಹಬ್ಬದಲ್ಲಿ ಭಾಗಿಯಾಗಿ …

Read More »

ಮಗನ ಮೇಲೆಯೇ ತಾಯಿಯ ಲೈಂಗಿಕ ದೌರ್ಜನ್ಯ: ಪೊಲೀಸರು ಇಂತಹ ಕೀಳು ಮಟ್ಟಕ್ಕೆ ಇಳಿದರಾ?

ತಿರುವನಂತಪುರಂ: ಕಡಕ್ಕವೂರ್​ ಪೊಕ್ಸೊ ಪ್ರಕರಣದಲ್ಲಿ ತಾಯಿಯೊಬ್ಬಳು ತನ್ನ ಮಗನ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ್ದಾಳೆಂದು ತಪ್ಪಾಗಿ ಆರೋಪಿಸಲಾಗಿದ್ದು, ಘಟನೆಯ ಬಗ್ಗೆ ಪೊಲೀಸ್​ ವರದಿ ಮೇಲೆಯೇ ಅನುಮಾನ ಮೂಡಿದೆ. ಸಂತ್ರಸ್ತ ಮಹಿಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಕರಣದಿಂದ ನನ್ನನ್ನು ಖುಲಾಸೆಗೊಳಿಸಲಾಗಿದೆ. ಆದರೆ, ನನ್ನ ಮಗನನ್ನು ಅಪರಾಧಿ ಎಂಬಂತೆ ವರದಿಯಲ್ಲಿ ಬಿಂಬಿಸಲಾಗಿದೆ ಎಂದು ತಿಳಿಸಿದ್ದಾರೆ. ನನ್ನ ವಿರುದ್ಧ ನಕಲಿ ಪ್ರಕರಣ ದಾಖಲಿಸಿದವರ ಬಗ್ಗೆ ವರದಿಯಲ್ಲಿ ಯಾವುದೇ ಉಲ್ಲೇಖ ಇರಲಿಲ್ಲ. ಹೀಗಾಗಿ ಕಡಕ್ಕವೂರ್ ಪೊಲೀಸರ ವಿರುದ್ಧ …

Read More »

ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಏನು ಆಗುವುದಿಲ್ಲ: ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ 20 -25 ಪರ್ಸೆಂಟ್ ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ವಿಜಯೇಂದ್ರ ಡಿ ಪ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ. ಸರ್ಕಾರದಲ್ಲಿ ಲಂಚ ನಡೆಯುತ್ತಿರುವುದು ಸತ್ಯ. ಯಡಿಯೂರಪ್ಪನವರ ಮಗ ಹಾಗು ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದು ಕೊಳ್ಳುತ್ತಿದ್ದಾರೆ. ಯಡಿಯೂರಪ್ಪನವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ. …

Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ₹20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ‌ ಬಂದ ವ್ಯಕ್ತಿಯಿಂದ ಸುಮಾರು ₹20.89 ಲಕ್ಷ ಮೌಲ್ಯ ಅಕ್ರಮ ಚಿನ್ನ ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ವಿಮಾನ‌ ನಿಲ್ದಾಣಕ್ಕೆ ಬಂದಿದ್ದಾನೆ. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. …

Read More »

ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಅಸಮಾಧಾನ?

ವಿಧಾನಸೌಧ: ತಮ್ಮ ಬಳಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಸಚಿವರು ಯಾರೂ ಕೂಡ ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು, ಅದು ಸರಿಯಲ್ಲ, ನನ್ನ ಬಳಿ ಕೆಲಸಕ್ಕಿದ್ದ ರಾಜಣ್ಣ ವಿರುದ್ಧ ಎಫ್ ಐಆರ್ ದಾಖಲಾಗಿದೆ, ತನಿಖೆ ಕೂಡ ನಡೆಯುತ್ತಿದೆ, ಹೀಗಾಗಿ ನಾನು ಹೆಚ್ಚಿಗೆ ಮಾತನಾಡಲು, ಪ್ರತಿಕ್ರಿಯೆ …

Read More »

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ ಪ್ರಕರಣ: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ಹಲವಾರು ಮಂದಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಎಂಬವರನ್ನು ಗುರುವಾರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿ ವೈ ವಿಜಯೇಂದ್ರ, ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ ಎಂದಿದ್ದಾರೆ. ಈ ಬಗ್ಗೆ …

Read More »

ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು

ಕೊಪ್ಪಳ: ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದ್ದ ಮೆಂತೋಪ್ಲಸ್ ಡಬ್ಬಿಯನ್ನು ಸರ್ಕಾರಿ ವೈದ್ಯರು ಯಶಸ್ವಿಯಾಗಿ ಹೊರತೆಗೆದು ಅಪಾಯದಿಂದ ಪಾರು ಮಾಡಿದ್ದಾರೆ. ಈ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಎಂಬ (8) ತಿಂಗಳ ಮಗು ಆಟವಾಡುತ್ತಾ ಮೆಂತೋಪ್ಲಸ್ ಡಬ್ಬಿ ನುಂಗಿತ್ತು. ಕೂಡಲೇ ಇದನ್ನು ಅರಿತ ಮಗುವಿನ ಪೋಷಕರು, ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿದ್ದಾರೆ.ಮಗುವನ್ನು ಪರೀಕ್ಷಿಸಿದ ವೈದ್ಯರು, ಮಗುವಿನ ಗಂಟಲಿನಲ್ಲಿ ಡಬ್ಬಿ ಸಿಲುಕಿಕೊಂಡಿದೆ. ಹೀಗಾಗಿ ಉಸಿರಾಟಕ್ಕೆ …

Read More »