Breaking News

ರಾಷ್ಟ್ರೀಯ

ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು

ಕಾಸರಗೋಡು, (ಜನವರಿ 13): ಪಿಸ್ತಾ ಸಿಪ್ಪೆ ನುಂಗಿ 2 ವರ್ಷದ ಬಾಲಕ ದುರಂತ ಸಾವು ಕಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಗ್ರಾಮದಲ್ಲಿ ನಡೆದಿದೆ. ಅನಸ್ ಮೃತ ಬಾಲಕ. ಶನಿವಾರ ಪಿಸ್ತಾ ಸಿಪ್ಪೆ ನುಂಗಿದ್ದ. ತಕ್ಷಣ ಪೋಷಕರು, ಸಿಪ್ಪೆಯ ಒಂದು ಭಾಗ ಹೊರ ತೆಗೆದಿದ್ದರು. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ವೈದ್ಯರು ತಪಾಸಣೆ ಮಾಡಿ ಮಗುವಿನ ಗಂಟಲಿನಲ್ಲಿ ಏನು ಸಿಕ್ಕಿ ಹಾಕಿಕೊಂಡಿಲ್ಲ ಎಂದಿದ್ದಾರೆ. ಆದ್ರೆ, ಭಾನುವಾರ ಶ್ವಾಸಕೋಶದಲ್ಲಿ ಸಿಪ್ಪೆ ಸಿಲುಕಿಕೊಂಡು …

Read More »

ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳ ಕೆಚ್ಚಲು ಕತ್ತರಿಸುವುದಕ್ಕೆ ರಾಜ್ಯದ ಕಾಂಗ್ರೆಸ್​ ಸರ್ಕಾರವೇ ಪ್ರೇರಣೆ” ಎಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ

ಬೆಂಗಳೂರು: “ಕೊಟ್ಟಿಗೆಯಲ್ಲಿದ್ದ ಮೂರು ಹಸುಗಳ ಕೆಚ್ಚಲು ಕತ್ತರಿಸುವುದಕ್ಕೆ ರಾಜ್ಯದ ಕಾಂಗ್ರೆಸ್​ ಸರ್ಕಾರವೇ ಪ್ರೇರಣೆ” ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ದೂರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆ ತೆರೆಯುವ ನಿಟ್ಟಿನಲ್ಲಿ 14 ಗೋಶಾಲೆಗಳನ್ನು ಆರಂಭಿಸಿತ್ತು. ಆದರೆ, ಈ ಸರ್ಕಾರ ಸಚಿವ ಸಂಪುಟದಲ್ಲಿ ಎಲ್ಲ ಗೋಶಾಲೆಗಳನ್ನು ರದ್ದು ಮಾಡುವ ನಿರ್ಧಾರಕ್ಕೆ ಮುಂದಾಗಿದೆ. ಗೋವಿನ ಬಗ್ಗೆ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಧೋರಣೆ ಕಿಡಿಗೇಡಿಗಳಿಗೆ ಸ್ಫೂರ್ತಿ. …

Read More »

ಎಸಿ ಕೋರ್ಟ್​ಗಳಲ್ಲಿ ಬಾಕಿ ಇರುವ ಪ್ರಕರಣ 6 ತಿಂಗಳಲ್ಲಿ ಇತ್ಯರ್ಥಗೊಳಿಸಿ

ಬೆಂಗಳೂರು: ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ ಗಡುವನ್ನು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಜೊತೆಗೆ ಸಚಿವರು ಏಕ ಕಾಲದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. “ಎಸಿ ನ್ಯಾಯಾಲಯಗಳಲ್ಲಿ ಯಾವ ಪ್ರಕರಣಗಳನ್ನೂ ಆರು ತಿಂಗಳ ಅವಧಿಗಿಂತ …

Read More »

ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಗುಂಡು ಹಾರಿಸಿ ಇಬ್ಬರ ಬಂಧನ

ಕಾರವಾರ): ಮುಂಡಗೋಡದ ಉದ್ಯಮಿ ಅಪಹರಣ ಪ್ರಕರಣ ಸಂಬಂಧ ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಮತ್ತು ಇನ್ನು ಮೂವರನ್ನು ಬೆನ್ನಟ್ಟಿ ಬಂಧಿಸಲಾಗಿದೆ. ಜಮೀರ್​ ಅಹ್ಮದ್ ದುರ್ಗಾವಾಲೆ ಎಂಬವರನ್ನು ಅಪಹರಿಸಿದ್ದ ಆರೋಪಿಗಳಾದ ರಹೀಮ್ ಅಲ್ಲಾಹುದ್ದೀನ್ ಹಾಗೂ ಅಜಯ್ ಮಡ್ಲಿ ಎಂಬವರಿಗೆ ಗುಂಡು ಹಾರಿಸಲಾಗಿದೆ. ಗಾಯಗೊಂಡಿರುವ ಆರೋಪಿಗಳಿಗೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂಡಗೋಡ ಠಾಣಾ ಸಿಪಿಐ, ಪಿಎಸ್ಐ ಹಾಗೂ ಓರ್ವ ಪೊಲೀಸ್ ಕಾನ್ಸ್‌ಟೇಬಲ್‌ಗೂ …

Read More »

ಸಂವಿಧಾನ ರಕ್ಷಣೆಯ ಕ್ರಾಂತಿಯಾಗಲಿ: ಬಸವರಾಜ ಬೊಮ್ಮಾಯಿ*

  ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾಯಿ ಹೇಳಿದರು.   ಅವರು ಬಾಗಲಕೋಟೆಯಲ್ಲಿ ಶನಿವಾರ ಸಿಟಿಜನ್ ಫಾರ್ …

Read More »

ಡಿ.ಕೆ. ಶಿವಕುಮಾರ್​ ಖಂಡಿತ ಸಿಎಂ ಆಗ್ತಾರೆ: ವಿನಯ್​ ಗೂರುಜಿ

ಚಿಕ್ಕೋಡಿ(ಬೆಳಗಾವಿ): “ಅಜ್ಜಯ್ಯನ ಮೇಲಿರುವ ಗುರು ನಿಷ್ಠೆ, ಪಕ್ಷ ನಿಷ್ಠೆ, ಹಿರಿಯರ ಮೇಲಿರುವ ಭಕ್ತಿ ಮತ್ತು ನಾಟಕವಿಲ್ಲದ ಮಾತು ನೋಡಿದಾಗ ಡಿ.ಕೆ. ಶಿವಕುಮಾರ್​ ಅವರಿಗೆ ಮುಖ್ಯಮಂತ್ರಿಯಾಗಿ ಸೇವೆ ಮಾಡುವ ಅವಕಾಶ ಭಗವಂತ ಕೊಡಲಿ. ಅವರ ಗುರುಗಳ ದಯೆಯಿಂದ ಅದು ಖಂಡಿತ ಆಗುತ್ತದೆ ಎಂಬುದು ನನ್ನ ನಂಬಿಕೆ” ಎಂದು ಅವಧೂತ ವಿನಯ್ ಗುರೂಜಿ ಹೇಳಿದರು.   ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ” ಸಿದ್ದರಾಮಯ್ಯನವರ ನಂತರ ಸಿಎಂ ಆಗುವ ಅವಕಾಶ ಸಿಗುತ್ತದೆ …

Read More »

ನಾಲ್ಕು ದಿನದ ಪ್ರತಿಭಟನೆಗೆ ಕೊನೆಗೂ ಜಯ

ಬೆಂಗಳೂರು, ಜನವರಿ 10: ಅವರೆಲ್ಲ ಕೋವಿಡ್ ಸಮಯದಲ್ಲಿ ಟೊಂಕಕಟ್ಟಿ ದುಡಿದವರು. ಇಡೀ ದೇಶವೇ ಲಾಕ್ ಡೌನ್​ನಲ್ಲಿ ಸ್ತಬ್ಧವಾಗಿದ್ದಾಗ ಜೀವದ ಹಂಗು ತೊರೆದು ಫೀಲ್ಡ್​ಗಿಳಿದು ದುಡಿದವರು. ಆದರೆ ಇದೀಗ ಸರ್ಕಾರದ ಭರವಸೆಗಳು ಬರೀ ಮಾತಾಗಿ ಉಳಿದಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ಹಾದಿ ಹಿಡಿದಿದ್ದರು. ಇತ್ತ ಆಶಾ ಕಾರ್ಯಕರ್ತೆಯರ (ASHA workers) ಪ್ರತಿಭಟನೆ ಬಗ್ಗೆ ಹಲವು ಭಾರೀ ಸಂಧಾನ ನಡೆಸಿ ಸುಸ್ತಾಗಿದ್ದ ಸರ್ಕಾರ, ಇದೀಗ ಆಶಾಕಾರ್ಯಕರ್ತೆಯರ ಮನವೊಲಿಸುವುದರಲ್ಲಿ ಕೊನೆಗೂ ಸಕ್ಸಸ್ ಆಗಿದೆ. ಇತ್ತ ಮೈಕೊರೆವ ಚಳಿ …

Read More »

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್​ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಆರೋಪ ನಿಗದಿಗೂ ಮುಂಚಿನ ವಾದ ಪ್ರತಿವಾದ ಆಲಿಸಬಹುದಾಗಿದೆ. ಆದರೆ, ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.   ಪ್ರಜ್ವಲ್‌ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ …

Read More »

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ.   ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.   …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್​ ಸೇರಿದಂತೆ ಇತರ ಆರೋಪಿಗಳು ಇಂದು ನ್ಯಾಯಾಲಯದೆದುರು ಹಾಜರ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಷರತ್ತಿನ ಪ್ರಕಾರ ಇಂದು (ಶುಕ್ರವಾರ) ಬೆಂಗಳೂರಿನ ಸಿಸಿಹೆಚ್ 57ರ ನ್ಯಾಯಾಲಯದ ಮುಂದೆ ಹಾಜರಾದರು. ದರ್ಶನ್, ಪವಿತ್ರಾ ಗೌಡ, ಪ್ರದೋಶ್, ನಾಗರಾಜ್ ಸೇರಿದಂತೆ ಎಲ್ಲ 17 ಮಂದಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.   ಆರೋಪಿಗಳಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಪ್ರತಿ ತಿಂಗಳು ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ, ಎಲ್ಲಾ ಆರೋಪಿಗಳು ನ್ಯಾಯಾಧೀಶರೆದುರು ಹಾಜರಾಗಿದ್ದಾರೆ. ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು …

Read More »