Breaking News
Home / ರಾಷ್ಟ್ರೀಯ (page 694)

ರಾಷ್ಟ್ರೀಯ

ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆದು ಹಣ ಮಾಡುತ್ತಿದ್ದಾರೆ: ಸಿದ್ದು ಆಕ್ರೋಶ

ಮೈಸೂರು: ಇದು ಭಂಡ ಸರಕಾರ. ಮಾನವೀಯತೆಯ ಇಲ್ಲದ ಸರಕಾರ. ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10 ಸಾವಿರ ಕೊಡಬೇಕಿತ್ತು. ನಮ್ಮ ಸರಕಾರ ಇದ್ದಿದ್ದರೆ 10 ಸಾವಿರ ಹಣ, 10 ಕೆಜಿ ಅಕ್ಕಿ ಕೊಡುತ್ತಿದ್ದೆವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇವರು ದುಡ್ಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಟ್ಟ ಸರಕಾರವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ. ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆಯುತ್ತಾ …

Read More »

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ: ಸವದಿ

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಾಗಿ ಕಾರ್ಯಚರಿಸಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತಾನಾಡಿದ ಅವರು, ಇಷ್ಟು ವರ್ಷ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಾಗಿ ಸೇವೆ ಸಲ್ಲಿಸಿದ ಸಂಸ್ಥೆ ಇನ್ಮುಂದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಎನ್ನುವ ಹೆಸರಿನೊಂದಿಗೆ ಸೇವೆ ಮುಂದುವರೆಸಲಿದೆ ಎಂದು ಹೇಳಿದರು. ತಮ್ಮ ಪುತ್ರನ ಕಾರು ಅಪಘಾತ ಪ್ರಕರಣ ಕುರಿತಿ ಪ್ರತಿಕ್ರಿಯಿಸಿದ …

Read More »

ಪಕ್ಷದ ಹಿರಿಯ ನಾಯಕರಿಂದ ಶೋಭಾಗೆ ದೆಹಲಿ ಕರೆ: ಸಚಿವ ಸ್ಥಾನ ಸಿಗುವ ಸಾಧ್ಯತೆ ?

ಕಾರ್ಕಳ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.   ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರಿಯ ನಾಯಕರಿಂದ ಕರೆ ಬಂದಿದೆ ಎಂದು ಸಂಸದೆ ಆಪ್ತ ಸಹಾಯಕರು ಉದಯವಾಣಿ ಗೆ ಮಾಹಿತಿ ನೀಡಿದ್ದಾರೆ. ಇಂದು ನಡೆಯಲಿರುವ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿ ಕೆಲ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ. ರಾಜ್ಯದಿಂದ ಇಬ್ಬರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ. ಕೋವಿಡ್ ಸೋಂಕಿಗೆ ಬಲಿಯಾಗಿ ಸಾವನ್ನಪ್ಪಿದ್ದ …

Read More »

ಕರ್ನಾಟಕದ 2, 3 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಪಕ್ಕಾ; ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ರಾಜ್ಯದ ಎರಡು, ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕೆಐಎ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವರು, ಜಾತಿವಾರು ಲೆಕ್ಕಾಚಾರ ಪ್ರಕಾರ ಲಿಂಗಾಯತರಿಗೆ ಒಂದು, ಪರಿಶಿಷ್ಟ ಜಾತಿಗೆ ಒಂದು ಪಕ್ಕಾ ಆಗಿದೆ. ಮತ್ತೊಂದು ಯಾರಿಗೆ ಕೊಡ್ತಾರೋ ನೋಡಬೇಕು ಎಂದು ಅಭಿಪ್ರಾಯಪಟ್ಟರು. ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ …

Read More »

ಇಂದು ಕೇಂದ್ರ ಸಂಪುಟ ಪುನರ್ ರಚನೆ; ದೆಹಲಿಯತ್ತ ಬಿಜೆಪಿ ಸಂಸದರು, ಯಾರಿಗಿದೆ ಲಕ್​​?

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಸಂಜೆ 5.30ಕ್ಕೆ ಸಂಪುಟ ಪುನರ್ ರಚನೆ ಪ್ರಕ್ರಿಯೆ ಆರಂಭವಾಗಲಿದೆ. ಬಳಿಕ ಆಯ್ಕೆಯಾದ ನೂತನ ಸಂಸದರು 6 ಗಂಟೆ ವೇಳೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಂಪುಟ ರಚನೆಯಲ್ಲಿ ಹಿಂದುಳಿದ ವರ್ಗ ಮತ್ತು ಎಸ್ಸಿ, ಎಸ್ಟಿ ಸಂಸದರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಹೇಗಾದರೂ ಸರಿ ಸಣ್ಣಸಣ್ಣ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡುವ ಯೋಚನೆ ಬಿಜೆಪಿ …

Read More »

ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ: ಬಿಜೆಪಿ ಶಾಸಕ ಯತ್ನಾಳ್

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಯಾರೂ ನಿರೀಕ್ಷೆ ಮಾಡದ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಚಾಮರಾಜನಗರ ತಾಲೂಕಿನ ಮರಿಯಾಲ ಗ್ರಾಮದಲ್ಲಿ ಮಾಜಿ ಕೇಂದ್ರ ಸಚಿವ ದಿ.ಎಂ. ರಾಜಶೇಖರ ಮೂರ್ತಿರವರ ಸಮಾಧಿಗೆ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ದಿಲ್ಲಿಯಲ್ಲಿರುವ ಬಿಜೆಪಿ ಹೈಕಮಾಂಡ್ ವೀಕ್ಷಿಸುತ್ತಿದೆ. ರಾಜ್ಯದಲ್ಲಿ ಎಷ್ಟು ಬೇಗ ಮುಖ್ಯಮಂತ್ರಿ ಬದಲಾಗುತ್ತಾರೋ …

Read More »

ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.   ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …

Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.

Read More »

ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ …

Read More »

ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ಗದಗದ ಸಹೋದರರು ನೀರುಪಾಲು

ಮಂಗಳೂರು: ಇಲ್ಲಿನ ನೇತ್ರಾವತಿ ನದಿ ನೀರಿಗೆ ಸ್ನಾನಕ್ಕೆ ಇಳಿದ ಗದಗ ಮೂಲಕದ ಇಬ್ಬರು ಸಹೋದರರು ಸೋಮವಾರ ನೀರುಪಾಲಾಗಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯಲ್ಲಿ ತೋಟದ ಕಾರ್ಮಿಕರಾದ, ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸುಬ್ಬನಹಳ್ಳಿ ನಿವಾಸಿಯಾದ ಧರ್ಮ ಮತ್ತು ಮೀನಾಕ್ಷಿ ದಂಪತಿಯ ಮಕ್ಕಳಾದ ನಿಂಗರಾಜು (16) ಮತ್ತು ಸತೀಶ್ (14) ಮೃತರು. ‌ಬೆಳ್ತಂಗಡಿ ತಾಲ್ಲೂಕು ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಂಗರಾಜು ಹತ್ತನೇ ತರಗತಿಯಲ್ಲಿ, ಆತನ ಸಹೋದರ ಸತೀಶ್, ಪುತ್ತೂರು ಬಲ್ನಾಡು …

Read More »