Breaking News
Home / ರಾಷ್ಟ್ರೀಯ (page 696)

ರಾಷ್ಟ್ರೀಯ

ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ ಸಸಿ ನೆಡುವ ಕಾರ್ಯಕ್ರಮಕ್ಕೆ ರಮೇಶ್ ಜಾರಕಿಹೊಳಿ ಚಾಲನೆ

ಗೋಕಾಕ: ಸದ್ಯಕ್ಕೆ ಗೋಕಾಕ ನಗರದ ಎಲ್ಲಾ ರೀತಿಯ ಅಭಿವೃದ್ಧಿ ಹಾಗೂ, ಇನ್ನಿತರ ಕೆಲಸ ಕಾರ್ಯ ಗಳಲ್ಲಿ ರಮೇಶ್ ಜಾರಕಿಹೊಳಿ ಹೆಚ್ಚಿನ ಒತ್ತನ ಕೊಡುತ್ತಿದ್ದಾರೆ. ಇಂದು ಗೋಕಾಕ ನಗರದ ಗ್ರಾಮೀಣ ಮಂಡಲದ ರೈತ ಮೋರ್ಚಾ ವತಿಯಿಂದ ಗೋಕಾಕ ನಗರದ ಹೊರವಲಯದ ಯೋಗಿ ಕೊಳ್ಳ ರಸ್ತೆ ಮಾರ್ಗದಲ್ಲಿ 200 ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಒಂದು ಕಾರ್ಯ ಕ್ರಮದಲ್ಲಿ ಭಾಗಿಯಾದ ಸಾಹುಕಾರ ರಮೇಶ್ ಜಾರಕಿಹೊಳಿ ಈ ಒಂದು ಕಾರ್ಯ ಕ್ರಮಕ್ಕೆ ಸಸಿ …

Read More »

ಜುಲೈ ಅಂತ್ಯದೊಳಗೆ 51.6 ಕೋಟಿ ಡೋಸ್ ಲಸಿಕೆ ನೀಡಿಕೆ; ಕೇಂದ್ರದಿಂದ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ

ದೆಹಲಿ: ಜುಲೈ ತಿಂಗಳ ಅಂತ್ಯದೊಳಗೆ ಅಂದರೆ, ಜುಲೈ 31ರ ಒಳಗೆ 51.6 ಕೋಟಿ ಡೋಸ್ ಲಸಿಕೆ ನೀಡಲಾಗುತ್ತದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಹೊಸ ಅಫಿಡವಿಟ್ ಸಲ್ಲಿಕೆ ಮಾಡಿದೆ. ದೇಶದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ 94 ಕೋಟಿ ಜನರಿದ್ದಾರೆ. 94 ಕೋಟಿ ಜನರಿಗೆ 188 ಕೋಟಿ ಡೋಸ್ ಲಸಿಕೆಯ ಅಗತ್ಯವಿದೆ. ಹೀಗಾಗಿ ಆಗಸ್ಟ್‌ನಿಂದ ಡಿಸೆಂಬರ್‌ಗೆ 135 ಕೋಟಿ ಡೋಸ್ ನೀಡಲಾಗುತ್ತದೆ. ಅಗತ್ಯವಿರುವಷ್ಟು ಲಸಿಕೆ ಆಗಸ್ಟ್-ಡಿಸೆಂಬರ್ ಅವಧಿಯಲ್ಲಿ ಲಭ್ಯವಾಗಲಿದೆ ಎಂದು …

Read More »

ದಕ್ಷಿಣ ಕನ್ನಡ: ಪದವಿ ವಿದ್ಯಾರ್ಥಿಗಳಿಗೆ, ಭೋಧಕರಿಗೆ ಕೋವಿಡ್‌ ಲಸಿಕೆ ನಾಳೆಯಿಂದ

ಮಂಗಳೂರು: ಮುಂದಿನ ತಿಂಗಳಿಂದ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಸೋಮವಾರದಿಂದ ಜಿಲ್ಲೆಯ ಎಲ್ಲ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್‌, ಪ್ಯಾರಾಮೆಡಿಕಲ್‌ ಕಾಲೇಜುಗಳ 18 ವರ್ಷ ಮೇಲಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಭ್ಯತೆಗೆ ಅನುಗುಣವಾಗಿ ಲಸಿಕಾ ಶಿಬಿರ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ಹೇಳಿದ್ದಾರೆ. ಜೂನ್‌ 28 ರಿಂದ ಜಿಲ್ಲೆಯ ಎಲ್ಲ …

Read More »

ಪಕ್ಷ ಸಂಘಟನೆ: ಡಿ.ಕೆ. ಶಿವಕುಮಾರ್ ನೇತತ್ವದಲ್ಲಿ ಕಾರ್ಯಾಧ್ಯಕ್ಷರ ಸಭೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಂಚೂಣಿ ಘಟಕಗಳನ್ನು ಪುನರ್‌ ರಚಿಸಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ಕಾರ್ಯಾಧ್ಯಕ್ಷರ ಜತೆ ಶನಿವಾರ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂಚೂಣಿ ಘಟಕಗಳ ಪುನರ್ ರಚನೆ, ಕೆಲವು ಜಿಲ್ಲಾ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಬದಲಾವಣೆ, ಬ್ಲಾಕ್ ಕಾಂಗ್ರೆಸ್ ಘಟಕಗಳ ಪುನರ್ ರಚನೆ ಸಿದ್ಧತೆ ಕುರಿತು ಚರ್ಚೆ ನಡೆಯಿತು. ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸತೀಶ ಜಾರಕಿಹೊಳಿ, ಈಶ್ವರ್ …

Read More »

ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ರೇಖಾ ಕದಿರೇಶ್ ಹಂತಕರು: ಮತ್ತೆ ನಾಲ್ವರ ಬಂಧನ

ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್‌ ಪಿನ್‌ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್‌(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್‌ ಸಹೋದರಿ ಮಾಲಾ ಪುತ್ರ ಅರುಳ್‌, ಸ್ಥಳೀಯ ನಿವಾಸಿ …

Read More »

ಹಳಿತಪ್ಪಿದ ಹಜರತ್‌ ನಿಜಾಮುದ್ದೀನ್‌ನ ರಾಜಧಾನಿ ಎಕ್ಸ್‌ಪ್ರೆಸ್‌

ಮುಂಬೈ: ‘ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಹಜರತ್‌ ನಿಜಾಮುದ್ದೀನ್‌ನ ರಾಜಧಾನಿ ಎಕ್ಸ್‌ಪ್ರೆಸ್‌, ಸುರಂಗವೊಂದರಲ್ಲಿ ಹಳಿ ತಪ್ಪಿದ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಗೋವಾದ ಮಡ್‌ಗಾಂವ್‌ನತ್ತ ಪ್ರಯಾಣಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ಮುಂಬೈನಿಂದ 325 ಕಿ.ಮೀ ದೂರದಲ್ಲಿರುವ ಕಾರ್ಬೂಡ್ ಸುರಂಗದಲ್ಲಿ ಬೆಳಿಗ್ಗೆ 4.15ಕ್ಕೆ ಹಳಿ ತಪ್ಪಿದೆ ಎಂದು ಕೊಂಕಣ್ ರೈಲ್ವೆ ಅಧಿಕಾರಿಗಳು ಹೇಳಿದರು. ಹಳಿಯ ಮೇಲೆ ಕಲ್ಲು ಬಂಡೆಯೊಂದು ಬಿದ್ದ ಕಾರಣ, ರೈಲು ಹಳಿ ತಪ್ಪಿದೆ. ರತ್ನಗಿರಿ ಜಿಲ್ಲೆಯ …

Read More »

ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್

ತುಮಕೂರು: ನಾವೆಲ್ಲಾ ರಮೇಶ್ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದು ತಮಕೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ನಗರಕ್ಕೆ ಭೇಟಿ ನೀಡಿ, ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆ ನಡೆಸಿದರು. ಸ್ಟೇಡಿಯಂ, ರಾಧಕೃಷ್ಣ ರಸ್ತೆ, ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಕಾಮಗಾರಿ ಸೇರಿದಂತೆ ಸ್ಮಾರ್ಟ್ ಸಿಟಿಯ ವಿವಿಧ ಕಾಮಗಾರಿಗಳ ವೀಕ್ಷಣೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಮೇಶ್ ಜಾರಕಿಹೊಳಿ ಸಿಡಿ ವಿಚಾರದಲ್ಲಿ ಕೆಲ ವ್ಯತ್ಯಾಸ ಆಗಿದೆ. ಕೆಲವೇ ದಿನದಲ್ಲಿ ಸತ್ಯಾಂಶ ಹೊರಬರಲಿದ್ದು, …

Read More »

ಪ್ರಧಾನ ಮಂತ್ರಿ ಹೇಳಿಯೂ ಕೆಲಸ ಆಗದಿದ್ದಾಗ ಗ್ರಾಮಸ್ಥರೇ ನಿರ್ಮಿಸಿದರು ಸೇತುವೆ

ಮಂಗಳೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯೇ ಸೂಚಿಸಿದರೂ ಊರಿನ ಬಹು ಜನೋಪಯೋಗಿ ಬೇಡಿಕೆಯೊಂದು ಈಡೇರಿಲ್ಲ! ಆದರೆ ತಮ್ಮ ಗುರಿಯಿಂದ ವಿಮುಖರಾಗದ ಗ್ರಾಮಸ್ಥರು ತಾವೇ, ಸ್ವಂತ ಖರ್ಚಿನಲ್ಲಿ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ! ದಕ್ಷಿಣ ಕ‌ನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಬಳಿಯ ಜನ ಇಂತಹ ವಿಪರ್ಯಾಸ ಪ್ರಸಂಗಕ್ಕೆ ಸಾಕ್ಷಿಯಾಗಿದ್ದಾರೆ. ಇದು ಸಚಿವ ಎಸ್ ಅಂಗಾರ ಪ್ರತಿನಿಧಿಸುವ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿದೆ! ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ …

Read More »

ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ

ರಬಕವಿ-ಬನಹಟ್ಟಿ: ತಾಲೂಕಿನ ಕುಲಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಅಕ್ಕಿ ಸಂಗ್ರಹ ಮಾಡಿದ್ದ ಗೋದಾಮಿನ ಮೇಲೆ ಕಂದಾಯ ಹಾಗೂ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ 64,650 ರು ಮೌಲ್ಯದ 4310 ಕಿಲೋ ಅಕ್ಕಿ ವಶಪಡಿಸಿಕೊಳ್ಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಬನಹಟ್ಟಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕುಲಹಳ್ಳಿ ಗ್ರಾಮದ ಖಾಸಿಂಸಾಬ್ ಸಂತಿ ಎಂಬಾತನ ಜಮೀನಿನ ಪತ್ರಾಸ್ ಶೆಡ್‌ನಲ್ಲಿ ಶೇಖರಿಸಿಟ್ಟ 4310 ಕೆಜಿ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರಲ್ಲದೇ ಖಾಸೀಂಸಾಬ ಸಂತಿ ಹಾಗೂ ಮುಬಾರಕ ಬಾರಿಗಡ್ಡಿ ಅವರನ್ನು ಅಕ್ರಮ ಅಕ್ಕಿ …

Read More »

ಬಿಜೆಪಿ ಸೇರಲು ₹10 ಲಕ್ಷ ಪಾವತಿ: ಕಲೈ ಅರಸಿ ಆರೋಪ

ಹಾಸನ: ‘ಜೆಡಿಎಸ್‌ ತೊರೆದು ಬಿಜೆಪಿ ಸೇರುವಂತೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್‌.ಆರ್‌.ಸಂತೋಷ್ ತಮಗೆ ₹ 25 ಲಕ್ಷ ಆಮಿಷವೊಡ್ಡಿ, ಮುಂಗಡವಾಗಿ ₹10 ಲಕ್ಷ ನಗದು ನೀಡಿದ್ದಾರೆ’ ಎಂದು ಅರಸೀಕೆರೆ ನಗರಸಭೆ ಎರಡನೇ ವಾರ್ಡ್‌ ಸದಸ್ಯೆ ಕಲೈ ಅರಸಿ ಆರೋಪಿಸಿದರು. ಹತ್ತು ಲಕ್ಷ ರೂಪಾಯಿ ಹಣದ ಬಂಡಲ್‌ನೊಂದಿಗೆ ಶಾಸಕರಾದ ಎಚ್‌.ಡಿ.ರೇವಣ್ಣ, ಕೆ.ಎಂ.ಶಿವಲಿಂಗೇಗೌಡ ಜತೆ ಶುಕ್ರವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸೇರುವಂತೆ ಒಂದು ವಾರದಿಂದ ಒತ್ತಡ ಇತ್ತು. ಶುಕ್ರವಾರ ರಾತ್ರಿ …

Read More »