Breaking News
Home / ರಾಷ್ಟ್ರೀಯ (page 698)

ರಾಷ್ಟ್ರೀಯ

ಕೋವಿಡ್ ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಬೆಂಬಲ ನೀಡುವ ಕಾರ್ಯಕ್ರಮ

ಬೆಳಗಾವಿ: ಕೋವಿಡ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳು ಅವರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯಿಂದ ಹೊರಬಂದು ಅವರು ಮೊದಲಿನಂತೆ ಸಾಮಾನ್ಯ ಜೀವನ ನಡೆಸಲು ಅನುವಾಗುವಂತೆ ಅವರಿಗೆ ಭಾವನಾತ್ಮಕ, ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಬೆಂಬಲ ನೀಡಲು ಬಾಲಹಿತೈಷಿ ಕಾರ್ಯಕ್ರಮದಡಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳಿಗೆ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಎಲ್ಲಾ ರೀತಿಯ ಬೆಂಬಲಗಳನ್ನು ನೀಡಲು ಮುಂದೆ ಬರುವ ವ್ಯಕ್ತಿಗಳು ಬಾಲಹಿತೈಷಿ ಯೋಜನೆಯಡಿ ಮಾರ್ಗದರ್ಶಕರಾಗಿ ಕಾರ್ಯದರ್ಶಿ ಕರು ಎಂದು …

Read More »

ನಿಮ್ಹಾನ್ಸ್‌ಗೆ ಡಾ. ಪ್ರತಿಮಾ ಮೂರ್ತಿ ನಿರ್ದೇಶಕಿ

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್) ನಿರ್ದೇಶಕರನ್ನಾಗಿ ಡಾ. ಪ್ರತಿಮಾ ಮೂರ್ತಿ ಅವರನ್ನು ಕೇಂದ್ರ ಆರೋಗ್ಯ ಸಚಿವಾಲಯ ನೇಮಕ ಮಾಡಿದೆ. ಮನೋವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. ನಿರ್ದೇಶಕರ ಅವಧಿ 5 ವರ್ಷ ಇರಲಿದ್ದು, ಪ್ರತಿಮಾ ಅವರು 2026ರ ಮಾರ್ಚ್‌ನಲ್ಲಿ ನಿವೃತ್ತಿ ಹೊಂದಲಿದ್ದಾರೆ. ಡಾ.ವೈ.ಸಿ. ಜನಾರ್ದನ ರೆಡ್ಡಿ ಅವರನ್ನು ಮನೋವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಕಳೆದ ವರ್ಷ ಅ.4ರಂದು ಡಾ.ಬಿ.ಎನ್. ಗಂಗಾಧರ್ ನಿವೃತ್ತರಾದ ಬಳಿಕ …

Read More »

ನೆರೆ ಪ್ರವಾಹ ಸಂಬಂಧ ಪೂರ್ವಭಾವಿಯಾಗಿ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಮ್ಮ ಗೃಹ ಕಛೇರಿಯಲ್ಲಿ ನೆರೆ ಪ್ರವಾಹ ಸಂಬಂಧ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ …

Read More »

ಸಿಎಂ ಯಡಿಯೂರಪ್ಪ ಓಕೆ ಅಂದ್ರೆ ಸೋಮವಾರದಿಂದಲೇ ಬಸ್ ಸಂಚಾರ ಆರಂಭ: ಸಾರಿಗೆ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸೋಮವಾರದಿಂದ (ಜೂನ್ 21) ರಾಜ್ಯದಲ್ಲಿ ಬಸ್​ ಸಂಚಾರಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆ ನಡೆಸಿದ್ದೇವೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ನಡೆಯಲಿರುವ ಸಭೆಯಲ್ಲಿ ಬಸ್ ಸಂಚಾರ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರೆ ಕೊವಿಡ್ ನಿಯಮಾನುಸಾರ ಸೋಮವಾರದಿಂದಲೇ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ​ ತಿಳಿಸಿದರು. ಸದ್ಯಕ್ಕೆ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡುವ ಯೋಚನೆಯಿದೆ. ಕೊರೊನಾ …

Read More »

ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ- ಗೋಕಾಕ್ ಜಲಪಾತಕ್ಕೆ ಜೀವ ಕಳೆ

ಬೆಳಗಾವಿ: ಘಟ್ಟ ಪ್ರದೇಶ ಸೇರಿ ಜಿಲ್ಲೆಯ ಹಲವೆಡೆ ಕಳೆದ ಮೂರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ನದಿ, ಹಳ್ಳ, ಕೆರೆಗಳು ಮೈದು0ಬಿವೆ. ಮೂರು ದಿನಗಳ ಮಳೆಗೆ ಗೋಕಾಕ್ ಜಲಪಾತಕ್ಕೆ ಸಹ ಜೀವ ಕಳೆ ಬಂದಿದ್ದು, ಧುಮ್ಮಿಕ್ಕಿ ಹರಿಯುತ್ತಿದೆ. ಕರ್ನಾಟಕದ ನಯಾಗರ ಎಂದೇ ಕರೆಯಲಾಗುವ ಗೋಕಾಕ್ ಜಲಪಾತ ಈಗ ಧುಮ್ಮಿಕ್ಕುತ್ತಿದ್ದು, ಕಣ್ಮನ ಸೆಳೆಯುತಿದ್ದೆ. ಘಟಪ್ರಭಾ ನದಿಯ ಸೌಂದರ್ಯ ಗೋಕಾಕ್ ಜಲಪಾತದಲ್ಲಿ ಗರಿಬಿಚ್ಚಿದೆ. ಸುತ್ತಲೂ ಹಚ್ಚ ಹಸಿರು ನಡುವೆ ನೀರ ಧಾರೆಯ ಸೊಬಗು, …

Read More »

ಅರುಣ್ ಸಿಂಗ್ ಬಂದುಹೋದ ಬಳಿಕ ಜಾಲಿ ಮೂಡ್ ನಲ್ಲಿದ್ದಾರೆ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿದ ಕಾರಣ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿ ಮೂರು ದಿನ ಚರ್ಚೆ ಮಾಡಿ ಹೋಗಿದ್ದಾರೆ. ಕೆಲವು ಶಾಸಕರ ಜೊತೆ ವೈಯಕ್ತಿಕವಾಗಿ ಮಾತನಾಡಿರುವ ಅರುಣ್ ಸಿಂಗ್ ಸದ್ಯ ದೆಹಲಿಗೆ ತೆರಳಿದ್ದಾರೆ. ಆದರೆ ಇದಾದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಲಿ ಮೂಡ್ ನಲ್ಲಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ ತೆರಳುವಾಗ ಸಚಿವ ಅಶೋಕ್ ಗೆ “ಎಲ್ಲಿಗೆ ಹೋಗ್ತಾ ಇದ್ದೀಯಾ ಎಂದರು. ಇದಕ್ಕೆ ‘ಸರ್, …

Read More »

ಕೋವಿಡ್ 3ನೇ ಅಲೆ ಅಪಾಯ: ಲಾಕ್ ಡೌನ್ ಸಡಿಲಿಕೆ ಮುನ್ನ ಎಚ್ಚರವಹಿಸಿ: ರಾಜ್ಯಗಳಿಗೆ ಕೇಂದ್ರ

ನವದೆಹಲಿ: ಕೋವಿಡ್ 19 ಸೋಂಕು ಹಾಗೂ ಸಕ್ರಿಯ ಪ್ರಕರಣಗಳ ಇಳಿಕೆಯ ಆಧಾರದ ಮೇಲೆ ಕೋವಿಡ್ ಲಾಕ್ ಡೌನ್ ನಿರ್ಬಂಧಗಳನ್ನು ಐದು ಹಂತಗಳಲ್ಲಿ ಸಡಿಲಿಕೆ ಮಾಡಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶನಿವಾರ(ಜೂನ್ 19) ಸಲಹೆ ನೀಡಿದೆ.   ರಾಜ್ಯ ಸರ್ಕಾರಗಳು ಕೋವಿಡ್ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡುವ ಜತೆಗೆ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, ಲಸಿಕೆ …

Read More »

ನೀವು ಸದಾ ಜೀವಂತವಾಗಿರುತ್ತೀರಿ’; ಮಿಲ್ಖಾ ಸಿಂಗ್​ ನಿಧನಕ್ಕೆ ಫರ್ಹಾನ್​ ಅಖ್ತರ್​ ಸಂತಾಪ

ಕೊರೊನಾ ವೈರಸ್​ ಸೋಂಕಿನಿಂದ ಬಳಲುತ್ತಿದ್ದ ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಮಿಲ್ಖಾ ಸಿಂಗ್ ಅವರು ಶುಕ್ರವಾರ (ಜೂ.18) ಮಧ್ಯರಾತ್ರಿ ನಿಧನರಾದರು. ಅವರ ಅಗಲಿಕೆಗೆ ಲಕ್ಷಾಂತರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮಿಲ್ಖಾ ಸಿಂಗ್​ ಜೀವನವನ್ನು ಆಧರಿಸಿ ‘ಭಾಗ್​ ಮಿಲ್ಖಾ ಭಾಗ್​’ ಸಿನಿಮಾ ತಯಾರಾಗಿತ್ತು. 2013ರಲ್ಲಿ ಬಂದ ಆ ಸಿನಿಮಾದಲ್ಲಿ ಮಿಲ್ಖಾ ಸಿಂಗ್​ ಪಾತ್ರವನ್ನು ಫರ್ಹಾನ್​ ಅಖ್ತರ್​ ಮಾಡಿದ್ದರು. ಆ ಚಿತ್ರಕ್ಕೆ ರಾಕೇಶ್​ ಓಂಪ್ರಕಾಶ್​ ಮೆಹ್ರಾ ನಿರ್ದೇಶನ ಮಾಡಿದ್ದರು. ಬಾಕ್ಸ್​ ಆಫೀಸ್​ನಲ್ಲಿ …

Read More »

ಬೆಳಗಾವಿಯ ಜಲಾಶಯ ನೀರಿನ ಮಟ್ಟ….

ಹಿಡಕಲ್ ಜಲಾಶಯ ನೀರಿನ ಮಟ್ಟ ಘಟಪ್ರಭಾ ನದಿ ಹಿಡಕಲ್ ಜಲಾಶಯ ಗರಿಷ್ಠ ಮಟ್ಟ- 2175.00 ಅಡಿ ಇಂದಿನ ಮಟ್ಟ- 2110.80 ಅಡಿ ಒಳ ಹರಿವು- 39,515 ಕ್ಯೂಸೆಕ್ ಹೊರ ಹರಿವು- 94 ಕ್ಯೂಸೆಕ್ ನೀರು ಸಂಗ್ರಹ- 13.474 ಡ್ಯಾಂ ಸಾಮರ್ಥ್ಯ- 51.00 tmc ನವಿಲುತಿರ್ಥ ಜಲಾಶಯ ನೀರಿನ ಮಟ್ಟ ಮಲಪ್ರಭಾ ನದಿ ನವೀಲು ತೀರ್ಥ ಜಲಾಶಯ ಗರಿಷ್ಠ ಮಟ್ಟ- 2079.50 ಅಡಿ ಇಂದಿನ ಮಟ್ಟ- 2054.10 ಒಳ ಹರಿವು- 17208 …

Read More »

ಗೋವಾ : ವ್ಯಾಕ್ಸಿನ್ ಪಡೆಯದೇ ಇದ್ರೆ ಪ್ರವಾಸಿಗರಿಗೆ ನೋ ಎಂಟ್ರಿ..!

ಗೋವಾ : ಪ್ರವಾಸಿಗರ ಹಾಟ್ ಫೇವರೇಟ್ ತಾಣವಾಗಿರುವ ಗೋವಾಗೆ ಪ್ರವಾಸಿಗರು ವಿಸಿಟ್ ಮಾಡ್ಬೇಕಂದ್ರೆ ಇನ್ಮುಂದೆ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಬೇಕು.. ಅಲ್ಲದೇ ರಾಜ್ಯದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ ಶೇ.100ರಷ್ಟು ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ನನ್ನು ರಾಜ್ಯವ್ಯಾಪಿ ನೀಡುವ ಗುರಿಯನ್ನು ಗೋವಾ ಸರ್ಕಾರ ಹೊಂದಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್‍ನನ್ನು ರಾಜ್ಯದಲ್ಲಿ ಪೂರ್ಣಗೊಳಿಸುವವರೆಗೆ ಪ್ರವಾಸೋದ್ಯಮವನ್ನು …

Read More »