ಎಣ್ಣೆ ಆಯ್ತು, ಇಂಧನ ಆಯ್ತು ಈಗ ಬಸ್ ದರ, ನಾವ್ ಏನ್ ಮಾಡೋಣ ನೀವೇ ಹೇಳಿ’: ವಡಗಾವ ನಿವಾಸಿ ಸಂಜಯ ಜಯಗೌಡ ಅವರು ಮಾತನಾಡಿ, ”ರಾಜ್ಯ ಸರ್ಕಾರ ಇಷ್ಟು ದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿತ್ತು. ಆದರೆ, ಈಗ ಬಸ್ ದರ ಏರಿಸಿ ಪುರುಷರ ಹಣವನ್ನು ಮಹಿಳೆಯರಿಗೆ ಕೊಡುತ್ತಿರುವುದು ಸರಿಯಲ್ಲ. ದುಡಿಯುವ ಕೈಗಳಿಗೆ ಕೆಲಸ ಕೊಡಿ. ಅವರೇ ನಿಮಗೆ …
Read More »ಸರ್ಕಾರದ ಲಿಂಗತ್ವ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರಲು ಹತ್ತು ಹಲವು ಯೋಜನೆ
ಹಾವೇರಿ : ರಾಜ್ಯ ಸರ್ಕಾರ ರಾಜ್ಯದ ವಿವಿಧೆಡೆ 50 ಅಕ್ಕ ಕೆಫೆ ನಿರ್ಮಿಸಿದೆ. ಜಿಲ್ಲೆಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಿರ್ಮಾಣಗೊಂಡಿರುವ ಅಕ್ಕ ಕೆಫೆಯನ್ನು ಲಿಂಗತ್ವ ಅಲ್ಪಸಂಖ್ಯಾತರೇ ನಿರ್ವಹಣೆ ಮಾಡಲಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರ ನೇತೃತ್ವದಲ್ಲಿ ನಡೆಯುವ ಅಕ್ಕ ಕೆಫೆ ನಾಳೆಯಿಂದ ಪ್ರಾರಂಭವಾಗಲಿದೆ. ಹಾವೇರಿಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಸುಮಾರು 15 ಲಕ್ಷ ರೂಪಾಯಿ ಅನುದಾನದಲ್ಲಿ ಅಕ್ಕ ಕೆಫೆಯನ್ನ ನಿರ್ಮಾಣ ಮಾಡಲಾಗಿದೆ. ರಾಜ್ಯದಲ್ಲಿ ಪ್ರಥಮ ಭಾರಿಗೆ ಲಿಂಗತ್ವ ಅಲ್ಪಸಂಖ್ಯಾತರು ಇದರ …
Read More »ಜ.5ರಿಂದಲೇ KSRTC, BMTC ಟಿಕೆಟ್ ದರ ಹೆಚ್ಚಳ
ನಾಳೆ ಶನಿವಾರ ಒಂದು ದಿನ ಕಳೆದರೆ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುವ ಗಂಡಸರ ಜೇಬಿಗೆ ಕತ್ತರಿ ಬೀಳಲಿದೆ. ಭಾನುವಾರ ಬೆಳಗ್ಗೆಯಿಂದಲೇ ಅಂದರೆ ಜನವರಿ 5ರಿಂದ KSRTC ಟಿಕೆಟ್ ದರ ಹೆಚ್ಚಳ ರಾಜ್ಯಾದ್ಯಂತ ಜಾರಿಗೆ ಬರುತ್ತಿದೆ. ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಕರ್ನಾಟಕ ನಾಲ್ಕು ನಿಗಮಗಳ ಬಸ್ ಪ್ರಯಾಣ ದರದಲ್ಲಿ ಶೇ.15ರಷ್ಟು ಏರಿಕೆ ಮಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಲು ಸಾಲು …
Read More »ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ: ಯತ್ನಾಳ್
ಬೆಂಗಳೂರು: ಬಿಜೆಪಿಯಿಂದ ನನ್ನನ್ನು ಯಾಕೆ ಉಚ್ಛಾಟನೆ ಮಾಡುತ್ತಾರೆ. ನನ್ನನ್ನು ಉಚ್ಛಾಟಿಸಲಾಗುತ್ತದೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಯಾರ ಜೊತೆಯೂ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿಲ್ಲ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಜೊತೆಗೂ ಸಹ ನನಗೆ ಅಡ್ಜಸ್ಟ್ಮೆಂಟ್ ಇಲ್ಲ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …
Read More »ಹಾವೇರಿಯಲ್ಲಿ ಗಾಡಾ ಸ್ಪರ್ಧೆ
ಹಾವೇರಿ : ಜಿಲ್ಲೆಯ ಜಾನಪದ ಸೊಗಡಿನ ಕ್ರೀಡೆಗಳು ಎಂದು ಹೋರಿ ಬೆದರಿಸುವ ಸ್ಪರ್ಧೆ, ಗಾಡಾ ಓಡಿಸುವ ಸ್ಪರ್ಧೆ ಮತ್ತು ಟಗರು ಕಾಳಗ. ಸುಗ್ಗಿ ಮುಗಿಯುತ್ತಿದ್ದಂತೆ ರೈತರು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಈ ರೀತಿಯ ಸ್ಪರ್ಧೆ ಆಯೋಜಿಸುತ್ತವೆ. ಹೊಸವರ್ಷ ಮತ್ತು ಸಂಕ್ರಾಂತಿ ಅಂಗವಾಗಿ ಹಾವೇರಿಯಲ್ಲಿ ಖಾಲಿ ಗಾಡಾ ಓಡಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯಲ್ಲಿ ಇದುವರೆಗೂ ಸಾವನ್ನಪ್ಪಿದ ಕೊಬ್ಬರಿ ಹೋರಿಗಳ ಸವಿನೆನಪಿಗಾಗಿ ಗಾಡಾ ಸ್ಫರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಹಾವೇರಿ, ಬೆಳಗಾವಿ, ಮಹಾರಾಷ್ಟ್ರ …
Read More »ಸ್ಮಾರ್ಟ್ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ.
ಬೆಂಗಳೂರು: ಸ್ಮಾರ್ಟ್ ಸಿಟಿ ಅಭಿಯಾನದ ಅಡಿ ರಾಜ್ಯದ 6 ಸ್ಮಾರ್ಟ್ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ, ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸೂಚಿಸಿದ್ದಾರೆ. ಸ್ಮಾರ್ಟ್ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ – ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು ನಗರಗಳಲ್ಲಿ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಬೈರತಿ ಸುರೇಶ್ ಅವರು ಇಂದು …
Read More »ಗಂಡನ ದೇಹವನ್ನು ಎರಡು ತುಂಡಾಗಿ ಕತ್ತರಿಸಿ ಕೊಲೆ
ಚಿಕ್ಕೋಡಿ (ಬೆಳಗಾವಿ) : ಮದ್ಯಪಾನ ಸೇವನೆಗೆ ಹೆಂಡತಿಗೆ ಆಗಾಗ ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ ಗಂಡನನ್ನು ಪತ್ನಿಯೇ ಎರಡು ತುಂಡಾಗಿ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಶ್ರೀಮಂತ ಇಟ್ನಾಳೆ (50) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ಡಿಸೆಂಬರ್ 10 ರಂದು ಈ ಘಟನೆ ನಡೆದಿದೆ. ಆರೋಪಿಯಾದ ಸಾವಿತ್ರಿ ಇಟ್ನಾಳೆ(30)ಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು …
Read More »ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ
ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರ ಹೆಸರಿನ ಮೇಲೆ ಫೈನಾನ್ಸನವರು ಮೋಸ ಮಾಡಿದ್ದು, ಕಿರುಕುಳ ನೀಡುತ್ತಿದ್ದಾರೆ. ಇಂತಹ ಫೈನಾನ್ಸಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು. ಇಂದು ಬೆಳಗಾವಿ ಜಿಲ್ಲಾದಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗೋಕಾಕ ತಾಲೂಕಿನ ಅನಕ್ಷರಸ್ಥ ಮಹಿಳೆಯರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಕರ್ನಾಟಕ ರಾಜ್ಯ …
Read More »ಧಾರವಾಡದಲ್ಲಿ ವ್ಯವಸ್ಥಿತವಾಗಿ ಅಯ್ಯಪ್ಪನ ಮೂರ್ತಿ ಪ್ರತಿಷ್ಠಾಪನೆ…. ಸ್ಥಳದಲ್ಲಿ ಜಮಾಯಿಸಿದ ಮಾಲಾಧಾರಿಗಳು, ತೆರವಿಗೆ ಬಂದು ಸ್ಥಳೀಯರ ವಿರೋದಕ್ಕೆ ಮರಳಿದ ಜೆಸಿಬಿ….
ನಿನ್ನೆ ಹೊಸ ವರ್ಷಾಚರಣೆ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಅದರೆ ಧಾರವಾಡದಲ್ಲಿ ಯುವ ಸಮುದಾಯ ಹೊಸ ವರ್ಷ ಸಂಭ್ರಮ ಮುಗಿಸಿ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಧಾರವಾಡದಲ್ಲಿ ವಿಚಿತ್ರ ಘಟನೆವೊಂದು ನಡೆದು ಹೋಗಿದೆ. ಅರೇ ಅದೇನಪ್ಪಾ ಘಟನೆ ಅಂತೀರಾ ಅದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ.. ಹೀಗೆ ಖುಲ್ಲಾ ಜಾಗದಲ್ಲಿ ವಿರಾಜಮಾನರಾಗಿರುವ ಅಯ್ಯಪ್ಪನ ಮೂರ್ತಿ. ಅದರ ಎದುರುಗಡೆಯೇ ನಾಗರ ಮೂರ್ತಿ. ಎರಡೂ ಮೂರ್ತಿಗಳಿಗೆ ಪೂಜೆ ಪುನಸ್ಕಾರ. ಮತ್ತೊಂದೆಡೆ ಅಯ್ಯಪ್ಪ ಮಾಲಾಧಾರಿಗಳ ಸಮಾಗಮ. …
Read More »ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಬಳ್ಳಾರಿಯ ಕಂಪ್ಲಿ ಸಂಪೂರ್ಣ ಬಂದ್!
ಬಳ್ಳಾರಿ: ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಜಿಲ್ಲೆಯ ಕಂಪ್ಲಿ ತಾಲೂಕು ಸಂಪೂರ್ಣ ಬಂದ್ ಆಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಗರು ಅವಮಾನ ಮಾಡುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ವಿವಿಧ ಸಂಘಟನೆಗಳ ಪ್ರತಿಭಟನಕಾರರು ಬೆಳಗ್ಗೆ 6 ಗಂಟೆಯಿಂದಲೇ ಬಂದ್ ಆರಂಭಿಸಿದ್ದಾರೆ. ಬಂದ್ ಇದ್ದರೂ ಕಂಪ್ಲಿಯಲ್ಲಿ ಎಂದಿನಂತೆ ದಿನಸಿ ಮಾರುಕಟ್ಟೆಗಳು, ಮತ್ತು ಆಟೋ, ಕ್ಯಾಬ್ ಮಾತ್ರ ಓಪನ್ …
Read More »