Breaking News

ರಾಷ್ಟ್ರೀಯ

ಒಂದೇ ಕುಟುಂಬದ ಒಂಬತ್ತು ಮಂದಿಯ ಆತ್ಮಹತ್ಯೆ

ಸಾಂಗ್ಲಿ: ಸಾಂಗ್ಲಿ ಜಿಲ್ಲೆಯ ಎರಡು ಮನೆಗಳಲ್ಲಿ ಒಂದೇ ಕುಟುಂಬದ ಒಂಬತ್ತು ಮಂದಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿಸಲ್ಪಟ್ಟವರು ಕುಟುಂಬಕ್ಕೆ ಸಾಲ ನೀಡಿದವರಾಗಿದ್ದಾರೆ. ಮಣಿಕ್‌ ವಾನ್ಮೋರೆ ಮತ್ತು ಪೋಪರ್‌ ವಾನ್ಮೋರೆ ಸದಸ್ಯರು ತಮ್ಮ ಪತ್ನಿಯರು, ಮಕ್ಕಳು ಮತ್ತು ತಾಯಿಯೊಂದಿಗೆ ಸೋಮವಾರ ಮಹೈಸಲ್‌ ಪಟ್ಟಣದ ತಮ್ಮ ಮನೆಗಳಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸಹೋದರರ ಮನೆಗಳು ಒಂದು ಕಿಮೀ ಅಂತರದಲ್ಲಿವೆ. ಮಣಿಕ್‌ ಮನೆಯಲ್ಲಿ ಆರು ಮಂದಿ …

Read More »

ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ

ಬೆಳಗಾವಿ: ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆದಿದ್ದ ರಮೇಶ್ ಜಾರಕಿಹೊಳಿ ಇದೀಗ ಮುಂಬೈ ತೆರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಅವರ ಮುಂಬೈ ಪ್ರವಾಸ ಕುತೂಹಲವನ್ನು ಮೂಡಿಸುತ್ತಿರುವುದರೊಂದಿಗೆ, ತಮ್ಮ ಗುರುವಿನ ಋಣ ತೀರಿಸಲು ಮುಂದಾಗಿದ್ದಾರಾ ಎಂಬ ಪ್ರಶ್ನೆಯೂ ಕಾಡುತ್ತಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ರಮೇಶ್ ಜಾರಕಿಹೊಳಿ ಯಾವಾಗಲೂ ತಮ್ಮ ಗುರು ಎಂದು ಹೇಳಿಕೊಳ್ಳುತ್ತಿದ್ದರು. ಇದೀಗ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನದ ಅಂಚಿನಲ್ಲಿದ್ದು, ಕಮಲ …

Read More »

ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಎನ್​ಡಿಎ ಮೈತ್ರಿಕೂಟದ ಅಭ್ಯರ್ಥಿ

ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ NDA ಒಕ್ಕೂಟ ತನ್ನ ಅಭ್ಯರ್ಥಿಯನ್ನ ಪ್ರಕಟಿಸಿದೆ. ಇಂದು ನಡೆದ ಸಂಸದೀಯ ಸಭೆ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಒಡಿಶಾದ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಎನ್​ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.   ಬಿಜೆಪಿಯ ಈ ಘೋಷಣೆ ಬೆನ್ನಲ್ಲೇ ದ್ರೌಪತಿ ಮುರ್ಮು ಯಾರು ಎಂಬ ಚರ್ಚೆಗಳು ಶುರುವಾಗಿವೆ. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ಗವರ್ನರ್ ಎಂಬ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು 

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಅವರಾದಿ-ತಿಮ್ಮಾಪೂರ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ ಅನುದಾನ ಮಂಜೂರು   ಮೂಡಲಗಿ  ತಾಲೂಕಿನ ಅವರಾದಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 18 ಕೋಟಿ ರೂ ವೆಚ್ಚದ ಅವರಾದಿ-ತಿಮ್ಮಾಪೂರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ರಸ್ತೆ ಕಾಮಗಾರಿಯಿಂದ ಅವರಾದಿಯಿಂದ ಹಳೇಯರಗುದ್ರಿ, ಹೊಸಯರಗುದ್ರಿ ಮೂಲಕ ತಿಮ್ಮಾಪೂರ ರಸ್ತೆ ಅಭಿವೃದ್ಧಿಯಾಗಲಿದೆ ಎಂದು ಅವರು ಹೇಳಿದರು. ಶಾಸಕ ಹಾಗೂ ನಮ್ಮೆಲ್ಲರ ನೆಚ್ಚಿನ …

Read More »

ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್‌

ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್‌ ಆಗಿರುವ ಘಟನೆ ಇಂಡೊನೇಷ್ಯಾದಲ್ಲಿ ನಡೆದಿದೆ. ಮಹಿಳೆಗೆ ಡೇಟಿಂಗ್‌ ಆಪ್‌ ನಲ್ಲಿ ಪರಿಚಯವಾದ ವ್ಯಕ್ತಿ ಒಬ್ಬ ಸರ್ಜನ್‌ ಆಗಿದ್ದು, ಉದ್ಯಮಿ ಕೂಡ ಆಗಿದ್ದ. ಪರಸ್ಪರ ಪರಿಚಯ ಆದ ನಂತರ ಇಬ್ಬರೂ ಗುಟ್ಟಾಗಿ ಮದುವೆ ಆದರು. ಈ ವೇಳೆ ಗಂಡ ಕುಟುಂಬದಿಂದ ದೂರ ಹೋಗುವುದಾಗಿ ತಿಳಿಸಿದ್ದ. ದಂಪತಿ ದಕ್ಷಿಣ ಸುಮರ್ತಾಗೆ ವಲಸೆ …

Read More »

ಅಗ್ನಿಪಥ್ ಫೈಟ್: ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿ ವಶಕ್ಕೆ

ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಚಲೋ, ಬೆಳಗಾವಿ ಬಂದ್‍ಗೆ ಕೆಲವರು ಕರೆ ನೀಡಿರುವ ಹಿನ್ನೆಲೆ ಈವರೆಗೆ ಬೆಳಗಾವಿಯಲ್ಲಿ 150ಕ್ಕೂ ಅಧಿಕ ಸೇನಾ ಆಕಾಂಕ್ಷಿಗಳನ್ನು  ವಶಕ್ಕೆ ಪಡೆದಿದ್ದಾರೆ.ಹೌದು ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಸಂಬಂಧ ಪರ-ವಿರೋಧ ವ್ಯಕ್ತವಾಗುತ್ತಿದೆ. ಬೆಳಗಾವಿ ನಗರದ ವಿವಿಧೆಡೆ ಗುಂಪು ಸೇರಿ ನಿಂತಿದ್ದ 150ಕ್ಕೂ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸೇನಾ ಆಕಾಂಕ್ಷಿಗಳು ಕೇಂದ್ರ …

Read More »

ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

    ಮೂಡಲಗಿ* ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ …

Read More »

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಬೋಲ್ಡೊಜರ್ ಸದ್ದು: ಅಕ್ರಮ ಮನೆಗಳ ನೆಲಸಮ

ಕಲಬುರಗಿ‌: ನಗರದ ಜಾಫರಾಬಾದ್ ಪ್ರದೇಶದಲ್ಲಿ ‌ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ‌ನಿರ್ಮಿಸಲಾಗಿರುವ ಮನೆಗಳನ್ನು ಇಂದು ಬೆಳಗಿನ‌ ಜಾವ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸುವ ‌ಮೂಲಕ ಅಕ್ರಮ ಮನೆಗಳನ್ನು ನೆಲಸಮ‌ ಮಾಡಲಾಗುತ್ತಿದೆ.   ಇಂದು ಬೆಳ್ಳಂಬೆಳಗ್ಗೆ ಪೊಲೀಸ್ ಬಲದೊಂದಿಗೆ ತೆರಳಿದ ಜಿಲ್ಲಾಧಿಕಾರಿ ಯಶ್ವಂತ ಗುರುಕರ್, ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ತಹಶೀಲ್ದಾರ ಪ್ರಕಾಶ ಕುದುರೆ, ಪಾಲಿಕೆ ಅಧಿಕಾರಿಗಳು ಹಾಗೂ ಇತರರು ಸೇರಿಕೊಂಡು ಕಾರ್ಯಾಚರಣೆ ಶುರುವಿಟ್ಟಿದ್ದಾರೆ. ಬೆಳಗಿನ ಜಾವ ನಾಲ್ಕು ಗಂಟೆಗೆ ಜೆಸಿಬಿ …

Read More »

ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

      *ಮೂಡಲಗಿ:* ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.   ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ …

Read More »

ಪಗ್ನಿಪಥ ಯೋಜನೆಯನ್ನು ಅಗ್ನಿಕುಂಡವನ್ನಾಗಿ ಮಾಡುವ ಕೆಲಸಕ್ಕೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ಕೆ ವಿರೋಧ ಪಕ್ಷದ ನೇತಾರರು

ದೇಶದಲ್ಲಿ ಯುವ ಹಾಗೂ ಸಮರ್ಥ ಸೇನಾ ಶಕ್ತಿಯನ್ನು ನಿರ್ಮಾಣ ಮಾಡಬೇಕೆಂಬ ಉದ್ದೇಶದಿಂದ ಸೇನಾ ಮುಖ್ಯಸ್ಥರು ಮಾಡಿದ ಪಗ್ನಿಪಥ ಯೋಜನೆಯನ್ನು ಅಗ್ನಿಕುಂಡವನ್ನಾಗಿ ಮಾಡುವ ಕೆಲಸಕ್ಕೆ ಯುವಕರನ್ನು ಪ್ರೇರೇಪಿಸುವ ಕಾರ್ಯಕ್ಕೆ ವಿರೋಧ ಪಕ್ಷದ ನೇತಾರರು ಮುಂದಾಗುತ್ತಿರುವುದು ವಿಷಾದನೀಯ ಎಂದು ರಾಜ್ಯ ಬಿಜೆಪಿ ವಕ್ತಾರ ಎಂಬಿ ಜಿರಲಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಬಿಜೆಪಿ ವಕ್ತಾರ ಎಂಬಿ ಜಿರಲಿ, ವಿಶ್ವದ ಅತ್ಯಂತ ಶಕ್ತಿಶಾಲಿ ಸೇನಾ ಹೊಸ ವ್ಯವಸ್ಥೆಯನ್ನು ದೇಶದ ರಕ್ಷಣಾ ಮಂತ್ರಿಗಳಾದ ರಾಜನಾಥ್‍ಸಿಂಗ್ …

Read More »