ಪಣಜಿ: ಗೋವಾ ಬೀಚ್‌ನಲ್ಲಿ ಪ್ರವಾಸಿಗನೊಬ್ಬ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿ, ಪೇಚಿಗೆ ಸಿಲುಕಿದ ಘಟನೆ ಶುಕ್ರವಾರ (ಜೂ.17) ನಡೆದಿದೆ. ದೆಹಲಿ ಮೂಲದ ಲಲಿತ್‍ಕುಮಾರ್ ದಯಾಳ್ ಎಂಬಾತ ಬಾಡಿಗೆಗೆ ಕಾರನ್ನು ಪಡೆದು ಕಡಲ ತೀರದಲ್ಲಿ ಚಲಾಯಿಸಿದ್ದಾನೆ. ಈ ವೇಳೆ ಕಾರು ನೀರಿನಲ್ಲಿ ಮುಳುಗಿದೆ. ಘಟನೆ ಹಣಜುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಲಲಿತ್‍ಕುಮಾರ್ ಚಲಾಯಿಸುತ್ತಿದ್ದ ಕ್ರೇಟಾ ಕಾರು, ಶೇಟಯೆ ವಾಡಾದ ಸಂಗೀತಾ ಗವಂಡಾಳಕರ್ ರವರಿಗೆ ಸೇರಿದೆ ಎಂದು …
Read More »ಮತ್ತಷ್ಟು ಕ್ಷೀಣಿಸಿದ ಸೋನಿಯಾ ಆರೋಗ್ಯ; ಮೂಗಿನಲ್ಲಿ ರಕ್ತಸ್ರಾವ
ನವದೆಹಲಿ; ಕೊವಿಡ್ ಹಿನ್ನೆಲೆಯಲ್ಲಿ ವಾರದ ಹಿಂದೆ ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ನಾಯಕ ಸೋನಿಯಾಗಾಂಧಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದೆ. ಅವರಿಗೆ ಪಂಗಲ್ ಇನ್ಫೆಕ್ಷನ್ ಹೆಚ್ಚಾಗಿದ್ದು ಚಿಕಿತ್ಸೆ ಮುಂದವರೆಸಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ಫಂಗಲ್ ಇನ್ಫೆಕ್ಷನ್‌ನಿಂದ ಸೋನಿಯಾಗಾಂಧಿಯವರ ಮೂಗಿನಿಂದ ರಕ್ತಸ್ರಾವವಾಗಿದೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸೋನಿಯಾಗಾಂಧಿಯವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಕೊವಿಡ್ ಬಂದಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊವಿಡ್ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ ಎಂದು ತಿಳಿದುಬಂದಿದೆ.
Read More »ಕೌಜಲಗಿಯಲ್ಲಿಂದು ಜರುಗಿದ ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ*
ಗೋಕಾಕ್- 2019ಮತ್ತು 2021ನೇ ಸಾಲಿನ ನೆರೆ ಸಂತ್ರಸ್ತರ ಕೆಲವು ಮನೆಗಳು ಬ್ಲಾಕ್ ಆಗುತ್ತಿದ್ದು, ಅಂತಹ ಮನೆಗಳ ಬ್ಲಾಕ್ ತೆರವುಗೊಳಿಸಿ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಸಂಜೆ ತಾಲೂಕಿನ ಕೌಜಲಗಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ್ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಅಹವಾಲುಗಳಿಗೆ ಸ್ಪಂದಿಸಿ …
Read More »ದಂತ ವೈದ್ಯರ ಎಡವಟ್ಟು – ಚಿಕಿತ್ಸೆ ಪಡೆದ ನಟಿಯ ಮುಖ ಸಂಪೂರ್ಣ ಚೇಂಚ್
ಬೆಂಗಳೂರು: ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಹಲ್ಲು ನೋವಿಗೆ ಚಿಕಿತ್ಸೆ ತೆಗೆದುಕೊಂಡ ನಟಿಯ ಮುಖ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಸಂಪೂರ್ಣ ಚೇಂಚ್ ಆಗಿರುವ ಘಟನೆ ಬೆಳಗಿಗೆ ಬಂದಿದೆ. ಹಲ್ಲು ನೋವಿನಿಂದ ಬಳಲುತ್ತಿದ್ದ ನಟಿ ಬೆಂಗಳೂರಿನ ಜೆಪಿ ನಗರದ ಡೆಂಟಲ್ ಆಸ್ಪತ್ರೆಯೊಂದರಲ್ಲಿ ಕಳೆದ 28 ದಿನಗಳ ಹಿಂದೆ ಚಿಕಿತ್ಸೆ ತೆಗೆದುಕೊಂಡಿದ್ದರು. ಆ ಬಳಿಕ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ನಟಿಯ ಮುಖ ಸಂಪೂರ್ಣ ಊದಿಕೊಂಡು ರೂಪವೇ ಬದಲಾಗಿದೆ. ಇದೀಗ ಕಳೆದ ಇಪ್ಪತ್ತು ದಿನದಿಂದ ಮನೆಯಿಂದ …
Read More »ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ
ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2007 …
Read More »ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಸಹೋದರನ ನಿವಾಸದ ಮೇಲೆ CBI ದಾಳಿ
ಜೈಪುರ; ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಜೋಧ್‌ಪುರ ನಿವಾಸದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ. ರಸಗೊಬ್ಬರ ವ್ಯಾಪಾರಿಯಾಗಿರುವ ಅಗ್ರಸೇನ್ ಅವರನ್ನು ರಸಗೊಬ್ಬರ ಹಗರಣದಲ್ಲಿ ಈ ಹಿಂದೆ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿತ್ತು. ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರು ಪ್ರಧಾನಿ ಮತ್ತು ಬಿಜೆಪಿ ನಾಯಕ ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 2007 ಮತ್ತು 2009 …
Read More »ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.
ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು. ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು …
Read More »ಸೋನಿಯಾ-ರಾಹುಲ್‌ಗೆ ಸಮನ್ಸ್; ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಕೃತಕವಾಗಿ ಸೃಷ್ಟಿಸಿದ ಕೇಸ್ ನಲ್ಲಿ ತನಿಖೆ ಕೈಗೆತ್ತಿಕೊಂಡು ಕಾಂಗ್ರೆಸ್ ಪಕ್ಷದ ಗೌರವಾನ್ವಿತ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಭೂತಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿ ವಿನಾಕಾರಣ ಕಿರುಕುಳ ನೀಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ಆರ್. ಬಿ. ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ ಗ್ರಾಮೀಣ ಹಾಗೂ ಬೆಳಗಾವಿ ನಗರ …
Read More »ಬೆಳಗಾವಿ: ಹುಕ್ಕೇರಿ ಹಿರೇಮಠದಲ್ಲಿ ಉಚಿತ ಯೋಗ ಶಿಬಿರ
ಬೆಳಗಾವಿ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬೆಳಗಾವಿ ನಗರದ ಲಕ್ಷ್ಮೀ ಟೆಕಡಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀ ಗುರುಶಾಂತೇಶ್ವರ ಕಲ್ಯಾಣ ಪ್ರತಿಷ್ಠಾನ ಹಿರೇಮಠ ಹುಕ್ಕೇರಿ, ಚಿರಾಯು ಪ್ರಕೃತಿ ಮತ್ತು ಯೋಗ ಚಿಕಿತ್ಸಾಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಯೋಗ ಶಿಬಿರ ಹಾಗೂ ಆರೋಗ್ಯ ಸಲಹಾ ಕಾರ್ಯಕ್ರಮ ಶುಕ್ರವಾರದಿಂದ ಐದು ದಿನಗಳ ಕಾಲ ನಡೆಯಲಿದೆ. ಜೂ.17 ರಿಂದ 21 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಡಾ. ಪದ್ಮನಾಭ ದರ್ಬಾರೆ ಅವರು …
Read More »ಭರಮಾಪುರಕ್ಕೆ ಬೆಳಕು ನೀಡಿದ ಶಾಸಕ ಸತೀಶ್ ಜಾರಕಿಹೊಳಿ
ಹುಕ್ಕೇರಿ: ಕಳೆದ ಎಂಟು ವರ್ಷಗಳ ಸತತ ಪ್ರಯತ್ನದಿಂದ ಇಂದು ಭರಮಾಪುರ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ದೊರಕಿದ್ದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಭರಮಾಪುರ ಗ್ರಾಮದಲ್ಲಿ ರಾಜೀವ ಗಾಂಧಿ ಗ್ರಾಮೀಣ ವಿದ್ಯುತೀಕರಣ ಮತ್ತು ಬೆಳಕು ಯೋಜನೆಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಕೆಲವರಿಗೆ ವಿದ್ಯುತ್ ದೊರಕಿದ್ದು, ಇನ್ನೂ …
Read More »
Laxmi News 24×7