ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ರಾಜಭವನ ಮುತ್ತಿಗೆಗೆ ಹೊರಟಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ರಾಜಭವನದತ್ತ ಮೆರವಣಿಗೆಯಲ್ಲಿ ಹೊರಟಿದ್ದ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್‌ಪ್ರೆಸ್ ವೃತ್ತದಲ್ಲಿ ಪೊಲೀಸರು ತಡೆದರು. ವಿಧಾನಸಭೆ …
Read More »ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ- ನಲಪಾಡ್
ಬೆಂಗಳೂರು: ರಾಹುಲ್ ಗಾಂಧಿ ಅತ್ಯಾಚಾರ ಮಾಡ್ತಿದ್ದಾರೆ ಎಂದು ಕರ್ನಾಟಕ ಯೂಥ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಗಂಭೀರ ಆರೋಪ ಮಾಡಿದ್ದಾರೆ. ಇ.ಡಿ ಅಧಿಕಾರಿಗಳು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿ ಕಾಂಗ್ರೆಸ್ ನಾಯಕರು ಬೃಹತ್ ಜಾಥಾವನ್ನು ನಗರದಲ್ಲಿ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ ಆಕ್ರೋಶ ಹೊರಹಾಕಿದ ನಲಪಾಡ್, ರಾಹುಲ್ ಮೇಲೆ ಅತ್ಯಾಚಾರ ಮಾಡ್ತಿದ್ದಾರೆ. ಅತ್ಯಾಚಾರ ಎಂದರೇ ರೇಪ್ ಅಲ್ಲ ದೌರ್ಜನ್ಯ. ನಮ್ಮ ಮಾಜಿ ಅಧ್ಯಕ್ಷರ ಮೇಲೆ ದೌರ್ಜನ್ಯ …
Read More »ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ
ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ. ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ …
Read More »ಅಗ್ನಿಪಥ್ ಯೋಜನೆಗೆ ವಿರೋಧ; ರೈಲಿಗೆ ಬೆಂಕಿ ಹಚ್ಚಿ ಯುವಕರ ಆಕ್ರೋಶ
ಪಾಟ್ನಾ: ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ವಿರುದ್ಧ ಪ್ರತಿಭಟನೆಗಿಳಿದಿರುವ ಯುವಕರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೇನೆಗೆ ಸೇರುವ ಉದ್ದೇಶದಿಂದ ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿದ್ದ ಯುವಕರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಶಾಕ್ ನೀಡಿದ್ದು, ವಯೋಮಿತಿ ಸಡಿಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬಿಹಾರ ಮುಜಾಫರ್ …
Read More »ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ
ದಾವಣಗೆರೆ: ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಿಂದ ರಾಜಭವನ ಚಲೋ ಪ್ರತಿಭಟನೆ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ದುರಂತ. ಹೀಗೆ ಹೋರಾಟ ಮಾಡಿದರೆ ಜನರು ಅವರನ್ನು ಮನೆಗೆ ಚಲೋ ಅಂತಾರೆ ಎಂದು ಹೇಳಿದರು. *ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:* …
Read More »ರಾಹುಲ್ ಗಾಂಧಿಗೆ ಸಮನ್ಸ್ ರಾಜಕೀಯ ಪ್ರೇರಿತ: ಸತೀಶ್ ಜಾರಕಿಹೊಳಿ ಆರೋಪ
ಗೋಕಾಕ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ನಗರದ ಹಿಲ್ಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು. ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …
Read More »ಸಿಎಂ ಬೊಮ್ಮಾಯಿ ಸಿನಿಮಾ ನೋಡಿ ಕಣ್ಣೀರು ಹಾಕಿದರೆ, ಜನ ಅವರ ಸರಕಾರ ನೋಡಿ ಕಣ್ಣೀರಿಡುತ್ತಿದ್ದಾರೆ
ಮೊನ್ನೆಯಷ್ಟೇ ರಕ್ಷಿತ್ ಶೆಟ್ಟಿ ನಟನೆಯ ‘ಚಾರ್ಲಿ 777’ ಸಿನಿಮಾ ನೋಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳ ಮುಂದೆ ಭಾವುಕರಾಗಿ ಆ ಸಿನಿಮಾದ ಬಗ್ಗೆ ಮಾತನಾಡಿದ್ದರು. ಕೆಲ ತಿಂಗಳ ಹಿಂದೆ ನಿಧನ ಹೊಂದಿದ್ದ ತಮ್ಮ ಮನೆಯ ನಾಯಿಯನ್ನು ನೆನಪಿಸಿಕೊಂಡಿದ್ದರು. ಚಾರ್ಲಿ ಸಿನಿಮಾ ನೋಡಿ ಅತ್ತ ಬೊಮ್ಮಾಯಿ ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್ ವ್ಯಂಗ್ಯವಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಕಣ್ಣೀರಿಟ್ಟ ವಿಡಿಯೋ …
Read More »ವಿರೋಧ ಪಕ್ಷಗಳ ರಾಜಕೀಯ ಷಡ್ಯಂತ್ರಕ್ಕೆ ಸೋಲುಂಟಾಗಿದೆ ಎಂದ ಅರುಣ್ ಶಹಾಪೂರ್
ಹಣದ ಪ್ರವಾಹ ಹಾಗೂ ರಾಜಕೀಯ ಷಡ್ಯಂತ್ರದ ನಡುವೆಯೂ ನನ್ನ ಪರವಾಗಿ ಮತ ಚಲಾಯಿಸಿದ ಶಿಕ್ಷಕರಿಗೆ ವಿಶೇಷ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇನ್ನು ಈ ಚುನಾವಣೆಯಲ್ಲಿ ನಾನು ಸೋಲನ್ನು ಕಂಡಿದ್ದು ನಾನದನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸುತ್ತೇನೆ ಎಂದು ಸೋತ ಅಭ್ಯರ್ಥಿ ಅರುಣ್ ಶಹಾಪೂರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ವಾಯವ್ಯ ಶಿಕ್ಷಕರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅರುಣ್ ಶಹಾಪೂರ್, ನನ್ನ ಪರವಾಗಿ ಮತ ಚಲಾವಣೆ ಮಾಡಿರುವ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಣದ …
Read More »ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್
ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಲೋಕಾಯುಕ್ತ ಬಿ.ಎಸ್. ಪಾಟೀಲ್ ಬೆಂಗಳೂರು: ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು, ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕನ್ನಡ ಭಾಷೆಯಲ್ಲಿ, ಭಗವಂತ ಮತ್ತು ಸತ್ಯ-ನಿಷ್ಠೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನಾರ್ಹವಾಗಿತ್ತು.
Read More »ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ
ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.
Read More »
Laxmi News 24×7