Breaking News
Home / ರಾಷ್ಟ್ರೀಯ (page 729)

ರಾಷ್ಟ್ರೀಯ

ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತ: ಮಂಡ್ಯದಲ್ಲಿ ಕೋವಿಡ್ ಸೋಂಕಿತ ಯುವಕ ಸಾವು

ಮಂಡ್ಯ: ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ಕೋವಿಡ್ ಸೋಂಕಿತ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ನಡೆದಿದೆ. ಇಂಡುವಾಳು ಗ್ರಾಮದ ಸುನೀಲ್(29) ಮೃತಪಟ್ಟ ಯುವಕ. ಈತನಿಗೆ 14 ದಿನದ ಹಿಂದೆ ಸೋಂಕು ದೃಢಪಟ್ಟಿತ್ತು. ಮೊದಲ ಮೂರು ದಿನ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದನು. ಮನೆಗೆ ಬಂದ ಎರಡು ದಿನದಲ್ಲಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಮಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವೆಂಟಿವೇಟರ್ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. …

Read More »

ಚಾಮರಾಜನಗರ: ಸೂಕ್ತ ಸಮಯಕ್ಕೆ ಬೆಡ್ ಸಿಗದೆ ಯುವಕ ಸಾವು: ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರೋಶ

ಚಾಮರಾಜನಗರ: ರಕ್ತದ ಆಮ್ಲಜನಕ ಮಟ್ಟ ಕಡಿಮೆಯಾಗಿ ಉಸಿರಾಟದ ತೊಂದರೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ಬಂದ ಯುವಕನಿಗೆ ಬೆಡ್ ದೊರಕದೇ ಮೃತಪಟ್ಟ ಘಟನೆ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಇದರಿಂದ ರೊಚ್ಚಿಗೆದ್ದ ಯುವಕನ ಕಡೆಯವರು ಜಿಲ್ಲಾಸ್ಪತ್ರೆಯ ಕಿಟಕಿ ಗಾಜುಗಳನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿ ಅಭಿಷೇಕ್ (25) ಮೃತ ಯುವಕ. ಕಳೆದ ಆರು ದಿನದ ಹಿಂದೆಯೇ ಯುವಕನಿಗೆ ಸೋಂಕು ಧೃಢಪಟ್ಟಿತ್ತು. ಹೋಂ ಐಸೋಲೇಷನ್ ನಲ್ಲಿದ್ದರು. ಉಸಿರಾಟದ …

Read More »

ಹೊಸ ಗೈಡ್ ಲೈನ್ ಬಿಡುಗಡೆ: ಆರೋಗ್ಯವಂತರಿಗೆ, ಸೋಂಕಿತರಾಗಿದ್ದವರಿಗೆ ಕೋವಿಡ್ ಟೆಸ್ಟ್ ಬೇಕಿಲ್ಲ

ನವದೆಹಲಿ: ಐಸಿಎಂಆರ್ ನಿಂದ ಹೊಸ ಗೈಡ್ ಲೈನ್ ಬಿಡುಗಡೆ ಮಾಡಲಾಗಿದ್ದು, ಪಾಸಿಟಿವ್ ಬಂದವರಿಗೆ ಟೆಸ್ಟ್ ಮಾಡಬೇಕಿಲ್ಲ. ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ ಎಂದು ಕೊರೋನಾ ಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಮ್ಮೆ ಪಾಸಿಟಿವ್ ಆದವರಿಗೆ ಮತ್ತೆ ಟೆಸ್ಟ್ ಮಾಡಬೇಕಿಲ್ಲ ಎಂದು ಹೇಳಲಾಗಿದೆ. ಆರೋಗ್ಯವಂತರು ಅಗತ್ಯ ಕಾರ್ಯಗಳಿಗಾಗಿ ಅಂತರಾಜ್ಯ ಪ್ರಯಾಣಮಾಡುವಾಗ ಅವರಿಗೆ RTPCR ಪರೀಕ್ಷೆ ಕಡ್ಡಾಯ ಬೇಡವೆಂದು ಕೇಂದ್ರ ಸರ್ಕಾರ ಹೊಸ ಕೋವಿಡ್ ಪರೀಕ್ಷೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಪ್ರಯೋಗಾಲಯಗಳ ಮೇಲೆ ಹೆಚ್ಚಿನ …

Read More »

ಕೋವಿಡ್ ಸೊಂಕಿತರಿಗೆ ಉಚಿತವಾಗಿ ಕೆಎಂಎಫ್‍ನಿಂದ 200 ಆಕ್ಸಿಜನ್ ಬೆಡ್‍ಗಳ ಪೂರೈಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಕೋವಿಡ್ ಎರಡನೇ ಅಲೆಯನ್ನು ಕರಾಳಗೊಳಿಸಿರುವ ಆಕ್ಸಿಜನ್ ಕೊರತೆ ಜನರ ಉಸಿರುಗಟ್ಟಿಸುತ್ತಿರುವ ನಡುವೆಯೇ ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿಯು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್ ಪೂರೈಕೆ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಮಂಗಳವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, ಆಕ್ಸಿಜನ್ …

Read More »

ಬೆಂಗಳೂರು-ಧಾರವಾಡ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ

ಧಾರವಾಡ, ಮೇ 04; ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ರೈಲಿನ ಮೂಲಕ ಸಂಚಾರ ನಡೆಸುವ ಜನರು ಟಿಕೆಟ್ ತೋರಿಸಿ ರೈಲು ನಿಲ್ದಾಣಕ್ಕೆ ಸಂಚಾರ ನಡೆಸಲು ಅವಕಾಶ ನೀಡಲಾಗಿದೆ. ನೈಋತ್ಯ ರೈಲ್ವೆ ಪ್ರಯಾಣಿಕರ ಕೊರತೆಯ ಕಾರಣ ಮೇ 4ರಿಂದ ಮುಂದಿನ ಆದೇಶದ ತನಕ ಧಾರವಾಡ- ಬೆಂಗಳೂರು ನಡುವೆ ಸಂಚಾರ ನಡೆಸುತ್ತಿದ್ದ ರೈಲು ಸೇವೆಯನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ರಾಜಧಾನಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ …

Read More »

ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ಆಕ್ಸಿಜನ್ ಕೊರತೆ; ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ನಾಲ್ವರ ಸಾವು

ಕಲಬುರ್ಗಿಯ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೊಂದು ಆಕ್ಸಿಜನ್ ದುರ್ಘಟನೆ ಸಂಭವಿಸಿದೆ. ಆಕ್ಸೀಜನ್ ಕೊರತೆಯಿಂದ ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ನಾಲ್ವರು ಕೋವಿಡ್ ಸೋಂಕಿತರು ಅಸುನೀಗಿದ್ದಾರೆ. ಅಫಜಲಪುರ ತಾಲೂಕಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಕಾಣಿಸಿಕೊಂಡಿದೆ. ಅಫಜಲಪುರ ತಾಲೂಕ ಆಸ್ಪತ್ರೆಯಲ್ಲಿ ಒಟ್ಟು 32 ಸೋಂಕುತರನ್ನು ತೀವ್ರ ನಿಗಾದಲ್ಲಿಟ್ಟು, ಆಕ್ಸಿಜನ್ ನೀಡಲಾಗುತ್ತಿತ್ತು. ಆದರೆ, ಮಧ್ಯರಾತ್ರಿಯ ನಂತರ ಆಸ್ಪತ್ರೆಯಲ್ಲಿನ ಆಕ್ಸಿಜನ್ ಖಾಲಿಯಾಗಿದೆ ಎನ್ನಲಾಗಿದೆ. ಪರಿಣಾಮ …

Read More »

ವಿಶ್ವದ ಶ್ರೀಮಂತ ದಂಪತಿ ಡಿವೋರ್ಸ್​: 27 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಬಿಲ್​ ಗೇಟ್ಸ್​!

ವಾಷಿಂಗ್ಟನ್​: ಟೆಕ್​ ದೈತ್ಯ ಕಂಪನಿ ಮೈಕ್ರೋಸಾಫ್ಟ್​ ಸಂಸ್ಥಾಪಕ ಬಿಲ್​ ಗೇಟ್ಸ್​ ಮತ್ತು ಪತ್ನಿ ಮೆಲಿಂಡಾ ಗೇಟ್ಸ್​ ಡಿವೋರ್ಸ್​ ಪಡೆದುಕೊಂಡಿರುವುದಾಗಿ ಸೋಮವಾರ ಘೋಷಿಸಿದ್ದು, 27 ವರ್ಷಗಳ ಸುದೀರ್ಘ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಬಿಲ್​ ಗೇಟ್ಸ್​ ಮತ್ತು ಮೆಲಿಂಡಾ ವಿಶ್ವದ ಶ್ರೀಮಂತ ದಂಪತಿಗಳಲ್ಲಿ ಒಬ್ಬರಾಗಿದ್ದರು. ಇಬ್ಬರ ಆಸ್ತಿ ಮೌಲ್ಯ 130 ಬಿಲಿಯನ್​ ಡಾಲರ್​ ಎಂದು ಅಂದಾಜಿಸಲಾಗಿದೆ. ಗೇಟ್ಸ್​ ಪರೋಪಕಾರಿ ಗುಣವುಳ್ಳ ವ್ಯಕ್ತಿಯಾಗಿದ್ದು, ತಮ್ಮ ಭಾರಿ ಪ್ರಭಾವಶಾಲಿ ಅಡಿಪಾಯದ ಮೂಲಕ ವಿಶ್ವದಾದ್ಯಂತ ಶತಕೋಟಿ ಹಣವನ್ನು …

Read More »

ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.

ಹೊಸದಿಲ್ಲಿ:ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡು ಬರುತ್ತಿರುವ ಕಾರಣದಿಂದ ಈ ಬಾರಿಯ ಐಪಿಎಎಲ್ ಕೂಟವನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಈ ಬಗ್ಗೆ ಮಾಹಿತಿ ನೀಡಿದ್ದು, 2021ನೇ ಸಾಲಿನ ಐಪಿಎಲ್ ಕೂಟವನ್ನು ಸ್ಥಗಿತಗೊಳಿಸಲಾಗಿದೆ, ಮುಂದೆ ಮತ್ತೆ ಕೂಟ ಆಯೋಜಿಸಲು ಪ್ರಯತ್ನಿಸುತ್ತೇವೆ. ಆದರೆ ರದ್ದು ಮಾಡಿಲ್ಲ ಎಂದಿದ್ದಾರೆ. ಮೂವರು ಆಟಗಾರರು ಸೇರಿದಂತೆ ಒಟ್ಟು ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವರುಣ್ …

Read More »

ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಹನ ಚಾಲಕರಿಗೆ ಶಾಕ್ ಕೊಟ್ಟ ಕೇಂದ್ರ

ನವದೆಹಲಿ: ಪಂಚರಾಜ್ಯ ಚುನಾವಣೆಗೂ ಮುಂಚೆ ದಿನನಿತ್ಯ ಪೆಟ್ರೋಲ್ ಡಿಸೇಲ್ ಬೆಲೆ ಏರುತ್ತಲೇ ಇತ್ತು. ಚುನಾವಣೆ ಹೊತ್ತಲ್ಲಿ ಸ್ಥಿರವಾಗಿದ್ದ ದರ ಇದೀಗ ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 15 ಪೈಸೆ ಏರಿಕೆಯಾಗಿದ್ದು, ಡಿಸೇಲ್ ದರ 16 ಪೈಸೆ ಏರಿಕೆ ಮಾಡಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪ್ರತಿ …

Read More »

ಜೀವಂತ ಇದ್ದರೂ ಸತ್ತನೆಂದು ಬೇರೆಯವರ ಮೃತದೇಹ ಕೊಟ್ಟು ಆಸ್ಪತ್ರೆ ಎಡವಟ್ಟು

ಬೆಳಗಾವಿ: ಕೋವಿಡ್ ಸೋಂಕಿನಿಂದ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಮೃತಪಟ್ಟಿದ್ದಾನೆ ಎಂದು ಹೇಳಿ ಅವರ ಕುಟುಂಬದವರಿಗೆ ಬೇರೆ ಮೃತದೇಹ ನೀಡಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿದ ಘಟನೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ. ಮೋಳೆ ಗ್ರಾಮದ ಪಾಯಪ್ಪ ಸತ್ಯಪ್ಪ ಹಳ್ಳೋಳ್ಳಿ (82) ಈ ವೃದ್ಧ ಕೆಲ ಹೊತ್ತಿನ ನಂತರ ಮನೆಯವರಿಗೆ ಕರೆ ಮಾಡಿ ಇನ್ನೂ ಏಕೆ ಊಟ ತಂದು ಕೊಟ್ಟಿಲ್ಲ ಎಂದು ಕೇಳಿದಾಗ ಆಸ್ಪತ್ರೆ ಸಿಬ್ಬಂದಿ ಮಾಡಿರುವ ಎಡವಟ್ಟು …

Read More »