ರಾಷ್ಟ್ರೀಯ

500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

ಬೆಳಗಾವಿ: ಮಸೀದಿಗಳಲ್ಲಿ ಅಜಾನ್ ಶಬ್ದದ ಕಿರಿಕಿರಿ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಇಂದಿನಿಂದ ರಾಜ್ಯಾದ್ಯಂತ ಅಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಸುಪ್ರಭಾತ, ಚಾಲಿಸಾ ಪಠಣ ಹಿನ್ನೆಲೆ ಬೆಳಗಾವಿಯಲ್ಲಿ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇಂದು ಬೆಳಗ್ಗೆ 5ಕ್ಕೆ ಬೆಳಗಾವಿ ನಗರದ ಆರ್‌ಟಿಓ ವೃತ್ತದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಹನುಮಾನ್ ದೇವರ ಮೂರ್ತಿಗೆ ಆರತಿ ಮಾಡಿ, ಹನುಮಾನ ಚಾಲೀಸಾ ಪಠಣ ಮಾಡಿ …

Read More »

ಟೊಮೆಟೋ ದರ ಮತ್ತೆ ಏರಿಕೆ;

ಕುಂದಾಪುರ: ಕಳೆದ ವಾರ 40-45 ರೂ. ಇದ್ದ ಟೊಮೆಟೋ ದರ ಈಗ ಮತ್ತೆ ಏಕಾಏಕಿ ಭಾರೀ ಏರಿಕೆಯಾಗಿದೆ. ಕೆ.ಜಿ.ಗೆ 40 ರೂ. ಆಸುಪಾಸಿನಲ್ಲಿದ್ದ ದರ 70-80 ರೂ. ಆಗಿದೆ. ಕಾರ್ಯಕ್ರಮಗಳು ಹೆಚ್ಚಾಗಿದ್ದು, ಮಾರುಕಟ್ಟೆಗಳಿಗೆ ಬೇಡಿಕೆಯಷ್ಟು ಟೊಮೆಟೋ ಪೂರೈಕೆಯಾಗದೆ ದರ ಇನ್ನಷ್ಟು ಏರಿಕೆಯಾಗುವ ಸಂಭವವೂ ಇದೆ ಎನ್ನಲಾಗುತ್ತಿದೆ.   ಕಳೆದ ಡಿಸೆಂಬರ್‌ – ಜನವರಿಯಿಂದೀಚೆಗೆ ಇದು ಎರಡನೇ ಬಾರಿಗೆ ಟೊಮೆಟೋ ಬೆಲೆ ಈ ಪ್ರಮಾಣದಲ್ಲಿ ಏರಿದೆ. ಆಗಲೂ 80-90 ರೂ. ಆಸುಪಾಸಿನವರೆಗೆ …

Read More »

ಬಿಜೆಪಿಯಲ್ಲಿ ವಿಶ್ವಾಸ ಮೂಡಿಸದ ವಲಸಿಗರ ನಿಷ್ಠೆ; ಭಿನ್ನ ದಾರಿಯಲ್ಲಿ ಸಚಿವರು, ಶಾಸಕರು

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಅನ್ಯ ಪಕ್ಷಗಳ ನಾಯಕರನ್ನು ಸೆಳೆಯಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಆದರೆ “ಆಪರೇಷನ್‌ ಕಮಲ’ದ ಮೂಲಕ ಬಿಜೆಪಿ ಸೇರಿ ಸರಕಾರ ರಚನೆಗೆ ಕಾರಣವಾಗಿರುವ ವಲಸಿಗರ ಬಗ್ಗೆ ಪಕ್ಷದಲ್ಲಿ ಇನ್ನೂ ವಿಶ್ವಾಸ ಮೂಡಿದಂತಿಲ್ಲ.   ಮೈತ್ರಿ ಸರಕಾರದ ಭಾಗವಾಗಿದ್ದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ನಿಂದ ಬಂದಿರುವ 17 ಶಾಸಕರು ಆರಂಭದಲ್ಲಿ ತಮ್ಮದೇ ಆದ ಪ್ರತ್ಯೇಕ ಗುಂಪು ಕಟ್ಟಿ ಒಗ್ಗಟ್ಟು ಪ್ರದರ್ಶಿಸಿದ್ದರು. ಈ ಗುಂಪು …

Read More »

ಅದೃಷ್ಟ ಎಲ್ಲಿದೆಯೂ ಗೊತ್ತಿಲ್ಲ ಆದ್ರೆ, ರಮೇಶ್ ಅದೃಷ್ಟ ಡ್ರೀಮ್ ಇಲೆವೆನ್ ನಲ್ಲಿ ಖುಲಾಯಿಸಿದೆ.

Punjab Kings : ಐಪಿಎಲ್ 2022 ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಿಸಲ್ಪಡುವ ಕ್ರಿಕೆಟ್ ಲೀಗ್ ಆಗಿದೆ. ಐಪಿಎಲ್ 2022 ತನ್ನ ಕೊನೆಯ ಲೀಗ್ ಹಂತದಲ್ಲಿದೆ. ಇಲ್ಲಿ ಪ್ರತಿನಿತ್ಯ ರೋಚಕ ಪಂದ್ಯಗಳನ್ನು ಪ್ರೇಕ್ಷಕರು ವೀಕ್ಷಿಸುತ್ತಿದ್ದಾರೆ. ಇದೀಗ ಬಿಹಾರದ ಸರನ್ ಜಿಲ್ಲೆಯ ನಿವಾಸಿ ರಮೇಶ್ ಕುಮಾರ್ ಅವರ ಬದುಕು ಐಪಿಎಲ್ ನಿಂದ ರಾತ್ರೋರಾತ್ರಿ ಬದಲಾಗಿದೆ. ಹೇಗೆ ಇಲ್ಲಿದೆ ನೋಡಿ.. ರಮೇಶ್ ಕುಮಾರ್ ಬದುಕನ್ನೇ ಬದಲಿಸಿದ ಐಪಿಎಲ್ ಮಾಧ್ಯಮ ವರದಿಗಳ ಪ್ರಕಾರ, ಬಿಹಾರದ ಸರನ್ ಜಿಲ್ಲೆಯ …

Read More »

G.P.L. ಕ್ರಿಕೆಟ್ ಪಂದ್ಯಾವಳಿ ಇಂದು ಸೆಮಿಫೈನಲ್ ನಾಳೆ ಫೈನಲ್,ಗೆಲ್ಲೋರು ಯಾರು..?

ರಾಹುಲ ಜಾರಕಿಹೊಳಿ ಸಧ್ಯಕ್ಕೆ ಎಲ್ಲ ಕಡೆ ಚರ್ಚೆ ಯಲ್ಲಿರುವ ವಿಷಯ ಅವರು ಪ್ರತಿದಿನ ಏನಾದ್ರೂ ಒಂದು ಕೆಲಸ ಮಾಡ್ತಾನೆ ಇರತಾರೆ , ಸಾಮಾಜಿಕ ಕಾರ್ಯ, ಕಬ್ಬಡಿ ಪಂದ್ಯಾವಳಿ, ಈ ತರ ಎಲ್ಲಾದ್ರೂ ಒಂದು ಕಡೆ ಚರ್ಚೆಯಲ್ಲಿ ಇರ್ತಾರೆ. ಇನ್ನು ಗೋಕಾಕ ನಲ್ಲಿ ನಡೆದ ಜಿ ಪೀ ಎಲ್ ಲೆದರ್ ಬಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿತ್ತು.     ಇಂದೂ ಅದರ ಸೆಮಿ ಫೈನಲ್ ನಡೆಯಿತು. ಹಾಗೂ ನಾಳೆ ಫೈನಲ್ …

Read More »

ಮನುಕುಲವೇ ತಲೆತಗ್ಗಿಸುವ ಘನಘೋರ ಕೃತ್ಯ: ಬಾಲಕಿಯ ಶವವನ್ನು ಹೊರಕ್ಕೆ ತೆಗೆದು 17 ಮಂದಿ ಗ್ಯಾಂಗ್‌ ರೇಪ್‌!

ಇಸ್ಮಾಮಾಬಾದ್: ಮನುಷ್ಯರು ಕ್ರೂರ ಮೃಗಗಳಿಗಿಂತಲೂ ಕ್ರೂರವಾಗುತ್ತಿರುವ ಹಲವಾರು ಘಟನೆಗಳು ನಡೆಯುತ್ತಲೇ ಇವೆ, ಅದರಲ್ಲಿಯೂ ಕೊಲೆ, ಅತ್ಯಾಚಾರದಂಥ ಪ್ರಕರಣ ವರದಿಯಾದಾಗ ಮನುಷ್ಯನ ಕ್ರೂರ ಮುಖಗಳು ಅನಾವರಣಗೊಳ್ಳುತ್ತಿವೆ. ಅಂಥದ್ದೇ ಒಂದು ಭಯಾನಕ ಕೃತ್ಯ ಪಾಕಿಸ್ತಾನದ ಗುಜರಾತ್‌ನ ಚಕ್ ಕಮಲಾ ಗ್ರಾಮದಲ್ಲಿ ನಡೆದಿದೆ.   ಬಾಲಕಿಯೊಬ್ಬಳ ಶವವನ್ನು ಸಮಾಧಿಯಿಂದ ಹೊರಕ್ಕೆ ತೆಗೆದು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುವ ಘಟನೆ ಇದಾಗಿದೆ. ಸುಮಾರು 17 ಮಂದಿ ಸೇರಿ ಈ ರೇಪ್‌ ಮಾಡಿದ್ದಾರೆ ಎಂಬ ಶಂಕೆ ಪೊಲೀಸರಿಗೆ ವ್ಯಕ್ತವಾಗಿದೆ. ಮೃತ …

Read More »

ಮಸೀದಿಗಳ ಮೈಕ್ ತೆರವಿಗೆ ನಾಳೆಯೇ ಡೆಡ್‍ಲೈನ್ – ದೇಗುಲಗಳಲ್ಲಿ 3 ಬಾರಿ ಮಂತ್ರ ಘೋಷ

ಬೆಂಗಳೂರು: ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ. ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ, ಮಠಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಹಾಗೂ ಸುಪ್ರಭಾತವನ್ನು, ಮೈಕ್ ಮೂಲಕ ಪಠಿಸುವ ಆಂದೋಲನಕ್ಕೆ ಶ್ರೀರಾಮ ಸೇನೆ ಮುಂದಾಗಿದೆ. ಈ ಅಭಿಯಾನಕ್ಕೆ ಕೈಜೋಡಿಸುವಂತೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಮುಖ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡಿದ ಶ್ರೀರಾಮಸೇನೆ …

Read More »

ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿ

ಬೆಳಗಾವಿ: ‘ಜಿಲ್ಲೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು’ ಎಂದು ರಾಷ್ಟೀಯ ಹಸಿರು ನ್ಯಾಯಮಂಡಳಿಯ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷ ಸುಭಾಷ ಬಿ.ಅಡಿ ಸೂಚಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ‘ಮಾಲಿನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಕಾರ್ಯಪಡೆ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ‘ಅಂಗಡಿ, ಮಳಿಗೆಗಳು ಹಾಗೂ ಮಾಲ್‌ಗಳಿಗೆ ತೆರಳಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚಿಸಬೇಕು. ಮಾರುವುದು ಕಂಡುಬಂದಲ್ಲಿ, ವ್ಯಾಪಾರಸ್ಥರಿಗೆ ದಂಡ ವಿಧಿಸಬೇಕು’ …

Read More »

ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ, ಹೊಸ ದರ ಇಂದಿನಿಂದ ಜಾರಿ

ನವದೆಹಲಿ: ಗೃಹ ಬಳಕೆ ಅಡುಗೆ ಅನಿಲ (Domestic LPG cylinder) ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದು ಶನಿವಾರ ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ.   ಕಳೆದ ವಾರ, 19-ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102 ರೂಪಾಯಿ 50 ಪೈಸೆಯಷ್ಟು ಹೆಚ್ಚಿಸಲಾಗಿತ್ತು. ಇದು …

Read More »

ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಮನೆ ಮೇಲೆ ಇಡಿ ದಾಳಿ; ಬರೋಬ್ಬರಿ 19.31 ಕೋಟಿ ರೂ. ನಗದು ಪತ್ತೆ

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಜಾರ್ಖಂಡ್ ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಸಿಂಘಾಲ್, ಅವರ ಪತಿ ಮತ್ತು ಇತರ ನಿಕಟ ಸಂಬಂಧಿಗಳ ಮನೆ ಮೇಲೆ ದಾಳಿ ನಡೆಸಿ ಸುಮಾರು 19.31 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದೆ. ಜಾರ್ಖಂಡ್, ಬಿಹಾರ, ದೆಹಲಿ ಹಾಗೂ ಇತರ ನಗರಗಳ 18 ಸ್ಥಳಗಳಲ್ಲಿ ದಾಳಿ ನಡೆಸಿದ ಇಡಿ, ಒಟ್ಟು 19.31 ಕೋಟಿ …

Read More »