Breaking News

ರಾಷ್ಟ್ರೀಯ

ಜಮೀನಲ್ಲಿ ಕೆಲಸ ಮಾಡುತ್ತಿದ್ದ ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ: ಬಿಜೆಪಿ ಮುಂಖಡನ ಹೀನ ಕೃತ್ಯ ಬಯಲು

ಗದಗ : ಗದಗ ಜಿಲ್ಲಾ ಬಿಜೆಪಿ ಅಲ್ಪ ಸಂಖ್ಯಾತರ ಮೋರ್ಚಾ ಮಂಡಳಿ ಉಪಾಧ್ಯಕ್ಷ ಸಿಕಂದರ್ ಬಾಪುನವರ್ ವಿರುದ್ಧ ಆತ್ಯಾಚಾರ ಆರೋಪ ಕೇಳಿ ಬಂದಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿಗೆ ಕರೆದೊಯ್ದು ಸಿಕಂದರ್ ಅತ್ಯಾಚಾರ ಮಾಡಿದ್ದ ಅನ್ನೋ ಆರೋಪ ಇದೆ. 42 ವರ್ಷದ ಸಿಕಂದರ್, ತಮ್ಮ ಜಮೀನಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಮೇಲೆ ಆರು ತಿಂಗಳಿಂದ ನಿರಂತರ ಅತ್ಯಾಚಾರ ಮಾಡಿದ್ದಾನಂತೆ. ಮದ್ವೆಯಾಗೋದಾಗಿಯೂ ಬಾಲಕಿಗೆ ನಂಬಿಸಿದ್ದ ಎನ್ನಲಾಗಿದೆ. ತಂದೆ ತಾಯಿ ಇಲ್ಲದ …

Read More »

ರಾಜ್ಯದಲ್ಲಿ ಯುಪಿ ಮಾದರಿ ಚುನಾವಣೆಗೆ ಬಿಜೆಪಿ ಸಿದ್ಧತೆ

ಬೆಂಗಳೂರು: ಇತ್ತೀಚೆಗೆ ನಡೆದ ಪಂಚ ರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಮರಳಿ ಅಧಿಕಾರ ಪಡೆದಿರುವ ಬಿಜೆಪಿ, ದಕ್ಷಿಣದ ಹೆಬ್ಟಾಗಿಲು ಕರ್ನಾಟಕದಲ್ಲೂ ಅಧಿಕಾರ ಉಳಿಸಿಕೊಳ್ಳಲು ಉತ್ತರ ಪ್ರದೇಶ ಮಾದರಿಯನ್ನು ಅಳವಡಿಸಲು ನಿರ್ಧರಿಸಿದೆ. ಅದಕ್ಕಾಗಿ ಅಭಿವೃದ್ಧಿ ಮಂತ್ರವನ್ನೇ ಮುಂದಿಟ್ಟುಕೊಂಡು “ಸೈಲೆಂಟ್‌ ಓಟರ್‌’ಗಳನ್ನು ಗಟ್ಟಿಗೊಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸಿದೆ. ರಾಜ್ಯದ ಈಗಿನ ಪರಿಸ್ಥಿತಿಯಲ್ಲಿ ಬಿಜೆಪಿ ಮೂರಂಕಿ ಮುಟ್ಟುವುದು ಕಷ್ಟ ಎಂಬ ಮಾಹಿತಿ ಪಕ್ಷದ ವರಿಷ್ಠರಿಗೆ ಲಭ್ಯವಾಗಿದ್ದು, 150 ಸ್ಥಾನಗಳ ಗುರಿ ಮುಟ್ಟಲು ಉತ್ತರ ಪ್ರದೇಶ ಮಾದರಿ ಅನುಸರಿಸಲು …

Read More »

ರಾಯಚೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಮಳೆ- ಧರೆಗುರುಳಿದ ಬೃಹತ್ ಮರ

ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಬಿಸಿಲಿಗೆ ತತ್ತರಿಸಿರುವ ಜಿಲ್ಲೆ ತಂಪಾಗಿದ್ದರು, ಬೆಳೆ ಕಟಾವು ಮಾಡಿದ್ದ ರೈತರು ಕಂಗಾಲಾಗಿದ್ದಾರೆ.ಜಿಲ್ಲೆಯ ಲಿಂಗಸುಗೂರು, ಹಟ್ಟಿ, ಮುದಗಲ್ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗಿದೆ. ಲಿಂಗಸುಗೂರು ತಾಲೂಕಿನ ಆಮದಿಹಾಳ ಗ್ರಾಮದ ಬಳಿಯ ರಾಯಚೂರು-ಬೆಳಗಾವಿ ಹೆದ್ದಾರಿಯಲ್ಲಿ ಬೃಹತ್ ಮರ ಧರೆಗುರುಳಿದೆ. ಗಾಳಿ ಸಹಿತ ಮಳೆ ಜೋರಾಗಿದ್ದರಿಂದ ಬೃಹತ್ ಮರ ಧರೆಗುರುಳಿದೆ. ಮರ ರಸ್ತೆಗೆ ಉರುಳಿ ಬಿದ್ದಿದ್ದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನೂ ಹಟ್ಟಿ ಪಟ್ಟಣದಲ್ಲಿ …

Read More »

PSI ನೇಮಕಾತಿ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

ಬೆಳಗಾವಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಇಂದು ಸಿಐಡಿ ಎಸ್‌ಪಿ. ರಾಘವೇಂದ್ರ ಹೆಗಡೆ, ಡಿವೈಎಸ್‍ಪಿ, ಪ್ರಕಾಶ್ ರಾಠೋಡ್, ಡಿವೈಎಸ್‍ಪಿ ಶಂಕರಗೌಡ ನೇತೃತ್ವದ ತಂಡದಿಂದ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು …

Read More »

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ರಾಜ್ಯ ಬಿಜೆಪಿ ಟಾಂಗ್

ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸಿದ್ದರಾಮಯ್ಯ ಹೇಳಿದಂತೆ ನಡೆಯುತ್ತಿದೆ. ಹಾಗಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಒಂದು ಕಡೆ ಕೆಪಿಸಿಸಿ ಅಧ್ಯಕ್ಷರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ʼಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆʼ ಎಂದು ಹೇಳಿಸುತ್ತಿದ್ದಾರೆ. ಬುರುಡೆ ರಾಮಯ್ಯ ಅವರೇ, ಜಾಣ …

Read More »

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಗುಡ್ ನ್ಯೂಸ್: 6.5 ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ನಿಂದ ಹೊರಗೆ

ಮಂಗಳೂರು: ಡೀಮ್ಡ್ ಫಾರೆಸ್ಟ್ ನಿಯಮ ಸರಳಗೊಳಿಸಿ ರಾಜ್ಯದ ರೈತರ ಆತಂಕ ದೂರ ಮಾಡಲು ಸರ್ಕಾರ ಕ್ರಮಕೈಗೊಂಡಿದೆ. ಮೂಡಬಿದರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 6.5 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಅನೇಕ ವರ್ಷಗಳಿಂದ ಡೀಮ್ಡ್ ಫಾರೆಸ್ಟ್ ನಿಯಮದಿಂದ ಆತಂಕ ಉಂಟಾಗಿತ್ತು. ಇದನ್ನು ಕೈಬಿಡಬೇಕೆಂದು ರೈತರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಇದರ ಅನ್ವಯ 6.5 ಲಕ್ಷ …

Read More »

ಸಂಕಷ್ಟಕ್ಕೆ ಸಿಲುಕಿದ ʼಕಹೋ ನಾ ಪ್ಯಾರ್ ಹೈʼ ನಟಿ ಅಮೀಷಾ

ಎರಡು ದಶಕಗಳ ಹಿಂದೆ ಚಿತ್ರರಂಗದಲ್ಲಿ‌ ಸೆನ್ಸೇಶನ್ ಸೃಷ್ಟಿಸಿದ್ದು ಕಹೋ ನಾ ಪ್ಯಾರ್ ಹೈ ಹಿಂದಿ ಚಿತ್ರ. ಹೃತಿಕ್ ರೋಷನ್ ಈ ಚಿತ್ರದ ಮೂಲಕವೇ ಬಹಳಷ್ಟು ಖ್ಯಾತಿ ಪಡೆದಿದ್ದರು. 22 ವರ್ಷದ ಹಿಂದಿನ ಚಿತ್ರದ ಬಗ್ಗೆ ಈಗೇಕೆ ಪೀಠಿಕೆ ಎಂದಿರಾ? ಈ ಚಿತ್ರದ ನಟಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.   ಹೃತಿಕ್ ರೋಷನ್‌ಗೆ ನಾಯಕಿಯಾಗಿ ನಟಿಸಿ ಜನರ ಮನಗೆದ್ದಿದ್ದ ಖ್ಯಾತ ನಟಿ ಅಮೀಶಾ ಪಟೇಲ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. …

Read More »

ಪುಷ್ಪಾ’ ಸ್ಟಾರ್ ಅಲ್ಲು ಅರ್ಜುನ್ ಡೈಲಾಗ್ ಮರುಸೃಷ್ಟಿಸಿದ ಹೂ ವ್ಯಾಪಾರಿ…!

ಟಾಲಿವುಡ್ ನಟ ಅಲ್ಲು ಅರ್ಜುನ್‌ರ ಬ್ಲಾಕ್‌ಬಸ್ಟರ್ ಪುಷ್ಪ: ದಿ ರೈಸ್ ಸಿನಿಮಾ ಬಿಡುಗಡೆಯಾಗಿ ಸುಮಾರು ನಾಲ್ಕು ತಿಂಗಳಾಗಿದೆ. ಇನ್ನೂ ಚಿತ್ರದ ಸಂಭಾಷಣೆಗಳು, ಹಾಡುಗಳ ಬಗ್ಗೆ ಕ್ರೇಜ್ ಕಡಿಮೆಯಾಗಿಲ್ಲ. ಇದೀಗ ಅಲ್ಲು ಅವರ ಕಾಶ್ಮೀರದ ಅಭಿಮಾನಿಯೊಬ್ಬರ ಚಿತ್ರದ ಪ್ರಮುಖ ಡೈಲಾಗ್ ಅನ್ನು ಹೇಳಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.ಕಾಶ್ಮೀರದಿಂದ ಆಗಾಗ್ಗೆ ಫೋಟೋಗಳು ಮತ್ತು ವಿಡಿಯೋಗಳನ್ನು ಪೋಸ್ಟ್ ಮಾಡುವ ಟ್ವಿಟ್ಟರ್ ಬಳಕೆದಾರರಾದ ನಮ್ರತಾ, ಇದೀಗ ಹೂವು ಮಾರಾಟಗಾರನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ …

Read More »

ನಿರುದ್ಯೋಗ ಬಿಕ್ಕಟ್ಟು ಬಗೆಹರಿಸಿ ಮೋದಿಜೀ ಎಂದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿರುವ ನಿರುದ್ಯೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುತ್ತಾರೆ. ಈ ಬಾರಿಯೂ ಇದೇ ವಿಚಾರಕ್ಕೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಹೇಟ್-ಇನ್-ಇಂಡಿಯಾ ಮತ್ತು ಮೇಕ್-ಇನ್-ಇಂಡಿಯಾ ಒಟ್ಟಿಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.   ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ ಅಪಾಯಕಾರಿ ನಿರುದ್ಯೋಗದ ಬಿಕ್ಕಟ್ಟನ್ನು ಪರಿಹರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. “”ಭಾರತದಿಂದ …

Read More »

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಆರ್ಥಿಕತೆಯನ್ನು ಗಮನಿಸಿದ ನಂತರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಮೇಲಿನ ತೆರಿಗೆಯನ್ನು ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಬುಧವಾರ ಕೋವಿಡ್-19 ಪರಿಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗಿನ ಸಂವಾದದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು …

Read More »