Breaking News
Home / ರಾಷ್ಟ್ರೀಯ (page 740)

ರಾಷ್ಟ್ರೀಯ

5 ಲಕ್ಷ ಬೆಲೆಯ ಅಕ್ರಮ ಗೋವಾ ಮದ್ಯ ತುಂಬಿದ ಲಾರಿ ಪಲ್ಟಿ- ಚಾಲಕ ಪರಾರಿ

ಕಾರವಾರ: ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಲಾರಿ ಪಲ್ಟಿಯಾಗಿದ್ದು, ಚಾಲಕ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಡ್ಲೂರು ಗ್ರಾಮದ ಬಳಿ ಇಂದು ಸಂಜೆ ನಡೆದಿದೆ. ಗೋವಾ ಮೂಲಕ ಕಾರವಾರ ಮಾರ್ಗವಾಗಿ ಹುಬ್ಬಳ್ಳಿ ಕಡೆ ಲಾರಿ ಚಲಿಸುತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಪರವಾನಿಗೆ ಇಲ್ಲದ ಗೋವಾ ಮದ್ಯ ರಸ್ತೆಯಲ್ಲೇ ಬಿದ್ದಿದೆ. ಈ ವೇಳೆ ಚಾಲಕ ಹೆದರಿ ಪರಾರಿಯಾಗಿದ್ದಾನೆ. ಒಂದು …

Read More »

ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ: ಕಮಲ್ ಹಾಸನ್

ಕೊಯಮತ್ತೂರು, ಏಪ್ರಿಲ್ 5: ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ನಾನು ಸಿನಿಮಾರಂಗ ಬಿಡಲೂ ಸಿದ್ಧನಾಗಿದ್ದೇನೆ ಎಂದು ನಟ ಹಾಗೂ ಮಕ್ಕಳನೀದಿ ಮಯ್ಯಂ ಮುಖಂಡ ಕಮಲ್ ಹಾಸನ್ ಹೇಳಿದ್ದಾರೆ. “ನನ್ನ ರಾಜಕೀಯ ಜೀವನಕ್ಕೆ ಅಡ್ಡಿಯಾಗುತ್ತದೆ ಎಂದಾದರೆ ಸದ್ಯಕ್ಕಿರುವ ಎಲ್ಲಾ ಪ್ರಾಜೆಕ್ಟ್‌ಗಳನ್ನು ಮುಗಿಸಿ ಸಿನಿಮಾ ರಂಗವನ್ನು ಬಿಡುತ್ತೇನೆ” ಎಂದು ಘೋಷಿಸಿದ್ದಾರೆ. ತಮ್ಮ ರಾಜಕೀಯ ಪ್ರವೇಶ ಐತಿಹಾಸಿಕ ಎಂದು ಹೇಳಿರುವ ಅವರು, ರಾಜಕೀಯದಿಂದ ದೂರ ಉಳಿಯಲು ಬಯಸುವ ಶೇ 30ರಷ್ಟು ಮಂದಿಯಲ್ಲಿ ನಾನೂ …

Read More »

ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಯೋಧರು ಹುತಾತ್ಮ, 18 ಯೋಧರು ನಾಪತ್ತೆ!

ಛತ್ತೀಸ್ ಗಢ್: ಇಲ್ಲಿನ ಸುಕ್ಮಾ- ಬಿಜಾಪುರ ಗಡಿ ಪ್ರದೇಶದಲ್ಲಿ ಶನಿವಾರ ನಕ್ಸಲರ ವಿರುದ್ಧದ ಕಾರ್ಯಾಚರಣೆಯಲ್ಲಿಎಂಟು ಮಂದಿ ಯೋಧರು ಹುತಾತ್ಮರಾಗಿದ್ದು, 18 ಮಂದಿ ಯೋಧರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಶನಿವಾರ ಸಿಆರ್‌ಪಿಎಫ್ ನ ಕೋಬ್ರಾ ಪಡೆ, ವಿಶೇಷ ಕಾರ್ಯಾಚರಣೆ ಪಡೆ, ಜಿಲ್ಲಾ ಮೀಸಲು ಗಾರ್ಡ್ಸ್‌ನ 2 ಸಾವಿರ ಸಿಬ್ಬಂದಿ ಛತ್ತೀಸ್‌ಗಡದ ಬಿಜಾಪುರ ಮತ್ತು ಸುಕ್ಮಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಸುಕ್ಮಾ ಜಿಲ್ಲೆಯ ಜಾಗರ್‌ಗುಂಡಾ ಠಾಣೆ …

Read More »

ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ: ಸಿದ್ದರಾಮಯ್ಯ

ಬೆಂಗಳೂರು: ಅನ್ನ ಭಾಗ್ಯ ಯೋಜನೆ ವಿಚಾರದ ಬಗ್ಗೆ ಮಾತನಾಡುವಾಗ ಸರ್ಕಾರಿ ದುಡ್ಡು ಯಾರಪ್ಪನ ಮನೆ ದುಡ್ಡಲ್ಲ ಎಂದಿದೆ. ಅದು ಬೈಗುಳವೇ? ಮೊದಲು ಯಡಿಯೂರಪ್ಪ ಯತ್ನಾಳ್ ಗೆ ಬೈದು ಬಾಯಿ ಮುಚ್ಚಿಸಲಿ. ನನಗೆ ಬೈಯ್ಯೋದಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ನಲವತ್ತು ವರ್ಷದ ಅನುಭವವಿದೆ. ಇದು ಯಡಿಯೂರಪ್ಪ ಮನೆ ಹಣ ಅಲ್ಲ, ಸರ್ಕಾರದ ಹಣ ಅಂತ ಹೇಳೋದು ಅಸಂವಿಧಾನಿಕ ಪದವೇ ಎಂದು ಪ್ರಶ್ನಿಸಿದರು. ಜಾರಕಿಹೊಳಿ …

Read More »

ಸಿಎಂ BSY ವಿರುದ್ಧ ಸಚಿವ ಈಶ್ವರಪ್ಪ ಬರೆದ ಪತ್ರದ ಬಗ್ಗೆ ಕ್ರಮ: ಅಮಿತ್ ಶಾ

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ಬರೆದ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಪ್ರಸ್ತಾಪವಾದಾಗ ಪ್ರತಿಕ್ರಿಯೆ ನೀಡಿದ ಅಮಿತ್ ಶಾ, ಈಶ್ವರಪ್ಪ ಬರೆದ ಪತ್ರದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಗಮನಹರಿಸಲಿದ್ದಾರೆ. ಚುನಾವಣೆ ಮುಗಿದ ನಂತರ ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ. ಇದು ಪಕ್ಷದ …

Read More »

ಮೃತದೇಹಗಳಿಂದ ತುಂಬಿ ತುಳುಕುತ್ತಿವೆ ಶವಾಗಾರ, ಚಿತಾಗಾರ!

ದುರ್ಗ್ (ಛತ್ತೀಸಗಡ), ಏಪ್ರಿಲ್ 3: ಕೊರೊನಾ ವೈರಸ್ ಎರಡನೆಯ ಅಲೆಯು ದೇಶಾದ್ಯಂತ ಜನರನ್ನು ಮತ್ತೆ ಸಂಕಷ್ಟಕ್ಕೆ ನೂಕಿದೆ. ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಏರಿಕೆಯಾಗುತ್ತಿರುವುದು ಆರೋಗ್ಯ ಕ್ಷೇತ್ರಕ್ಕೆ ಮತ್ತಷ್ಟು ಸವಾಲುಗಳನ್ನು ಉಂಟುಮಾಡಿದೆ. ಛತ್ತೀಸಗಡ ದುರ್ಗ್ ಎಂಬ ಪುಟ್ಟ ಪಟ್ಟಣದಲ್ಲಿ ಉಂಟಾಗಿರುವ ಬಿಕ್ಕಟ್ಟು ಕಂಗೆಡಿಸುವಂತಿದೆ. ದುರ್ಗ್ ಜಿಲ್ಲೆಯು ಛತ್ತೀಸಗಡದಲ್ಲಿ ಕೋವಿಡ್‌ನಿಂದ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದ ಪ್ರದೇಶ. ಇಲ್ಲಿ ಎರಡನೆಯ ಅಲೆಯ ಹೊಡೆತ ದೊಡ್ಡ ವಿಪತ್ತುಗಳನ್ನು ತಂದೊಡ್ಡಿದೆ. ಕಳೆದ ಏಳು ದಿನಗಳಲ್ಲಿ ಕೋವಿಡ್‌ನಿಂದ …

Read More »

ದೂರದೃಷ್ಟಿ ಹಾಗೂ ಅಭಿವೃದ್ದಿ ಯೋಜನೆಗಳು ನಮ್ಮ ತಂದೆ ಗೆಲುವಿಗೆ ಸಹಕಾರಿಯಾಗಲಿದೆ- ಯುವನಾಯಕಿ ಪ್ರಿಯಾಂಕಾ ಜಾರಕಿಹೊಳಿ

  ಪ್ರಿಯಾಂಕಾ ಜಾರಕಿಹೊಳಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಾಕರ್ತರು ಕಾಂಗ್ರೆಸ್ ಗೆ ಸೇರ್ಪಡೆ..     ಗೋಕಾಕ: ದೂರದೃಷ್ಟಿ ಹಾಗೂ ಅಭಿವೃದ್ದಿ ಪರ ಯೋಜನೆಗಳು ಮತ್ತು ಜನಪರ ಕಾರ್ಯಗಳು ಲೋಕಸಭಾ ಉಪಚುನಾವಣೆಯಲ್ಲಿ ನಮ್ಮ ತಂದೆ ಸತೀಶ ಜಾರಕಿಹೊಳಿ ಅವರ ಗೆಲುವಿಗೆ ಸಹಕಾರಿಯಾಗಲಿವೆ ಎಂದು ಪ್ರಿಯಾಂಕಾ ಜಾರಕಿಹೊಳಿ ಆಶಾಭಾವನೆಯನ್ನು ವ್ಯಕ್ತಪಡಿಸಿದರು. ಶನಿವಾರದಂದು ಸಂಜೆ ನಗರದ ಉಪ್ಪಾರ ಗಲ್ಲಿಯಲ್ಲಿ ಲೋಕಸಭಾ ಉಪಚುನಾವಣೆಯ ನಿಮಿತ್ಯ ತಮ್ಮ ತಂದೆಯ ಪರವಾಗಿ ಮತಯಾಚನೆ ಮಾಡುತ್ತಾ ಮಾತನಾಡಿದ ಅವರು, ಮಾತುಗಿಂತ ಕೃತಿ …

Read More »

ಚುನಾವಣಾ ಪ್ರಚಾರಕ್ಕೆ ಇರದ ನಿಯಮ ಚಿತ್ರೋದ್ಯಮಕ್ಕೆ ಯಾಕೆ? ಸರ್ಕಾರ ನಿರ್ಧಾರಕ್ಕೆ ಸ್ಯಾಂಡಲ್ ವುಡ್ ಗರಂ

ದೇಶದಲ್ಲಿ ಪಂಚ ರಾಜ್ಯಗಳ ಚುನಾವಣೆ ಪ್ರಚಾರದ ಕಾರ್ಯ ಜೋರಾಗಿದೆ. ಲಕ್ಷಾಂತರ ಜನ ಪ್ರಚಾರದಲ್ಲಿ ತೋಡಗಿದ್ದಾರೆ. ಗುಂಪು ಗುಂಪಾಗಿ ತಿರುಗಾಡುತ್ತಿದ್ದಾರೆ. ಇವರಿಗೆ ಬರದ ಕೊರೊನಾ ಬಸ್ ನಲ್ಲಿ ಪ್ರಯಾಣಿಸುವವರಿಗೆ, ಚಿತ್ರ ಮಂದಿರದಲ್ಲಿ ಸಿನಿಮಾ ನೋಡುವವರಿಗೆ ಜೀಮ್ ನಲ್ಲಿ ವರ್ಕ್ ಔಟ್ ಮಾಡುವವರಿಗೆ ವಕ್ಕರಿಸಿಕೊಳ್ಳುವುದಾ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ವ್ಯಾಕ್ಸಿನ್ ಹೆಸರಿನಲ್ಲಿ ನಡೆದ ಗೊಲ್ ಮಾಲ್ ಮರೆಮಾಚಲು ಈ ರೀತಿ ಜನ ಸಾಮಾನ್ಯರ ಧಿಕ್ಕು ತಪ್ಪಿಸುವ ಕುತಂತ್ರ …

Read More »

ಸಿಎಂ ಬದಲಾವಣೆಯಾಗಲೇಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೇ ಹೇಳಿದ್ದರು: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ವಿಜಯಪುರ: ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೊಸ ಬಾಂಬ್ ಸಿಡಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಗ್ಗೆ ನನ್ನ ಬಳಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರೇ ಹೇಳಿದ್ದರು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಬದಲಾವಣೆಯಾಗಲೇಬೇಕು. ಬಿ‌ ಎಸ್ ವೈ ಸಿಎಂ ಆಗಿ ಮುಂದುವರಿದರೆ ಬಿಜೆಪಿಗೆ ಭವಿಷ್ಯ ಇಲ್ಲ. ಹಾಗಾಗಿ ಸಿಎಂ ಬದಲಾವಣೆಯಾಗಬೇಕು ಎಂದು ವಿಧಾನಸೌಧದಲ್ಲಿ ರವಿಕುಮಾರ್ ಭೇಟಿಯಾದ ವೇಳೆ ಹೇಳಿದ್ದರು. ನಾನು ಸಿಎಂ …

Read More »

ಅತ್ಯಾಚಾರ ಸಂತ್ರಸ್ತೆಯ ದೂರು ಸ್ವೀಕರಿಸಲು ಮಲಗು ಬಾ ಎಂದ ಎಸಿಪಿ! ಕಾಮುಕ ಪೊಲೀಸ್​ ವಜಾ

ಜೈಪುರ: ಅತ್ಯಾಚಾರಕ್ಕೊಳಗಾದ ಯುವತಿ ತನ್ನ ಮೇಲೆ ಆಗಿರುವ ಅನ್ಯಾಯದ ವಿರುದ್ಧ ದೂರು ದಾಖಲು ಮಾಡಲು ಬಂದರೆ, ಪೊಲೀಸ್​ ಅಧಿಕಾರಿ ದೂರು ದಾಖಲು ಮಾಡಬೇಕಿದ್ದರೆ ನನ್ನ ಜತೆ ಮಲಗು ಎಂದು ಹೇಳಿರುವ ಭಯಾನಕ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಕಾಮುಕ ಎಸಿಪಿಯ ಹೆಸರು ಕೈಲಾಶ್​ ಬೊಹರಾ. ಮಹಿಳಾ ದೌರ್ಜನ್ಯ ವಿರುದ್ದದ ವಿಶೇಷ ತಂಡದ ಎಸಿಪಿಯಾಗಿದ್ದ ಬೋಹರಾ ಇಂಥದ್ದೊಂದು ನೀಚ ಕೃತ್ಯ ಎಸಗಿದ್ದು, ಈತನ ವಿರುದ್ಧ ಸಂತ್ರಸ್ತೆ ಉನ್ನತ ಅಧಿಕಾರಿಗಳಲ್ಲಿ ದೂರು ದಾಖಲು …

Read More »