ಬೆಂಗಳೂರು: ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಅವರು ಏಕವಚನದಲ್ಲಿ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಹುಬ್ಲೋ ವಾಚ್ ಪ್ರಸಂಗ ಮತ್ತೆ ಪ್ರಸ್ತಾಪಿಸಿದ್ದಾರೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ …
Read More »ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ತರಾತುರಿಯಲ್ಲಿ 5,500 ಕೋ ರೂ.ಗಳ ಟೆಂಡರ್ಗಳಿಗೆ, ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ : ಆಲಂ ಪಾಷಾ ಆರೋಪ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲರದ್ದು ವ್ಯವಸ್ಥಿತ ಕೊಲೆ. ಒಂದು ಲಕ್ಷ ಕೋಟಿ ರೂ. ಟೆಂಡರ್ ಗಳಲ್ಲಿ ಅವ್ಯವಹಾರ ನಡೆದಿದೆ. ಉಡುಪಿಯಲ್ಲಿ ಏ.12ರಂದು ಸಂಭವಿಸಿದ ಗುತ್ತಿಗೆದಾರ ಸಂತೋಷ್ ಅವರ ನಿಗೂಢ ಸಾವು ಭ್ರಷ್ಟಾಚಾರಿ ವ್ಯವಸ್ಥೆ ಮಾಡಿಸಿದ ವ್ಯವಸ್ಥಿತ ಕೊಲೆಯಾಗಿದೆ ಎಂದು ಉದ್ಯಮಿ ಆಲಂ ಪಾಷಾ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್ ಸಾವಿಗೆ ಮೂಲ ಕಾರಣವಾದ ಭ್ರಷ್ಟಾಚಾರದ ಬಗ್ಗೆ ಒಂದಕ್ಷರವನ್ನೂ ಹೇಳದೆ ಉಡುಪಿಯ ಪೊಲೀಸರು 2022ರ ಏಪ್ರಿಲ್ 13ರಂದು ಎಫ್‌ಐಆರ್ ದಾಖಲಿಸಿದ್ದಾರೆ. …
Read More »ಬಿಜೆಪಿಯೊಂದಿಗೆ ಕುಮಾರಸ್ವಾಮಿಯ ಮ್ಯಾಚ್ ಫಿಕ್ಸಿಂಗ್: ಸತೀಶ್ ಜಾರಕಿಹೊಳಿ
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಬಿಜೆಪಿಯೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳವುದು ಶೇ. 100 ನಿಜ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ವಿಧಾನಸೌಧದ ಒಳಗೆ ಮತ್ತು ಹೊರಗೆ ಬಿಜೆಪಿ ಪರ ಎಂಬುದು ಸಾಬೀತಾಗಿದೆ. ಕುಮಾರಸ್ವಾಮಿ ಯಾವಾಗಲೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಶೇ. 100 ನಿಜ ಎಂದರು. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ ಮಹಾನಾಯಕ …
Read More »ಗುತ್ತಿಗೆದಾರ ಸಂತೋಷ ಪಾಟೀಲ ಪುತ್ರನ ಶಿಕ್ಷಣಕ್ಕೆ 5 ಲಕ್ಷ ರೂಪಾಯಿ ಸಹಾಯಧನ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿಯಲ್ಲಿ ಬಿಜೆಪಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ನಮ್ಮ ತಂದೆ ಪ್ರಕಾಶ ಹುಕ್ಕೇರಿ ಅವರು ಸರ್ಕಾರದ ವತಿಯಿಂದ ಮೃತ ಸಂತೋಷ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ಮತ್ತು ಬಾಕಿಯಿರುವ ಕಾಮಗಾರಿ ಯೋಜನಾ ಮೊತ್ತವನ್ನು ಪಾವತಿಸಬೇಕು ಎಂದು ಆಗ್ರಹಿಸಿದರು ಜೊತೆಗೆ ನಮ್ಮ ಕ್ಷೇತ್ರದ ಕಾರ್ಯಕರ್ತರ ಆಶಯದಂತೆ ವೈಯಕ್ತಿಕವಾಗಿ ಸಂತೋಷ ಪಾಟೀಲನ ಪುತ್ರನ ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ರೂಪಾಯಿ ಹಣವನ್ನು ನೀಡುತ್ತೇವೆ ಎಂದು …
Read More »ಸ್ವಾಮೀಜಿಗಳ ಬಳಿ ಕಮಿಷನ್ ಕೇಳುವ ನಾಚಿಕೆಗೇಡಿನ ಸರ್ಕಾರ: ಸಿದ್ದರಾಮಯ್ಯ
ಬೆಂಗಳೂರು: ಸ್ವಾಮೀಜಿಗಳ ಬಳಿಯೇ ಲಂಚ ಕೇಳುತ್ತಾರೆಂದರೆ ಎಂಥಹ ನಾಚಿಕೆಗೇಡಿನ ಸರ್ಕಾರವಿದು? ಇದು 40% ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಠಗಳಿಗೆ ಕೊಟ್ಟ ಅನುದಾನ ಪಡೆಯುವುದಕ್ಕೂ ಕಮಿಷನ್ ಕೊಡಬೇಕು ಎಂದು ಸ್ವಾಮೀಜಿಗಳು ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಸ್ವಾಮೀಜಿಗಳ ಬಳಿ ಕಮಿಷನ್ ಕೇಳೋದು ನಾಚಿಕೆಗೇಡಿನತನ. ಸಿಎಂ ಮನೆ ಮುತ್ತಿಗೆ ಹಾಕಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಎಫ್‌ಐಆರ್ ಹಾಕಿದ್ದಾರೆ. ನಾನು ಎ1 ಆದರೂ …
Read More »ಶೇ, 30 ಕಮಿಷನ್ ಆರೋಪ ; ದಿಂಗಾಲೇಶ್ವರ ಶ್ರೀಗಳು ದಾಖಲೆ ಕೊಡಲಿ: ಸಿಎಂ
ಬೆಂಗಳೂರು: ದಿಂಗಾಲೇಶ್ವರ ಸ್ವಾಮೀಜಿಗಳು ಎಲ್ಲಿ, ಯಾರಿಗೆ ಎಷ್ಟು ಪರ್ಸೆಂಟ್ ಕಮಿಷನ್ ಕೊಟ್ಟಿದ್ದಾರೆ ಎಂದು ದಾಖಲೆ ಕೊಡಲಿ, ಸಂಪೂರ್ಣ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ‘ಮಠ ಗಳಿಗೆ ಅನುದಾನ ಬಿಡುಗಡೆಗೂ ಶೇಕಡಾ 30 ಕಮಿಷನ್ ನೀಡಬೇಕು’ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ವಿಧಾನ ಸೌಧದಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಸಿಎಂ, ”ದಿಂಗಾಲೇಶ್ವರ ಸ್ವಾಮೀಜಿಗಳು ಅತ್ಯಂತ ಉತ್ತಮ ಸ್ವಾಮೀಜಿ, ದೊಡ್ಡ ತಪಸ್ವಿಗಳು. ಒಳ್ಳೆ ಹಿನ್ನೆಲೆ ಇದೆ …
Read More »ಈಶ್ವರಪ್ಪ ರಾಜೀನಾಮೆ ಬೆನ್ನಲ್ಲೇ ಬೊಮ್ಮಾಯಿ ಸರಕಾರದ ಮತ್ತೆ 2 ವಿಕೆಟ್ ಪತನ?
ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ರಾಜೀನಾಮೆಯಿಂದ ಬಿಜೆಪಿ ಸದ್ಯಕ್ಕೆ ಉಸ್ಸಪ್ಪಾ ಎನ್ನುವಂತಿಲ್ಲ. ಕಮಿಷನ್ ಆರೋಪದಡಿಯಲಿ ಮತ್ತಿಬ್ಬರು ಸಚಿವರು ರಾಜೀನಾಮೆ ನೀಡಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಲಿದೆಯೇ? ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ನಲವತ್ತು ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ ಎನ್ನುವ ಆರೋಪ ನೇರವಾಗಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೂ ಹೋಗಿತ್ತು. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ ದೆಹಲಿಯಲ್ಲಿ ಅವರನ್ನು ಭೇಟಿಯಾಗುವ ಯೋಜನೆಯನ್ನೂ ಹಾಕಿಕೊಳ್ಳಲಾಗಿತ್ತು. ಆದರೆ, ಪ್ರಧಾನಿ ಕಾರ್ಯಾಲಯದಿಂದ ಅಪಾಯಿಂಟ್ಮೆಂಟ್ ಸಿಗದ ಕಾರಣ, ಗುತ್ತಿಗೆದಾರರ ಸಂಘ ಮುಂದಕ್ಕೆ ಹೆಜ್ಜೆಯನ್ನು …
Read More »ಸುಪಾರಿ ಕೊಟ್ಟು ಅಳಿಯನ ಕೊಲ್ಲಿಸಿದ ಮಾವ!
ಯಾದಾದ್ರಿ ಭುವನಗಿರಿ: ಜಿಲ್ಲೆಯ ಭುವನಗಿರಿ ನಗರದಲ್ಲಿ ಮರ್ಯಾದ ಹತ್ಯೆ ಸಂಚಲನ ಮೂಡಿಸಿದೆ. ಪಟ್ಟಣದಲ್ಲಿ ಶುಕ್ರವಾರ ನಾಪತ್ತೆಯಾಗಿದ್ದ ಎರುಕುಲ ರಾಮಕೃಷ್ಣ (32) ಸಿದ್ದಿಪೇಟ್ ಜಿಲ್ಲೆಯ ಲಕುದರಂ ಉಪನಗರದ ಪದ್ದಮ್ಮತಲ್ಲಿ ದೇವಸ್ಥಾನದ ಬಳಿ ನಿರ್ಮಾಣ ಹಂತದಲ್ಲಿರುವ ರೈಲು ಮಾರ್ಗದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ತನ್ನ ಮಗಳನ್ನು ಪ್ರೇಮ ವಿವಾಹವಾಗಿದ್ದಕ್ಕೆ ರಾಮಕೃಷ್ಣನನ್ನು ಆಕೆಯ ಚಿಕ್ಕಪ್ಪ ವೆಂಕಟೇಶ್ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಪತ್ನಿ ಭಾರ್ಗವಿ ನೀಡಿದ ದೂರಿನ ಮೇರೆಗೆ …
Read More »ಹುಬ್ಬಳ್ಳಿ ಗಲಭೆ; ದೇವಾಲಯ, ಆಸ್ಪತ್ರೆಗೆ ಸಚಿವರ ಭೇಟಿ
ಹುಬ್ಬಳ್ಳಿ, ಏಪ್ರಿಲ್ 18; ಶನಿವಾರ ರಾತ್ರಿ ಹಳೇಹುಬ್ಬಳ್ಳಿಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 89 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 20ರ ತನಕ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದೆ. ಯುವಕ ವಾಟ್ಸಪ್‌ನಲ್ಲಿ ಎಡಿಟ್ ಮಾಡಿದ ಪ್ರಚೋದನಾಕಾರಿ ಪೋಸ್ಟರ್ ಹಾಕಿದ್ದರಿಂದ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ಗಲಭೆ ಉಂಟಾಗಿತ್ತು. ಪೊಲೀಸರು, ಆಸ್ಪತ್ರೆ, ದೇವಾಲಯದ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡ ಪೊಲೀಸರು ಆಸ್ಪತ್ರೆಯಲ್ಲಿ …
Read More »ಆರಗ ಖಾತೆ ಬಿಡಬೇಕು: ಯತ್ನಾಳ,ಗಲಭೆ ಸೃಷ್ಟಿಸಿ ಬಿಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರುತ್ತಿರುವವರನ್ನು ಮನೆ ಮನೆ ಹೊಕ್ಕು ಎಳೆತನ್ನಿ
ಹೊಸಪೇಟೆ: ಗೃಹ ಮಂತ್ರಿಗಳು ಆ ಹುದ್ದೆಗೆ ತಕ್ಕಂತೆ ಖಡಕ್ ಇಲ್ಲದಿರುವುದರಿಂದ ಅವರನ್ನು ಶೀಘ್ರ ಬದಲಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು. ಹುಬ್ಬಳ್ಳಿ ಘಟನೆಯ ಹಿನ್ನೆಲೆಯಲ್ಲಿ ಅವರು ಈ ಆಗ್ರಹ ಮಾಡಿದರು. ಕಾನೂನು ಸುವ್ಯವಸ್ಥೆಯ ವಿಷಯದಲ್ಲಿ ಸರ್ಕಾರದ ವರ್ತನೆ ಸಾರ್ವಜನಿಕ ನಿರೀಕ್ಷೆಯಂತೆ ಇಲ್ಲ. ಬಿಜೆಪಿ ಇಮೇಜ್‌ಗೆ ಹಾನಿಯಾಗಿದೆ ಎಂಬುದಾಗಿಯೂ ಕಿಡಿಕಾರಿದರು. ಬಿಜೆಪಿ ಕಾರ್ಯಕಾರಣಿ ಸ್ಥಳದಲ್ಲೇ ಯತ್ನಾಳ ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿರುವ ಈ ಪ್ರತಿಕ್ರಿಯೆ ಭಾರೀ ಸದ್ದು ಮಾಡಿದೆ. ಹುಬ್ಬಳ್ಳಿಯಂತಹ …
Read More »
Laxmi News 24×7