Breaking News

ರಾಷ್ಟ್ರೀಯ

ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಬಿಟ್ಟು ಆರು ವರ್ಷ ಆತ್ರೀ, ಖರ್ಚು ಕಡಿಮೆಯಾಗಿ ಲಾಭ ಹೆಚ್ಚು: ರಮೇಶ ಬಸಪ್ಪ

ಮೂಡಲಗಿ (ಬೆಳಗಾವಿ ಜಿಲ್ಲೆ): ‘ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಬಿಟ್ಟು ಆರು ವರ್ಷ ಆತ್ರೀ. ಪಕ್ಕಾ ಸಾವಯವ ಕೃಷಿ ಮಾಡ್ತಿದ್ದೀವ್ರಿ. ಖರ್ಚು ಕಡಿಮೆಯಾಗಿ ಲಾಭ ಹೆಚ್ಚು ಬರತೈತ್ರೀ’ ಎಂದು ತಾಲ್ಲೂಕಿನ ಕಲ್ಲೋಳಿಯ ಯುವ ರೈತರಾದ ರಮೇಶ ಬಸಪ್ಪ ಖಾನಗೌಡ್ರ ಮತ್ತು ಮಲ್ಲಿಕಾರ್ಜುನ ಖಾನಗೌಡ್ರ ಹೆಮ್ಮೆಯಿಂದ ಬೀಗುತ್ತಾರೆ.   ಅವರು 10 ಎಕರೆ ಭೂಮಿಯಲ್ಲಿ ಕಬ್ಬು, ಅರಿಸಿನ, ಗೋವಿನ ಜೋಳ, ವಿವಿಧ ತರಕಾರಿಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆಯುತ್ತಿದ್ದಾರೆ. ಹೈನುಗಾರಿಕೆ, ಕೋಳಿ, ಮೀನು, …

Read More »

ಸಚಿವ ಈಶ್ವರಪ್ಪ ನಿರ್ಗಮನದಲ್ಲೂ ಬೆಳಗಾವಿ ಸದ್ದು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ರಾಜಕೀಯ ಕ್ಷೇತ್ರದಲ್ಲಿ ಮತ್ತೆ ಎಲ್ಲರೂ ತಿರುಗಿ ನೋಡುವಂತಹ ಸುದ್ದಿ ಮಾಡಿದೆ. ಜಿಲ್ಲೆಯ ಜಿದ್ದಾಜಿದ್ದಿನ ರಾಜಕಾರಣ ಬಿಜೆಪಿ ಸರಕಾರದ ಇಬ್ಬರು ಪ್ರಭಾವಿ ರಾಜಕಾರಣಿಗಳ ತಲೆದಂಡವಾಗುವಂತೆ ಮಾಡಿರುವುದೇ ಇದಕ್ಕೆ ಸಾಕ್ಷಿ. ಈ ಎರಡೂ ತಲೆದಂಡದಲ್ಲಿ ಕಾಂಗ್ರೆಸ್‌ನ ಒಗ್ಗಟ್ಟಿನ ಹೋರಾಟಕ್ಕಿಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒಂದು ರೀತಿಯ ಶಪಥ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಗಂಭೀರ ಆರೋಪ ಹೊತ್ತ …

Read More »

ಗಂಗೊಳ್ಳಿಗೆ ಒಂದು ದಿನ ಮೊದಲೇ ಆಗಮಿಸಿದ ಮುತಾಲಿಕ್‌

ಕುಂದಾಪುರ: ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರು ಗಂಗೊಳ್ಳಿಗೆ ಒಂದು ದಿನ ಮೊದಲೇ ಅಂದರೆ ಗುರುವಾರ ರಾತ್ರಿ ಆಗಮಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.   ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಎ. 15ರಂದು ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಪ್ರಮೋದ್‌ ಮುತಾಲಿಕ್‌ ಅವರು ಭಾಗಿಯಾಗದಂತೆ ಬುಧವಾರ ಉಡುಪಿ ಜಿಲ್ಲಾಡಳಿತ ನಿರ್ಬಂಧ ಹೇರಿ ಆದೇಶಿಸಿತ್ತು. ಕಾರ್ಯಕ್ರಮದ ಮುನ್ನಾದಿನವಾದ …

Read More »

ಸಂತೋಷ್ ಪಾಟೀಲ್ ಕೇಸ್ ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ತಳಕು!

40% ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಮಾಡಿದ್ದ ಕಾಮಗಾರಿಗಳ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟುಕೊಂಡಿವೆ. ಬೆಳಗಾವಿಯಲ್ಲಿ ಆತ ವರ್ಕ್ ಆರ್ಡರ್ ಇಲ್ಲದೆ ಕೆಲಸ ಮಾಡಿದ್ದ ಎಂಬ ಆರೋಪದ ಜೊತೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಆ ಕಾಮಗಾರಿ ನಡೆದಿದ್ದು ಇದು ಶಾಸಕಿ ಗಮನಕ್ಕೆ ಬರಲಿಲ್ಲವೇ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಆರೋಪಿಸಿದ್ದಾರೆ.   ಕಾಮಗಾರಿ ಕೈಗೆತ್ತಿಕೊಳ್ಳುವುದಕ್ಕೆ ಅನುಮತಿ ನೀಡಿದ್ದು ಯಾರು? 4 ಕೋಟಿ …

Read More »

ಆಧಾರವಿದ್ದು, ಪ್ರಕರಣ ಕೈ ಬಿಡಲು ಸಾಧ್ಯವಿಲ್ಲ: ಪಿ.ರಾಜೀವ್

ಉಡುಪಿ: ಕುಡಚಿ ಬಿಜೆಪಿ ಶಾಸಕ ಪಿ.ರಾಜೀವ್ ವಿರುದ್ಧ ದಾಖಲಾಗಿರುವ ಹಲ್ಲೆ ಮತ್ತು ಎಸ್‌ಸಿ ಮತ್ತು ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಗೆ ಸಂಬಂಧಿಸಿದಂತೆ ಆಧಾರವಿದ್ದು, ಪ್ರಕರಣ ಕೈ ಬಿಡಲು ಸಾಧ್ಯವಿಲ್ಲ ಎಂದು ನಗರ ವಿಶೇಷ ನ್ಯಾಯಾಲಯ ಹೇಳಿದೆ.   ರಾಜೀವ್ ಮತ್ತು ಇತರ ಆರು ಮಂದಿ, ಜನವರಿ 13, 2016 ರಂದು ಮಾಜಿ ಶಾಸಕ ಎಸ್‌ಬಿ ಘಾಟ್ಗೆ ಅವರ ಮನೆಗೆ ಅವರು ಇಲ್ಲದಿದ್ದಾಗ ಅಕ್ರಮವಾಗಿ ನುಗ್ಗಿ ಕೆಲಸಗಾರನ ಮೇಲೆ ಹಲ್ಲೆ ನಡೆಸಿದ್ದರು. ಗ್ಯಾಂಗ್ …

Read More »

ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಪಕ್ಷದ ಒತ್ತಡ ಇತ್ತು: ಸತೀಶ್‌ ಜಾರಕಿಹೊಳಿ

ಘಟಪ್ರಭ: ಗುತ್ತಿಗೆದಾರ ಸಂತೋಷ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಪಕ್ಷದ ಒತ್ತಡ ಇತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಕಾಂಗ್ರೆಸ್‌ ಪಕ್ಷ ಪ್ರತಿಭಟನೆ ಮುಂದೆವರಿಸುತ್ತಿತ್ತು. ಈಗ ಅವರು ರಾಜೀನಾಮೆ ನೀಡಿರುವುದು ಒಳ್ಳೆಯದು, ಮೊದಲೇ ರಾಜೀನಾಮೆ ನೀಡಬೇಕಾಗಿತ್ತು. ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಮುಖಂಡರು …

Read More »

ನಾಳೆ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಮುಕ್ತನಾಗಿ ಹೊರಬರುವವರೆಗೂ ಸಂಪುಟದಿಂದ ಹೊರಗಿರುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದು, ನಾಳೆ ಸಂಜೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈಶ್ವರಪ್ಪ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಮಾಡಿದ ಬೆನ್ನಲ್ಲೇ ಸುದ್ದಿಗಾರರಿಗೆ ಸಿಎಂ ಪ್ರತಿಕ್ರಿಯೆ ನೀಡಿದರು. ಇದು ಸಂಜೆ ಸಚಿವ ಕೆ.ಎಸ್ ಈಶ್ವರಪ್ಪ ನನಗೆ ದೂರವಾಣಿ ಕರೆ ಮಾಡಿದ್ದರು, ಆ ವೇಳೆ ರಾಜೀನಾಮೆ ಕೊಡುತ್ತೇನೆ …

Read More »

17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿರುವ ಸಿ.ಎಂ.ಇಬ್ರಾಹಿಂಗೆ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು,ಏ.14- ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ. ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ …

Read More »

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಈಶ್ವರಪ್ಪರನ್ನು ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.   ಬೆಂಗಳೂರಿನ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿವಾಸದವರೆಗೂ ಮೆರವಣಿಗೆ ಹಮ್ಮಿಕೊಂಡಿದ್ದು, ಈ ವೇಳೆ ಪೊಲೀಸರು ಮಾರ್ಗಮಧ್ಯದಲ್ಲೇ ಮೆರವಣಿಗೆ ತಡೆದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Read More »

ಸಿಬಿಐ ತನಿಖೆಯಾಗಲಿ. ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ

ಬೆಳಗಾವಿ: ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ. ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ನೀಡಬಾರದು. ತನಿಖೆಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ್ರೆ ರಾಜೀನಾಮೆ ನೀಡಲಿ. ಅಲ್ಲಿಯವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಸಂತೋಷ್ ಪ್ರಕರಣದ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. …

Read More »