Breaking News

ರಾಷ್ಟ್ರೀಯ

ಕರ್ನಾಟಕ ಬಂದ್ ಮಾಡುವ ಅವಶ್ಯಕತೆಯಿಲ್ಲ : ಡಿಸಿಎಂ

ಬೆಂಗಳೂರು : ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ವಿರೋಧಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟವು ಮಾ.22ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಬಲವಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಮಾರ್ಚ್ ತಿಂಗಳಲ್ಲಿ ಶಾಲಾ ಮಕ್ಕಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಬಂದ್ ಅವಶ್ಯಕತೆಯಿಲ್ಲ. ಈ ನಿಟ್ಟಿನಲ್ಲಿ ಸಂಬಂಧಪಟ್ಟವರೊಂದಿಗೆ ಮಾತನಾಡುವೆ. ಹೀಗಾಗಿ ಬಂದ್​ಗೆ ಸರ್ಕಾರ ಬೆಂಬಲಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಪರಿಷತ್ತಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ಬಂದ್ ಸಂಬಂಧ ಸದನದಲ್ಲಿ ಮೇಲ್ಮನೆಯ ವಿರೋಧಪಕ್ಷದ ನಾಯಕ …

Read More »

ಸಚಿವರ ಮೇಲೆಯೂ ಹನಿಟ್ರ್ಯಾಪ್ ಆಗಿದ್ದು, ಕಡಿವಾಣ ಹಾಕಬೇಕು ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.ಇದರಲ್ಲಿ ‌ನಮ್ಮವರು ಅಷ್ಟೇ ಅಲ್ಲ. ಬೇರೆ ಪಕ್ಷದ ನಾಯಕರು ಹನಿಟ್ರ್ಯಾಪ್​​ನಲ್ಲಿ …

Read More »

RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ :ಸಿದ್ದರಾಮಯ್ಯ

ಬೆಂಗಳೂರು, (ಮಾರ್ಚ್ 19): ಆರ್‌ಎಸ್‌ಎಸ್‌ನಿಂದಲೇ  (RSS) ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಪ ಮಾಡಿದ್ದು, ಈ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ (BJP) ಸಿಡಿದೆದಿದ್ದು, ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿವೆ. ಸಾಲದಕ್ಕೆ ಇದೀಗ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ದಾಖಲಿಸಲಾಗಿದೆ. ಕಿರಣ್.ಎಸ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದು, ಬಿಎನ್ಎಸ್ ಸೆಕ್ಷನ್ 299,352,356(2)ಅಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ. ಆರ್​ಎಸ್​ಎಸ್ ಬಗ್ಗೆ ಸಿಎಂ …

Read More »

ಬೆಳ್ಳಂ ಬೆಳಿಗ್ಗೆ 3ರಿಂದ 4 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲಿನ ಬೀಗ ಮುರಿದು ಕಳ್ಳತನ‌ ಮಾಡಿ 700 ಗ್ರಾಂ ಚಿನ್ನ ದೋಚಿ ಪರಾರಿ

ಬೆಳಗಾವಿ : ಬೆಳ್ಳಂ ಬೆಳಿಗ್ಗೆ 3ರಿಂದ 4  ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲಿನ ಬೀಗ ಮುರಿದು ಕಳ್ಳತನ‌ ಮಾಡಿ 700 ಗ್ರಾಂ ಚಿನ್ನ ದೋಚಿ ಪರಾರಿಯಾದ ಘಟನೆ ಗೋಕಾಕ ಪಟ್ಟಣದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ವಿದ್ಯಾನಗರದಲ್ಲಿನ ವ್ಯಾಪಾರಸ್ಥ ಶ್ರೀರಾಮ ಚೌದರಿಯವರ ಮನೆಯಲ್ಲಿಟ್ಟಿದ್ದ 700 ಗ್ರಾಂ ಚಿನ್ನ ಕಳ್ಳತನ‌ ಆಗಿದ್ದು ಸುದ್ದಿ ತಿಳಿದ ನಗರ ಠಾಣೆಯ CPI ಸುರೇಶಬಾಬು ಬಂಡಿವಡ್ಡರ ಮತ್ತು ನಗರ ಪಿ,ಎಸ್,ಐ, ಕೆ.ವಾಲಿಕಾರ ಇವರು ಸ್ಥಳಕ್ಕೆ …

Read More »

ಮಾರಕಾಸ್ತ್ರ ಝಳಪಿಸುತ್ತಾ ಬೈಕ್​ ವ್ಹೀಲಿಂಗ್: ಆರೋಪಿಗಳ ಬಂಧಿಸಿದ ಪೊಲೀಸರು

ಬೆಂಗಳೂರು : ಮಾರಕಾಸ್ತ್ರ ಝಳಪಿಸುತ್ತಾ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿದ್ದ ಇಬ್ಬರು ಆರೋಪಿಗಳನ್ನು ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹೇಶ್ (19) ಹಾಗೂ ಮಂಜುನಾಥ್ (19) ಬಂಧಿತ ಆರೋಪಿಗಳು. ಮಾರ್ಚ್ 15ರಂದು ಔಟರ್ ರಿಂಗ್ ರಸ್ತೆಯ ಚೌಡೇಶ್ವರಿನಗರ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರವನ್ನು ರಸ್ತೆಗೆ ಉಜ್ಜುತ್ತಾ, ಸ್ಕೂಟರ್‌ನಲ್ಲಿ ವ್ಹೀಲಿಂಗ್ ಮಾಡುತ್ತ ಸಾಗಿದ್ದ ಆರೋಪಿಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ …

Read More »

ಜಿಲ್ಲಾ ಹೆಸರು ಮರುನಾಮಕರಣಕ್ಕೆ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ ಕೇಂದ್ರ

ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣ ಮಾಡಬೇಕು ಎಂಬ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕೇಂದ್ರ ಸರ್ಕಾರದ ನಿರಾಕರಿಸಿದೆ. ಉನ್ನತ ಮೂಲಗಳ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಜಿಲ್ಲೆಯ ಮರುನಾಮಕರಣ ಮಾಡಲು ಕೋರಿ ರಾಜ್ಯ ಸರ್ಕಾರ ಎರಡು ತಿಂಗಳ ಹಿಂದೆಯೇ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿತ್ತು. ಆದರೆ, ಇದೀಗ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ತಳ್ಳಿಹಾಕಿದೆ. ಆದ್ರೆ, ಯಾವ ಕಾರಣದಿಂದ ನಿರಾಕರಿಸಲಾಗಿದೆ ಎಂಬುದನ್ನು ತಿಳಿಸಿಲ್ಲ. ಆದರೆ, ಮೂಲಗಳು …

Read More »

ರಾಯಚೂರಿನಲ್ಲಿ ಭೀಕರ ಅಪಘಾತ

ರಾಯಚೂರು: ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಹಿಂಬದಿ ಕುಳಿತಿದ್ದ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ರಾಯಚೂರಿನಲ್ಲಿ ನಡೆಯಿತು. ನಗರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ರೈಲ್ವೆ ಸ್ಟೇಷನ್‌ಗೆ ರಸ್ತೆ ಸಂಪರ್ಕ ಕಲ್ಪಿಸುವ ಸ್ಟೇಷನ್​ ರಸ್ತೆಯಲ್ಲಿನ ಶ್ರೀರಾಮಮಂದಿರ ಬಳಿ ಈ ಅವಘಡ ಸಂಭವಿಸಿದೆ. ಉತ್ತರ ಪ್ರದೇಶ ನಿವಾಸಿ ಸುರೇಶ್​(35) ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಇವರ ಮಗ ಬಾಲಕ ಶುಭಂ ಅವರ ಕಾಲು ಮುರಿದಿದೆ. ರಸ್ತೆಯಲ್ಲಿ …

Read More »

ಕೊನಾರ್ಕ್ ಉತ್ಸವ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಒಡಿಶಾದ ಪ್ರಸಿದ್ಧ ಕೊನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ. ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಸಚಿವರು, ”2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ …

Read More »

ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ ಕೆ ಶಿ

ನವದೆಹಲಿ/ಬೆಂಗಳೂರು : ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ?. ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್​​ಗೂ ಏನು ಸಂಬಂಧ?. ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​​ಗೆ ನಾನೇ ಟಾರ್ಗೆಟ್, ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ನಾನು ಹಾಗೂ …

Read More »

ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ನಟಿ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವೈದ್ಯೆ ಅಕುಲಾ ಅನುರಾಧ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ವಿವರ: ಮಾರ್ಚ್ 17ರಂದು ವಿಜಯಪುರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಯತ್ನಾಳ್, ರನ್ಯಾ ರಾವ್ ಯಾರ ಜೊತೆ ಸಂಬಂಧ ಹೊಂದಿದ್ದಾರೆ, ಎಲ್ಲಿಂದ ಚಿನ್ನ ತಂದಿದ್ದಾರೆ ಎಂಬ …

Read More »