Breaking News

ರಾಷ್ಟ್ರೀಯ

ಅರುಣ್ ಸಿಂಗ್ ಬಂದುಹೋದ ಬಳಿಕ ಜಾಲಿ ಮೂಡ್ ನಲ್ಲಿದ್ದಾರೆ ಸಿಎಂ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿದ ಕಾರಣ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಆಗಮಿಸಿ ಮೂರು ದಿನ ಚರ್ಚೆ ಮಾಡಿ ಹೋಗಿದ್ದಾರೆ. ಕೆಲವು ಶಾಸಕರ ಜೊತೆ ವೈಯಕ್ತಿಕವಾಗಿ ಮಾತನಾಡಿರುವ ಅರುಣ್ ಸಿಂಗ್ ಸದ್ಯ ದೆಹಲಿಗೆ ತೆರಳಿದ್ದಾರೆ. ಆದರೆ ಇದಾದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಾಲಿ ಮೂಡ್ ನಲ್ಲಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ ತೆರಳುವಾಗ ಸಚಿವ ಅಶೋಕ್ ಗೆ “ಎಲ್ಲಿಗೆ ಹೋಗ್ತಾ ಇದ್ದೀಯಾ ಎಂದರು. ಇದಕ್ಕೆ ‘ಸರ್, …

Read More »

ಕೋವಿಡ್ 3ನೇ ಅಲೆ ಅಪಾಯ: ಲಾಕ್ ಡೌನ್ ಸಡಿಲಿಕೆ ಮುನ್ನ ಎಚ್ಚರವಹಿಸಿ: ರಾಜ್ಯಗಳಿಗೆ ಕೇಂದ್ರ

ನವದೆಹಲಿ: ಕೋವಿಡ್ 19 ಸೋಂಕು ಹಾಗೂ ಸಕ್ರಿಯ ಪ್ರಕರಣಗಳ ಇಳಿಕೆಯ ಆಧಾರದ ಮೇಲೆ ಕೋವಿಡ್ ಲಾಕ್ ಡೌನ್ ನಿರ್ಬಂಧಗಳನ್ನು ಐದು ಹಂತಗಳಲ್ಲಿ ಸಡಿಲಿಕೆ ಮಾಡಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಶನಿವಾರ(ಜೂನ್ 19) ಸಲಹೆ ನೀಡಿದೆ.   ರಾಜ್ಯ ಸರ್ಕಾರಗಳು ಕೋವಿಡ್ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಮಾಡುವ ಜತೆಗೆ ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆ, ಸಂಪರ್ಕಿತರ ಪತ್ತೆ, ಚಿಕಿತ್ಸೆ, ಲಸಿಕೆ …

Read More »

ನೀವು ಸದಾ ಜೀವಂತವಾಗಿರುತ್ತೀರಿ’; ಮಿಲ್ಖಾ ಸಿಂಗ್​ ನಿಧನಕ್ಕೆ ಫರ್ಹಾನ್​ ಅಖ್ತರ್​ ಸಂತಾಪ

ಕೊರೊನಾ ವೈರಸ್​ ಸೋಂಕಿನಿಂದ ಬಳಲುತ್ತಿದ್ದ ಫ್ಲೈಯಿಂಗ್ ಸಿಖ್ ಎಂದೇ ಖ್ಯಾತರಾಗಿದ್ದ ಅಥ್ಲೀಟ್ ಮಿಲ್ಖಾ ಸಿಂಗ್ ಅವರು ಶುಕ್ರವಾರ (ಜೂ.18) ಮಧ್ಯರಾತ್ರಿ ನಿಧನರಾದರು. ಅವರ ಅಗಲಿಕೆಗೆ ಲಕ್ಷಾಂತರ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮಿಲ್ಖಾ ಸಿಂಗ್​ ಜೀವನವನ್ನು ಆಧರಿಸಿ ‘ಭಾಗ್​ ಮಿಲ್ಖಾ ಭಾಗ್​’ ಸಿನಿಮಾ ತಯಾರಾಗಿತ್ತು. 2013ರಲ್ಲಿ ಬಂದ ಆ ಸಿನಿಮಾದಲ್ಲಿ ಮಿಲ್ಖಾ ಸಿಂಗ್​ ಪಾತ್ರವನ್ನು ಫರ್ಹಾನ್​ ಅಖ್ತರ್​ ಮಾಡಿದ್ದರು. ಆ ಚಿತ್ರಕ್ಕೆ ರಾಕೇಶ್​ ಓಂಪ್ರಕಾಶ್​ ಮೆಹ್ರಾ ನಿರ್ದೇಶನ ಮಾಡಿದ್ದರು. ಬಾಕ್ಸ್​ ಆಫೀಸ್​ನಲ್ಲಿ …

Read More »

ಬೆಳಗಾವಿಯ ಜಲಾಶಯ ನೀರಿನ ಮಟ್ಟ….

ಹಿಡಕಲ್ ಜಲಾಶಯ ನೀರಿನ ಮಟ್ಟ ಘಟಪ್ರಭಾ ನದಿ ಹಿಡಕಲ್ ಜಲಾಶಯ ಗರಿಷ್ಠ ಮಟ್ಟ- 2175.00 ಅಡಿ ಇಂದಿನ ಮಟ್ಟ- 2110.80 ಅಡಿ ಒಳ ಹರಿವು- 39,515 ಕ್ಯೂಸೆಕ್ ಹೊರ ಹರಿವು- 94 ಕ್ಯೂಸೆಕ್ ನೀರು ಸಂಗ್ರಹ- 13.474 ಡ್ಯಾಂ ಸಾಮರ್ಥ್ಯ- 51.00 tmc ನವಿಲುತಿರ್ಥ ಜಲಾಶಯ ನೀರಿನ ಮಟ್ಟ ಮಲಪ್ರಭಾ ನದಿ ನವೀಲು ತೀರ್ಥ ಜಲಾಶಯ ಗರಿಷ್ಠ ಮಟ್ಟ- 2079.50 ಅಡಿ ಇಂದಿನ ಮಟ್ಟ- 2054.10 ಒಳ ಹರಿವು- 17208 …

Read More »

ಗೋವಾ : ವ್ಯಾಕ್ಸಿನ್ ಪಡೆಯದೇ ಇದ್ರೆ ಪ್ರವಾಸಿಗರಿಗೆ ನೋ ಎಂಟ್ರಿ..!

ಗೋವಾ : ಪ್ರವಾಸಿಗರ ಹಾಟ್ ಫೇವರೇಟ್ ತಾಣವಾಗಿರುವ ಗೋವಾಗೆ ಪ್ರವಾಸಿಗರು ವಿಸಿಟ್ ಮಾಡ್ಬೇಕಂದ್ರೆ ಇನ್ಮುಂದೆ ಕೋವಿಡ್ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಂಡಿರಬೇಕು.. ಅಲ್ಲದೇ ರಾಜ್ಯದಲ್ಲಿರುವ ಎಲ್ಲರಿಗೂ ಕೊರೊನಾ ಲಸಿಕೆಯನ್ನು ನೀಡದೇ ಪ್ರವಾಸೋದ್ಯಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ. ಜುಲೈ 30ರೊಳಗೆ ಶೇ.100ರಷ್ಟು ಕೊರೊನಾ ವ್ಯಾಕ್ಸಿನ್ ಮೊದಲ ಡೋಸ್ ನನ್ನು ರಾಜ್ಯವ್ಯಾಪಿ ನೀಡುವ ಗುರಿಯನ್ನು ಗೋವಾ ಸರ್ಕಾರ ಹೊಂದಿದೆ. ಮೊದಲ ಡೋಸ್ ವ್ಯಾಕ್ಸಿನೇಷನ್‍ನನ್ನು ರಾಜ್ಯದಲ್ಲಿ ಪೂರ್ಣಗೊಳಿಸುವವರೆಗೆ ಪ್ರವಾಸೋದ್ಯಮವನ್ನು …

Read More »

ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ

ಉಡುಪಿ, ಜೂನ್ 18; ಸೋಮವಾರದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಹೊರರೋಗಿ, ಒಳರೋಗಿ ಸೇವೆಗಳು, ನಾನ್ ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಲ್ಲ ರೀತಿಯ …

Read More »

ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್

ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್         ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …

Read More »

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

ಬನಹಟ್ಟಿ: ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ ಸಂಜೆ 97000 ಕ್ಯೂಸೆಕ್ ನೀರು ಬಂದಿದೆ. ಜಲಾಶಯದ ಹೊರ ಹರಿವು 96 ಸಾವಿರ ಕ್ಯೂಸೆಕ್ ಇದ್ದು, ಜಲಾಶಯದಲ್ಲಿ ನೀರಿನ ಮಟ್ಟ …

Read More »

ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ

  ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ.   ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …

Read More »