Breaking News
Home / ರಾಷ್ಟ್ರೀಯ (page 786)

ರಾಷ್ಟ್ರೀಯ

ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ

ರಾಯಚೂರು: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಚಾಲಕ ಸಜೀವ ದಹನವಾದ ಘಟನೆ ತಾಲೂಕಿನ ಕಲ್ಮಲ ಸಮೀಪ ಸಂಭವಿಸಿದೆ. ಮೃತ ಕಾರು ಚಾಲಕನನ್ನು ಮಲ್ಲಟ ಗ್ರಾಮದ ಸದಾನಂದಗೌಡ ಮಾಲೀಪಾಟೀಲ (60) ಎಂದು ಗುರುತಿಸಲಾಗಿದೆ. ಮಲ್ಲಟದಿಂದ ರಾಯಚೂರು ಕಡೆ ಹೊರಟಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡದಿದೆ. ಇದರಿಂದ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಕ್ಷಣದಲ್ಲೇ ಹೊತ್ತಿ ಉರಿದಿದೆ. ಕಾರು ಲಾಕ್ ಆಗಿರುವ ಕಾರಣ ಚಾಲಕ …

Read More »

ಮಸಗುಪ್ಪಿ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ ಶಾಸಕರಿಂದ ಭಜರಂಗದಳ ಘಟಕ ಉದ್ಘಾಟನೆ

ಮೂಡಲಗಿ : ಮಸಗುಪ್ಪಿ ಮಹಾಲಕ್ಷಿ ದೇವಿ ದೇವಸ್ಥಾನವು ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಸುಮಾರು 5 ಕೋಟಿ ವೆಚ್ಚದಲ್ಲಿ ಮಹಾಲಕ್ಷ್ಮಿ ದೇವಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. 2.50 ಕೋಟಿ ರೂ.ವೆಚ್ಚದಲ್ಲಿ ದೇವಸ್ಥಾನದ ಹೊಸ ಕಟ್ಟಡ, 50 ಲಕ್ಷ ರೂ.ವೆಚ್ಚದಲ್ಲಿ ದೇವಸ್ಥಾನದ ಸಿಖರ , …

Read More »

ಬೆಳಗಾವಿ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರನ ಕುಟುಂಬಕ್ಕೆ ಸಚಿವರ ಸಾಂತ್ವನ

ಬೆಳಗಾವಿ: ನಗರದ ವಡಗಾವಿಯಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರ ಸಿದ್ದಲಿಂಗೇಶ್ವರ ಗಂಗಪ್ಪ ಹೊರಕೇರಿ ಅವರ ಮನೆಗೆ ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕುಟುಂಬದವರಿಗೆ ತಮ್ಮ ‘ಶ್ರೀಮಂತ ಪಾಟೀಲ ಪ್ರತಿಷ್ಠಾನ’ದಿಂದ ಆರ್ಥಿಕ ನೆರವು ನೀಡಿದರು. ಆದಷ್ಟು ಬೇಗ ಇಲಾಖೆಯಿಂದಲೂ ನೆರವು ಕೊಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಸ್ಥಳೀಯರು ಇದ್ದರು.

Read More »

ಭೀಕರ ಅಪಘಾತ : ನಡುರಸ್ತೆಯಲ್ಲೇ ಹೊತ್ತಿ ಉರಿದ ಲಾರಿ-ಕಾರು

ದಾವಣಗೆರೆ : ಟಿಪ್ಪರ್-ಲಾರಿಗೆ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಲಾರಿಗೂ ತಗಲು ಸುಟ್ಟು ಕರಕಲಾದ ಘಟನೆ ನಡೆದಿದೆ. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ದಾವಣಗೆರೆಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಾಗುತ್ತಿದ್ದ ಕಾರು, ದಾವಣಗೆರೆ ಕಡೆಯಿಂದ ಬರುತ್ತಿದ್ದಂತ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದಂತವರು …

Read More »

ಕೇರಳ, ಮಹಾರಾಷ್ಟ್ರದಲ್ಲಿ ಕೋವಿಡ್ ಹೆಚ್ಚಳ: ಗಡಿಯಲ್ಲಿ ನಿಗಾವಹಿಸುವಂತೆ ಡಿಸಿಎಂ ಸೂಚನೆ

ಬೆಳಗಾವಿ: ಮಹರಾಷ್ಟ್ರ, ಕೇರಳ ರಾಜ್ಯದಲ್ಲಿ ಹೊಸ ಪ್ರಭೇದದ ಕೋವಿಡ್ ಪತ್ತೆ ಹಿನ್ನೆಲೆಯಲ್ಲಿ ಗಡಿಯಲ್ಲಿ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು. ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಿ ಮಾಸ್ಕ್ ಧರಿಸಬೇಕು. ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈಗಾಗಲೇ ಅಂತರರಾಜ್ಯ ಸಾರಿಗೆ ಆರಂಭವಾಗಿದೆ. ಈ ಮೊದಲಿನಂತೆ ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ ಎಂದರು. ಇನ್ನು ಪಂಚಮಸಾಲಿ ಸಮುದಾಯ 2ಎಗೆ ಸೇರಿಸಬೇಕು ಎಂಬ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿ, ಸಮಾಜದ ಹೋರಾಟಕ್ಕೆ ನನ್ನ …

Read More »

ಫೆ.23 ರಂದು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ

ಬೆಂಗಳೂರು: “ಶಿಕ್ಷಣ ಇಲಾಖೆಯ ಧೋರಣೆ, ದ್ವಂದ್ವ ನಿಲುವು, ಅವೈಜ್ಞಾನಿಕ ಕ್ರಮಗಳನ್ನು ಖಂಡಿಸಿ ಫೆ. 23ರಂದು ಬೃಹತ್‌ ಪ್ರತಿಭಟನಾ ರ‍್ಯಾಲಿ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಯ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ನಡೆಯಲಿರುವ ಬೃಹತ್‌ ಪ್ರತಿಭಟನಾ ರ‍್ಯಾಲಿಯಲ್ಲಿ ರಾಜ್ಯಾದ್ಯಂತ …

Read More »

ಪಡಿತರ ಅಕ್ಕಿ ಮಾರಾಟ : ಬೆಳಗಾವಿಯಲ್ಲಿ ಮೂವರ ಬಂಧನ

ಬೆಳಗಾವಿ : ಇಲ್ಲಿನ ಶೆರಿಗಲ್ಲಿಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.   ವಿತರಿಸುವ ಪಡಿತರ ಅಕ್ಕಿಗಳನ್ನು ಮಾರಾಟ ಮಾಡುತ್ತಿದ್ದ ವೇಳೆ ಖಡೇಬಜಾರ ಠಾಣೆಯ ಪಿಐ ದೀರಜ್ ಶಿಂಧೆ ನೇತೃತ್ವದ ತಂಡ ದಾಳಿ ನಡೆಸಿ, ಮೂವರು ಬಂಧಿಸಿದ್ದಾರೆ.   ಬಂಧಿತರಿಂದ ಐಸರ್ ಕಂಪನಿಯ ಗೂಡ್ಸ್ ವಾಹನ, 66375 ಮೌಲ್ಯದ 118 ಅಕ್ಕಿ ಚೀಲ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.

Read More »

ಗ್ರಾಮ ವಾಸ್ತವ್ಯ: ಬೈಲವಾಡದಲ್ಲಿ ಜನರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡ ಗ್ರಾಮಸ್ಥರು, ಜನರ ಮನವಿಗಳಿಗೆ ಕಿವಿಯಾದ ಅಧಿಕಾರಿಗಳು

ಬೆಳಗಾವಿ: ‘ಅಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಸರ್ಕಾರಿ ಬಸ್ ನಲ್ಲಿ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದರು. ಗ್ರಾಮಸ್ಥರು ಜಿಲ್ಲಾಧಿಕಾರಿ ಸೇರಿ ಎಲ್ಲ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ಸಂತಸದಿಂದ ಬರಮಾಡಿಕೊಂಡರು. ಗ್ರಾಮದ ವರ್ತಿ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮ ಆರಂಭಿಸಿದ್ದಾರೆ. ₹ …

Read More »

ಮನುವಾದಿಗಳಿಗೆ ಸೆಡ್ಡು ಹೊಡೆದು ಬದುಕುತ್ತೇವೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಮಶಾನ ಭೂಮಿಯಲ್ಲಿ ಅಭಿಮಾನಿಯ ಹೊಸ ಕಾರಿಗೆ ಶಾಸಕ ಚಾಲನೆ

ಬೆಳಗಾವಿ : ‘ ಮನುವಾದಿಗಳಿಗೆ ಹೆದರಿ ಜೀವನ ಮಾಡುವವರು ನಾವಲ್ಲ. ಅವರಿಗೆ ಸೆಡ್ಡು ಹೊಡೆದು ಬದುಕುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಶನಿವಾರ ಅಭಿಮಾನಿಯ ಹೊಸ ಕಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಮೂಢನಂಬಿಕೆಯ ವಿರುದ್ಧ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದೇವೆ. ಅದರ ಒಂದು ಭಾಗ ನೂತನ ಕಾರಿಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದರು. ‘ಸಂಕೇಶ್ವರದ ವಿಕ್ರಂ ಎಂಬುವವರು …

Read More »

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ

ಮಧ್ಯಪ್ರದೇಶ : ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವತಿವೋರ್ವಳು ಆಯತಪ್ಪಿ ಸುಮಾರು 50 ಅಡಿ ಆಳದ ಬಾವಿಗೆ ಬಿದ್ದ ಘಟನೆ ರತ್ಲಂ ಜಿಲ್ಲೆಯ ಸುಖೇಡಾ ಗ್ರಾಮದಲ್ಲಿ ನಡೆದಿದೆ. ಬಾವಿಯೊಳಗಿಂದ ಯುವತಿಯ ಕಿರುಚಾಟ ಕೇಳಿ , ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಯುವಕನೊಬ್ಬ ಆಕೆಯನ್ನು ಉಳಿಸಲು ಬಾವಿಗೆ ಹಾರಿ ಆತನೂ ಇಕಕಟ್ಟಿಗೆ ಸಿಲುಕಿದ್ದ. ಸುಜಾಪುರ ದೇವಸ್ಥಾನ ನೋಡಲೆಂದು ಬಂದಿದ್ದ ಯುವತಿ ಪೂಜೆ ಮುಗಿಸಿ, ಪಕ್ಕದಲ್ಲಿಯೇ ಇದ್ದ ಬಾವಿಯ ಬಳಿ ಸೆಲ್ಫಿ ತೆಗೆದುಕೊಳ್ಳಲಿ ಹೋದಾಗ ಕಾಲುಜಾರಿ …

Read More »