Breaking News
Home / ರಾಷ್ಟ್ರೀಯ (page 794)

ರಾಷ್ಟ್ರೀಯ

ಮಹಿಳೆಗೆ ಚೂಡಾಯಿಸಿದ ಆರೋಪ ಮರಕ್ಕೆ ಕಟ್ಟಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ.

ಗೋಕಾಕ ಬ್ರೇಕಿಂಗ್   ಸಂಗನಕೇರಿ ಗ್ರಾಮದ ಗೋಕಾಕ್ ರಸ್ತೆಯಲ್ಲಿ ನಡೆದಿರುವ ಘಟನೆ. ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮ ಹನುಮಂತ ಹಿರೇಮಠ ಎಂಬ ಯುವಕನನ್ನು ತೆಂಗಿನ ಮರಕ್ಕೆ ಕಟ್ಟಿ ಥಳಿತ *ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯನ್ನು ಚೂಡಾಯಿಸಿದ ಆರೋಪ *ತೆಂಗಿನಮರಕ್ಕೆ ಯುವಕನ ಕಟ್ಟಿ ಥಳಿಸುತ್ತಿರುವ ವಿಡಿಯೋ ವೈರಲ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ …

Read More »

ಶಿವಳ್ಳಿ ಗ್ರಾಮ ಪಂಚಾಯತಿ “ಕೈ” ಪಾಲು..!

ಧಾರವಾಡ: ತಾಲೂಕಿನ ಶಿವಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷದ ಬಲ ಹೆಚ್ಚಿದಂತಾಗಿದೆ.           ಶಿವಳ್ಳಿ ಗ್ರಾಮದ ಮೂರನೇಯ ವಾರ್ಡಿನಲ್ಲಿ ಜಯ ಗಳಿಸಿದ ವಿಜಯಮಹಾಂತೇಶ ಶಿವಲಿಂಗಯ್ಯ ವಸ್ತ್ರದ ಅವರು ಅಧ್ಯಕ್ಷರಾಗಿಯೂ, ಉಪಾಧ್ಯಕ್ಷರಾಗಿ ಶಂಕರೆವ್ವ ಈಶ್ವರಪ್ಪ ಸಣ್ಣಮುದ್ದಿಯವರು ಅವಿರೋಧವಾಗಿ ಆಯ್ಕೆಯಾದರು.   ಶಿವಳ್ಳಿ ಪಂಚಾಯತಿಯಲ್ಲಿ ಒಟ್ಟು ಒಂಬತ್ತು ಸದಸ್ಯರ ಬಲ ಹೊಂದಿದ್ದು, ಅತೀ ಹೆಚ್ಚು ಸದಸ್ಯರು …

Read More »

ಮಾಜಿ ಸಚಿವ ವಿನಯ ಕುಲಕರ್ಣಿ-ಚಂದ್ರಶೇಖರ ಇಂಡಿ ನ್ಯಾಯಾಂಗ ಬಂಧನ ವಿಸ್ತರಣೆ..!

ಧಾರವಾಡ: ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಅವರ ಮಾವನವರಾದ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನವನ್ನ ಮತ್ತೆ ಹದಿನಾಲ್ಕು ದಿನಗಳವರೆಗೆ ಮುಂದೂಡಿ ಆದೇಶ ಮಾಡಲಾಗಿದೆ. ನವೆಂಬರ್ 5ರಂದು ಬಂಧನವಾಗಿರುವ ವಿನಯ ಕುಲಕರ್ಣಿ ಹಾಗೂ ಕೆಲವು ದಿನಗಳ ಹಿಂದೆ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಚಂದ್ರಶೇಖರ ಇಂಡಿಯವರನ್ನ ಕಾರಾಗೃಹದಲ್ಲಿ ಇಡಲಾಗಿದ್ದು, ಇಂದು ಮತ್ತೆ 14 ದಿನದ ನ್ಯಾಯಾಂಗ ಬಂಧನವನ್ನ …

Read More »

ಬೆಳಗಾವಿಯಲ್ಲಿ ಸೇನಾ ಭರ್ತಿ ರ್ಯಾಲಿ ಆರಂಭ

ಬೆಳಗಾವಿ: ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಇಲ್ಲಿನ ವಿಟಿಯು ಕ್ರೀಡಾಂಗಣದಲ್ಲಿ ಫೆ.4ರಿಂದ ಆರಂಭಗೊಂಡ ಸೇನಾ ಭರ್ತಿ ರ್ಯಾಲಿಗೆ ಹಸಿರುನಿಶಾನೆ ತೋರಿಸಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ನೇಮಕಾತಿ ರ್ಯಾಲಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ …

Read More »

ಅಬಕಾರಿ ಇಲಾಖೆ ಅಧಿಕಾರಿಗಳಿಂದ ಸಂಚಾರಿ ನಿಯಮ ಉಲ್ಲಂಘನೆ : ಪಾದಚಾರಿಗಳ ಆಕ್ರೋಶ !

ಬೆಳಗಾವಿ : ಇಲ್ಲಿನ ಅಬಕಾರಿ ಇಲಾಖೆಯ ಕಚೇರಿ ಮುಂದೆ ಪಾದಚಾರಿಗಳು ಸಂಚರಿಸುವ ಫುಟ್ ಪಾತ್ ಮೇಲೆ ಜಪ್ತಿ ಮಾಡಿದ ವಾಹನಗಳನ್ನು ನಿಲ್ಲಿಸಲಾಗುತ್ತಿದ್ದು, ಅಧಿಕಾರಿಗಳ ಈ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.   ನೋ ಪಾರ್ಕಿಂಗ್ ಸ್ಥಳದಲ್ಲಿ ಜನರು ದ್ವಿಚಕ್ರ ವಾಹನ ನಿಲುಗಡೆ ಮಾಡಿದರೆ ಸಂಚಾರಿ ಪೊಲೀಸರು ದಂಡ ಹಾಕಲಾಗುತ್ತದೆ. ಜತೆಗೆ ದ್ವಿಚಕ್ರ ವಾಹನಗಳನ್ನು ಠಾಣೆಗೆ ತೆಗೆದುಕೊಂಡು ಹೋಗಲಾಗುತ್ತದೆ. ಆದ್ರೆ ಅಬಕಾರಿ ಇಲಾಖೆಯ ಅಧಿಕಾರಿಗಳು ಕೆಲ ದಿನಗಳಿಂದ ಇಲಾಖೆಯ ಮುಂದಿನ ಫುಟ್ …

Read More »

ಹಾವೇರಿಯ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ.!!!

ಹಾವೇರಿ : ಯಾಲಕ್ಕಿ ನಗರಿ ಹಾವೇರಿಯಲ್ಲಿ ಇದೇ ಫೆ.26ರಿಂದ 28ರವರೆಗೆ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಕೊರೊನಾ ಆತಂಕದ ನಡುವೆ ವಿವಿಧ ಸಿದ್ಧತೆಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡಿಕೊಳ್ಳುತ್ತಿದೆ. ಆದರೆ, ಸರ್ಕಾರದಿಂದ ಅನುದಾನ ಮಂಜೂರಾಗದಿರುವುದು, ಸಿದ್ಧತೆಗೆ ಸಮಯ ಕಡಿಮೆ ಇರುವುದರಿಂದಾಗಿ ನಿರ್ಧಾರಿತ ದಿನಾಂಕದಂದು ಸಾಹಿತ್ಯ ಸಮ್ಮೇಳನ ನಡೆಸುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ. ರಾಜ್ಯ ಸರ್ಕಾರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು 20 …

Read More »

ಸಾಹಿತಿಗಳು, ನಟ-ನಟಿಯವರು ರೈತರ ಪ್ರತಿಭಟನೆ ಬೆಂಬಲಿಸಬೇಕು: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೈತರ ಪ್ರತಿಭಟನೆಗೆ ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ನಟ-ನಟಿಯರು ಬೆಂಬಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.   ರೈತರ ಪರವಾಗಿ ಬೆಂಬಲ ನೀಡುವಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ …

Read More »

ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ

ಬೆಳಗಾವಿಯಲ್ಲಿ ಮಟ್ಕಾ ಅಡ್ಡೆ ಮೇಲೆ ದಾಳಿ: ನಾಲ್ವರ ಬಂಧನ ಬೆಳಗಾವಿ : ಅಷ್ಟೇ ಗ್ರಾಮದಲ್ಲಿನ ಮಟಕಾ ಅಡ್ಡೆ ಮೇಲೆ ಮಾರಿಹಾಳ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟೇ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ನಾಯಕ್, ರಾಜು ಕಾಕತಿ, ರಮೇಶ ಗುರುನಾಥ ದೊಡಮನಿ, ಸುಧಾಕರ ನಂದಗಡಕರ ಬಂಧಿತರು. ಮಾರಿಹಾಳ ಠಾಣೆ ಪೊಲೀಸರು ಖಚಿತ ಮಾಹಿತಿ ಆದಾರದ ಮೇಲೆ ಡಿಸಿಪಿ ವಿಕ್ರಂ ಆಮಟೆ ನೇತೃತ್ವದ ತಂಡ ದಾಳಿ …

Read More »

ರೈಲಿಗೆ ತಲೆ ಕೊಟ್ಟು ಬೆಳಗಾವಿಯಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ..ಪತಿ ಸಾವು..ಪತ್ನಿಗೆ ಗಾಯ

ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಘಟನೆಯಲ್ಲಿ ಪತಿ ಸಾವನ್ನಪ್ಪಿ, ಪತ್ನಿಗೆ ಗಾಯವಾಗಿರುವ ಘಟನೆ ಬೆಳಗಾವಿ ನಗರದ ಒಂದನೇ ರೇಲ್ವೆ ಗೇಟ್ ಬಳಿ ನಡೆದಿದೆ.ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಈ ದಂಪತಿ ಯತ್ನಿಸಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …

Read More »

ಪೊಲೀಸರ ಎದುರೇ ವಿದ್ಯಾರ್ಥಿ ತಾಯಿಗೆ ಕಪಾಳಮೋಕ್ಷ

ರಾಯಚೂರು: ವಿದ್ಯಾರ್ಥಿಗೆ 80,000 ರೂ ಪೀಸ್ ಡಿಮ್ಯಾಂಡ್ ಮಾಡಿ ಕಿರುಕುಳ ನೀಡುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿ ತಾಯಿಗೆ ಪೊಲೀಸರ ಎದುರೇ ಕಪಾಳಮೋಕ್ಷ ಮಾಡಿದ ಮೊಂಟೆಸರಿ ಶಾಲೆ ಮುಖ್ಯಸ್ಥ ಸತೀಶ್ ಕುಮಾರ್ ಹಾಗೂ ಆತನ ಪತ್ನಿ ಇಬ್ಬರನ್ನು ಬಂಧಿಸಲಾಗಿದೆ. 10ನೇ ತರಗತಿ ವಿದ್ಯಾರ್ಥಿ ಸಂಪತ್ ಗೆ ತಾವು ಹೇಳಿದಷ್ಟು ಹಣವನ್ನು ಕಟ್ಟಬೇಕು ಎಂದು ಶಾಲೆಯ ಮುಖ್ಯಸ್ಥರು ಪ್ರತಿದಿನ ಕಿರುಕುಳ ನೀಡಿತ್ತಿದ್ದರು. ಇದರಿಂದ ಬೇಸತ್ತ ಸಂಪತ್ ಪೋಷಕರು ಟಿಸಿ ಕೊಡುವಂತೆ ಕೇಳಿಕೊಂಡಿದ್ದರು. ಟಿಸಿ ಕೊಡಲು …

Read More »