Breaking News
Home / ರಾಷ್ಟ್ರೀಯ (page 8)

ರಾಷ್ಟ್ರೀಯ

ಇಂದು ರಾಹುಲ್‌ ರಾಜ್ಯಕ್ಕೆ ; ಮಂಡ್ಯ, ಕೋಲಾರದಲ್ಲಿ ರೋಡ್‌ಶೋ, ಸಾರ್ವಜನಿಕ ಸಭೆ

ಬೆಂಗಳೂರು: ಚುನಾವಣೆ ಘೋಷಣೆ ಯಾದ ಅನಂತರ ಬುಧವಾರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಲಿರುವ ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿಯವರು ಹೈವೋಲ್ಟೆàಜ್‌ ಕ್ಷೇತ್ರ ಗಳಲ್ಲಿ ಒಂದಾದ ಮಂಡ್ಯದಲ್ಲಿ ಚುನಾ ವಣ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಎರಡು ಬಾರಿ ರಾಜ್ಯಕ್ಕೆ ಭೇಟಿ ನೀಡಿ ಚುನಾವಣ ಕಹಳೆ ಮೊಳಗಿಸಿದ್ದಾರೆ. ಆದರೆ ಕಾಂಗ್ರೆಸ್‌ ರಾಷ್ಟ್ರೀಯ ನಾಯಕರು ಇನ್ನೂ ರಾಜ್ಯದ ಅಖಾಡಕ್ಕೆ ಅಧಿಕೃತವಾಗಿ ಪದಾರ್ಪಣೆ ಮಾಡಿರಲಿಲ್ಲ. ರಾಹುಲ್‌ ಗಾಂಧಿ ಆಗಮಿಸುವ ಮೂಲಕ ಪಕ್ಷದಲ್ಲಿ ಸಂಚಲನ ಮೂಡಿಸಲಿದ್ದಾರೆ.

Read More »

ಮೋದಿ ಭ್ರಷ್ಟಾಚಾರದ ವಿಶ್ವ ಚಾಂಪಿಯನ್ ; ರಾಹುಲ್

ಗಾಜಿಯಾಬಾದ್, ಏ. 17 (ಪಿಟಿಐ) : ಚುನಾವಣಾ ಬಾಂಡ್‍ಗಳ ಯೋಜನೆಯು ವಿಶ್ವದಲ್ಲೆ ಅತ್ಯಂತ ದೊಡ್ಡ ಸುಲಿಗೆ ಯೋಜನೆಯಾಗಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷ ಇಂಡಿಯಾ ಬಣದ ಪರವಾಗಿ ಬಲವಾದ ಒಳಹರಿವು ಇದೆ ಮತ್ತು ಬಿಜೆಪಿ 150 ಸ್ಥಾನಗಳಿಗೆ ಸೀಮಿತವಾಗಲಿದೆ ಎಂದು …

Read More »

ಚನ್ನಮ್ಮನ ಕಿತ್ತೂರು | ಬಸ್ ಪಲ್ಟಿ: 10 ಜನರಿಗೆ ಗಾಯ

ಚನ್ನಮ್ಮನ ಕಿತ್ತೂರು: ಹುಬ್ಬಳ್ಳಿಯಿಂದ ಬೆಳಗಾವಿಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ತಡೆರಹಿತ ರಾಜಹಂಸ ಬಸ್ ತಾಲ್ಲೂಕಿನ ತಿಮ್ಮಾಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು 10 ಪ್ರಯಾಣಿಕರಿಗೆ ಗಾಯಗಳಾಗಿವೆ. ಹೆದ್ದಾರಿ ಬದಿಗಿರುವ ಕಬ್ಬಿಣದ ತಡೆ ಸರಳುಗಳನ್ನು ಕಿತ್ತುಕೊಂಡು ಸರ್ವೀಸ್ ರಸ್ತೆಗೆ ಬಂದು ಬಸ್ ಬಿದ್ದಿದೆ. ಭಾರಿ ಸಪ್ಪಳವಾಗಿದ್ದರಿಂದ ತಿಮ್ಮಾಪುರ ಗ್ರಾಮಸ್ಥರು ಧಾವಿಸಿ ಬಂದು ವಾಹನದಲ್ಲಿ ಸಿಕ್ಕಿ ಬಿದ್ದಿದ್ದ ಪ್ರಯಾಣಿಕರನ್ನು ಹೊರತೆಗೆಯುವಲ್ಲಿ ನೆರವಾದರು. ಗಾಯಾಳುಗಳನ್ನು ಇಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. …

Read More »

ಚಿಕ್ಕೋಡಿ ಲೋಕಸಭಾ ಕ್ಷೇತ್ರ | ತಿಂಗಳಲ್ಲಿ 79 ಪ್ರಕರಣ:₹1.17 ಕೋಟಿ ವಶ

ಚಿಕ್ಕೋಡಿ: ‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್‌ 16ರಿಂದ ಏಪ್ರಿಲ್ 16ರವರೆಗೆ ₹1.17 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ’ ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ್‌ ಶಿಂಧೆ ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ವಿವಿಧ ಮಾದರಿ ನೀತಿ ಸಂಹಿತೆ ತಂಡಗಳು ₹ 1.17 ನಗದು, ₹ 7.05 ಲಕ್ಷ ಮೌಲ್ಯದ 1948.151 ಲೀಟರ್‌ ಮದ್ಯ, ₹ 2.21 ಲಕ್ಷ ಮೌಲ್ಯದ 8.813 ಕೆ.ಜಿ. ಮಾದಕ, ಅಮಲು ಪದಾರ್ಥಗಳು ಹಾಗೂ ₹ 9.88 …

Read More »

ತೆರಿಗೆದಾರರ’ ಮೇಲಿನ ಹೊರೆ ಕಡಿಮೆ ಮಾಡಬೇಕು: ಪ್ರಧಾನಿ ಮೋದಿ

ನವದೆಹಲಿ: ದೇಶದ ತೆರಿಗೆದಾರರ ಕೊಡುಗೆಯನ್ನು ಆಚರಿಸಬೇಕು ಮತ್ತು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, “ಮಧ್ಯಮ ವರ್ಗದ ತೆರಿಗೆದಾರರಿಗೆ ಸಂಬಂಧಿಸಿದಂತೆ ಅವರನ್ನು ಆಚರಿಸಬೇಕು ಮತ್ತು ಗೌರವಿಸಬೇಕು.ನಾವು ತೆರಿಗೆದಾರರನ್ನು ಹಗಲು ರಾತ್ರಿ ನಿಂದಿಸಿದರೆ ದೇಶ ಹೇಗೆ ಕಾರ್ಯನಿರ್ವಹಿಸುತ್ತದೆ?” ಎಂದು ಕೇಳಿದರು. ದಕ್ಷ ಮತ್ತು ಪಾರದರ್ಶಕ ತೆರಿಗೆ ಸಂಗ್ರಹ ವ್ಯವಸ್ಥೆಯ ಬಗ್ಗೆ ಮಾತನಾಡಿದ ಪಿಎಂ ಮೋದಿ, ತಮ್ಮ ಸರ್ಕಾರದ ಅಡಿಯಲ್ಲಿ …

Read More »

ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಹುಬ್ಬಳ್ಳಿ: ತಾಲೂಕಿನ ಅಂಚಟಗೇರಿ ಬಳಿ ಖಾಸಗಿ ಬಸ್ ಮತ್ತು ಫಾರ್ಚ್ಯೂನರ್ ಕಾರು ನಡುವೆ ಅಪಘಾತ ಸಂಭವಿಸಿ ಆಂಧ್ರ ಪ್ರದೇಶ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹುಬ್ಬಳ್ಳಿ ಮಾರ್ಗವಾಗಿ ಕಾರವಾರ ಕಡೆಗೆ ಹೊರಟಿದ್ದ ಕಾರು ಹಾಗೂ ಮಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ನಡುವೆ ಈ ಅವಘಡ ನಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಗಾಯಾಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ …

Read More »

ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಕೊಪ್ಪಳ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ನಾಳೆ ಸಮಯ ನಿಗದಿಯಾಗಿದ್ದು ಅವರ ಭೇಟಿ ಬಳಿಕ‌ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ ಕೈಗೊಳ್ಳುವೆ ಎಂದು ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿದರು‌ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ಸಿಎಂ ಹಾಗೂ ಡಿಸಿಎಂ ಭೇಟಿಗೆ ನನ್ನ ಆತ್ಮೀಯ ಮಿತ್ರರೂ ಆದ ಶಾಸಕ ಲಕ್ಷ್ಮಣ ಸವದಿ ವ್ಯವಸ್ಥೆ ಮಾಡಿದ್ದಾರೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ ಕೂಡ …

Read More »

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ ಧಾರವಾಡ: ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾಸಾಗಲು ಕೋಚಿಂಗ್ ಸೆಂಟರ್‌ಗಳಲ್ಲಿ ಲಕ್ಷಾಂತರ ಹಣ ಸುರಿದು ತರಬೇತಿ ಪಡೆದುಕೊಳ್ಳುವುದು ಇತ್ತಿಚೆಗೆ ಅತೀಯಾಗಿ ನಡೆಯುತ್ತಿದೆ. ಆದರೆ ಹಣ ಖರ್ಚು ಮಾಡಲು ಸಾಧ್ಯವಾಗದ, ಆದರೆ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಅವರಿಗೆ ಗುರುವಾಗಿ ಸಹಾಯ ಮಾಡಿ ಗುರಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಧಾರವಾಡದ ಕೃಷಿ ವಿವಿಯ ಪ್ರಾಧ್ಯಾಪಕಿ ಡಾ.ಅಶ್ವಿನಿ ಅವರು. …

Read More »

ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ : ಕಂಬನಿ ಮಿಡಿದ ರಾಜಕೀಯ ಗಣ್ಯರು..!

ಬೆಂಗಳೂರು : ಹೃದಯಾಘಾತದಿಂದ ಇಂದು ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದು, ವಿವಿಧ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಬಿ.ಎಸ್ ಯಡಿಯೂರಪ್ಪ ಸಂತಾಪ ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ …

Read More »

ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಸಚಿವ ಜಮೀರ್ ಅಹಮದ್ ಖಾನ್ ಆರೋಗ್ಯದಲ್ಲಿ ಧಿಡೀರ್ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ಚಿತ್ರದುರ್ಗ ಕಾಂಗ್ರೆಸ್ ಸಭೆಗೆ ಆಗಮಿಸುತ್ತಿದ್ದ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ, ಬೆನ್ನು ನೋವಿನಿಂದ ಬಳಲಿದರು. ಕೂಡಲೇ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಬಸವೇಶ್ವರ ಆಸ್ಪತ್ರೆಯಲ್ಲಿ ವೈದ್ಯ ಕಾರ್ತಿಕ್ ಅವರು ಚಿಕಿತ್ಸೆ ನೀಡುತ್ತಿದ್ದಾರೆ. ಇಸಿಜಿ, ಎಕೋ ಪರೀಕ್ಷೆ ನಡೆಸಲಾಗಿದೆ ಎಂದು ವರದಿಯಾಗಿದೆ. ಜಮೀರ್ ಅಹಮದ್ ಖಾನ್ ಅವರು …

Read More »