Breaking News

ರಾಷ್ಟ್ರೀಯ

ಇಂದಿನಿಂದ ಝೊಮ್ಯಾಟೋ ಉದ್ಯೋಗಿಗಳಿಗೆ ಕೊವೀಡ್ ಲಸಿಕೆ ವಿತರಣೆ: ಸಿಇಒ ಘೋಷಣೆ

ದೆಹಲಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲೂ ಕೆಲಸ ಮಾಡಿದ ಝೊಮ್ಯಾಟೋ ಆನ್‍ಲೈನ್ ಫುಡ್ ಆರ್ಡರ್ ಕಂಪನಿಯ ಉದ್ಯೋಗಿಗಳು, ಸಿಬ್ಬಂದಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್ ಗೋಯಲ್ ತಿಳಿಸಿದ್ದಾರೆ. ಹೀಗಾಗಿ ಜೊಮ್ಯಾಟೋದ ಸುಮಾರು 1.5 ಲಕ್ಷ ಉದ್ಯೋಗಿಗಳು ಕಂಪನಿಯ ವತಿಯಿಂದ ಉಚಿತವಾಗಿ ಕೊರೊನಾ ಲಸಿಕೆ ಪಡೆಯಲಿದ್ದಾರೆ. ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್ ಮಾಡಿಸಿಕೊಂಡಿದ್ದಾರೆ. ಇಂದಿನಿಂದ ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಝೊಮ್ಯಾಟೋ …

Read More »

ಪುತ್ರನನ್ನು ಕಳೆದುಕೊಂಡ ತಂದೆ-1 ಕೋಟಿ ಪರಿಹಾರ ಕೊಟ್ಟ ಕೇಜ್ರಿವಾಲ್

ನವದೆಹಲಿ: ಕೊರೊನಾ ವಾರಿಯರ್ ಆಗಿರುವ ವೈದ್ಯರೊಬ್ಬರು ಕೋವಿಡ್‍ಗೆ ಬಲಿಯಾಗಿದ್ದು, ಅವರ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬರೋಬ್ಬರಿ 1ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ಕೊಟ್ಟಿದ್ದಾರೆ. ಡಾ. ಅನಾಸ್(26) ಮೃತ ವೈದ್ಯರಾಗಿದ್ದಾರೆ. ಇವರು ಕೊರೊನಾ ಸೋಂಕಿನಿಂದ ಇತ್ತೀಚೆಗಷ್ಟೇ ಮೃತಪಟ್ಟಿದ್ದರು. ಇವರ ಕುಟುಂಬಕ್ಕೆ ಅರವಿಂದ್ ಕೇಜ್ರಿವಾಲ್ ಅವರು ಸಹಾಯವನ್ನು ಮಾಡಿದ್ದಾರೆ. ಮೃತ ಡಾ. ಅನಾಸ್ ಅವರ ಮನೆಗೆ ಭೇಟಿನೀಡಿ ಅವರ ತಂದೆಗೆ ಸಾಂತ್ವನ ಹೇಳಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು …

Read More »

ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್​ಐ ವಿರುದ್ಧ ಎಫ್​ಐಆರ್​ ದಾಖಲು

ಚಿಕ್ಕಮಗಳೂರು: ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ ಸಂಬಂಧ ಮೂಡಿಗೆರೆ ತಾಲೂಕಿನ ಗೋಣಿಬೀಡು ಪಿಎಸ್​ಐ ಅರ್ಜುನ್​ ವಿರುದ್ಧ ಶನಿವಾರ ಎಫ್​ಐಆರ್​ ದಾಖಲಾಗಿದೆ. ಯುವಕ ಪುನೀತ್ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪುನೀತ್​ ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ ಆರೋಪ ಮೇಲೆ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು. ವಿಚಾರಣೆ ಸಂದರ್ಭದಲ್ಲಿ ಜಾತಿನಿಂದನೆ ಮಾಡಿ, ಮೂತ್ರ ಕುಡಿಸಿದ್ದಾರೆಂದು ಅರ್ಜುನ್​ ವಿರುದ್ಧ ಪುನೀತ್​ ಗಂಭೀರ …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ 420 ವೈದ್ಯರು ಕೊರೊನಾಗೆ ಬಲಿ

ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಟ್ಟಹಾಸ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರುಗಳೇ ಸೋಂಕಿಗೆ ಬಲಿಯಾಗುತ್ತಿದ್ದಾರೆ. ಕೊರೊನಾ 2ನೇ ಅಲೆಯಲ್ಲಿ ದೇಶದಲ್ಲಿ ಈವರೆಗೆ ಬರೋಬ್ಬರಿ 420 ವೈದ್ಯರು ಸೋಂಕಿಗೆ ಸಾವನ್ನಪ್ಪಿದ್ದಾರೆ. ಇದರಲ್ಲಿ 100 ವೈದ್ಯರು ದೆಹಲಿಯೊಂದರಲ್ಲಿಯೇ ಮೃತಪಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಮಂಡಳಿ (IMA) ಮಾಹಿತಿ ನೀಡಿದೆ. ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳು ಮಹಾಮಾರಿಗೆ ತುತ್ತಾಗುತ್ತಿರುವುದು ದುರಂತ.

Read More »

ಖಾಸಗಿ ವ್ಯಕ್ತಿಗಳೊಂದಿಗೆ ಸೇರಿ ಪೊಲೀಸನಿಂದ ಹಗಲು ದರೋಡೆ;

ಅಥಣಿ): ಖಾಸಗಿ ವ್ಯಕ್ತಿಗಳೊಂದಿಗೆ ಕಾರಲ್ಲಿ ಬಂದು ಬೈಕ್ ಸೀಜ್ ಮಾಡುವ ಬೆದರಿಕೆಯೊಡ್ಡಿ ರಸೀದಿ ನೀಡದೆ ಹಣ ಸುಲಿಗೆ ಮಾಡುತ್ತಿದ್ದ ಐಗಳಿ ಠಾಣೆಯ ಪೋಲಿಸ್ ಪೇದೆ ಸಂಗಪ್ಪ ನಾಯಕ ಇವರನ್ನು ಜನ ಮುತ್ತಿಗೆ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.       ಸಮೀಪದ ಕೊಟ್ಟಲಗಿ ಗ್ರಾಮದಲ್ಲಿ ಎರಡು ದಿನಗಳಿಂದ ಹಣ ವಸೂಲಿಗಿಳಿದಿದ್ದ ಪೋಲಿಸ್‍, ಶನಿವಾರ ಬೆಳಗ್ಗೆ ಹಾಲು ಹಾಕಲು ಬಂದಿದ್ದ ರೈತನೋರ್ವನಿಗೆ ಕೋಲಿನಿಂದ ಥಳಿಸಿದ್ದಾನೆ. ಮೊಣಕೈ …

Read More »

ಕಂಗನಾ ರಣಾವತ್​ ಬಾಡಿಗಾರ್ಡ್​ ಎನ್ನಲಾದ ಕರ್ನಾಟಕ ಮೂಲದವನ ಮೇಲೆ ರೇಪ್​ ಆರೋಪ; 50 ಸಾವಿರ ಹಣದೊಂದಿಗೆ ಪರಾರಿ

ಕಂಗನಾ ರಣಾವತ್​ ಇದ್ದಲ್ಲಿ ಕಿರಿಕ್​ ಇದ್ದೇ ಇರುತ್ತದೆ ಎಂಬಷ್ಟರಮಟ್ಟಿಗೆ ಅವರು ಈಗಾಗಲೇ ವಿವಾದಗಳನ್ನು ಮಾಡಿಕೊಂಡಿದ್ದಾರೆ. ಈಗ ರೇಪ್​ ಪ್ರಕರಣವೊಂದರ ಕಾರಣಕ್ಕಾಗಿ ಕಂಗನಾ ರಣಾವತ್​ ಅವರ ಬಾಡಿ ಗಾರ್ಡ್​ ಎಂದು ಹೇಳಲಾದ ವ್ಯಕ್ತಿ ಸುದ್ದಿಯಾಗುತ್ತಿದ್ದಾನೆ. ಆತ ಕಂಗನಾಗೆ ಬಾಡಿ ಗಾರ್ಡ್​ ಆಗಿದ್ದ ಎಂಬ ಕಾರಣಕ್ಕೆ ಈ ಪ್ರಕರಣ ಹೆಚ್ಚು ಹೈಲೈಟ್​ ಆಗುತ್ತಿದೆ. ಮುಂಬೈನ ಡಿಎನ್​ ನಗರ್​ ಪೊಲೀಸ್​ ಠಾಣೆಯಲ್ಲಿ ಕುಮಾರ್​ ಹೆಗಡೆ ಎಂಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್​ …

Read More »

ಕೊರೊನಾ ಸೋಂಕಿಗೆ ಆಯುರ್ವೇದ ಔಷಧ : ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು

ಹೈದರಾಬಾದ್: ಕೊರೊನಾ ಸೋಂಕಿಗೆ ವೈದ್ಯರೊಬ್ಬರು ಆಯುರ್ವೇದ ಔಷಧವೊಂದನ್ನು ಕಂಡುಹಿಡಿದಿದ್ದು, ಔಷಧಕ್ಕಾಗಿ ಜನರು ವೈದ್ಯನ ಮನೆ ಮುಂದೆ ಮುಗಿಬಿದ್ದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ. ಆಯುರ್ವೇದ ವೈದ್ಯ ಆನಂದಯ್ಯ ಎಂಬುವವರು ಕೊರೊನಾ ಸೋಂಕಿಗೆ ಔಷಧವನ್ನು ಕಂಡು ಹಿಡಿದಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈ ಔಷಧ ನೀಡುತ್ತಿದ್ದಾರೆ. ಇನ್ನು ಔಷಧಿಗಾಗಿ ಜನರು ಆಗಮಿಸುತ್ತಿದ್ದು, ಸ್ಥಳದಲ್ಲಿ 10 ಸಾವಿರಕ್ಕೂ ಅಧಿಕ ಜನರು ಕಿಲೋಮೀಟರ್ ಗಟ್ಟಲೇ ಉದ್ದ ಸರತಿ ಸಾಲಿನಲ್ಲಿ ನಿಂತಿದ್ದು, ಈ ವಿಡಿಯೋ ಸಾಮಾಜಿಕ …

Read More »

ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರಕ್ಕೆ ಛತ್ತೀಸ್‌ಗಢ ಕೊಕ್

ರಾಯಪುರ : ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಹಾಕಿರುವ ಬಗ್ಗೆ ವ್ಯಾಪಕ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ, ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢ ಸರ್ಕಾರ 18-44 ವರ್ಷ ವಯೋಮಿತಿಯ ಲಸಿಕೆ ಹಾಕಿಕೊಂಡವರಿಗೆ ತನ್ನದೇ ಪ್ರಮಾಣಪತ್ರ ನೀಡಲು ಆರಂಭಿಸಿದೆ. ಇದರಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಭಾವಚಿತ್ರವಿದೆ. 18-44 ವಯೋಮಿತಿಯವರು ಲಸಿಕೆಗೆ ನೋಂದಾಯಿಸಿಕೊಳ್ಳಲು ರಾಜ್ಯ ಸರ್ಕಾರ ಈಗಾಗಲೇ ತನ್ನದೇ ಸಿಜಿಟೀಕಾ ಎಂಬ ಪೋರ್ಟೆಲ್ ನಿಯೋಜಿಸಿಕೊಂಡಿದ್ದು, ಲಸಿಕೆ ಹಾಕಿಕೊಂಡವರಿಗೆ ಕೇಂದ್ರ ಸರ್ಕಾರ …

Read More »

ಮಾಸ್ಕ್ ಧರಿಸಿ ಅಂದಿದ್ದಕ್ಕೆ ಗ್ರಾ.ಪಂ ಸದಸ್ಯನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

ಚಿಕ್ಕಬಳ್ಳಾಪುರ: ಹಳ್ಳಿಗಳಲ್ಲಿ ಕೊರೊನಾ ಶರವೇಗದ ಸ್ವರೂಪ ಪಡೆದುಕೊಳ್ಳುತ್ತಿದೆ. ಕೊರೊನಾ ತಡೆಗಟ್ಟುವ ಸಲುವಾಗಿ ಯುವಕರಿಗೆ ಮಾಸ್ಕ್ ಧರಿಸಿ ಅಂತ ಹೇಳಿದ್ದನ್ನೇ ನೆಪವಾಗಿಟ್ಟುಕೊಂಡು ರಾಜಕೀಯ ಜಿದ್ದಿಗೆ ಮಾರಕಾಸ್ತ್ರಗಳಿಂದ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕು ಚೀಡಚಿಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತ್ ಸದಸ್ಯ ತಮ್ಮೇಗೌಡ ಹಾಗೂ ಈತನನ್ನ ರಕ್ಷಿಸಲು ಹೋದ ಮಂಜು ಶಂಕರ್ ಹಲ್ಲೆಗೊಳಗಾದವರಾಗಿದ್ದಾರೆ. ಇದೇ ಗ್ರಾಮದ ಮರಿಯಪ್ಪರ ಮಗ ಚಾಣಕ್ಯ ಗೌಡ, ಅಕ್ಷಯ್ ಗೌಡ, …

Read More »