Breaking News
Home / ರಾಷ್ಟ್ರೀಯ (page 807)

ರಾಷ್ಟ್ರೀಯ

ಸಿಎಂ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ. ಆದ್ರೆ ಯಾವುದೇ ರೀತಿ ರೈತರ ಬಗ್ಗೆ ಕಾಳಜಿ ಅವರಿಗಿಲ್ಲ. ಬಿಜೆಪಿ ಕಾರ್ಪೊರೇಟರ್ ಪರ ಇರುವುದರಿಂದ ಕಾಯ್ದೆ ಹಿಂಪಡೆಯಲು ಹಿಂದೆಟು ಹಾಕುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಂದು ನಡೆದ ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ಕಾರ್ಪೊರೇಟರ್ ಪರ ಇವೆ. ಆದ ಕಾರಣ ಸರ್ಕಾರ …

Read More »

ಕಾಂಗ್ರೆಸ್ ನ ಮತ್ತಿಬ್ಬರು ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪಟ್ಟ !

ಬೆಂಗಳೂರು : ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ, ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಆದೇಶ ನೀಡಿದ್ದಾರೆ. ಮೂವರು ನಾಯಕರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಗಾಗಲೇ ನೇಮಕ ಮಾಡಲಾಗಿದೆ. ನಾಯಕರು ಸಹ ರಾಜ್ಯಾದ್ಯಂತ …

Read More »

ಬೆಳಗಾವಿಯ 19 ವರ್ಷದ ಯುವತಿ ಕಾಣೆ

ಬೆಳಗಾವಿ : ಅನಗೋಳ ನಿವಾಸಿಯಾದ 19 ವರ್ಷದ ಸ್ವಾತಿ ಸದಾನಂದ ಕಮ್ಮಾರ ಜ.4 ರಂದು ಕಾಣೆಯಾಗಿದ್ದಾಳೆ. ಪಾಂಗೂಳ ಗಲ್ಲಿಯಲ್ಲಿರುವ ಸಾಯಿ ಲಕ್ಷ್ಮಿ ಇಂಡೋಲಿಯನ್ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗಿದ್ದಳು. ಸಂಜೆ 4 ಗಂಟೆಗೆ ಮಾಲೀಕರಿಂದ 1400 ರೂಪಾಯಿ ಹಣ ಪಡೆದು ಕೆಲಸಕ್ಕೆ ಬರುವುದಿಲ್ಲವೆಂದು ಮರಳಿದ್ದಾಳೆ. ಆದರೆ ಮನೆಗೆ ಬಾರದೆ ಕಾಣೆಯಾಗಿದ್ದು, ಬೆಳಗಾವಿ ಮಾರ್ಕೇಟ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾತಿ ಸದಾನಂದ ಕಮ್ಮಾರ 5 ಪೂಟ 1 ಇಂಚು ಎತ್ತರವಿದ್ದು, …

Read More »

ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.

ಬೆಂಗಳೂರು: ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ರೈತ ಕಾಯ್ದೆ ರದ್ಧತಿ ಆಗ್ರಹಿಸಿ ಇಂದು ಕಾಂಗ್ರೆಸ್‌ ರಾಜಭವನ ಚಲೋವನ್ನು ಆಯೋಜಿಸಿತ್ತು. ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶದ ಬಳಿಕ ರಾಜಭನವನಕ್ಕೆ ತೆರಳಲು ಹೋಗುತ್ತಿದ್ದಾಗ ಪೊಲೀಸರು ಕಾಂಗ್ರೆಸ್‌ ನಾಯಕರನ್ನು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಪೊಲೀಸರು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ “ಹೂ ದಿ ಹೆಲ್‌” ಎಂದು ಹೇಳಿ ಮಹಿಳಾ ಸಿಬ್ಬಂದಿಯ ಮೇಲೆ …

Read More »

ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

ಮಂಗಳೂರು: ತುಳುವರ ಆರಾಧ್ಯ ದೈವ ಸ್ವಾಮಿ‌ ಕೊರಗಜ್ಜ ಹಾಗೂ ಗುಳಿಗಜ್ಜನ ಪುಣ್ಯಕ್ಷೇತ್ರದ ಕಾಣಿಕೆ‌ ಹುಂಡಿಗೆ ಕಾಂಡೋಮ್ ಹಾಗೂ ನಿಂದನಾರ್ಹ ಬರಹಗಳನ್ನು ಹಾಕಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಮಂಗಳೂರು ಸಮೀಪದ ಉಳ್ಳಾಲದಲ್ಲಿ‌ ನಡೆದಿದೆ. ಉಳ್ಳಾಲದ ಬಸ್ ನಿಲ್ದಾಣದ ಬಳಿ ಇರುವ‌ ಸಾರ್ವಜನಿಕ‌ ಶ್ರೀ‌ಕೊರಗಜ್ಜ, ಗುಳಿಗಜ್ಜ ಸೇವಾ ಸಮಿತಿ ಕ್ಷೇತ್ರದಲ್ಲಿರುವ ಕಾಣಿಕೆ‌ ಹುಂಡಿಯಲ್ಲಿ‌ ಇಂದು ಮುಂಜಾನೆ ಈ ವಿಕೃತಿ ಪತ್ತೆಯಾಗಿದೆ. ಈ ಕ್ಷೇತ್ರದಲ್ಲಿ ಪ್ರತೀ ಸಂಕ್ರಮಣದಂದು ಕಾಣಿಕೆ‌ ಹುಂಡಿಯ ಹಣ ಎಣಿಕೆ …

Read More »

ಅಂಜಲಿ ನಿಂಬಾಳ್ಕರ್ ಪ್ರತಿಭಟನೆ ವೇಳೆ ಅಸ್ವಸ್ಥ

; ಬೆಂಗಳೂರು; ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ನಡೆಯುತ್ತಿದ್ದ ರಾಜಭವನ ಚಲೋ ರೈತರ ಪ್ರತಿಭಟನೆ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ. ರಾಜಭವನದತ್ತ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆಯೇ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ. ನಂತರ ಅಲ್ಲೇ ಕುಳಿತು ವಿಶ್ರಾಂತಿ ಪಡೆದುಕೊಂಡರು. ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ತಡೆದು ನಾಯಕರನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಪ್ರತಿಭಟನೆಗಳು ಭುಗಿಲೆದ್ದಿವೆ.

Read More »

ಕೇಂದ್ರ ಬಜೆಟ್ : ಜ.30ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ

ಹೊಸದಿಲ್ಲಿ : ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿಯವರು ಸರ್ವಪಕ್ಷ ಸಭೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೇಂದ್ರ ಬಜೆಟ್ 2021-22 ಅನ್ನು ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನವು …

Read More »

ಆಸ್ತಿ ವಿವಾದ : ಬೆಳಗಾವಿಯಲ್ಲಿ 4 ವರ್ಷದ ಬಾಲಕನ ಕೊಲೆಗೈದ ಪಾಪಿ

    ಬೆಳಗಾವಿ : ಆಸ್ತಿ ವಿವಾದಕ್ಕೆ ಸಮಂಧಿಸಿದಂತೆ 4 ವರ್ಷದ ಬಾಲಕನನ್ನ ಕೊಲೆ ಮಾಡಿದ ಘಟನೆ ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದಲ್ಲಿ ನಡೆದಿದೆ. ಮಾರುತಿ ವಿರೇಶ್ ಸಂಕಣ್ಣವರ ಹತ್ಯೆಯಾದ ಬಾಲಕ. ಈರಪ್ಪ ಬಸಪ್ಪ ಸಂಕಣ್ಣ(35) ಕೊಲೆ ಆರೋಪಿಯಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ತನಿಖೆ‌ ನಡೆಸಿದ್ದಾರೆ.

Read More »

ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ: ಡಿ.ವಿ.ಸದಾನಂದ ಗೌಡ

ಮಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇನ್ನು ಮುಂದೆ ಬಾಯಿ ಮುಚ್ಚದಿದ್ರೆ ಕೇಂದ್ರ ನಾಯಕರು ಸೂಕ್ತ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಎಚ್ಚರಿಸಿದ್ದಾರೆ. ಪುತ್ತೂರಿನಲ್ಲಿ ಜನಸೇವಕ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ಸಂದರ್ಭದಲ್ಲೂ ಯತ್ನಾಳ್ ಇದೇ ರೀತಿ ಹೇಳಿಕೆ ನೀಡುತ್ತಿದ್ದರು. ಹಲವು ಎಚ್ಚರಿಕೆಯ ಬಳಿಕವೂ ಅವರು ತಮ್ಮ ವರ್ತನೆ ಸರಿಪಡಿಸಿಕೊಳ್ಳದ ಕಾರಣ ನಾನೇ ಅವರನ್ನು 6 …

Read More »

ಬ್ರೇಕ್ ಫೇಲ್ ಆದ ಸರಕು ತುಂಬಿದ ಟ್ರಕ್ ನ್ನು 3 ಕಿ.ಮೀ ರಿವರ್ಸ್ ಓಡಿಸಿದ ಚಾಲಕ

ಮಹಾರಾಷ್ಟ್ರ: ಬ್ರೇಕ್ ಫೇಲ್ ಆದ ಟ್ರಕ್ ಒಂದನ್ನು ಚಾಲಕ 3 ಕಿಲೋಮೀಟರ್ ದೂರದವರೆಗೆ ರಿವರ್ಸ್ ನಲ್ಲಿ ಓಡಿಸಿದ್ದು, ಆಕ್ಸಿಡೆಂಟ್ ಅಪಾಯದಿಂದ ತಪ್ಪಿಸಿ ಸಮರ್ಪಕವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರಕು ತುಂಬಿದ ಟ್ರಕ್ ಇದಕ್ಕಿದ್ದಂತೆ ಬ್ರೇಕ್ ಫೇಲ್ ಆಗಿದೆ. ಆ ವಾಹನ ರಿವರ್ಸ್ ಗೇರ್‌ನಲ್ಲಿದ್ದ ಕರಣ ನಿಲ್ಲಿಸುವುದು ಇನ್ನು ಕಷ್ಟವಾಗಿ ಪರಿವರ್ತನೆಯಾಗಿತ್ತು. ಅದು ಕೂಡ ಕಿರಿದಾದ ರಸ್ತೆ, ಜೊತೆಗೆ ವಾಹನ ಸಂಚಾರ ಇರುವ ರಸ್ತೆಯಲ್ಲಿ ವಾಹನಗಳು ಎಂದಿನಂತೆ ಓಡಾಡುತ್ತಲೇ ಇದೆ. ಇಂತಹ ರಸ್ತೆಯಲ್ಲಿ …

Read More »