Breaking News

ರಾಷ್ಟ್ರೀಯ

ಕೇಂದ್ರ ಸಚಿವ ಡಾ.ಭಾಗವತ್ ಕರದ್. huminality

ಇಂತಹ ಸುದ್ದಿಗಳು ಮಾಧ್ಯಮಗಳಲ್ಲಿ ಯಾಕೆ ಬರೋದಿಲ್ಲ ಅಂತ ಗೊತ್ತಿಲ್ಲ.. ನೆನ್ನೆ ಆಕಾಶದಲ್ಲಿ ಹಾರುತ್ತಿದ್ದ ಇಂಡಿಗೋ ವಿಮಾನದ, 12 ಎ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ತುರ್ತಾಗಿ ಅನಾರೋಗ್ಯಕ್ಕೆ ಒಳಗಾದರು, ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಏಕಕಾಲದಲ್ಲಿ ಇತರ ಕೆಲವು ಆರೋಗ್ಯದ ಸಮಸ್ಯೆಗಳನ್ನು ಎದುರಿಸಿದರು. ಆ ಸಮಯದಲ್ಲಿ ಒಬ್ಬರೇ ಒಬ್ಬರು ವೈದ್ಯರು ಮಾತ್ರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಆ ವೈದ್ಯರೇ ಕೇಂದ್ರ ಸಚಿವ ಡಾ.ಭಾಗವತ್ ಕರದ್. ಕೇಂದ್ರ ಸಚಿವರು, ತಮ್ಮ ಮಂತ್ರಿ ಎಂಬ ಅಹಂಕಾರವನ್ನು …

Read More »

ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ

ನವದೆಹಲಿ: ನಾಗರಿಕ ಪ್ರಪಂಚವೇ ತಲೆ ತಗ್ಗಿಸುವಂತ ಘೋರ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ಕೋಪಗೊಂಡಿದ್ದ ತಂದೆಯೊಬ್ಬ ಮಗಳ ಮೇಲೆಯೇ ಅತ್ಯಾಚಾರವೆಸಗಿರುವ ಹೇಯ ಘಟನೆ ನಡೆದಿದೆ. ಮಗಳ 8 ತಿಂಗಳ ಮಗು ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಮಗುವಿನ ಅಂತ್ಯಕ್ರಿಯೆಗೆಂದು ಮಗಳನ್ನು ಕಾಡಿನ ಸಮೀಪ ಕರೆದೊಯ್ದ ತಂದೆ ಅಲ್ಲಿಯೇ ಆಕೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಮಗಳನ್ನು ಹತ್ಯೆ ಮಾಡಿದ್ದಾನೆ. ಈ ಕುರಿತು ರಾಟಿಬಾದ್ ಠಾಣೆ ಅಧಿಕಾರಿ ಸುದೇಶ್ ತಿವಾರಿ …

Read More »

ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಶೇ.50ರಷ್ಟು ವರ್ಕ್ ಫ್ರಂ ಹೋಂ ಗೆ ಸೂಚಿಸಲಾಗಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಉಸಿರಾಟಕ್ಕೂ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾಗಶ: ಲಾಕ್ ಡೌನ್ ಜಾರಿಯಾದಂತಾಗಿದೆ. ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ವಾಯುಗುಣಮಟ್ಟ ನಿರ್ವಹಣಾ ಆಯೋಗ ತಿಳಿಸಿದೆ. ದೆಹಲಿಯ 300 ಕಿ.ಮೀ ವ್ಯಾಪ್ತಿಯಲ್ಲಿರುವ 11 ಉಷ್ಣ ವಿದ್ಯುತ್ ಸ್ಥಾವರಗಳನ್ನು ನವೆಂಬರ್ 30ರವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. …

Read More »

ಉತ್ತರ ಪ್ರದೇಶ: ಟೈಮ್ಸ್ ನೌ ಚುನಾವಣಾಪೂರ್ವ ಸಮೀಕ್ಷೆ ಏನು ಹೇಳುತ್ತದೆ?

ಲಕ್ನೋ, ನವೆಂಬರ್‌ 16: ಮುಂದಿನ ವರ್ಷ ಆರಂಭದಲ್ಲೇ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯು ನಡೆಯಲಿದೆ. ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರವನ್ನು ರೂಪಿಸಿದೆ. ಪ್ರಚಾರ ಕಾರ್ಯವನ್ನು ಮಾಡುತ್ತಿದೆ. ಈ ಐದು ರಾಜ್ಯಗಳ ಪೈಕಿ ಉತ್ತರ ಪ್ರದೇಶವು ರಾಜಕೀಯವಾಗಿ ಹೆಚ್ಚು ಪ್ರಮುಖವಾದ ರಾಜ್ಯವಾಗಿದೆ. ಪ್ರಸ್ತುತ ಬಿಜೆಪಿಯು ಇಲ್ಲಿ ಆಡಳಿತವನ್ನು ಹೊಂದಿದೆ. ಈ ನಡುವೆ ಉತ್ತರ ಪ್ರದೇಶದಲ್ಲಿ 2022 ರ ಚುನಾವಣಾ ಫಲಿತಾಂಶ ಏನು ಆಗಲಿದೆ …

Read More »

ಬೆಳಗಾವಿಯಲ್ಲಿ ಕಬ್ಬಿನ ಟ್ರ್ಯಾಕ್ಟರ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಆಜಂ ನಗರದ ಎಪಿಎಂಸಿ ರೋಡ್ ಕಾರ್ನರನಲ್ಲಿ ಬೆಳಿಗ್ಗೆ 9.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಬಿದ್ದಿದ್ದ ಕಬ್ಬನ್ನು ಬ್ಯಾರೆ ಟ್ರಾಲಿಗೆ ಹಾಕಲಾಗುತ್ತಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

Read More »

ಗಾಂಧೀಜಿಯವರ ಬೃಹತ್ ಗಾತ್ರದ ಕಂಚಿನ ಪ್ರತಿಮೆಧ್ವಂಸ

ಸಿಡ್ನಿ, ನವೆಂಬರ್ 16: ಭಾರತ ಸರ್ಕಾರವು ಆಸ್ಟ್ರೇಲಿಯಾಕ್ಕೆ ಉಡುಗೊರೆಯಾಗಿ ನೀಡಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಬೃಹತ್ ಗಾತ್ರದ ಕಂಚಿನ ಪ್ರತಿಮೆಯನ್ನು ಮೆಲ್ಬೋರ್ನ್​ ನಗರದಲ್ಲಿ ಧ್ವಂಸಗೊಳಿಸಲಾಗಿದೆ. ಈ ಘಟನೆಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಬೇಸರ ವ್ಯಕ್ತಪಡಿಸಿದ್ದು, ಇದು ತೀರಾ ‘ಅವಮಾನಕರ’ ಎಂದು ಖಂಡಿಸಿದ್ದಾರೆ. ಇದರಿಂದ ಭಾರತ-ಆಸ್ಟ್ರೇಲಿಯನ್ ಸಮುದಾಯದಲ್ಲಿ ಬೇಸರ ಮೂಡಿಸಿದೆ. ಭಾರತದ 75 ವರ್ಷಗಳ ಸ್ವಾತಂತ್ರ್ಯದ ಆಚರಣೆಯ ಅಂಗವಾಗಿ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಅವರು ಭಾರತದ ಕಾನ್ಸುಲ್ ಜನರಲ್ ರಾಜ್‌ಕುಮಾರ್ …

Read More »

ಕಲ್ಯಾಣ ‌ಕರ್ನಾಟಕ ಸಾರಿಗೆ ಟಿಕೆಟ್’ ಯಡವಟ್ಟು, ಸೋಷಿಯಲ್ ಮೀಡಿಯಾದಲ್ಲಿ ವೈರಲ್.!

ಬೆಂಗಳೂರು: ಕಲ್ಯಾಣ ‌ಕರ್ನಾಟಕ ಸಾರಿಗೆ ನಿಗಮ( KKRTC ), ತನ್ನ ಟಿಕೆಟ್ ನಲ್ಲಿ ಪ್ರಚಲಿತ ವಿದ್ಯಮಾನಗಳ ಬಗ್ಗೆ, ನಾಡಿನ ಸಾಂಸ್ಕೃತಿಕ ಹಿರಿಮೆ, ಗರಿಮೆ, ಚುನಾವಣೆ ಸಂದರ್ಭದಲ್ಲಿ ಮತದಾನ ಜಾಗೃತಿಯ ಬಗ್ಗೆ ಜಾಗೃತಿಯನ್ನು ಮೂಡಿಸುವಂತ ಬರಹಗಳನ್ನು ನಮೂದಿಸುತ್ತಿತ್ತು. ಟಿಕೆಟ್ ಪಡೆದಂತ ಪ್ರಯಾಣಿಕ ಅದರ ಮೇಲಿದ್ದಂತ ಬರಹವನ್ನು ಓದುವ ಮೂಲಕ ಜಾಗೃತನಾಗುತ್ತಿದ್ದನು. ಇದೀಗ ಪದ್ಮಶ್ರೀ ಪುರಸ್ಕೃತ ( padma shri ) ಮಂಜಮ್ಮ ಜೋಗತಿಯ ( manjamma jogati ) ಬಗ್ಗೆ ಬರಹವಿದ್ದು, ವಿಜಯನಗರ …

Read More »

ಸುಣಧೋಳಿಯಲ್ಲಿ ಸ್ವಾಮೀಜಿಗಳಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪುಷ್ಪಾರ್ಚಣೆ

  ಮೂಡಲಗಿ : ಮಠ-ಮಾನ್ಯಗಳಿಗೆ ಭಕ್ತ ಸಮುದಾಯವೇ ನಿಜವಾದ ಆಸ್ತಿ. ಶ್ರೀ ಮಠದ ಶ್ರೇಯೋಭಿವೃದ್ಧಿಗೆ ಭಕ್ತರೂ ಸಹ ತಮ್ಮ ತನು-ಮನ-ಧನದಿಂದ ಸಹಕಾರ ನೀಡುವಂತೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರ ಸಂಜೆ ಜಡಿಸಿದ್ಧೇಶ್ವರ ಮಠದಲ್ಲಿ ಜರುಗಿದ ಸತ್ಕಾರ ಸಮಾರಂಭದಲ್ಲಿ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಮಠಗಳ ಉನ್ನತಿಗಾಗಿ ಈ ಭಾಗದಲ್ಲಿ ಧಾರ್ಮಿಕ ವಾತಾವರಣ ನಿರ್ಮಿಸುತ್ತಿರುವ ಮಠಗಳಿಗೆ ಭಕ್ತರು ತಮ್ಮ ವೈಯಕ್ತಿಕ ಮನಸ್ತಾಪಗಳನ್ನು …

Read More »

ಬಿಜೆಪಿ ರಣತಂತ್ರ: ಉದಯ್ ಗೌಡಗೆ ಹಾಸನ ಎಂಎಲ್ಸಿ ಟಿಕೆಟ್ ?

ಆಲೂರು: ಗೋಪಾಲಸ್ವಾಮಿ ವಿಧಾನ ಪರಿಷತ್ ಸದಸ್ಯರಾಗಿದ್ದು ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಸ್ಥಳಿಯ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಸಮಾಜ ಸೇವಕ ಬಿಜೆಪಿ ಹಿರಿಯ ಮುಖಂಡ ಉದಯ್ ಗೌಡರ ಹೆಸರು ಬಲವಾಗಿ ಕೇಳಿ ಬರುತ್ತಿದೆ. ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹಾಸನ ಜಿಲ್ಲೆಯಲ್ಲಿ ಬಿಜೆಪಿ ಗಟ್ಟಿಗೊಳಿಸುವ ದೃಷ್ಟಿಯಿಂದವ ರಾಜ್ಯ ಬಿಜೆಪಿ ಈ ಚಿಂತನೆ ನಡೆಸುತ್ತಿದೆ ಎನ್ನುವ ಮಾತುಗಳು ಕೆಲವು ಕಾರ್ಯಕರ್ತರ ವಲಯದಿಂದ ಕೇಳಿ ಬರುತ್ತಿದೆ. ಕಳೆದ …

Read More »

ಪೇಜಾವರ ಶ್ರೀ ಮಾಂಸ ತಿನ್ನುತ್ತಿದ್ದರೇ ? :ತೀವ್ರ ಆಕ್ರೋಶ, ಕ್ಷಮೆ ಯಾಚಿಸಿದ ಹಂಸಲೇಖ

ಬೆಂಗಳೂರು : ಪೇಜಾವರ ಶ್ರೀಗಳು ದಲಿತರ ಕೇರಿಗೆ ಹೋಗುತ್ತಿದ್ದರು, ಅಲ್ಲಿ ಅವರು ಕೋಳಿ ಮಾಂಸ ಕೊಟ್ಟಿದ್ದರೆ ತಿನ್ನುತ್ತಿದ್ದರೇ ಎಂಬ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ವ್ಯಾಪಕ ಆಕ್ರೋಶದ ಬಳಿಕ ಸೋಮವಾರ ಬಹಿರಂಗ ಕ್ಷಮೆಯಾಚಿಸಿದ್ದಾರೆ.   ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಆ ರೀತಿ ಹೇಳಿಕೆ ನೀಡಬಾರದಿತ್ತು. ನನ್ನ ಹೇಳಿಕೆಯನ್ನು ನನ್ನ ಹೆಂಡತಿಯೇ ವಿರೋಧಿಸಿದ್ದಾಳೆ. ಈ ಕುರಿತು ಕ್ಷಮೆ ಯಾಚಿಸುವುದಾಗಿ ಹೇಳಿದ್ದಾರೆ. ‘ಕ್ಷಮೆ ಇರಲಿ, ಎಲ್ಲಾ ಮಾತುಗಳು …

Read More »