IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು; ಭಾರತದ ಮುಡಿಗೆ ಚಾಂಪಿಯನ್ಸ್ ಟ್ರೋಫಿ ಕಿರೀಟ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಇತಿಹಾಸ ರಚಿಸಿದೆ. ಸತತ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಫೈನಲ್ ತಲುಪಿದ್ದ ಭಾರತ 2013ರ ಬಳಿಕ ಎರಡನೇ ಬಾರಿ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ 4 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತ ಒಟ್ಟಾರೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ …
Read More »ಪ್ರವಾಸಿಗರ ಮೇಲೆ ಅತ್ಯಾಚಾರಇದು ಸರ್ಕಾರದ ವೈಫಲ್ಯ :ಜೋಶಿ
ಹುಬ್ಬಳ್ಳಿ, ಮಾರ್ಚ್ 09: ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ನೇಮಕಾತಿಗೆ ಹರಾಜು ನಡೆಯುತ್ತಿದೆ. ಕಾನೂನು ಸುವ್ಯವಸ್ಥೆಗಿಂತ ಹರಾಜಿನಲ್ಲಿ ಕೊಟ್ಟ ಹಣದ ಬಗ್ಗೆ ಚಿಂತೆ ಇರುತ್ತೆ. ಸಿಎಂ ಕೇವಲ ಟ್ವೀಟ್ ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ.
Read More »ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ :ಗೃಹ ಸಚಿವ ಜಿ. ಪರಮೇಶ್ವರ
ಸಿದ್ಧರಾಮಯ್ಯ-ಡಿಕೆಶಿ ಒಟ್ಟಾಗಿರುವಂತೆ ಖರ್ಗೆ ಸಲಹೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??? ರಾಜ್ಯದಲ್ಲಿ ನಾವೆಲ್ಲ ಒಟ್ಟಾಗಿಯೇ ಇದ್ದೇವೆ. ಸಿಎಂ ಮತ್ತು ಡಿಸಿಎಂ ಒಟ್ಟಾಗಿಯೇ ಜನಸೇವೆ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಾವೆಲ್ಲರೂ ಒಟ್ಟಾಗಿ ಹೋದರೇ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು , …
Read More »ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ?
ಹಸೆಮಣೆ ಏರಬೇಕಿದ್ದ ಮಗನಿಗೆ ಚಟ್ಟ ಕಟ್ಟಿದ ತಂದೆ ಮತ್ತು ಅಣ್ಣ !!!! ‘ಲವ್ ಮ್ಯಾರೇಜ್’ – ಜೀವನ ಆರಂಭವಾಗುವ ಮೊದಲೇ ಕ್ಲೋಸ್!!! ಪ್ರೀತಿಸಿದ ಯುವತಿ ಜೊತೆಗೆ ಮದುವೆಗೆ ನಿಶ್ಚಿತಾರ್ಥ ಮಾಡಿದರೂ ಕೂಡ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಕಿರಿಯ ಮಗನನ್ನು ತಂದೆ ಮತ್ತು ಅಣ್ಣ ಬರ್ಬರವಾಗಿ ಕೊಲೆಗೈದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿ ಗ್ರಾಮದಲ್ಲಿ ಹಸೆಮಣೆ ಏರಬೇಕಿದ್ದ …
Read More »ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್ : ಸಂಸದೆ ಪ್ರಿಯಂಕಾ ಜಾರಕಿಹೊಳಿ
ಎಲ್ಲಾ ವಲಯಗಳಿಗೆ ನ್ಯಾಯ ದೊರಕಿಸುವ ಬಜೆಟ್ : ಸಂಸದೆ ಪ್ರಿಯಂಕಾ ಜಾರಕಿಹೊಳಿ ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವಲಯಗಳನ್ನು ಒಟ್ಟಿಗೆ ತಗೆದುಕೊಂಡು ಹೋಗುವ ಪ್ರಯತ್ನ ಮಾಡಿದ್ದಾರೆ. ಸಾಕಷ್ಟು ಹಣ ಉಚಿತ ಕಾರ್ಯಕ್ರಮಗಳಿಗೆ ಹೋಗುತ್ತದೆ. ಉಳಿದಿದ್ದರಲ್ಲಿಯೇ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾನ್ಯವಾಗಿ ಇದೊಂದು ಒಳ್ಳೆಯ ಬಜೆಟ್. ಬೆಳಗಾವಿ …
Read More »ದಾಖಲೆಯ ಬಜೆಟ್ ಮಂಡನೆ ಬಳಿಕ ಸಿಎಂಗೆ ಹಸ್ತಲಾಘವ ಮಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ವಿತ್ತೀಯ ಶಿಸ್ತನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಬಜೆಟ್ ಮಂಡಿಸಿದ್ದಾರೆ. ತವರಾದ ಮೈಸೂರು ಜಿಲ್ಲೆ ಸೇರಿದಂತೆ, ಎಲ್ಲಾ ಜಿಲ್ಲೆಗಳಿಗೆ ಆದ್ಯತೆ ನೀಡುವ ಪ್ರಯತ್ನ ಮಾಡಿದ್ದಾರೆ. ಇಂದಿನ ತಮ್ಮ ದಾಖಲೆಯ ಬಜೆಟ್‌ನಲ್ಲಿ ಹಲವು ಹೊಸ ಯೋಜನೆಗಳನ್ನು ಸಹ ಪ್ರಕಟಿಸಿದ್ದಾರೆ. 2025-26ನೇ ಸಾಲಿನ ಬಜೆಟ್‌ನಲ್ಲಿ, ರಾಜ್ಯದ 31 ಜಿಲ್ಲೆಗಳಿಗೂ ನ್ಯಾಯ ವದಗಿಸುವ ಯತ್ನ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ರಾಜ್ಯದ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ …
Read More »ಯಾವುದೇ ಕಾರಣಕ್ಕೂ ನಗರಸೇವಕ ಶಂಕರ ಪಾಟೀಲಗೆ ಖಾಟಿಕ ಸಮಾಜದ ಜಾಗೆಯನ್ನು ನೀಡಲ್ಲ
ಯಾವುದೇ ಕಾರಣಕ್ಕೂ ನಗರಸೇವಕ ಶಂಕರ ಪಾಟೀಲಗೆ ಖಾಟಿಕ ಸಮಾಜದ ಜಾಗೆಯನ್ನು ನೀಡಲ್ಲ ಸಮುದಾಯ ಭವನ ನಿರ್ಮಿಸದಂತೆ ಗಣಾಚಾರಿ ಗಲ್ಲಿಯ ರಹಿವಾಸಿಗಳಿಂದ ಬೆಳಗಾವಿ ಡಿಸಿಗೆ ಮನವಿ ಬೆಳಗಾವಿ ನಗರದ ಗಣಾಚಾರಿ ಗಲ್ಲಿಯಲ್ಲಿ ಸಮುದಾಯಭವನ ನಿರ್ಮಿಸಲು ಮುಂದಾದ ನಗರಸೇವಕ ಶಂಕರ ಪಾಟೀಲ್ ಅವರ ಧೋರಣೆಯನ್ನು ಖಂಡಿಸಿ ಖಾಟಿಕ ಸಮಾಜದ ಬಕ್ರಿ ಮಂಡಯಿಯ ರಹಿವಾಸಿಗಳು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಆಗಮಿಸಿದ ಗಣಾಚಾರಿ ಗಲ್ಲಿಯ ಬಕ್ರಿ ಮಂಡಯಿ, ಖಾಟಿಕ …
Read More »ನಿಪ್ಪಾಣಿಯಲ್ಲಿ 100 ಬೆಡ್’ಗಳ ತಾಲೂಕಾಸ್ಪತ್ರೆ ನಿರ್ಮಿಸಿ…
ನಿಪ್ಪಾಣಿಯಲ್ಲಿ 100 ಬೆಡ್’ಗಳ ತಾಲೂಕಾಸ್ಪತ್ರೆ ನಿರ್ಮಿಸಿ… ಬೆಳಗಾವಿ ಜಿಲ್ಲೆಯ ನೂತನ ತಾಲೂಕು ನಿಪ್ಪಾಣಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವನ್ನ ಮೇಲ್ದರ್ಜೆಗೆರಿಸಿ, 100 ಬೆಡ್’ಗಳ ತಾಲೂಕಾ ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕೆಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಸದನದಲ್ಲಿ ಇಂದು ಧ್ವನಿ ಎತ್ತಿದರು. ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ಡಾ. ದಿನೇಶ್ ಗುಂಡುರಾವ್ ಆದ್ಯತೆ ಮೇರೆಗೆ ಕ್ರಮಕೈಗೊಳ್ಳಲಾಗುವುದೆಂದು ಭರವಸೆಯನ್ನು ನೀಡಿದರು. ನೂತನ ತಾಲೂಕಾ ರಚನೆಯಾದ ನಿಪ್ಪಾಣಿಯಲ್ಲಿರುವ 30 ಬೆಡ್’ಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೆರಿಸಿ …
Read More »ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ
ಅಪಘಾತಗಳ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ.. ಬೆಳಗಾವಿ: ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಸಂಚರಿಸುವ ಆಟೋರಿಕ್ಷಾ-ವಾಹನಗಳಿಗೆ ಕಡ್ಡಾಯವಾಗಿ ಬಾಡಿಗೆ ದರ ನಿಗದಿಪಡಿಸಬೇಕು. ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ತಡೆಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಮಾ.6) ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ …
Read More »ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌ನಿಂದ ಪ್ರತಿಭಟನೆ
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್‌ನಿಂದ ಪ್ರತಿಭಟನೆ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ಪಕ್ಷದಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಇಂದು ಜೆಡಿಎಸ್ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ವಿಜಯಪುರ ದಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಬಸವೇಶ್ವರ ವೃತ್ತದಿಂದ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡರು ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಹಣವಿಲ್ಲದೆ …
Read More »
Laxmi News 24×7