Home / ರಾಷ್ಟ್ರೀಯ (page 820)

ರಾಷ್ಟ್ರೀಯ

ಬಿಜೆಪಿ-ಜೆಡಿಎಸ್‌ ವಿಲೀನ ವಿಚಾರ:`ಸ್ವಯಂ ಆತ್ಮಹತ್ಯೆ’ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ. ನಾನು ಬದುಕಿರುವ ತನಕ ಇದು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. `ರೈತರ ಸಾಲಮನ್ನಾ’, `ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ …

Read More »

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದೆ.

ಬೆಳಗಾವಿ : ಪಾರ್ಟಿ ಮುಗಿಸಿ ಮನೆಗೆ ಹೊಗುತ್ತಿದ್ದ ವ್ಯಕ್ತಿಯನ್ನು ಕಳ್ಳನೆಂದು ಭಾವಿಸಿ ಕೊಲೆ ಮಾಡಿರುವ  ಘಟನೆ  ತಡರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಆನಂದ ಮಾರುತಿ ಕೋಲಕಾರ( 58) ಕೊಲೆಯಾದ ವ್ಯಕ್ತಿ. ಈತ ನಿನ್ನೆ ರಾತ್ರಿ ಡಾಬಾದಲ್ಲಿ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ತೆರಳುವ ವೇಳೆಯಲ್ಲಿ ಖನಗಾಂವ ಗ್ರಾಮದ ಸಮೀಪ ಕಳ್ಳನೆಂದು ಭಾವಿಸಿ,  ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ …

Read More »

ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ

ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು.‌ ಕಳೆದ ಆರು …

Read More »

ಗೊಂದಲಗಳನ್ನು ಸೃಷ್ಟಿಸುತ್ತಿದೆ ಕೊರೊನಾ ಲಸಿಕೆ..!

ಜಕಾರ್ತ, ಡಿ.20- ಮಹಾಮಾರಿ ಕೊರೊನಾಗೆ ಔಷ ಸಿಕ್ಕಿದೆ. ವಿಶ್ವಕ್ಕೆ ಎದುರಾಗಿರುವ ಕಂಟಕ ಮುಕ್ತಿ ದೊರೆಯಲಿದೆ ಎಂಬ ಆಶಾದಾಯಕ ಬೆಳವಣಿಗೆಯ ನಡುವೆಯೇ ಲಸಿಕೆ ತಯಾರಿಕೆಗೆ ಬಳಕೆ ಮಾಡಲಾಗಿರುವ ಅಂಶಗಳು ಧಾರ್ಮಿಕ ವಿವಾದಕ್ಕೆ ಎಡೆ ಮಾಡಿಕೊಟ್ಟಿವೆ. ಇಂಡೋನೇಷ್ಯಾದ ರಾಜ ತಾಂತ್ರಿಕರು ಮತ್ತು ಇಸ್ಲಾಂ ಧಾರ್ಮಿಕ ಗುರುಗಳು ಅಲ್ಲಿ ಔಷಧ ತಯಾರಿಕೆಯ ಪ್ರಕ್ರಿಯೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಆನಂತರ ಇಂಡೋನೇಷ್ಯಾಗೆ ಲಕ್ಷ ಗಟ್ಟಲೆ ಔಷಯ ಡೋಸೇಜ್‍ಗಳನ್ನು ಕಳುಹಿಸಲಾಗಿದೆ. ಕೊರೊನಾ ಲಸಿಕೆ ಉತ್ಪಾದಕ ಕಂಪೆನಿಗಳು ಸುರಕ್ಷತೆ , …

Read More »

ಗರ್ಭಿಣಿಯನ್ನು 7 ಕಿಲೋ ಮೀಟರ್ ವೆರೆಗೆ ಸ್ವಯಂ ಸೇವಕರು ಹೊತ್ತುಕೊಂಡು ಹೋಗಿ, ಅಂಬುಲೆನ್ಸ್ ಗೆ ತಲುಪಿಸಿರುವ ಘಟನೆ

ಹೈದರಾಬಾದ್: ಹೆರಿಗೆ ನೋವಿನಿಂದ ಬಳಲುತ್ತಿರುವ ಗರ್ಭಿಣಿಯನ್ನು 7 ಕಿಲೋ ಮೀಟರ್ ವೆರೆಗೆ ಸ್ವಯಂ ಸೇವಕರು ಹೊತ್ತುಕೊಂಡು ಹೋಗಿ, ಅಂಬುಲೆನ್ಸ್ ಗೆ ತಲುಪಿಸಿರುವ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಬೊಂಡಪಲ್ಲಿ ಪ್ರದೇಶದಲ್ಲಿ ನಡೆದಿದೆ. ಬುಡಕಟ್ಟು ಸಮುದಾಯದ ತುಂಬು ಗರ್ಭಿಣಿಯೊಬ್ಬರಿಗೆ ನಿನ್ನೆ ಸಂಜೆ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಕೂಡಲೇ ಮಹಿಳೆಯ ಪತಿ ಕಾಮೇಶ್ 108 ಗೆ ಕರೆಮಾಡಿದ್ದಾರೆ. ಆದರೆ ಇವರು ಇರುವಲ್ಲಿಗೆ ಅಂಬುಲೆನ್ಸ್ ಬರಲು ಸರಿಯಾದ ಮಾರ್ಗ ಇರಲಿಲ್ಲ. ನಂತರ …

Read More »

ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ

  ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …

Read More »

ಗೋವಾದಲ್ಲಿ ನಕಾರಾತ್ಮಕ ಅಭಿಪ್ರಾಯ ಹೊಂದಿದವರಿಗೆ ಮತ್ತು ದೇಶ ವಿರೋಧಿ ಶಕ್ತಿಗಳಿಗೆ ಜಾಗ ಇಲ್ಲ: ಪ್ರಮೋದ್ ಸಾವಂತ್

ಪಣಜಿ,ಡಿ.10-ಗೋವಾದಲ್ಲಿ ನಕಾರಾತ್ಮಕ ಅಭಿಪ್ರಾಯ ಹೊಂದಿದವರಿಗೆ ಮತ್ತು ದೇಶ ವಿರೋಧಿ ಶಕ್ತಿಗಳಿಗೆ ಜಾಗ ಇಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುಡುಗಿದ್ದಾರೆ. ಗೋವಾ ವಿಮೋಚನಾ ದಿನದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿದ ಅವರು, ದ್ವಿಪಥ ರೈಲ್ವೆ ಹಳಿ ಯೋಜನೆಗೆ ವಿರೋಸುತ್ತಿರುವವರ ವಿರುದ್ಧ ಹರಿಹಾಯ್ದಿದ್ದಾರೆ. ಗೋವಾ ರಾಜ್ಯದವರು ಆಶಾವಾದಿಗಳು. ಅವರ ನಡುವೆ ನಕಾರಾತ್ಮಕ ಭಾವನೆ ಉಳ್ಳವರಿಗೆ, ವಿಛಿದ್ರಕಾರಿ ಮನೋಭಾವವುಳ್ಳವರಿಗೆ ಜಾಗವಿಲ್ಲ ಎಂದಿದ್ದಾರೆ. ಗೋವಾಕ್ಕೆ ಕಲ್ಲಿದ್ದಲು ಸಾಗಾಣಿಕೆ ಸಲುವಾಗಿ ರೈಲ್ವೆ ಹಳಿಗಳನ್ನು ದ್ವಿಪಥಕ್ಕೆ ಪರಿವರ್ತಿಸುವ ಕಾಮಗಾರಿಯನ್ನು …

Read More »

ಖಡಕ್ ಸೂಚನೆ ಹಿನ್ನೆಲೆ, ಅಂಕಲಗಿ ಪುಡಾರಿ ರಾಜು ತಳವಾರ್ ಅರೆಸ್ಟ್

ಗೋಕಾಕ: ಬಿಜೆಪಿ ಮುಖಂಡ ರಾಜು ತಳವಾರ ಹಾಗೂ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕಲಗಿಯ ಬಿಜೆಪಿ ಮುಖಂಡ ರಾಜು ತಳವಾರನನ್ನ ಬಂಧಿಸಲಾಗಿದೆ. ಗೋಕಾಕ ಡಿವೈಎಸ್ಪಿ ನೇತೃತ್ವದ ತಂಡ ರಾಜು ತಳವಾರನನ್ನ ಹೆಡೆಮುರಿ ಕಟ್ಟಿದ್ದು, ರಾಜು ತಳವಾರನನ್ನ ಕೂಡಲೇ ಬಂಧಿಸುವಂತೆ ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿನ್ನೆಯಷ್ಟೇ ಖಡಕ್ ಸೂಚನೆ ನೀಡಿದ್ದರು. ಕ್ಷುಲ್ಲಕ ಕಾರಣಕ್ಕೆ ಚಿಕ್ಕುಗೋಳ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರಾಜು ತಳವಾರ ಆಂಡ್ ಗ್ಯಾಂಗ್ …

Read More »

ಗೋಕಾಕ: ಅಧಿಕಾರಿಗಳಿಗೆ ದೂರು ನೀಡಿ ತಂಗಿ ಬಾಲ್ಯ ವಿವಾಹ ತಡೆದ ಅಣ್ಣ

ಗೋಕಾಕ : ಅಧಿಕಾರಿಗಳಿಗೆ ದೂರು ನೀಡಿ ಅಣ್ಣನೇ ತಂಗಿಯ ಬಾಲ್ಯ ವಿವಾಹವನ್ನು ತಡೆದಿರುವ ಘಟನೆ ಗೋಕಾಕ ತಾಲ್ಲೂಕಿನ ಕೊಣ್ಣೂರು ಗ್ರಾಮದಲ್ಲಿ ನಡೆದಿದೆ. ಅತ್ತೆ, ಮಾವ  ವಿದ್ಯಾಭ್ಯಾಸ ಕಲಿಸೋದಾಗಿ ಹೇಳಿ  ನನ್ನ ತಂಗಿ ರಾಧಿಕಾಳನ್ನು ಇಟ್ಟುಕೊಂಡಿದ್ದರು. ಒತ್ತಾಯ ಪೂರ್ವಕವಾಗಿ ತಂಗಿಗೆ  ಮದುವೆ ಮಾಡ್ತಿದ್ದರು ಎಂದು ರಾಧಿಕಾ ಅಣ್ಣ ರಾಜು ಮಗೆನ್ನವರ್ ಆರೋಪಿಸಿದ್ದಾನೆ. ರಮೇಶ್ ಕೆಂಪಣ್ಣ ಮೊದಗಿ  ಹಾಗೂ ರಾಧಿಕಾ ಮಲ್ಲೇಶ ಮಗೆನ್ನವರ್ ಅವರು, ರಮೇಶ್(24) ಹಾಗೂ ರಾಧಿಕಾಗೆ(16)ಗೆ ಮದುವೆಗೆ ಏರ್ಪಾಡು ಮಾಡಿದ್ದರು. ಈ …

Read More »

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೇಗಾದರೂ ಮಾಡಿ, ಜನರನ್ನು ಮೋಸಗೊಳಿಸಿ ಗೆಲ್ಲಬೇಕೆಂಬ ಕುತಂತ್ರ ನಡೆಸಿರುವ ಕೆಲವು ಕುತಂತ್ರಿ ಅಭ್ಯರ್ಥಿಗಳು ಮಾಟ-ಮಂತ್ರ ನಡೆಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ಗೋಕಾಕ ತಾಲೂಕಿನ ತಪಸಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಮ್ಮನಕೋಲ ಗ್ರಾಮದಲ್ಲಿ ವಾಮಾಚಾರ ನಡೆಸಿದ್ದಾರೆ. ಗ್ರಾಮದ ವಾರ್ಡ್ ವಿರೋಧಿ ಬಣದ ಅಭ್ಯರ್ಥಿಗಳ ಮನೆ ಎದುರು ಲಿಂಬೆ ಹಣ್ಣು, ತೆಂಗಿನಕಾಯಿ, ಗುಲಾಲು, ದಾರ ಹೀಗೆ ಅನೇಕ ವಸ್ತುಗಳನ್ನು ಇಟ್ಟು ವಾಮಾಚಾರ ನಡೆಸಿದ್ದಾರೆ. ಇದೊಂದು ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಿಸಿದ್ದು, ಜನರು ವಾಮಾಚಾರ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 15-20 ವರ್ಷಗಳಿಂದ ರಾಜಕಾರಣ ನಡೆಸಿರುವವರು ಇಂಥ ವಾಮಾಚಾರ ಮಾಡಿಸಿದ್ದು, ಇಂಥ ರಾಜಕಾರಣದಿಂದ ಗ್ರಾಮದ …

Read More »